Homeಕರೋನಾ ತಲ್ಲಣ‘ಮಹಾರಾಷ್ಟ್ರಕ್ಕೆ ರೆಮ್‌ಡಿಸಿವಿರ್ ನೀಡಿದರೆ ಲೈಸನ್ಸ್‌ ರದ್ದು ಮಾಡುತ್ತೇವೆಂದು ಕಂಪನಿಗಳಿಗೆ ಕೇಂದ್ರ ಬೆದರಿಕೆ’: ಮಹಾಸಚಿವ

‘ಮಹಾರಾಷ್ಟ್ರಕ್ಕೆ ರೆಮ್‌ಡಿಸಿವಿರ್ ನೀಡಿದರೆ ಲೈಸನ್ಸ್‌ ರದ್ದು ಮಾಡುತ್ತೇವೆಂದು ಕಂಪನಿಗಳಿಗೆ ಕೇಂದ್ರ ಬೆದರಿಕೆ’: ಮಹಾಸಚಿವ

ರಾಜ್ಯದಲ್ಲಿ ಲಸಿಕೆ ಕೊರತೆಯಿದೆ ಎಂದು ರಾಜ್ಯವು ಕೇಂದ್ರದ ಬಳಿ ಹೇಳಿಕೊಂಡಿತ್ತು.

- Advertisement -
- Advertisement -

ಕೊರೊನಾ ಚಿಕಿತ್ಸೆಗೆ ಬಳಸುವ ರೆಮ್‌ಡಿಸಿವಿರ್‌ ಔಷಧಿಯನ್ನು ಮಹಾರಾಷ್ಟ್ರಕ್ಕೆ ನೀಡದಂತೆ ಕೇಂದ್ರ ಸರ್ಕಾರವು ಹಲವು ಕಂಪೆನಿಗಳಿಗೆ ತಾಕೀತು ಮಾಡಿದೆ ಎಂದು ಮಹಾರಷ್ಟ್ರ ಸಚಿವ ನವಾಬ್ ಮಲಿಕ್‌ ಶನಿವಾರ ಗಂಭೀರ ಆರೋಪ ಮಾಡಿದ್ದಾರೆ. ಒಂದು ವೇಳೆ ರೆಮ್‌ಡಿಸಿವಿರ್ ನೀಡಿದರೆ ಕಂಪೆನಿಯ ಲೈಸನ್ಸ್‌ ರದ್ದುಗೊಳಿಸುವುದಾಗಿ ಅವೆರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಕೊರೊನಾ ಪ್ರಾರಂಭವಾದಾಗಿನಿಂದ ಮಹಾರಾಷ್ಟ್ರದಲ್ಲೇ ಹೆಚ್ಚು ಸೋಂಕು ಪ್ರಕರಣಗಳು ದಾಖಲಾಗುತ್ತಿದೆ. ಅಲ್ಲದೆ ಸೋಂಕಿನ ಎರಡನೇ ಅಲೆ ಪ್ರಾರಂಭವಾದಗಿನಿಂದ ದೇಶದಲ್ಲಿ ವರದಿಯಾಗುತ್ತಿರುವ ಅರ್ಧದಷ್ಟು ಪ್ರಕರಣಗಳು ಮಹಾರಾಷ್ಟ್ರ ಒಂದರಲ್ಲೇ ವರದಿಯಾಗುತ್ತದೆ.

ಇದನ್ನೂ ಓದಿ: ಕೊರೊನಾ ನೆಗೆಟಿವ್ ವರದಿಯಿಲ್ಲದೆ ಬಂಗಾಳಕ್ಕೆ ಹೊರಗಿನವರು ಬರದಂತೆ ತಡೆಯಿರಿ- ಮಮತಾ ಬ್ಯಾನರ್ಜಿ

ಶನಿವಾರ ಟ್ವೀಟ್ ಮಾಡಿರುವ ಮಹಾರಾಷ್ಟ್ರ ಸಚಿವ ನವಾಬ್‌ ಮಲಿಕ್‌, “ಮಹಾರಾಷ್ಟ್ರ ಸರ್ಕಾರವು 16 ರಫ್ತು ಕಂಪನಿಗಳನ್ನು ರೆಮ್‌ಡಿಸಿವಿರ್‌ಗಾಗಿ ಕೇಳಿತ್ತು. ಆದರೆ ರಾಜ್ಯಕ್ಕೆ ಔಷಧಿಯನ್ನು ಸರಬರಾಜು ಮಾಡದಂತೆ ಕೇಂದ್ರ ಸರ್ಕಾರ ಕೇಳಿದೆ ಎಂದು ನಮಗೆ ಅವರು ತಿಳಿಸಿದ್ದಾರೆ. ಒಂದು ವೇಳೆ ಔಷದಿ ನೀಡಿದರೆ ಕಂಪೆನಿಗಳ ಲೈಸನ್ಸ್ ರದ್ದುಗೊಳ್ಳುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ” ಎಂದು ಅವರು ಆರೋಪಿಸಿದ್ದಾರೆ.

“ಇದು ಅಪಾಯಕಾರಿ ನಿದರ್ಶನವಾಗಿದ್ದು, ಈ ಸಂದರ್ಭಗಳಲ್ಲಿ ಮಹಾರಾಷ್ಟ್ರ ಸರ್ಕಾರವು ಈ ರಫ್ತುದಾರರಿಂದ ರೆಮ್‌ಡೆಸಿವಿರ್‌ನ ದಾಸ್ತಾನು ವಶಪಡಿಸಿಕೊಳ್ಳುವುದು ಮತ್ತು ಅಗತ್ಯವಿರುವವರಿಗೆ ಪೂರೈಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ” ಎಂದು ಅವರು ತಿಳಿಸಿದ್ದಾರೆ.

ಕೊರೊನಾ ಹೆಚ್ಚಾದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಇತ್ತೀಚೆಗೆ ಲಾಕ್‌ಡೌನ್‌ ಕೂಡಾ ಘೋಷಿಸಲಾಗಿದೆ. ಜೊತೆಗೆ ರಾಜ್ಯದಲ್ಲಿ ಔಷಧಿ ಕೊರತೆಯಿದೆ ಎಂದು ಕೇಂದ್ರದ ಬಳಿ ಹೇಳಿಕೊಂಡಿತ್ತು.

ಇದನ್ನೂ ಓದಿ: ಕುಂಭಮೇಳ ಸಾಂಕೇತಿಕವಾಗಿಸಬೇಕು, ಇದು ಕೊರೊನಾ ವಿರುದ್ಧದ ಹೋರಾಟಕ್ಕೆ ಬಲ ತರುತ್ತದೆ: ಪ್ರಧಾನಿ ಮೋದಿ

ವಿಡಿಯೋ ನೋಡಿ: ನರೇಂದ್ರ ಮೋದಿ ಅವರ ಪತ್ರಿಕಾಗೋಷ್ಠಿಗೆ ಮುಂಚೆ ಏನು ಯೋಚಿಸುತ್ತಿದ್ದರು – ಕಾಲ್ಪನಿಕ ತುಣುಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...