Homeಮುಖಪುಟಹೆಚ್ಚಿದ ಕೋಮು ಉದ್ವಿಗ್ನತೆ ಹಿನ್ನಲೆ: ಕಂಪೆನಿಗಳನ್ನು ಕರ್ನಾಟಕದಿಂದ ತಮಿಳುನಾಡಿಗೆ ಸೆಳೆಯಲು ಪ್ರಯತ್ನಿಸುತ್ತಿರುವ ಡಿಎಂಕೆ ಸರ್ಕಾರ

ಹೆಚ್ಚಿದ ಕೋಮು ಉದ್ವಿಗ್ನತೆ ಹಿನ್ನಲೆ: ಕಂಪೆನಿಗಳನ್ನು ಕರ್ನಾಟಕದಿಂದ ತಮಿಳುನಾಡಿಗೆ ಸೆಳೆಯಲು ಪ್ರಯತ್ನಿಸುತ್ತಿರುವ ಡಿಎಂಕೆ ಸರ್ಕಾರ

ತಮಿಳುನಾಡಿನಲ್ಲಿ ಆಕ್ರಮಣಕಾರಿ ಹಿಂದುತ್ವ ರೂಪುಗೊಳ್ಳುವುದು ತುಂಬಾ ತ್ರಾಸದಾಯಕವಾಗಿದ್ದು, ರಾಜ್ಯವು 100 ವರ್ಷಗಳ ಹಿಂದೆಯೆ ಧರ್ಮಗಳನ್ನು ಪ್ರಜಾಪ್ರಭುತ್ವಗೊಳಿಸಿದೆ ಎಂದು ರಾಜ್ಯದ ವಿತ್ತ ಸಚಿವ ತ್ಯಾಗರಾಜನ್ ಹೇಳಿದ್ದಾರೆ

- Advertisement -
- Advertisement -

ರಾಜ್ಯದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯಿಂದಾಗಿ ತಮ್ಮ ಕಂಪನಿಗಳನ್ನು ಕರ್ನಾಟಕದಿಂದ ತಮಿಳುನಾಡಿಗೆ ಬದಲಾಯಿಸಲು ಬಯಸುವ ಉದ್ಯೋಗದಾತರಿಗೆ ತಾವು ಅವಕಾಶ ಕಲ್ಪಿಸಲು ಕೆಲಸ ಮಾಡುವುದಾಗಿ ತಮಿಳುನಾಡು ವಿತ್ತ ಸಚಿವ ಪಳನಿವೇಲ್ ತ್ಯಾಗರಾಜನ್ ಅವರು ಹೇಳಿದ್ದಾರೆ.

ತಮಿಳುನಾಡಿನಲ್ಲಿ ಆಕ್ರಮಣಕಾರಿ ಹಿಂದುತ್ವ ರೂಪುಗೊಳ್ಳುವುದು ತುಂಬಾ ತ್ರಾಸದಾಯಕವಾಗಿದೆ ಎಂದು ಹೇಳಿರುವ ಅವರು, “ರಾಜ್ಯವು 100 ವರ್ಷಗಳ ಹಿಂದೆಯೆ ಧರ್ಮಗಳನ್ನು ಪ್ರಜಾಪ್ರಭುತ್ವಗೊಳಿಸಿದ್ದು, ಅದರ ಮೌಲ್ಯಗಳಿಗೆ ಯಾವುದೇ ರೀತಿಯ ಮೂಲಭೂತವಾದಗಳು ಅಡ್ಡಿಪಡಿಸಲು ಸಾಧ್ಯವಿಲ್ಲ” ರಾಜ್ಯವು 100 ವರ್ಷಗಳ ಹಿಂದೆಯೆ ತನ್ನ ನಂಬಿಕೆಯನ್ನು ಪ್ರಜಾಪ್ರಭುತ್ವಗೊಳಿಸಿದ್ದು, ಅದರ ಮೌಲ್ಯಗಳಿಗೆ ಯಾವುದೇ ರೀತಿಯ ಮೂಲಭೂತವಾದಗಳು ಅಡ್ಡಿಪಡಿಸಲು ಸಾಧ್ಯವಿಲ್ಲಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ನೇತೃತ್ವದಲ್ಲಿ ಡಿಎಂಕೆ ನಾಯಕರು ವಿಶ್ವದೆಲ್ಲೆಡೆಯಿಂದ ರಾಜ್ಯಕ್ಕೆ ಬಂಡವಾಳವನ್ನು ಸೆಳೆಯಲು ಪ್ರಯತ್ನಿಸುತ್ತಿದ್ದಾರೆ.

ಇತ್ತೀಚಿನ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಮಾತನಾಡಿದ ತ್ಯಾಗರಾಜನ್ ಅವರು, ಸರಕು ಮತ್ತು ಸೇವಾ ತೆರಿಗೆಯ ದೋಷಯುಕ್ತ ಅನುಷ್ಠಾನ ಮತ್ತು ಸಂಸ್ಥೆಗಳ ಮೇಲೆ ಒಕ್ಕೂಟ ಸರ್ಕಾರದ ಹೆಚ್ಚುತ್ತಿರುವ ನಿಯಂತ್ರಣದ ಕುರಿತು ಕಳವಳ ವ್ಯಕ್ತಪಡಿಸಿದ್ದಾಗಿ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೋಮು ದ್ವೇಷ ಹೆಚ್ಚುತ್ತಿರುವ ಹಿನ್ನಲೆ: ರಾಜ್ಯ ಮಟ್ಟದ ಸೌಹಾರ್ದ ಸಮಾವೇಶಕ್ಕೆ ಸಜ್ಜಾಗುತ್ತಿರುವ ಉಡುಪಿ!

“ಒಕ್ಕೂಟ ಸರ್ಕಾರದ ಈ ನಡೆ ದೇಶದಲ್ಲಿ ಭೀಕರ ಪರಿಣಾಮಗಳಿಗೆ ಕಾರಣವಾಗಬಹುದು” ಎಂದು ತ್ಯಾಗರಾಜನ್‌ ಎಚ್ಚರಿಸಿದ್ದು, “ತಮಿಳುನಾಡು ಸರ್ಕಾರವು ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಮೇಲೆ ನಿಗಾ ಇರಿಸಿದೆ. ಪ್ರತಿ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ” ಎಂದು ಹೇಳಿದ್ದಾರೆ.

“ತಮಿಳುನಾಡನ್ನು ವೈವಿಧ್ಯಗೊಳಿಸಲು ಬಯಸುವ ಐಟಿ ಕಂಪನಿಗಳು ಬೃಹತ್ ಆಸಕ್ತಿಯಿಂದ ಇದೆ. ಜೊತೆಗೆ ನಾವು ಕೂಡಾ ಈಗಾಗಲೇ ರೇಸ್‌ನಲ್ಲಿದ್ದೇವೆ. ಇಂತಹ ಕಂಪೆನಿಗಳನ್ನು ಸಕ್ರಿಯವಾಗಿ ಬೆಳೆಸುವ ಜನರು ನಮ್ಮೊಂದಿಗೆ ಇದ್ದಾರೆ. ನಮ್ಮ ಸರ್ಕಾರವು ಈ ಬಗ್ಗೆ ಕೆಲಸ ಮಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

ತಮಿಳುನಾಡು ಹೂಡಿಕೆಯಲ್ಲಿ 53% ರಷ್ಟು ಏರಿಕೆ ಕಂಡಿದೆ. ಹಣಕಾಸು ಹೂಡಿಕೆದಾರರು ಮತ್ತು ಕಾರ್ಪೊರೇಟ್‌ಗಳನ್ನು ಆಕರ್ಷಿಸಲು ರಾಜ್ಯ ಸರ್ಕಾರವು ಮುಂದಿನ ಆರು ತಿಂಗಳೊಳಗೆ ವಿವಿಧ ದೇಶಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಲಿದೆ ಎಂದು ಅವರು ಹೇಳಿದ್ದಾರೆ.

ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದ ಸ್ಟಾಲಿನ್ ಅವರು, ಇತ್ತೀಚೆಗೆ ವಾಣಿಜ್ಯ ಮುಖ್ಯಸ್ಥರನ್ನು ಭೇಟಿ ಮಾಡಲು ದುಬೈಗೆ ಭೇಟಿ ನೀಡಿದ್ದರು. 6,100 ಕೋಟಿ ರೂಪಾಯಿ ಮೌಲ್ಯದ ಒಪ್ಪಂದ ಪತ್ರಗಳಿಗೆ ಸಹಿ ಹಾಕಲಾಗಿದ್ದು, ಇದರಿಂದಾಗಿ ತಮಿಳುನಾಡಿನಲ್ಲಿ 14,000 ಉದ್ಯೋಗಳು ಸೃಷ್ಟಿಯಾಗಲಿದೆ ಎಂದು ಸರ್ಕಾರದ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ಶೂದ್ರರನ್ನು ಬಳಸಿಕೊಂಡು ಶೂದ್ರರ ವಿರುದ್ದವೆ ಬಾಣ ಪ್ರಯೋಗ: ಬಿಜೆಪಿಯ ಕೋಮುದ್ರುವೀಕರಣದ ವಿರುದ್ದ ‘ಕರ್ನಾಟಕ ಶೂದ್ರಶಕ್ತಿ ವೇದಿಕೆ’ ಆಕ್ರೋಶ

ತಮಿಳುನಾಡಿನಲ್ಲಿ ಬಿಜೆಪಿ ಆಕ್ರಮಣಕಾರಿ ರಾಜಕೀಯಕ್ಕೆ ಪ್ರಯತ್ನಿಸುತ್ತಿದೆ. ಆದರೆ ಸಚಿವ ತ್ಯಾಗರಾಜನ್ ಅವರು ಹಿಂದುತ್ವದ ವಿಸ್ತರಣೆಗೆ ತಮಿಳುನಾಡು ದೊಡ್ಡ ಸವಾಲನ್ನು ಒಡ್ಡುತ್ತದೆ ಎಂದು ಹೇಳಿದ್ದಾರೆ.

“ತಮಿಳುನಾಡಿನಲ್ಲಿ ಹಿಂದುತ್ವ ಬೆಳೆದರೆ, ಅದು ನಮ್ಮ ಜಾತ್ಯತೀತ ಪ್ರಜಾಪ್ರಭುತ್ವಕ್ಕೆ ಅಂತಿಮ ಮೊಳೆಯಾಗುತ್ತದೆ. ಈ ರೀತಿಯ ಪರಿಸ್ಥಿತಿ ರಾಜ್ಯದಲ್ಲಿ ಎಂದಿಗೂ ಸಂಭವಿಸುವುದಿಲ್ಲ ಎಂದು ನಾನು ಭಾವಿಸುತ್ತೇನೆ. ತಮಿಳುನಾಡು ದೇಶದಲ್ಲೇ ಅತ್ಯಂತ ಶ್ರದ್ಧಾಭಕ್ತಿಯ ರಾಜ್ಯವಾಗಿದ್ದು, ಹಿಂದುತ್ವದ ಕಾರಣದಿಂದಲ್ಲ. ನಾವು ಬಹಳ ಹಿಂದೆಯೇ ಧರ್ಮವನ್ನು ಪ್ರಜಾಪ್ರಭುತ್ವಗೊಳಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಇಲ್ಲಿನ ದೇವಸ್ಥಾನಗಳಲ್ಲಿ ಯಾರು ಬೇಕಾದರೂ ಟ್ರಸ್ಟಿ ಆಗಬಹುದು, ಯಾರು ಬೇಕಾದರೂ ದೇವಸ್ಥಾನ ಕಟ್ಟಬಹುದು ಮತ್ತು ಅದನ್ನು ನೋಡಿಕೊಳ್ಳಬಹುದು. ನಾವು ನೂರು ವರ್ಷಗಳ ಹಿಂದೆ ಇಂತಹ ಸಮಸ್ಯೆಗಳನ್ನು ಪರಿಹರಿಸಿದ್ದೇವೆ. ಇತ್ತೀಚಿನ ಪುರಾತತ್ತ್ವ ಶಾಸ್ತ್ರದ ಸಂಶೋಧನೆಗಳ ಪ್ರಕಾರ ನಮ್ಮ ಸಂಸ್ಕೃತಿ 3,000 ವರ್ಷಗಳಷ್ಟು ಹಳೆಯದು. ನಾವು ಯಾವಾಗಲೂ ಯಾವುದೇ ರೀತಿಯ ಮೂಲಭೂತವಾದದಿಂದ ದೂರವಿದ್ದೇವೆ” ಎಂದು ತ್ಯಾಗರಾಜನ್ ಹೇಳಿದ್ದಾರೆ.

ಕೆಟ್ಟ ನೀತಿಗಳು ದೇಶದ ಮೇಲೆ ಶಾಶ್ವತವಾದ ಪರಿಣಾಮ ಬೀರಬಹುದು ಎಂದು ಎಚ್ಚರಿಸಿದ ಅವರು, ಟರ್ಕಿ ಮತ್ತು ಶ್ರೀಲಂಕಾದಂತಹ ದೇಶಗಳು ಅವುಗಳ ತೀವ್ರತೆಯನ್ನು ಎದುರಿಸಿದ್ದು, ಇದು ಇತರರು ಕಲಿಯುವಂತಹ ಉದಾಹರಣೆಗಳಾಗಿವೆ ಎಂದು ತ್ಯಾಗರಾಜನ್‌ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಸಮಾಜದಲ್ಲಿ ಕಲಹ ಸೃಷ್ಟಿಸುವವರು ಸ್ವಾಮೀಜಿ ಎನಿಸಿಕೊಳ್ಳಲು ಸಾಧ್ಯವಿಲ್ಲ: ಗದುಗಿನ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ಅಭಿಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...