Homeಕರ್ನಾಟಕಬೆಂಗಳೂರಿನಲ್ಲಿ ಸಾರ್ವಜನಿಕ ಶೌಚಾಲಯಗಳ ಕೊರತೆ: 1000 ಜನರಿಗೆ ಒಂದರಂತೆ ಶೌಚಾಲಯವೂ ಇಲ್ಲ ಎಂದ ವರದಿ

ಬೆಂಗಳೂರಿನಲ್ಲಿ ಸಾರ್ವಜನಿಕ ಶೌಚಾಲಯಗಳ ಕೊರತೆ: 1000 ಜನರಿಗೆ ಒಂದರಂತೆ ಶೌಚಾಲಯವೂ ಇಲ್ಲ ಎಂದ ವರದಿ

- Advertisement -
- Advertisement -

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾರ್ವಜನಿಕ ಶೌಚಾಲಯಗಳ ಕೊರತೆ ಇದೆ. ಚೆನ್ನೈ ಮತ್ತು ಅಹಮದಾಬಾದ್‌ನಂತಹ ಇತರ ನಗರಗಳಿಗೆ ಹೋಲಿಸಿದರೆ ಜನಸಂಖ್ಯೆಗೆ ಅನುಗುಣವಾಗಿ ಬೆಂಗಳೂರಿನಲ್ಲಿ ಲಭ್ಯವಿರುವ ಸಮುದಾಯ ಶೌಚಾಲಯಗಳ ಸಂಖ್ಯೆ ಕಡಿಮೆ ಎಂದು ಪುಣೆಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಲೋಕಲ್ ಸೆಲ್ಫ್ ಗವರ್ನಮೆಂಟ್ ((AIILSG) ವರದಿ ಬಹಿರಂಗಪಡಿಸಿದೆ.

2011 ರ ಜನಗಣತಿಯ ಪ್ರಕಾರ ಚೆನ್ನೈ, ಅಹಮದಾಬಾದ್ ಮತ್ತು ಬೆಂಗಳೂರಿನಲ್ಲಿ ಪ್ರತಿ ಚದರ ಕಿ.ಮೀ.ಗೆ ಪ್ರತಿ ಸಾವಿರ ಜನಸಂಖ್ಯೆಗೆ ಸಮುದಾಯ ಶೌಚಾಲಯಗಳ ಸಂಖ್ಯೆ ಕ್ರಮವಾಗಿ 1.7, 0.8 ಮತ್ತು 0.7 ಆಗಿದೆ ಎಂದು ವರದಿ ತಿಳಿಸಿದೆ. ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಲೋಕಲ್ ಸೆಲ್ಫ್ ಗವರ್ನಮೆಂಟ್‌ ವರದಿಯನ್ನು ಬಿಬಿಎಂಪಿ ಹೈಕೋರ್ಟ್‌ಗೆ ಸಲ್ಲಿಸಿದೆ.

ಬೆಂಗಳೂರು ನಗರದಲ್ಲಿ ಅಗತ್ಯ ಇರುವ ಸಾರ್ವಜನಿಕ ಶೌಚಾಲಯಗಳ ಬಗ್ಗೆ ವರದಿ ಸಿದ್ಧಪಡಿಸುವ ಜವಾಬ್ದಾರಿಯನ್ನುಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಲೋಕಲ್ ಸೆಲ್ಫ್ ಗವರ್ನಮೆಂಟ್‌ ಸಂಸ್ಥೆ ಸಂಸ್ಥೆಗೆ ಬಿಬಿಎಂಪಿ ವಹಿಸಿತ್ತು.

ಇದನ್ನೂ ಓದಿ: ಬೆಂಗಳೂರಿಗರಿಗೆ ಆಘಾತ: ಆಸ್ತಿ ತೆರಿಗೆ ಎರಡು ಪಟ್ಟು ಏರಿಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ!

ಈ ವರದಿ ಪ್ರಕಾರ ಬೆಂಗಳೂರಿನಲ್ಲಿ ಒಂದು ಸಾವಿರ ಜನಸಂಖ್ಯೆಗೆ ಒಂದರಂತೆ ಸಾರ್ವಜನಿಕ ಶೌಚಾಲಯ ಇಲ್ಲ ಎಂಬುದು ತಿಳಿದು ಬರುತ್ತದೆ. ಚೆನ್ನೈ, ಹೈದರಾಬಾದ್, ಅಹಮದಾಬಾದ್‌ನಲ್ಲಿ ಪ್ರತಿ ಚದರ ಕಿಲೋ ಮೀಟರ್, ಪ್ರತಿ ವಾರ್ಡ್‌ಗಳಲ್ಲಿ ಇರುವ ಸಾರ್ವಜನಿಕ ಶೌಚಾಲಯಗಳ ಸಂಖ್ಯೆ ಹೋಲಿಸಿದರೆ ಬೆಂಗಳೂರಿನಲ್ಲಿ ಕಡಿಮೆ ಸಂಖ್ಯೆಯ ಶೌಚಾಲಯಗಳಿವೆ’ ಎನ್ನಲಾಗಿದೆ.

ನಗರದಲ್ಲಿರುವ ಕೊಳಚೆ ಪ್ರದೇಶಗಳಿಗೆ ಹೆಚ್ಚಿನ ಸಮುದಾಯ ಶೌಚಾಲಯಗಳು ಅಗತ್ಯ ಇವೆ. ಶೌಚಾಲಯಗಳ ನಿರ್ವಹಣೆ ಕಳಪೆಯಾಗಿದ್ದರೂ, ತೆರೆದ ಮಲವಿಸರ್ಜನೆಯನ್ನು ಉತ್ತೇಜಿಸುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

’ಉದ್ಯೋಗ ನಗರಿ ಬೆಂಗಳೂರಿಗೆ ಆಗಾಗ ಬಂದು ಹೋಗುವ ಜನಸಂಖ್ಯೆ ಶೇಕಡಾ 15 ರ ದರದಲ್ಲಿ ಬೆಳೆಯುತ್ತಿದೆ. ಮಾರುಕಟ್ಟೆ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ವಾಣಿಜ್ಯ ಪ್ರದೇಶಗಳಲ್ಲಿ ಹೆಚ್ಚಿನ ಶೌಚಾಲಯಗಳ ಅಗತ್ಯವಿದೆ’ ಎಂದು ವರದಿ ತಿಳಿಸಿದೆ.

ಬೆಂಗಳೂರಿನಲ್ಲಿ ಶೌಚಾಲಯ ಸಮಸ್ಯೆಗಳ ಕುರಿತು ಲಿಟ್ಜ್‌ಕಿಟ್‌ ಫೌಂಡೇಷನ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ನಗರದಲ್ಲಿ ಅಗತ್ಯವಿರುವ ಸಾರ್ವಜನಿಕ ಶೌಚಾಲಯಗಳ ಸಂಖ್ಯೆಯನ್ನು ತಿಳಿಸುವಂತೆ ನಿರ್ದೇಶನ ನೀಡಿದ್ದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ವಿಭಾಗೀಯ ಪೀಠದ ಮುಂದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವರದಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: 7 ಐಎಎಸ್‌ ಅಧಿಕಾರಿಗಳ ವರ್ಗಾವಣೆ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ವರದಿ ಅವಲೋಕಿಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ನೇತೃತ್ವದ ವಿಭಾಗೀಯ ಪೀಠ, ‘ವಾರ್ಡ್‌ವಾರು ಶೌಚಾಲಯಗಳ ಅಗತ್ಯದ ಬಗ್ಗೆ ವರದಿಯಲ್ಲಿ ಉಲ್ಲೇಖ ಇಲ್ಲದಿದ್ದರೂ, ಪ್ರಮುಖ ವಿಷಯಗಳನ್ನು ಎತ್ತಿ ಹಿಡಿದಿದೆ. ಅಗತ್ಯ ಇರುವ ಕಡೆಗಳಲ್ಲಿ ಶೌಚಾಲಯ ನಿ‌ರ್ಮಾಣ, ನಿರ್ವಹಣೆ ಗುಣಮಟ್ಟ ಸುಧಾರಣೆ ಬಗ್ಗೆ ತಕ್ಷಣ ಗಮನ ಹರಿಸಬೇಕು. ವರದಿಯಲ್ಲಿರುವ ಶಿಫಾರಸುಗಳ ಅನುಷ್ಠಾನ ಸಂಬಂಧ ಅನುಸರಣಾ ವರದಿಯನ್ನು ಆಗಸ್ಟ್ 13ರೊಳಗೆ ಸಲ್ಲಿಸಬೇಕು’ ಎಂದು ಬಿಬಿಎಂಪಿಗೆ ನಿರ್ದೇಶನ ನೀಡಿದೆ.

ಬೆಂಗಳೂರಿನಲ್ಲಿ 1,000 ಜನಸಂಖ್ಯೆಗೆ 0.06 ಸಾರ್ವಜನಿಕ ಶೌಚಾಲಯಗಳು ಹೊಂದಿದೆ ಎಂದು ಸೂಚಿಸುವ ವರದಿಯಲ್ಲಿ, ಶೇಕಡಾ 52 ರಷ್ಟು ಶೌಚಾಲಯಗಳನ್ನು ಫುಟ್‌ಪಾತ್‌ಗಳಲ್ಲಿ ನಿರ್ಮಿಸಲಾಗಿದೆ. 116 ಮಾರುಕಟ್ಟೆಗಳು, 43 ಬಸ್ ನಿಲ್ದಾಣಗಳು ಮತ್ತು 43 ವಾಣಿಜ್ಯ ಪ್ರದೇಶಗಳಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಎಂದು ವರದಿ ತಿಳಿಸಿದೆ.


ಇದನ್ನೂ ಓದಿ: ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆ ಹೂಡಿದ ನಟ ಚೇತನ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ...

0
ಕಳೆದ ವರ್ಷ ಪ್ರಪಂಚದಾದ್ಯಂತ ಆಹಾರ ಅಭದ್ರತೆ ಸ್ಥಿತಿ ಭಾರೀ ಹದಗೆಟ್ಟಿದೆ, 2023ರಲ್ಲಿ ಸುಮಾರು 282 ಮಿಲಿಯನ್ ಜನರು ತೀವ್ರ ಹಸಿವಿನಿಂದ ಬಳಲಿದ್ದಾರೆ, ಇದರಲ್ಲಿ ವಿಶೇಷವಾಗಿ ಯುದ್ಧಪೀಡಿತ ಗಾಝಾ ಮತ್ತು ಸುಡಾನ್‌ನಲ್ಲಿ ಹೆಚ್ಚಿನ ಜನರು...