Homeಮುಖಪುಟಕಾಡುಗೊಲ್ಲ ಅಭಿವೃದ್ಧಿ ನಿಗಮವೇ ಅಯೋಮಯ: ಆದರೂ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ

ಕಾಡುಗೊಲ್ಲ ಅಭಿವೃದ್ಧಿ ನಿಗಮವೇ ಅಯೋಮಯ: ಆದರೂ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ

ಯಾದವ VS/ ಕಾಡುಗೊಲ್ಲರ ನಡುವೆ ಕಿತ್ತಾಟ ಮುಂದುವರಿದಿದೆ. ಬಿಜೆಪಿಗೂ ಇದೇ ಬೇಕಾಗಿದೆ. ನಿಮ್ಮಲ್ಲೇ ಜಗಳವಿದೆ, ಸರಿಪಡಿಸಿಕೊಂಡು ಬನ್ನಿ ಎಂದು ಹೇಳಲು ಸರ್ಕಾರಕ್ಕೆ ಕಾರಣ ಸಿಕ್ಕಿದೆ.

- Advertisement -
- Advertisement -

ಶಿರಾ ಉಪಚುನಾವಣೆಯ ಹಿನ್ನೆಲೆಯಲ್ಲಿ ದಿಢೀರ್ ಸ್ಥಾಪನೆಯಾದ ಕಾಡುಗೊಲ್ಲ ಅಭಿವೃದ್ಧಿ ನಿಗಮ ಇನ್ನೂ ಪೂರ್ಣವಾಗಿ ಅಸ್ತಿತ್ವಕ್ಕೆ ಬಂದಿಲ್ಲ. ಸಂಪುಟ ಸಭೆ ಒಪ್ಪಿಗೆಯನ್ನೂ ಪಡೆದುಕೊಂಡಿಲ್ಲ. ಅನುದಾನವನ್ನೂ ನಿಗದಿ ಮಾಡಿಲ್ಲ. ಆದರೆ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರಾಗಲು ಹಲವರ ನಡುವೆ ತೆರೆಮರೆಯಲ್ಲೇ ಪೈಪೋಟಿ ಎದ್ದಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದು ಬಿಜೆಪಿ ಬೆಂಬಲಿಗರನ್ನು ಹೊರತುಪಡಿಸಿ ಬೇರೆಯವರನ್ನು ಅಧ್ಯಕ್ಷರನ್ನಾಗಿ ಮಾಡುವುದು ಸಾಧ್ಯವಿಲ್ಲದ ಮಾತು. ಹಾಗಾಗಿ ಬಿಜೆಪಿ ಮುಖಂಡರನ್ನು ಮುಂದಿಟ್ಟುಕೊಂಡು  ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರಾಗಲು ಪೈಪೋಟಿ ನಡೆಯುತ್ತಿದೆ.

ನಿವೃತ್ತ ಐಎಫ್ಎಸ್ ಅಧಿಕಾರಿ ಚಿಕ್ಕಪ್ಪಯ್ಯ, ತುಮಕೂರು ಜಿಲ್ಲಾ ಸರ್ಕಾರಿ ನೌಕರರ ಸಂಘದ ಮಾಜಿ ಜಿಲ್ಲಾಧ್ಯಕ್ಷ ಹಾಗೂ ನಿವೃತ್ತ ತಹಶೀಲ್ದಾರ್ ಜಿ.ಎಂ. ಸಣ್ಣಮುದ್ದಯ್ಯ, ಬಿಬಿಎಂಪಿ ಮಾಜಿ ಸದಸ್ಯ ರಾಜಣ್ಣ, ಚಂದ್ರಶೇಖರಗೌಡ, ಚಿಕ್ಕಣ್ಣಸ್ವಾಮಿ, ದೇವಾಲಯದ ಪೂಜಾರಿ ಪಾಪಣ್ಣ, ಶ್ರೀರಂಗ ಯಾದವ್ ಮೊದಲಾದವರು ಆಕಾಂಕ್ಷಿಗಳಾಗಿದ್ದಾರೆ. ಸಣ್ಣಮುದ್ದಯ್ಯ ವಿರುದ್ದ ಸಾಕಷ್ಟು ದೂರುಗಳನ್ನು ನೀಡಲಾಗಿದೆ. ಯಾವುದೇ ಕಾರಣಕ್ಕೂ ಸಣ್ಣಮುದ್ದಯ್ಯ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಬಾರದು ಎಂಬ ದೂರುಗಳು ಬಿಜೆಪಿ ಮುಖಂಡರಿಗೆ ರವಾನೆಯಾಗಿವೆ.

ಇನ್ನೊಂದೆಡೆ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಹೆಸರು ಬದಲಾವಣೆಗೆ ಒತ್ತಾಯ ವ್ಯಕ್ತವಾಗುತ್ತಿದೆ. ಇದಕ್ಕೆ  ರಾಜ್ಯ ಯಾದವ ಸಂಘದ ಅಧ್ಯಕ್ಷ ಡಿ.ಟಿ.ಶ್ರೀನಿವಾಸ್ ನೇತೃತ್ವ ವಹಿಸಿದ್ದಾರೆ. ಹೆಸರು ಬದಲಾದರೆ ತಾನೇ ಅಧ್ಯಕ್ಷ ಎಂದು ಹೇಳಿಕೊಂಡು ಒಡಾಡುತ್ತಿದ್ದಾರೆ. ಹೀಗಾಗಿ ಯಾದವ VS/ ಕಾಡುಗೊಲ್ಲರ ನಡುವೆ ಕಿತ್ತಾಟ ಮುಂದುವರಿದಿದೆ. ಬಿಜೆಪಿಗೂ ಇದೇ ಬೇಕಾಗಿದೆ. ನಿಮ್ಮಲ್ಲೇ ಜಗಳವಿದೆ, ಸರಿಪಡಿಸಿಕೊಂಡು ಬನ್ನಿ ಎಂದು ಹೇಳಲು ಸರ್ಕಾರಕ್ಕೆ ಕಾರಣ ಸಿಕ್ಕಿದೆ. ಹಾಗಾಗಿ ಬಿಜೆಪಿ ದಾಳ ಉರುಳಿಸುತ್ತಲೇ ಇದೆ. ಇದನ್ನು ಅರ್ಥ ಮಾಡಿಕೊಳ್ಳದ ಕಾಡುಗೊಲ್ಲ ಸಮುದಾಯ ವ್ಯರ್ಥ ಕಸರತ್ತು ನಡೆಸುತ್ತಿದೆ ಎಂಬ ವಿಶ್ಲೇಷಣೆ ನಡಯುತ್ತಿದೆ.

ಯಾದವರು ಒಂದು ಕಡೆ ಸಭೆ ನಡೆಸಿದರೆ, ಕಾಡುಗೊಲ್ಲರು ಮತ್ತೊಂದು ಕಡೆ ಸಭೆ ನಡೆಸಿ ಮುಂದಿನ ಕಾರ್ಯಕ್ರಮಗಳ ರೂಪುರೇಷೆಗಳನ್ನು ಸಿದ್ದಪಡಿಸಲಾಗುತ್ತಿದೆ. ಯಾದವ (ಗೊಲ್ಲ) ಸಂಘದ ರಾಜ್ಯಧ್ಯಕ್ಷ, ಮಾಜಿ ಸಚಿವ ಎ.ಕೃಷ್ಣಪ್ಪ ಅಳಿಯ ಮತ್ತು ಶಾಸಕಿ ಪೂರ್ಣಿಮಾ ಪತಿ ಡಿ.ಟಿ.ಶ್ರೀನಿವಾಸ್ ಡಿಸೆಂಬರ್ 6ರಂದು ಬೆಂಗಳೂರಿನಲ್ಲಿ ಸಭೆ ಕರೆದಿದ್ದು, ಕಾಡುಗೊಲ್ಲ ಎಂಬುದನ್ನು ಗೊಲ್ಲ ಅಭಿವೃದ್ಧಿ ನಿಗಮವಾಗಿ ಬದಲಾಯಿಸಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹಾಕಲು ತಯಾರಿ ನಡೆಸುತ್ತಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಇದೇ ಕಾರಣವನ್ನು ಮುಂದಿಟ್ಟುಕೊಂಡು ನವೆಂಬರ್ 29 ರಂದು ತುಮಕೂರಿನಲ್ಲಿ ರಾಜ್ಯಮಟ್ಟದ ಕಾಡುಗೊಲ್ಲ ಸಮುದಾಯದ ಮುಖಂಡರ ಸಭೆ ನಡೆದಿದೆ. ಸಭೆಯಲ್ಲಿ ಸುಮಾರು 100ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು ಎಂದು ತಿಳಿದುಬಂದಿದೆ. ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಬೇಕು. ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಬೇಕು. ಕಾಡುಗೊಲ್ಲ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರ ನೀಡಬೇಕು. ಅಭಿವೃದ್ಧಿ ನಿಗಮಕ್ಕೆ ಕಾಡುಗೊಲ್ಲ ಸಮುದಾಯದ ಪ್ರಮುಖರನ್ನೇ ಅಧ್ಯಕ್ಷರನ್ನಾಗಿ ಮಾಡಬೇಕು ಎಂಬ ನಿರ್ಣಯಗಳನ್ನು ಕೈಗೊಳ್ಳಲಾಯಿತು ಎಂದು ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರೊಬ್ಬರು ನಾನುಗೌರಿ.ಕಾಂಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಬಿಜೆಪಿ ಬೆಂಬಲಿಗರೇ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಬಿಬಿಎಂಪಿ ಮಾಜಿ ಸದಸ್ಯ ರಾಜಣ್ಣ, ಚೆಂಗಾವರ ಕರಿಯಪ್ಪ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುವವರು ಸಭೆಯಲ್ಲಿ ಪಾಲ್ಗೊಂಡು ಹೋರಾಟದ ಮುಂದಿನ ರೂಪುರೇಷೆಗಳ ಕುರಿತು ಸಲಹೆ ನೀಡಿದರು. ಸಭೆಯಲ್ಲಿ ಬಿಜೆಪಿ ಬೆಂಬಲಿಗರೇ ಹೆಚ್ಚು ಸಂಖ್ಯೆಯಲ್ಲಿದ್ದು ಸಂಘವನ್ನು ಬಿಜೆಪಿಗೆ ಒತ್ತೆ ಇಟ್ಟರೆ ಹೇಗೆ? ಜನಾಂಗದ ಸಮಸ್ಯೆಗಳನ್ನು ಪರಿಹರಿಸುವುದು ಹೇಗೆ ಎಂಬ ಪ್ರಶ್ನೆಯೂ ವ್ಯಕ್ತವಾಯಿತು. ಇದಕ್ಕೆ ಮುಖಂಡರು ಪಕ್ಷವೇ ಬೇರೆ, ಸಂಘವೇ ಬೇರೆ ಎಂಬ ಉತ್ತರ ನೀಡಿದರು ಎಂದು ಹೇಳಲಾಗಿದೆ.

ಕಾಡುಗೊಲ್ಲ ಅಭಿವೃದ್ಧಿ ನಿಗಮವೇ ಅಯೋಮಯವಾಗಿದೆ. ಅದು ಕಾನೂನುಬದ್ದವಾಗಿಲ್ಲ. ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತಿಲ್ಲ. ನಿಗಮ ಊರ್ಜಿತವಾಗುತ್ತದೆಯೇ ಎಂಬ ಪ್ರಶ್ನೆ ಸಮುದಾಯದ ಕೆಲ ಮುಖಂಡರನ್ನು ಕಾಡತೊಡಗಿದೆ. ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಕಾಡುಗೊಲ್ಲರಿಗೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದೆ.


ಇದನ್ನೂ ಓದಿ: ಕಾಡುಗೊಲ್ಲ ಅಭಿವೃದ್ಧಿ ನಿಗಮದ ಹೆಸರು ಬದಲಿಸಿದ್ದೇಕೆ?; ಸಿಎಂ ಮೇಲೆ ಒತ್ತಡ ತಂದವರು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...