Homeಕರ್ನಾಟಕಬಾಗಲಕೋಟೆಯ ಕೆರೂರಿನಲ್ಲಿ ಕೋಮು ಸಂಘರ್ಷ: ಘರ್ಷಣೆಯಲ್ಲಿ ಹಿಂದೂ ಜಾಗರಣ ವೇದಿಕೆ ಭಾಗಿ

ಬಾಗಲಕೋಟೆಯ ಕೆರೂರಿನಲ್ಲಿ ಕೋಮು ಸಂಘರ್ಷ: ಘರ್ಷಣೆಯಲ್ಲಿ ಹಿಂದೂ ಜಾಗರಣ ವೇದಿಕೆ ಭಾಗಿ

- Advertisement -
- Advertisement -

ಬಾಗಲಕೋಟೆಯ ಕೆರೂರು ಪಟ್ಟಣದಲ್ಲಿ ಹಿಂದೂ ಮತ್ತು ಮುಸ್ಲಿಮರ ನಡುವೆ ಭುಗಿಲೆದ್ದ ಘರ್ಷಣೆಯಲ್ಲಿ ಮೂವರು ವ್ಯಕ್ತಿಗಳಿಗೆ ಇರಿಯಲಾಗಿದೆ ಎಂದು ‘ದಿ ಹಿಂದೂ’ ಗುರುವಾರ ವರದಿ ಮಾಡಿದೆ. ಬಿಜೆಪಿ ಬೆಂಬಲಿತ ಸಂಘಟನೆಯಾದ ಹೆಚ್‌ಜೆವಿ ಘರ್ಷಣೆಯಲ್ಲಿ ಭಾಗಿಯಾಗಿದೆ ಎಂದು ಎಎನ್‌ಐ ವರದಿ ಮಾಡಿದೆ ಎಂದು ಸ್ಕ್ರಾಲ್.ಇನ್ ಉಲ್ಲೇಖಿಸಿದೆ.

ಘರ್ಷಣೆಯಲ್ಲಿ ಒಟ್ಟು ನಾಲ್ವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅದು ಹೇಳಿದೆ. ಅರುಣ ಕಟ್ಟಿಮನಿ, ಲಕ್ಷ್ಮಣ ಕಟ್ಟಿಮನಿ, ಚುಂಗಿ ಯಮನೂರ ಎಂಬುವವರಿಗೆ ಇರಿತದ ಗಾಯಗಳಾಗಿದ್ದು, ಬಂದೆ ನವಾಜ್ ಗೋಕಾಕ ಅವರ ತಲೆಗೆ ಗಾಯವಾಗಿದೆ. ಗಾಯಗೊಂಡವರಲ್ಲಿ ಇಬ್ಬರು ಬುಧವಾರ ರಾತ್ರಿ ಮಹಿಳೆಯರಿಗೆ ಕಿರುಕುಳ ನೀಡಿದ್ದರು ಎಂದು ಪಿಟಿಐ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಟ್ಟೀಮನಿ ಮತ್ತು ಯಾಸಿನ್ ಪೆಂಡಾರಿ ಎಂಬ ವ್ಯಕ್ತಿಗಳ ನಡುವಿನ ಮಾತಿನ ಚಕಮಕಿ ಹಿಂಸಾಚಾರಕ್ಕೆ ತಿರುಗಿ ಕೋಮುಗಲಭೆ ಭುಗಿಲೆದ್ದಿದೆ ಎಂದು ತಹಶೀಲ್ದಾರ್ ಕಚೇರಿಯಿಂದ ಅಧಿಕೃತ ಹೇಳಿಕೆ ತಿಳಿಸಿದೆ.

ಘರ್ಷಣೆಯ ನಂತರ, ದುಷ್ಕರ್ಮಿಗಳ ಗುಂಪು ಐದು ವಾಹನಗಳು ಮತ್ತು 10 ತಳ್ಳುಗಾಡಿಗಳಿಗೆ ಬೆಂಕಿ ಹಚ್ಚಿದೆ ಎಂದು ದಿ ಹಿಂದೂ ವರದಿ ಮಾಡಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ.

 

ಸುಮಾರು 10 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಬಾಗಲಕೋಟೆ ಪೊಲೀಸ್ ಉಪ ಆಯುಕ್ತ ಪಿ ಸುನೀಲಕುಮಾರ್ ತಿಳಿಸಿದ್ದಾರೆ. ಕೆರೂರಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ನಗರದಲ್ಲಿ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವುದನ್ನು ಸ್ಥಳೀಯ ಆಡಳಿತ ನಿಷೇಧಿಸಿದೆ.

ಇದನ್ನೂ ಓದಿ: ದ್ವೇಷ ಭಾಷಣ: ಬಿಜೆಪಿ ಬೆಂಬಲಿತ ಸಂಘಟನೆ ಹೆಚ್‌ಜೆವಿ ರಾಜ್ಯ ಸಂಚಾಲಕ ಕೇಶವ ಮೂರ್ತಿ ವಿರುದ್ಧ ಎಫ್‌ಐಆರ್‌

ಈ ಮಧ್ಯೆ, “ವೈಯಕ್ತಿಕ ವಿಷಯ ಘರ್ಷಣೆಗೆ ಕಾರಣವಾಯಿತು” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.

“ಪೊಲೀಸರು ಈಗಾಗಲೇ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ ಮತ್ತು ಕೆಲವರ ಬಂಧನಗಳನ್ನು ಮಾಡಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಂತಿಯನ್ನು ಕಾಪಾಡಿಕೊಳ್ಳಲು ನಾವು ಎರಡೂ ಸಮುದಾಯಗಳಿಗೆ ಸೂಚನೆಗಳನ್ನು ನೀಡಿದ್ದೇವೆ” ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಮಾನವೀಯತೆಯನ್ನು ರಾಜಕೀಯ ಅಧಿಕಾರಕ್ಕಾಗಿ ಬಿಜೆಪಿ ನಾಯಕರು ಅಧಿಕೃತವಾಗಿ ಘೋಷಿಸಲಾಗಿದೆ ಎಂದು ಹೇಳಬಹುದು..
    ಜಾತಿ ಗ್ರಸ್ಥ ಸಮಾಜ ನಿರ್ಮಾಣದ ಗುರಿಯನ್ನು ಸಾಧಿಸಲು ಮನುವ್ಯಾಧಿಗಳ ಪ್ರಯತ್ನಕ್ಕೆ ಪ್ರತಿರೋಧ ವ್ಯಕ್ತಪಡಿಸಲಿಲ್ಲ ಎಂದು ಅವರು ಈ ರಾಜಕೀಯಕ್ಕೆ ಅಂಟಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Must Read

ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುತ್ತಿದ್ದಾರೆ, ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು: ಮಲ್ಲಿಕಾರ್ಜುನ ಖರ್ಗೆ

0
'ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮಮಂದಿರದ ಮೇಲೆ ಬುಲ್ಡೋಜರ್ ಹರಿಸಲಿದೆ' ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಚುನಾವಣಾ ಆಯೋಗ...