Homeಮುಖಪುಟಈಶಾನ್ಯ ಭಾರತ ನಾಗರಿಕರ ವಿರುದ್ಧದ ಜನಾಂಗೀಯ ಹಿಂಸಾಚಾರ: ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ

ಈಶಾನ್ಯ ಭಾರತ ನಾಗರಿಕರ ವಿರುದ್ಧದ ಜನಾಂಗೀಯ ಹಿಂಸಾಚಾರ: ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ

- Advertisement -
- Advertisement -

ಈಶಾನ್ಯ ರಾಜ್ಯಗಳು ಮತ್ತು ಇತರ ಗಡಿ ಪ್ರದೇಶಗಳ ನಾಗರಿಕರ ಮೇಲಿನ ಜನಾಂಗೀಯ ತಾರತಮ್ಯ ಮತ್ತು ಹಿಂಸಾಚಾರವನ್ನು ತಡೆಗಟ್ಟುವಲ್ಲಿ, ಪ್ರತಿಕ್ರಿಯಿಸುವಲ್ಲಿ ನಿರಂತರ ಸಾಂವಿಧಾನಿಕ ವೈಫಲ್ಯವನ್ನು ಪರಿಹರಿಸಲು ನ್ಯಾಯಾಂಗ ಹಸ್ತಕ್ಷೇಪವನ್ನು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆಯಾಗಿದೆ.

ಡಿಸೆಂಬರ್ 27 ರಂದು ಡೆಹ್ರಾಡೂನ್‌ನ ಸೆಲಾಕಿ ಪ್ರದೇಶದಲ್ಲಿ ಜನಾಂಗೀಯ ಪ್ರೇರಿತ ದಾಳಿಯಲ್ಲಿ ತೀವ್ರ ಗಾಯಗೊಂಡು ಸಾವನ್ನಪ್ಪಿದ ತ್ರಿಪುರಾದ 24 ವರ್ಷದ ಎಂಬಿಎ ವಿದ್ಯಾರ್ಥಿ ಅಂಜೆಲ್ ಚಕ್ಮಾ ಅವರ ಕ್ರೂರ ಹತ್ಯೆಯ ನಂತರ ಡಿಸೆಂಬರ್ 28 ರಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವ ಸುದ್ದಿ ಬಂದಿದೆ.

ಉನಕೋಟಿ ಜಿಲ್ಲೆಯ ಮಚ್ಮಾರಾ ನಿವಾಸಿ ಅಂಜೆಲ್, ಅಗರ್ತಲಾದ ಹೋಲಿ ಕ್ರಾಸ್ ಶಾಲೆಯಲ್ಲಿ ಪದವಿ ಮುಗಿಸಿದ ನಂತರ ಎಂಬಿಎ ಓದಲು ಡೆಹ್ರಾಡೂನ್‌ಗೆ ತೆರಳಿದ್ದರು. ಅವರ ಕಿರಿಯ ಸಹೋದರ ಮೈಕೆಲ್ ಇದ್ದಾಗಲೇ ಅವರನ್ನು ಇರಿದು ಕೊಲ್ಲಲಾಯಿತು. ಘಟನೆಯಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳಿಗೆ ಮರಣದಂಡನೆ ಅಥವಾ ಕನಿಷ್ಠ ಜೀವಾವಧಿ ಶಿಕ್ಷೆ ವಿಧಿಸಬೇಕೆಂದು ಚಕ್ಮಾ ಕುಟುಂಬ ಒತ್ತಾಯಿಸಿದೆ.

ದೆಹಲಿ ಮೂಲದ ವಕೀಲ ಅನೂಪ್ ಪ್ರಕಾಶ್ ಅವಸ್ಥಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಕೇಂದ್ರ, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಈ ಅರ್ಜಿಯಲ್ಲಿ ಕಕ್ಷಿದಾರರನ್ನಾಗಿ ಮಾಡಿದೆ.

“ಸಂವಿಧಾನದ 32 ನೇ ವಿಧಿಯ ಅಡಿಯಲ್ಲಿ ಈ ರಿಟ್ ಅರ್ಜಿಯನ್ನು ಸಲ್ಲಿಸಲಾಗುತ್ತಿದೆ, ಇದು ಆರ್ಟಿಕಲ್ 14, 19(1)(ಎ) ಮತ್ತು (ಜಿ), ಮತ್ತು 21 ರ ಅಡಿಯಲ್ಲಿ ಮೂಲಭೂತ ಹಕ್ಕುಗಳ ಉಲ್ಲಂಘನೆಗಾಗಿ ರಿಟ್‌, ನಿರ್ದೇಶನಗಳು ಅಥವಾ ಆದೇಶಗಳನ್ನು ಹೊರಡಿಸಲು ಕೋರುತ್ತದೆ. ಇದರಿಂದಾಗಿ ಈಶಾನ್ಯ ರಾಜ್ಯಗಳು ಮತ್ತು ಇತರ ಗಡಿ ಪ್ರದೇಶಗಳ ಭಾರತೀಯ ನಾಗರಿಕರ ವಿರುದ್ಧ ಜನಾಂಗೀಯ ತಾರತಮ್ಯ ಮತ್ತು ಹಿಂಸಾಚಾರವನ್ನು ಪರಿಹರಿಸಲು ನ್ಯಾಯಾಂಗ ಹಸ್ತಕ್ಷೇಪವನ್ನು ಕೋರುತ್ತದೆ” ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಅರ್ಜಿಯಲ್ಲಿ ಅಂಜೆಲ್ ಚಕ್ಮಾ ಅವರ ಕೊನೆಯ ಮಾತುಗಳು: “ನಾವು ಭಾರತೀಯರು… ಅದನ್ನು ಸಾಬೀತುಪಡಿಸಲು ನಾವು ಯಾವ ಪ್ರಮಾಣಪತ್ರವನ್ನು ತೋರಿಸಬೇಕು” ಎಂಬ ಹೇಳಿಕೆಯನ್ನು ಹೈಲೈಟ್‌ ಮಾಡಲಾಗಿದೆ. ಘರ್ಷಣೆಯು ಮಾರಕ ಹಿಂಸಾಚಾರಕ್ಕೆ ಕಾರಣವಾಗುವ ಮೊದಲು ಅವರ ಸಾಂವಿಧಾನಿಕ ಸಂಬಂಧವನ್ನು ದುರಂತವಾಗಿ ಪ್ರತಿಬಿಂಬಿಸುವ ಹೇಳಿಕೆ ಇದಾಗಿದೆ.

ಅರ್ಜಿಯ ಪ್ರಕಾರ, ದಾಳಿಕೋರರು ಇಬ್ಬರೂ ಸಹೋದರರ ಮೇಲೆ ಹಲ್ಲೆ ನಡೆಸಿ ಇರಿದಿದ್ದಾರೆ ಎಂದು ಆರೋಪಿಸಲಾಗಿದೆ. ಅಂಜೆಲ್ ಅವರ ಕುತ್ತಿಗೆ ಮತ್ತು ಬೆನ್ನುಮೂಳೆಗೆ ತೀವ್ರ ಗಾಯಗಳಾಗಿದ್ದವು, ಚಿಕಿತ್ಸೆಯ ಸಮಯದಲ್ಲಿ ಪ್ರಜ್ಞಾಹೀನರಾಗಿದ್ದರು. ತೀವ್ರ ನಿಗಾದಲ್ಲಿ ಹದಿನಾಲ್ಕು ದಿನಗಳಿಗೂ ಹೆಚ್ಚು ಕಾಲ ಕಳೆದ ನಂತರ ನಿಧನರಾದರು. ಅವರ ಸಾವು ದೇಶಾದ್ಯಂತ ವ್ಯಾಪಕ ಪ್ರತಿಭಟನೆಗಳು ಮತ್ತು ನ್ಯಾಯದ ಬೇಡಿಕೆಗಳನ್ನು ಹುಟ್ಟುಹಾಕಿತು.

ಕಾನೂನು ರೂಪಿಸುವವರೆಗೆ ಕನಿಷ್ಠ ಮಧ್ಯಂತರವಾಗಿ ಸೂಕ್ತ ರಿಟ್ ಹೊರಡಿಸುವಂತೆ, ಸಮಗ್ರ ಮಾರ್ಗಸೂಚಿಗಳನ್ನು ರೂಪಿಸಲು, ಜನಾಂಗೀಯ ನಿಂದನೆಯನ್ನು ದ್ವೇಷ ಅಪರಾಧಗಳ ಪ್ರತ್ಯೇಕ ವರ್ಗವೆಂದು ಗುರುತಿಸಲು ಮತ್ತು ಅದಕ್ಕೆ ಅನುಗುಣವಾದ ಶಿಕ್ಷೆ ಪ್ರಮಾಣ ನಿರ್ಧರಿಸಬೇಕು ಎಂದು ನ್ಯಾಯಾಲಯವನ್ನು ಒತ್ತಾಯಿಸಲಾಗಿದೆ.

ಜನಾಂಗೀಯ ಅಪರಾಧಗಳನ್ನು ವರದಿ ಮಾಡಲು, ಅದನ್ನು ಪರಿಹರಿಸಲು ಕೇಂದ್ರ ಮತ್ತು ರಾಜ್ಯ ಮಟ್ಟದಲ್ಲಿ ನೋಡಲ್ ಏಜೆನ್ಸಿ, ಶಾಶ್ವತ ಸಂಸ್ಥೆ, ಆಯೋಗ ಅಥವಾ ನಿರ್ದೇಶನಾಲಯವನ್ನು ರಚಿಸಬೇಕು. ಅಂತಹ ಅಪರಾಧಗಳನ್ನು ಪರಿಹರಿಸಲು ಪ್ರತಿ ಜಿಲ್ಲೆ ಮತ್ತು ಮಹಾನಗರ ಪ್ರದೇಶದಲ್ಲಿ ಮೀಸಲಾದ ವಿಶೇಷ ಪೊಲೀಸ್ ಘಟಕಗಳನ್ನು ಸ್ಥಾಪಿಸಲು ಕೇಂದ್ರ ಮತ್ತು ರಾಜ್ಯಗಳಿಗೆ ನಿರ್ದೇಶನಗಳನ್ನು ನೀಡುವಂತೆಯೂ ಅರ್ಜಿಯಲ್ಲಿ ಕೋರಿದೆ.

ಇದಲ್ಲದೆ, ಜನಾಂಗೀಯ ತಾರತಮ್ಯ ಮತ್ತು ಅದರ ಪರಿಹಾರದ ಕುರಿತು ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯಾಗಾರಗಳು, ಚರ್ಚೆಗಳನ್ನು ಆಯೋಜಿಸಲು ಮನವಿಯಲ್ಲಿ ಕರೆ ನೀಡಲಾಗಿದೆ.

ಭಾರತದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯು ಪ್ರಸ್ತುತ ತನಿಖೆಯ ಆರಂಭಿಕ ಹಂತದಲ್ಲಿ ಜನಾಂಗೀಯ ಪಕ್ಷಪಾತವನ್ನು ಗುರುತಿಸಲು ಅಥವಾ ದಾಖಲಿಸಲು ಕಾರ್ಯವಿಧಾನವನ್ನು ಹೊಂದಿಲ್ಲ, ಇದರ ಪರಿಣಾಮವಾಗಿ ಅಂತಹ ಅಪರಾಧಗಳನ್ನು ಸಾಮಾನ್ಯ ಅಪರಾಧಗಳೆಂದು ಪರಿಗಣಿಸಲಾಗುತ್ತದೆ.

ಅಂಜೆಲ್ ಚಕ್ಮಾ ಅವರ ಹತ್ಯೆ ಪ್ರತ್ಯೇಕ ಘಟನೆಯಲ್ಲ, ಬದಲಾಗಿ ಈಶಾನ್ಯ ರಾಜ್ಯಗಳ ನಾಗರಿಕರ ವಿರುದ್ಧದ ಜನಾಂಗೀಯ ನಿಂದನೆ ಮತ್ತು ಹಿಂಸಾಚಾರದ ದೀರ್ಘಕಾಲೀನ ಮಾದರಿಯ ಭಾಗವಾಗಿದೆ ಎಂದು ಅರ್ಜಿಯಲ್ಲಿ ಒತ್ತಿ ಹೇಳಲಾಗಿದೆ. 2014 ರಲ್ಲಿ ನೀಡೋ ತಾನಿಯಮ್ ಸಾವು, ಮಹಾನಗರಗಳಲ್ಲಿ ವಿದ್ಯಾರ್ಥಿಗಳು ಮತ್ತು ಕಾರ್ಮಿಕರ ಮೇಲೆ ನಡೆದ ಅನೇಕ ಹಲ್ಲೆಗಳು, ಸಂಸತ್ತಿನ ಉತ್ತರಗಳಲ್ಲಿ ಕೇಂದ್ರವು ಒಪ್ಪಿಕೊಂಡ ಘಟನೆಗಳು ಸೇರಿದಂತೆ ಹಿಂದಿನ ಪ್ರಕರಣಗಳನ್ನು ಇದು ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...