Homeಕರ್ನಾಟಕಮಂಗಳೂರಿನಲ್ಲಿ ಕೋಮು ಪ್ರಚೋದನೆ: ಚೈತ್ರ ಕುಂದಾಪುರ ವಿರುದ್ದ ದೂರು ದಾಖಲು

ಮಂಗಳೂರಿನಲ್ಲಿ ಕೋಮು ಪ್ರಚೋದನೆ: ಚೈತ್ರ ಕುಂದಾಪುರ ವಿರುದ್ದ ದೂರು ದಾಖಲು

ದೈವಗಳ ಕೈಯ್ಯಲ್ಲಿ ಇರುವುದು ‘ಸುರಿಯ’ ಹೊರತು, ತಲವಾರು ಅಲ್ಲ, ತಲವಾರು ಹಿಡಿಯುವುದು ರೌಡಿಗಳು ಮತ್ತು ದುಷ್ಟರು ಎಂದು ದೂರು ನೀಡಿರುವ ಚಿತ್ತರಂಜನ್‌ ಅವರು ಹೇಳಿದ್ದಾರೆ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಯಾದ ಭಜರಂಗದಳ ಮತ್ತು ದುರ್ಗಾವಾಹಿನಿ ಹಮ್ಮಿಕೊಂಡಿದ್ದ ಸಮಾವೇಶವೊಂದರಲ್ಲಿ, ಪ್ರಚೋದನಕಾರಿ ಮತ್ತು ಅಶ್ಲೀಲ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರ ಕುಂದಾಪುರ ಎಂಬವರ ಮೇಲೆ ಬುಧವಾರ ಸುರತ್ಕಲ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಂಗಳವಾರ ನಡೆದ ಸಮಾವೇಶದಲ್ಲಿ ಚೈತ್ರ ಅವರು ಮುಸ್ಲಿಂ ಮಹಿಳೆಯರನ್ನು ಮತ್ತು ತುಳುನಾಡಿನ ದೈವಗಳಾದ ಕೋಟಿಚೆನ್ನಯ್ಯ ಅವರನ್ನು ಕೆಟ್ಟದಾಗಿ ಉದಾಹರಿಸಿ ಕೋಮುಗಲಭೆಗೆ ಪ್ರಚೋದಿಸಿದ್ದರು. ಇದರ ವಿರುದ್ದ ರಾಜ್ಯ ಕಾಂಗ್ರೆಸ್ ಸಂಯೋಜಕರಾದ ಬೊಂಡಾಲ ಚಿತ್ತರಂಜನ್‌ ಶೆಟ್ಟಿ ಅವರು ಸುರತ್ಕಲ್ ಠಾಣೆಯಲ್ಲಿ ದೂರು ಸಲ್ಲಿಸಿದ್ದು, ಚೈತ್ರ ಮತ್ತು ಕಾರ್ಯಕ್ರಮವನ್ನು ಸಂಘಟಿಸಿದವರನ್ನು ಬಂಧಿಸಬೇಕು ಎಂದು ದೂರಿನಲ್ಲಿ ವಿನಂತಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೆ ‘ಮಾರಲ್ ಪೊಲೀಸಿಂಗ್’ – ಬಜರಂಗದಳ ಕಾರ್ಯಕರ್ತರ ಬಂಧನ

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಚಿತ್ತರಂಜನ್ ಶೆಟ್ಟಿ ಅವರು, “ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ. ಆದರೆ ಅಲ್ಲಿನ ಇನ್ಸ್‌‌ಪೆಕ್ಟರ್ ಮೊದಲಿಗೆ ದೂರು ಸ್ವೀಕರಿಸಲು ನಿರಾಕರಿಸಿ, ‘ದೂರು ನೀಡುವ ಅವಶ್ಯಕತೆಯಿಲ್ಲ, ಈ ಬಗ್ಗೆ ದೂರು ದಾಖಲಾಗಿದೆ. ಅದೇ ದೂರಿನಲ್ಲಿ ಕ್ರಮ ಕೈಗೊಳ್ಳುತ್ತೇನೆ’ ಎಂದು ಹೇಳಿದರು. ಆದರೆ ನಾನು ಒತ್ತಾಯ ಮಾಡಿ ದೂರು ದಾಖಲು ಮಾಡಿದ್ದೇನೆ. ಇನ್ನೂ ಎಫ್‌ಐಆರ್‌ ದಾಖಲಿಸಿಲ್ಲ, ನಾಳೆ ಕಮೀಷನ್ ಅವರನ್ನು ಭೇಟಿ ಮಾಡಲಿದ್ದೇನೆ. ನಾನು ಹೋರಾಟವನ್ನು ಮುಂದುವರೆಸಲಿದ್ದು, ಮುಖ್ಯಮಂತ್ರಿ ತನಕ ತೆರಳಲಿದ್ದೇನೆ” ಎಂದು ಹೇಳಿದರು.

“ಸುರತ್ಕಲ್‌‌‌ 20 ವರ್ಷದ ಹಿಂದೆ ಕೋಮು ಗಲಭೆಯಿಂದ ನಲುಗಿತ್ತು. ಚುನಾವಣೆ ಹತ್ತಿರ ಬರುತ್ತಿದ್ದಂತೆ ಸಂಘಪರಿವಾರದವರು ಅದನ್ನು ಇನ್ನೊಮ್ಮೆ ಮರುಕಳಿಸಲು ಪ್ರಯತ್ನಿಸುತ್ತಿದ್ದಾರೆ. ಇದರಿಂದ ರಾಜಕೀಯ ಲಾಭ ತೆಗೆದುಕೊಂಡು ಇವರು ಇನ್ನೊಮ್ಮೆ ಶಾಸಕ, ಸಚಿವರಾಗಿ ಅಧಿಕಾರ ಹಿಡಿಯುತ್ತಾರೆ. ಆದರೆ ಬಡಪಾಯಿ ಶೂದ್ರರು, ದಲಿತರು ಕತ್ತಿ ಹಿಡಿದುಕೊಂಡು ಜೈಲು ಪಾಲಾಗುತ್ತಾರೆ, ಇದು ಇವರ ಅಜೆಂಡಾ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಭರತ್‌ ಶೆಟ್ಟಿ ಕೂಡಾ ಇದ್ದರು ಎಂಬ ಮಾಹಿತಿಯಿದೆ. ಒಬ್ಬ ಶಾಸಕರಾಗಿ ಇಂತಹ ವಿಷಯಗಳಿಗೆ ಅವರು ಬೆಂಬಲ ಕೊಡುತ್ತಾರೆ ಎಂದರೆ ನಾಚಿಕೆಗೇಡಿನ ಸಂಗತಿ ಎಂದು ಚಿತ್ತರಂಜನ್ ಶೆಟ್ಟಿ ಎಂದು ತಿಳಿಸಿದರು.

“ಕೋಟಿ ಚೆನ್ನಯ್ಯ ಅವರನ್ನು ಕೂಡಾ ಕಾರ್ಯಕ್ರಮದಲ್ಲಿ ಅವಮಾನಿಸಿದ್ದಾರೆ. ದೈವಗಳ ಕೈಯ್ಯಲ್ಲಿ ಇರುವುದು ಸುರಿಯ ಎಂಬ ಆಯುಧವೇ ಹೊರತು, ತಲವಾರು ಅಲ್ಲ. ತಲವಾರು ಹಿಡಿಯುವುದು ರೌಡಿಗಳು, ದುಷ್ಟರು. ತುಳುನಾಡಿನ ಮಹಾಪುರುಷರು ಹೋರಾಡಿದ್ದು ಆಗಿನ ಜಮೀನ್ದಾರಿ ವಿರುದ್ದವೆ ಹೊರತು ಮುಸ್ಲಿಮರ ವಿರುದ್ದ ಅಲ್ಲ. ಆದರೆ ಇವರು ದೈವಗಳ ಕುರಿತು ತಪ್ಪು ಕಲ್ಪನೆಯನ್ನು ಜನರ ತಲೆಗೆ ತುಂಬಿಸಿ ಕೋಮುಗಲಭೆಗೆ ಪ್ರಚೋದಿಸಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದನ್ನೂ ಓದಿ: ಮೋರಲ್‌ ಪೊಲೀಸಿಂಗ್‌‌: ಕರಾವಳಿ ಕರ್ನಾಟಕದಲ್ಲಿ ಆಗುತ್ತಿರುವ ನಷ್ಟವೆಷ್ಟು?

ಚಿತ್ರರಂಜನ್ ಅವರ ದೂರಿನ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಸುರತ್ಕಲ್ ಠಾಣೆಯ ಇನ್ಸ್‌ಪೆಕ್ಟರ್‌ ಚಂದ್ರಪ್ಪ ನಾಯಕ್, “ಮಂಗಳೂರಿಗೆ ನಾಳೆ ರಾಷ್ಟ್ರಪತಿ ಆಗಮಿಸುತ್ತಿರುವುದರಿಂದ ಈಗ ಅದರ ಬಂದೋಬಸ್ತಿನಲ್ಲಿ ಇದ್ದೇನೆ. ದೂರು ನೀಡಿದ್ದಾರೆ, ಇನ್ನೂ ಎಫ್‌ಐಆರ್‌ ಆಗಿಲ್ಲ, ಆಗಬಹುದು. ಠಾಣೆಗೆ ತೆರಳಿ ದೂರಿನ ಬಗ್ಗೆ ಪರಿಶೀಲಿಸುತ್ತೇನೆ” ಎಂದು ತಿಳಿಸಿದರು.

ಚೈತ್ರ ಕುಂದಾಪುರ ಅವರು ಮಂಗಳವಾರ ನಡೆದ ಸಭೆಯಲ್ಲಿ, “70% ದಷ್ಟು ಇರುವ ಹಿಂದೂಗಳು, ಮುಸ್ಲಿಂ ಹೆಣ್ಣು ಮಕ್ಕಳನ್ನು ಮತಾಂತರ ಮಾಡುವುದಕ್ಕೆ ಎರಡು ದಿನ ಸಾಕು. ಭಜರಂಗದಳದ ಕಾರ್ಯಕರ್ತರು ಮುಸ್ಲಿಂ ಹೆಣ್ಣು ಮಕ್ಕಳನ್ನು ಲವ್ ಮಾಡೋಕೆ ಹೊರಟರೆ, ಮುಸ್ಲಿಮರ ಮನೆಯಲ್ಲಿ ಬುರ್ಖಾ ಕಾಣುವುದಿಲ್ಲ. ಪ್ರತೀ ಮನೆಯ ಮುಸ್ಲಿಂ ಹೆಣ್ಣುಮಕ್ಕಳ ಹಣೆಗೆ ಕುಂಕುಮ ಇಟ್ಟು ಕರೆದುಕೊಂಡು ಬರುತ್ತೇವೆ. ನಮಗೆ ತಲವಾರು ಹಿಡಿಯಲು ಕಲಿಸಿದ್ದು ಕೋಟಿ ಚೆನ್ನಯ್ಯ..” ಎಂದು ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದರು. ಜೊತೆಗೆ, ಕಾಂಗ್ರೆಸ್‌ ನಾಯಕರೊಬ್ಬರ ಮಗಳನ್ನು ವೈಯಕ್ತಿವಾಗಿ ನಿಂದಿಸಿದ್ದರು.

ಸುರತ್ಕಲ್‌ನಲ್ಲಿ ಇತ್ತೀಚೆಗೆ, ಕಾರಿನಲ್ಲಿ ಜೊತೆಯಾಗಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳನ್ನು, ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳ ಕಾರ್ಯಕರ್ತರು ತಡೆದು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದರು. ಘಟನೆ ವಿರೋಧಿಸಿ ರಾಷ್ಟ್ರಮಟ್ಟದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಐವರನ್ನು ಬಂಧಿಸಲಾಗಿತ್ತು. ಆದರೆ ಅವರಿಗೆ ಠಾಣೆಯಲ್ಲೇ ಜಾಮೀನು ನೀಡಿ ಬಿಡುಗಡೆ ಮಾಡಲಾಗಿತ್ತು. ಇದನ್ನು ಕೂಡಾ ಸಾರ್ವಜನಿಕರು ಪ್ರಶ್ನಿಸಿದ್ದರು. ಆದರೆ ಬಜರಂಗದಳ ಈ ಘಟನೆಯನ್ನು ಬೆಂಬಲಿಸಿ ಮಂಗಳವಾರ ಸಮಾವೇಶವನ್ನು ನಡೆಸಿತ್ತು. ಇದರಲ್ಲಿ ಚೈತ್ರ ಕುಂದಾಪುರ ಅವರು ಭಾಷಣ ಮಾಡಿದ್ದರು.

ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೆ ಮರುಕಳಿಸುತ್ತಿದೆ ಧರ್ಮಾಧಾರಿ ಪೊಲೀಸ್‌ಗಿರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...