Homeಕರ್ನಾಟಕಉಡುಪಿ, ಮಂಗಳೂರು & ಶಿವಮೊಗ್ಗಕ್ಕೆ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ತಕ್ಷಣ ಜಾರಿ: ಗೃಹ ಸಚಿವ...

ಉಡುಪಿ, ಮಂಗಳೂರು & ಶಿವಮೊಗ್ಗಕ್ಕೆ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ತಕ್ಷಣ ಜಾರಿ: ಗೃಹ ಸಚಿವ ಪರಮೇಶ್ವರ್

- Advertisement -
- Advertisement -

ದಕ್ಷಿಣ‌ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ‌ ಪ್ರದೇಶಗಳಾಗಿ ಪರಿಗಣಿಸಿ, ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ತಕ್ಷಣ ಜಾರಿಗೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಡಾ.‌ ಜಿ.ಪರಮೇಶ್ವರ್ ಗುರುವಾರ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಮಂಗಳೂರಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಯಾವುದೇ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರತಿಸಾರಿ ಈ ರೀತಿ ಆಗುತ್ತಿದ್ದರೆ ಸುಮ್ಮನೆ ಕೂರಲು ಆಗುವುದಿಲ್ಲ. ಕಾನೂನನ್ನು ಮತ್ತಷ್ಟು ಬಿಗಿ ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

“ಕಳೆದ ಬಾರಿ ಘಟನೆ ನಡೆದಾಗ ಪರಿಸ್ಥಿತಿ ಅರ್ಥೈಸಿಕೊಂಡು, ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸಲು ಪರಿಶೀಲನೆ ಮಾಡಿ, ತಕ್ಷಣ ಜಾರಿಗೆ ಬರುವ ನಿಟ್ಟಿನಲ್ಲಿ ಸರ್ಕಾರ ಆದೇಶ ಹೊರಡಿಸಿದೆ.‌ ಈ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಕ್ರಮ ತೆಗೆದುಕೊಳ್ಳುತ್ತಾರೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ ಪ್ರದೇಶಗಳಾಗಿ ಪರಿಗಣಿಸುತ್ತೇವೆ. ಕೋಮು ಹಿಂಸೆಯನ್ನು ಹತ್ತಿಕ್ಕಲು, ಸರ್ಕಾರ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಿದೆ” ಎಂದು‌ ಹೇಳಿದ್ದಾರೆ.

“ನಕ್ಸಲ್ ನಿಗ್ರಹ ಕಾರ್ಯಪಡೆಯಲ್ಲಿನ ಅರ್ಧ ಸಿಬ್ಬಂದಿಗಳನ್ನು ಕೋಮು ಹಿಂಸೆ ನಿಗ್ರಹ ಪಡೆಗೆ ನಿಯೋಜಿಸಲಾಗುವುದು. ಅವರಿಗೆ ಅಗತ್ಯ ಅಧಿಕಾರ, ಸವಲತ್ತುಗಳನ್ನು ನೀಡುತ್ತೇವೆ. ಮೂರು ಜಿಲ್ಲೆಗಳಲ್ಲಿ ಹೆಚ್ಚು ಗಮನ ಹರಿಸುತ್ತೇವೆ. ದ್ವೇಷ ಭಾವನೆ ಬಂದರೆ ಸಮಾಜ ಎಲ್ಲಿ ಉಳಿಯುತ್ತದೆ. ಜನರು ಅಲ್ಲಿ ಜೀವನ ಮಾಡಲು ಆಗುತ್ತದೆಯೇ? ಇದನ್ನು ಸರ್ಕಾರ ನೋಡಿಕೊಂಡು ಸುಮ್ಮನೆ ಇರುವುದಿಲ್ಲ” ಎಂದು ಹೇಳಿದ್ದಾರೆ.

“ಮಂಗಳೂರಿನಲ್ಲಿ ನಡೆದ ಯುವಕನ ಹತ್ಯೆ ಪ್ರಕರಣದ ತನಿಖೆಯಲ್ಲಿ ಗಂಭೀರವಾದ ಮಾಹಿತಿ ಸಿಕ್ಕಿದೆ. ಅದರ ಆಧಾರದ ಮೇಲೆ‌ಕ್ರಮ ತೆಗೆದುಕೊಳ್ಳುತ್ತೇವೆ. ಜನಪ್ರತಿನಿಧಿಗಳು ಶಾಂತಿ ನೆಲೆಸುವ ನಿಟ್ಟಿನಲ್ಲಿ ಸಹಕಾರ ಮಾಡಬೇಕು. ಪ್ರಚೋದನೆ ಮಾಡಲು‌ ಹೋದರೆ‌ ನಿಲ್ಲಿಅಲು ಹೇಗೆ ಸಾಧ್ಯ. ಧಾರ್ಮಿಕ ಮುಖಂಡರೊಂದಿಗೆ ಶಾಂತಿ ಸಭೆಗಳನ್ನು ಮಾಡಲು ಸೂಚನೆ ನೀಡಿದ್ದೇನೆ” ಎಂದು ಅವರು ಹೇಳಿದ್ದಾರೆ. ಕೋಮು ಹಿಂಸೆ ನಿಗ್ರಹ ಕಾರ್ಯಪಡೆ

  ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಂಗಳೂರು ಹದಗೆಟ್ಟ ಪರಿಸ್ಥಿತಿ ಹಿನ್ನಲೆ | ಸ್ಪೀಕರ್ ಯುಟಿ ಖಾದರ್, ಉಸ್ತುವಾರಿ ಸಚಿವ ಗುಂಡೂರಾವ್‌ರನ್ನು ಹೊರಗಿಟ್ಟು ಸಭೆ ನಡೆಸಿದ ಸಿಎಂ

ಮಂಗಳೂರು ಹದಗೆಟ್ಟ ಪರಿಸ್ಥಿತಿ ಹಿನ್ನಲೆ | ಸ್ಪೀಕರ್ ಯುಟಿ ಖಾದರ್, ಉಸ್ತುವಾರಿ ಸಚಿವ ಗುಂಡೂರಾವ್‌ರನ್ನು ಹೊರಗಿಟ್ಟು ಸಭೆ ನಡೆಸಿದ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಾನವೀಯತೆಯೇ ಏಕೈಕ ಧರ್ಮ..’; ಹಳ್ಳಿಯನ್ನು ಜಾತಿ ಮುಕ್ತ ಎಂದು ಘೋಷಿಸಿದ ಮಹಾರಾಷ್ಟ್ರದ ಸೌಂದಲ ಗ್ರಾಮ

ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯ ಸೌಂದಲ ಗ್ರಾಮವು ತನ್ನನ್ನು ತಾನು 'ಜಾತಿ ಮುಕ್ತ' ಎಂದು ಘೋಷಿಸಿಕೊಂಡಿದ್ದು, ಸಂವಿಧಾನದ ಪೀಠಿಕೆ ಮೌಲ್ಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಮಾರ್ಗದರ್ಶಿ ತತ್ವವಾಗಿ ಅಳವಡಿಸಿಕೊಂಡಿದೆ. ಫೆಬ್ರವರಿ 5 ರಂದು ನಡೆದ...

ಸಿಎಂ ಸಿದ್ದರಾಮಯ್ಯ ಹೆಸರಿನಲ್ಲಿ ನಕಲಿ ವರ್ಗಾವಣೆ ಪತ್ರ ಹಂಚಿಕೆ: ದೂರು ದಾಖಲು

ಮಂಡ್ಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ ಮೋಹನ್ ಅವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ನಿಯೋಜಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ನಕಲಿ...

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...