Homeಮುಖಪುಟದ್ವೇಷ ಭಾಷಣ: ಬಲಪಂಥೀಯ ನಾಯಕಿ ಸಾಧ್ವಿ ಅನ್ನಪೂರ್ಣ ವಿರುದ್ಧ ಪ್ರಕರಣ ದಾಖಲು

ದ್ವೇಷ ಭಾಷಣ: ಬಲಪಂಥೀಯ ನಾಯಕಿ ಸಾಧ್ವಿ ಅನ್ನಪೂರ್ಣ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಉತ್ತರ ಪ್ರದೇಶದ ಅಲಿಗಢದಲ್ಲಿ ನಿರ್ದಿಷ್ಟ ಸಮುದಾಯದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಲಪಂಥೀಯ ನಾಯಕಿ ಸಾಧ್ವಿ ಅನ್ನಪೂರ್ಣ ವಿರುದ್ಧ ಗಾಂಧಿಪಾರ್ಕ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಖಿಲ ಭಾರತ ಹಿಂದಿ ಮಹಾಸಭಾದ ರಾಷ್ಟ್ರೀಯ ಕಾರ್ಯದರ್ಶಿ ಎಂದು ಸ್ವಯಂ ಘೋಷಿಸಿಕೊಂಡಿರುವ ಸಾಧ್ವಿ ಅನ್ನಪೂರ್ಣ ಅಲಿಯಾಸ್ ಪೂಜಾ ಶಕುನ್ ಪಾಂಡೆ ವಿರುದ್ಧ ಅಲಿಗಢ ಪೊಲೀಸರು ವಿವಿಧ ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸಿದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ವಿವಾದಾತ್ಮಕ ಕೃತ್ಯಗಳು ಮತ್ತು ದ್ವೇಷಪೂರಿತ ಹೇಳಿಕೆಗಳಿಗಾಗಿ ಕಳೆದ ಎರಡು ವರ್ಷಗಳಲ್ಲಿ ಪೂಜಾ ಶಕುನ್ ಪಾಂಡೆಯನ್ನು ಅಲಿಗಢ ಪೊಲೀಸರು ಎರಡು ಬಾರಿ ಬಂಧಿಸಿದ್ದಾರೆ. ಆದರೆ, ಈ ಎರಡೂ ಪ್ರಕರಣಗಳಲ್ಲಿಯೂ ಜಾಮೀನು ಪಡೆದು, ಮತ್ತೆ ಇಂತಹದ್ದೆ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಇದನ್ನೂ ಓದಿ: ಸೆಕ್ಸ್ ವರ್ಕ್‌ಗೆ ’ವೃತ್ತಿ’ ಘನತೆ: ಸುಪ್ರೀಂ ಆದೇಶದ ಸುತ್ತ…

“ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಪೂಜಾ ಶಕುನ್ ಪಾಂಡೆ ವಿರುದ್ಧ ಪ್ರಥಮ ಮಾಹಿತಿ ವರದಿ (FIR) ದಾಖಲಿಸಲಾಗಿದೆ. ಆಕೆಯ ವಿರುದ್ಧ ಐಪಿಸಿ ಸೆಕ್ಷನ್ 153A/153B/295A/298/505 ಅಡಿಯಲ್ಲಿ ಗಾಂಧಿಪಾರ್ಕ್‌ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಿಸಲಾಗಿದೆ,” ಎಂದು ಅಲಿಗಢ ಪೊಲೀಸ್ ವರಿಷ್ಠಾಧಿಕಾರಿ ಕಲಾನಿಧಿ ನೈತಾನಿ ತಿಳಿಸಿದ್ದಾರೆ.

 

ಕಳೆದ ವರ್ಷ ಹರಿದ್ವಾರ “ಧರ್ಮ ಸಂಸದ್” (ಧಾರ್ಮಿಕ ಸಭೆ) ನಲ್ಲಿ ದ್ವೇಷಪೂರಿತ ಭಾಷಣ ಮಾಡಿದ್ದ ಪ್ರಕರಣದಲ್ಲಿ ಪೂಜಾ ಶಕುನ್ ಪಾಂಡೆ ಮತ್ತು ಇತರ ಕೆಲವು ಹಿಂದೂ ಧಾರ್ಮಿಕ ಮುಖಂಡರ ಮೇಲೆ ಉತ್ತರಾಖಂಡ್ ಪೊಲೀಸರು ಕೇಸು ದಾಖಲಿಸಿದ್ದರು.

ದೆಹಲಿ ಪೊಲೀಸರು ಈ ವರ್ಷದ ಆರಂಭದಲ್ಲಿ ರಾಷ್ಟ್ರ ರಾಜಧಾನಿಯಲ್ಲಿ  ನಡೆದ “ಧರ್ಮ ಸಂಸದ್” ಗೆ ಸಂಬಂಧಿಸಿದಂತೆ ದ್ವೇಷ ಭಾಷಣ ಪ್ರಕರಣವನ್ನು ದಾಖಲಿಸಿದ್ದಾರೆ.

ಪೂಜಾ ಶಕುನ್ 2019 ರಲ್ಲಿ ಮಹಾತ್ಮಾ ಗಾಂಧಿಯವರ ಪ್ರತಿಮೆಯ ಮೇಲೆ ಗುಂಡು ಹಾರಿಸಿದ್ದರು, ಜೊತೆಗೆ ಅಲಿಘರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಾಥೂರಾಮ್ ಗೋಡ್ಸೆಯನ್ನು ಹೊಗಳಿ ಘೋಷಣೆಗಳನ್ನು ಕೂಗಿ ಸುದ್ದಿಯಾಗಿದ್ದರು.

ಕಳೆದ ಡಿಸೆಂಬರ್ 17 ಮತ್ತು 19 ರ ನಡುವೆ, ದೆಹಲಿಯಲ್ಲಿ (ಹಿಂದೂ ಯುವ ವಾಹಿನಿಯಿಂದ) ಮತ್ತು ಹರಿದ್ವಾರದಲ್ಲಿ (ಯತಿ ನರಸಿಂಹಾನಂದರಿಂದ) ಆಯೋಜಿಸಲಾದ ಎರಡು ಧರ್ಮ ಸಂಸದ್ ಕಾರ್ಯಕ್ರಮಗಳಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರಕ್ಕೆ ಮುಕ್ತ ಕರೆಗಳನ್ನು ನೀಡಲಾಗಿತ್ತು.


ಇದನ್ನೂ ಓದಿ: #ಮೋದಿಶೇಮ್ಸ್‌ಇಂಡಿಯಾ #ಮೌಲಾನಾಮೋದಿ ಹ್ಯಾಷ್‌ಟ್ಯಾಗ್‌ ಟ್ವಿಟ್ಟರ್‌‌ನಲ್ಲಿ ಟ್ರೆಂಡಿಂಗ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ‘ಸಂವಿಧಾನ ಮತ್ತು ಮೀಸಲಾತಿ’ಯನ್ನು ರದ್ದುಗೊಳಿಸಲು ಬಯಸುತ್ತಿದೆ: ಲಾಲು ಪ್ರಸಾದ್ ಯಾದವ್

0
ಬಿಜೆಪಿ ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ, ಸರ್ಕಾರಿ ಉದ್ಯೋಗ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರು ಕೂಡ ಮೀಸಲಾತಿಯನ್ನು ಪಡೆಯಬೇಕು, ಅವರ ಮೀಸಲಾತಿ ಪರವಾಗಿ ನಾನಿದ್ದೇನೆ ಎಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)...