Homeಮುಖಪುಟಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ಪಡೆಯುವುದು ಸ್ಥಾಪಿತ ಹಕ್ಕಲ್ಲ : ಸುಪ್ರೀಂ ಕೋರ್ಟ್

ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ಪಡೆಯುವುದು ಸ್ಥಾಪಿತ ಹಕ್ಕಲ್ಲ : ಸುಪ್ರೀಂ ಕೋರ್ಟ್

- Advertisement -
- Advertisement -

ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ಪಡೆಯುವುದು ವ್ಯಕ್ತಿಯ ಸ್ಥಾಪಿತ ಹಕ್ಕಲ್ಲ. ಅದು, ಸೇವೆಯಲ್ಲಿ ಇರುವಾಗಲೇ ಮೃತಪಡುವ ನೌಕರನೊಬ್ಬ ಹೊಂದಿರುವ ಸೇವಾ ಷರತ್ತೂ ಅಲ್ಲ ಎಂದು ಸುಪ್ರೀಂ ಕೋರ್ಟ್‌ ಬುಧವಾರ (ನ.13) ಹೇಳಿದೆ.

1997ರಲ್ಲಿ ಮೃತಪಟ್ಟ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರ ಪುತ್ರನಿಗೆ ಅನುಕಂಪ ಆಧಾರಿತ ಉದ್ಯೋಗ ನೀಡಲು ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ತಿರಸ್ಕರಿಸುವ ವೇಳೆ, ನ್ಯಾಯಮೂರ್ತಿಗಳಾದ ಅಭಯ್‌ ಎಸ್‌.ಓಕಾ, ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಆಗಸ್ಟಿನ್ ಜಾರ್ಜ್ ಮಸೀಹ್ ಅವರಿದ್ದ ಪೀಠ ಮೇಲಿನಂತೆ ತಿಳಿಸಿದೆ.

ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗ ಪಡೆಯುವುದು ಯಾವುದೇ ವ್ಯಕ್ತಿಯ ಸ್ಥಾಪಿತ ಹಕ್ಕಲ್ಲ. ನಿಗದಿತ ಕಾಲ ಮಿತಿಯೊಳಗೆ ಇಂತಹ ಉದ್ಯೋಗಕ್ಕೆ ಮನವಿ ಮಾಡಿದರೆ ಪರಿಗಣಿಸಲಾಗುವುದು ಎಂದು ಪೀಠ ಹೇಳಿದೆ.

ನೇಮಕಾತಿ ನೀತಿಗೆ ವಿರುದ್ದವಾಗಿ ಮತ್ತು ಕಾನೂನು ಬಾಹಿರವಾಗಿ ಒಬ್ಬರ ಪರವಾಗಿ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಲು ಸಾಧ್ಯವಿಲ್ಲ. ಅನುಕಂಪ ಆಧಾರಿತ ನೇಮಕಾತಿಯು, ಮೃತರ ಕುಟುಂಬಕ್ಕೆ ಆ ಸಮಯದಲ್ಲಿ ತುರ್ತು ಆರ್ಥಿಕ ಸಹಾಯ ಮಾಡಲು ಇರುವುದೇ ಹೊರತು, ಅದು ಅವರ ಪರಿಪೂರ್ಣ ಹಕ್ಕಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.

ಪ್ರಕರಣದ ಹಿನ್ನೆಲೆ : 1997ರಲ್ಲಿ ಜೈ ಪ್ರಕಾಶ್ ಎಂಬ ಪೊಲೀಸ್ ಕಾನ್‌ಸ್ಟೇಬಲ್ ಕರ್ತವ್ಯದ ವೇಳೆ ಸಾವನ್ನಪ್ಪಿದ್ದರು. ಆಗ ಅವರ ಮಗ ಟಿಂಕು ಕೇವಲ 7 ವರ್ಷದವನಾಗಿದ್ದ. ಪ್ರಕಾಶ್ ಪತ್ನಿ ಅನಕ್ಷರಸ್ಥೆಯಾಗಿದ್ದ ಕಾರಣ, ಅನುಕಂಪದ ಆಧಾರದಲ್ಲಿ ತನಗೆ ಉದ್ಯೋಗ ಕೊಡುವಂತೆ ಅವರು ಅರ್ಜಿ ಸಲ್ಲಿಸಿರಲಿಲ್ಲ. ಬದಲಾಗಿ, ಅಪ್ರಾಪ್ತ ಮಗ ವಯಸ್ಸಿಗೆ ಬಂದಾಗ ಆತನಿಗೆ ಉದ್ಯೋಗ ಕೊಡಿ ಎಂದು ಮನವಿ ಮಾಡಿದ್ದರು.

ಅದರಂತೆ, ಟಿಂಕು ವಯಸ್ಸಿಗೆ ಬಂದ ಮೇಲೆ 2008ರಲ್ಲಿ ಕಾನ್‌ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದ. ಅದನ್ನು ತಿರಸ್ಕರಿಸಿದ್ದ ಅಧಿಕಾರಿಗಳು, ನೌಕರ ಸಾವನ್ನಪ್ಪಿ 3 ವರ್ಷದೊಳಗೆ ಅರ್ಜಿ ಸಲ್ಲಿಸಬಹುದಷ್ಟೇ ಎಂದಿದ್ದರು. ಪಂಜಾಬ್ ಹಾಗೂ ಹರಿಯಾಣ ಸರ್ಕಾರಗಳು ಕೂಡ ಉದ್ಯೋಗ ಕೋರಿದ್ದ ಮನವಿ ತಿರಸ್ಕರಿಸಿತ್ತು. ಹಾಗಾಗಿ, ಕಾನ್‌ಸ್ಟೇಬಲ್ ಕುಟುಂಬ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಸುಪ್ರೀಂ ಕೋರ್ಟ್ ಅರ್ಜಿ ತಿರಸ್ಕರಿಸಿ, ಕುಟುಂಬಕ್ಕೆ ಆರ್ಥಿಕ ನೆರವು ಒದಗಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.

ಇದನ್ನೂ ಓದಿ : ‘ಸ್ಮಾರಕ ವಶಕ್ಕೆ ಪಡೆಯಲು ಎಷ್ಟು ಧೈರ್ಯ ನಿಮಗೆ?’ | ದೆಹಲಿ ಕಾಲೊನಿ ಅಸೋಸಿಯೇಷನ್ ವಿರುದ್ಧ ಸುಪ್ರೀಂಕೋರ್ಟ್ ಆಕ್ರೋಶ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...