Homeಮುಖಪುಟದ್ವೇಷ ಭಾಷಣ : ಅಸ್ಸಾಂ ಸಿಎಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ...

ದ್ವೇಷ ಭಾಷಣ : ಅಸ್ಸಾಂ ಸಿಎಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಮ್ಯುನಿಸ್ಟ್ ಪಕ್ಷಗಳು

- Advertisement -
- Advertisement -

ಮುಸ್ಲಿಮರ ವಿರುದ್ಧ ಪದೇ ಪದೇ ದ್ವೇಷ ಕಾರುತ್ತಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಕಮ್ಯುನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕಿಸ್ಟ್ -ಸಿಪಿಐ (ಎಂ)) ಮತ್ತು ಕಮ್ಯುನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಮುಖಂಡರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ ಎಂದು ಕಾನೂನು ಸುದ್ದಿ ಸಂಸ್ಥೆ ಲೈವ್‌ ಲಾ ವರದಿ ಮಾಡಿದೆ.

ವಕೀಲ ನಿಝಾಮ್ ಪಾಷಾ ಅವರು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್ ಅವರ ಮುಂದೆ ಈ ಅರ್ಜಿಯನ್ನು ಪ್ರಸ್ತಾಪಿಸಿದ್ದು, ತುರ್ತು ವಿಚಾರಣೆಗೆ ಪಟ್ಟಿಮಾಡುವಂತೆ ಕೋರಿದ್ದಾರೆ.

ಅಸ್ಸಾಂ ಮುಖ್ಯಮಂತ್ರಿಯ ದ್ವೇಷ ಭಾಷಣಗಳ ವಿಚಾರದಲ್ಲಿ ನ್ಯಾಯಾಲಯ ತುರ್ತಾಗಿ ಮಧ್ಯಪ್ರವೇಶಿಸಬೇಕೆಂದು ವಕೀಲ ಪಾಷಾ ಅವರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಈ ಭಾಷಣಗಳು ಅತ್ಯಂತ ಕಳವಳಕಾರಿಯಾಗಿದ್ದು, ಇತ್ತೀಚೆಗೆ ಹಂಚಿಕೊಳ್ಳಲಾದ ವಿಡಿಯೋವೊಂದರಲ್ಲಿ ಮುಖ್ಯಮಂತ್ರಿಯವರು ಒಂದು ನಿರ್ದಿಷ್ಟ ಸಮುದಾಯದವರ ಮೇಲೆ ಗುಂಡು ಹಾರಿಸುತ್ತಿರುವಂತೆ ಚಿತ್ರಿಸಲಾಗಿದೆ ಎಂದು ಅವರು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರುಗಳನ್ನು ನೀಡಲಾಗಿದ್ದರೂ ಸಹ, ಇದುವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ವರದಿ ಹೇಳಿದೆ.

ಚುನಾವಣೆಗಳು ಹತ್ತಿರ ಬಂದಾಗ ಸುಪ್ರೀಂ ಕೋರ್ಟ್‌ನಲ್ಲಿಯೂ ರಾಜಕೀಯ ಹೋರಾಟಗಳು ನಡೆಯುತ್ತವೆ ಎಂದು ಸಿಜೆಐ ಸೂರ್ಯ ಕಾಂತ್ ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

“ಚುನಾವಣೆಗಳು ಸಮೀಪಿಸಿದಾಗ, ಆ ಚುನಾವಣೆಯ ಒಂದು ಭಾಗ ಸುಪ್ರೀಂ ಕೋರ್ಟ್‌ನೊಳಗೆ ನಡೆಯುತ್ತದೆ ಎನ್ನುವುದೇ ದೊಡ್ಡ ಸಮಸ್ಯೆ. ನಾವು ಈ ಬಗ್ಗೆ ಪರಿಶೀಲಿಸಿ, ವಿಚಾರಣೆಗೆ ದಿನಾಂಕವನ್ನು ನೀಡುತ್ತೇವೆ” ಎಂಬುವುದಾಗಿ ಸಿಜೆಐ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮುಸ್ಲಿಮರಿಗೆ ಗುರಿಯಿಟ್ಟು ಗುಂಡಿಕ್ಕುವಂತೆ ತೋರಿಸುವ ಎಐ ವಿಡಿಯೋವನ್ನು ಇತ್ತೀಚೆಗೆ ಅಸ್ಸಾಂ ಬಿಜೆಪಿ ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಅದನ್ನು ಡಿಲಿಟ್ ಮಾಡಿದೆ.

ಸಿಎಂ ಶರ್ಮಾ ವಿರುದ್ಧ ಹನ್ನೆರಡು ನಾಗರಿಕರು ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ಪ್ರತ್ಯೇಕ ರಿಟ್ ಅರ್ಜಿಯೊಂದನ್ನು ಸಲ್ಲಿಸಿದ್ದಾರೆ. ಅದರಲ್ಲಿ, ಸಿಎಂ ‘ಮಿಯಾ ಮುಸ್ಲಿಂ’, ‘ಫ್ಲಡ್ ಜಿಹಾದ್’ ‘ಲವ್ ಜಿಹಾದ್’ ಮತ್ತು ‘ಫರ್ಟಿಲೈಸರ್ ಜಿಹಾದ್’ ನಂತಹ ಪದಗಳನ್ನು ಬಳಸಿ ಒಂದು ಸಮುದಾಯವನ್ನು ಗುರಿಯಾಗಿಸುತ್ತಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಇತ್ತೀಚೆಗೆ, ಜಮಿಯತ್ ಉಲೇಮಾ-ಇ-ಹಿಂದ್ ಕೂಡ ಸಿಎಂ ಶರ್ಮಾ ಅವರ ಭಾಷಣವನ್ನು ಟೀಕಿಸಿ, ಸಾಂವಿಧಾನಿಕ ಹುದ್ದೆಗಳನ್ನು ಹೊಂದಿರುವ ವ್ಯಕ್ತಿಗಳು ವಿಭಜನಕಾರಿ ಹೇಳಿಕೆಗಳನ್ನು ನೀಡದಂತೆ ತಡೆಯಲು ನಿರ್ದೇಶನಗಳನ್ನು ನೀಡಬೇಕೆಂದು ಸುಪ್ರೀಂ ಕೋರ್ಟ್ ಅನ್ನು ಕೋರಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....

ಕೇರಳ ವಿಧಾನಸಭಾ ಚುನಾವಣೆ 2026 | ‘ಎಲ್‌ಡಿಎಫ್, ಯುಡಿಎಫ್ ದಶಕಗಳಿಂದ ರಾಜ್ಯವನ್ನು ಲೂಟಿ ಮಾಡಿವೆ’: ಪ್ರಧಾನಿ ಮೋದಿ

ಕೇರಳ ವಿಧಾನಸಭಾ ಚುನಾವಣೆ 2026 ರ ಹಿನ್ನೆಲೆಯಲ್ಲಿ ಪಾಲಕ್ಕಾಡ್‌ನಲ್ಲಿ ಭಾನುವಾರ ಬೃಹತ್ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಯುಡಿಎಫ್ ಮತ್ತು ಎಲ್‌ಡಿಎಫ್ ಎರಡರ ಮೇಲೂ ತೀವ್ರ ದಾಳಿ ನಡೆಸಿದ್ದಾರೆ. ಈ...

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...

ಉತ್ತರ ಪ್ರದೇಶ: 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ತಲೆ ಕತ್ತರಿಸಿ, ಮನೆಗೆ ತೆಗೆದುಕೊಂಡು ಹೋಗಿದ್ದ ವ್ಯಕ್ತಿ ಬಂಧನ 

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಲಾಗಿತ್ತು. 50 ವರ್ಷದ ಕೊಲೆಗಾರ, ಆ ವ್ಯಕ್ತಿಯ ಗಂಟಲು ಕತ್ತರಿಸಿ, ತಲೆ ಕತ್ತರಿಸಿ, ನಂತರ ಅದನ್ನು ತನ್ನ...

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ: ಆರ್‌ಎಸ್‌ಎಸ್ ನಾಯಕ ಸೇರಿ 30 ಮಂದಿ ಬಂಧನ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಪೊಲೀಸರು

ಶುಕ್ರವಾರ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ಹಿಂದೂತ್ವ ಗುಂಪುಗಳು ನಡೆಸಿದ ರಾಮನವಮಿ ಮೆರವಣಿಗೆಯಲ್ಲಿ ಮುಸ್ಲಿಂ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುಮಾರು 30 ಜನರು ಗಾಯಗೊಂಡು, ಆ ಪ್ರದೇಶದಲ್ಲಿ...

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ. ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ...

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....