Homeಕರ್ನಾಟಕಬೇಗೂರು ಕೆರೆ ವಿವಾದ ಕೋಮುವಾದಿಕರಣ: ಬಿಜೆಪಿ ಬೆಂಬಲಿಗ ಪುನಿತ್‌ ಕೆರೆಹಳ್ಳಿ ಸಹಿತ ಹಲವರ ಮೇಲೆ FIR

ಬೇಗೂರು ಕೆರೆ ವಿವಾದ ಕೋಮುವಾದಿಕರಣ: ಬಿಜೆಪಿ ಬೆಂಬಲಿಗ ಪುನಿತ್‌ ಕೆರೆಹಳ್ಳಿ ಸಹಿತ ಹಲವರ ಮೇಲೆ FIR

- Advertisement -
- Advertisement -

ನ್ಯಾಯಾಲಯದ ಆದೇಶಗಳನ್ನು ಧಿಕ್ಕರಿಸಿ ಆಗಸ್ಟ್ 11 ರಂದು ಬೇಗೂರು ಕೆರೆಯಲ್ಲಿ ಶಿವನ ಪ್ರತಿಮೆಯನ್ನು ಅನಾವರಣಗೊಳಿಸಿದ ಬಿಜೆಪಿ ಬೆಂಬಲಿತ ಸಂಘಪರಿವಾರದ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ದಿನ್ಯೂಸ್‌ಮಿನಿಟ್‌ ವರದಿ ಮಾಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಕರ್ನಾಟಕ ಹೈಕೋರ್ಟ್‌ಗೆ ಪ್ರತಿಮೆಯನ್ನು ಮುಚ್ಚಲಾಗಿದೆ ಎಂದು ತಿಳಿಸಿದ ಕೆಲವೇ ಗಂಟೆಗಳಲ್ಲಿ ಪ್ರತಿಮೆಯನ್ನು ಅನಾವರಣಗೊಳಿಸಲಾಗಿತ್ತು. ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ನೀಡಲಾಗಿದ್ದ ದೂರಿನ ಆಧಾರದ ಮೇಲೆ ಆಗಸ್ಟ್ 16 ರಂದು ಬೇಗೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಸಂಘಪರಿವಾರದ ಕಾರ್ಯಕರ್ತರಾದ ಪುನಿತ್ ಕೆರೆಹಳ್ಳಿ ಮತ್ತು ಸಂತೋಷ್ ಕರತಾಲ್ ಅವರ ಜೊತೆಗೆ ಇತರರ ಹೆಸರುಗಳನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ನ್ಯೂಸ್‌ಮಿನಿಟ್ ವರದಿಯಲ್ಲಿ ತಿಳಿಸಿದೆ. ಆಗಸ್ಟ್ 11 ರಂದು ಬೇಗೂರು ಕೆರೆಗೆ ಆಗಮಿಸಿದ್ದ ಆರೋಪಿಗಳು ಟಾರ್ಪಾಲ್‌‌ನಿಂದ ಮುಚ್ಚಿದ್ದ ಶಿವನ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು.

ಇದನ್ನೂ ಓದಿ: ಬೇಗೂರು ಕೆರೆ ಉಳಿಸಿ ಹೋರಾಟಕ್ಕೆ ಕೋಮು ಬಣ್ಣ: ಹೈಕೋರ್ಟ್ ಆದೇಶ ಧಿಕ್ಕರಿಸಿ ಕೆರೆ ಮಧ್ಯೆ ಶಿವ ವಿಗ್ರಹ ಅನಾವರಣ

ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 34 (ಸಾಮಾನ್ಯ ಉದ್ದೇಶವನ್ನು ಮುಂದಿಟ್ಟುಕೊಂಡು ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು), 298 (ಯಾವುದೇ ವ್ಯಕ್ತಿಯ ಧಾರ್ಮಿಕ ಭಾವನೆಗಳನ್ನು ನೋಯಿಸುವ ಉದ್ದೇಶಪೂರ್ವಕ ಉದ್ದೇಶ), 505 (2) (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆಗಳು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಬುಧವಾರ ಬೇಗೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಬಗ್ಗೆ ಹೈಕೋರ್ಟ್‌ಗೆ ಮಾಹಿತಿ ನೀಡಲಾಗಿದ್ದು, ಸೆಪ್ಟೆಂಬರ್ 2 ರೊಳಗೆ ತನಿಖಾ ವರದಿಯನ್ನು ಸಲ್ಲಿಸುವಂತೆ ಬೆಂಗಳೂರು (ಆಗ್ನೇಯ) ಡಿಸಿಪಿಗೆ ಸೂಚಿಸಿದೆ.

ಇದನ್ನೂ ಓದಿ: ಕಾರಿಗೆ ಬೆಂಕಿ: ಕೋಮು ಬಣ್ಣ ಹಚ್ಚಿದ ಬಿಜೆಪಿ ಶಾಸಕ ಸತೀಶ್‌ ರೆಡ್ಡಿ – ಪ್ರಕರಣ ಭೇದಿಸಿದ ಪೊಲೀಸರು

ಮುಖ್ಯ ನ್ಯಾಯಾಧೀಶ ಅಭಯ್ ಓಕಾ ನೇತೃತ್ವದ ಹೈಕೋರ್ಟ್ ಪೀಠವು, ನ್ಯಾಯಾಲಯದಲ್ಲಿರುವ ಬೇಗೂರು ಪ್ರಕರಣವು ಧಾರ್ಮಿಕ ದೃಷ್ಟಿಕೋನವನ್ನು ಹೊಂದಿಲ್ಲ, ಕೆರೆಯ ಮಧ್ಯದಲ್ಲಿ ಕೃತಕ ದ್ವೀಪವನ್ನು ನಿರ್ಮಿಸಲು ಬಿಬಿಎಂಪಿಗೆ ಅಧಿಕಾರವಿದೆಯೇ ಎಂಬುವುದನ್ನು ಪರಿಶೀಲಿಸುವ ಪ್ರಕರಣವಾಗಿದೆ ಎಂದು ಕಳೆದ ವಾರ ಪುನರುಚ್ಚರಿಸಿದೆ.

ಬಿಬಿಎಂಪಿಯು ಬೆಂಗಳೂರಿನ ಬೇಗೂರು ಕೆರೆಯ ಮಧ್ಯದಲ್ಲಿ ಪ್ರತಿಮೆಯನ್ನು ನಿರ್ಮಿಸುತ್ತಿರುವುದಕ್ಕೆ ಹೈಕೋರ್ಟ್ 2019 ರ ಆಗಸ್ಟ್‌ನಲ್ಲಿ ತಡೆ ನೀಡಿತ್ತು. ಕೆರೆಯ ಗಾತ್ರವನ್ನು ಕಡಿಮೆ ಮಾಡಲು ಮತ್ತು ಅದರಲ್ಲಿ ದ್ವೀಪಗಳನ್ನು ಮಾಡಲು ಬಿಬಿಎಂಪಿಗೆ ಅಧಿಕಾರವಿಲ್ಲ ಎಂದು ಅದು ಹೇಳಿತ್ತು.

ಆದರೆ ಆಗಸ್ಟ್ 1 ರಿಂದ, ಬಿಜೆಪಿ ಬೆಂಬಲಿತ ಸಂಘಪರಿವಾದ ಕಾರ್ಯಕರ್ತರು, ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ‘ಪರಿಸರ ಉಳಿವಿನ ಪ್ರಕರಣವನ್ನು’ ಕೋಮುವಾದಿಕರಣಗೊಳಿಸಲು ನೋಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟರ್‌ಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಪರಿಸರ ಹೋರಾಟಗಾರ ಲಿಯೋ ಸಾಲ್ಢಾನ್ಹಾ ಅವರನ್ನು ಗುರಿಯಾಗಿಸಿ ದ್ವೇಷವನ್ನು ಬಿತ್ತುತ್ತಿದ್ದಾರೆ.

ಇದನ್ನೂ ಓದಿ: ಕೋಮುವಾದದ ಲೇಪನದಲ್ಲಿ ಕಡೆಗಣನೆಗೆ ಒಳಪಟ್ಟ ಬೇಗೂರು ಕೆರೆ ಅಭಿವೃದ್ಧಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...