Homeಕರ್ನಾಟಕಬೆಳಗಾವಿ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ಕೇಳಿದ್ದೇನೆ: ಪ್ರಮೋದ್ ಮುತಾಲಿಕ್

ಬೆಳಗಾವಿ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ಕೇಳಿದ್ದೇನೆ: ಪ್ರಮೋದ್ ಮುತಾಲಿಕ್

ಚುನಾವಣಾ ರಾಜಕೀಯಕ್ಕೆ ಬರಲು ಇದು ನನಗೆ ಕೊನೆಯ ಅವಕಾಶ. ಏಕೆಂದರೆ ನನಗೆ ಈಗ 66 ವರ್ಷ. ನಾನು ಈ ಅವಕಾಶವನ್ನು ಕಳೆದುಕೊಂಡರೆ, ನನ್ನ ಕನಸು ಅಸಾಧ್ಯವಾಗುತ್ತದೆ ಎಂದು ಮುತಾಲಿಕ್ ಹೇಳಿದ್ದಾರೆ.

- Advertisement -
- Advertisement -

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ಕೇಳಿರುವುದಾಗಿ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಭಾನುವಾರ ಹೇಳಿದ್ದಾರೆ. ರಾಜಕಾರಣಕ್ಕೆ ಪ್ರವೇಶಿಸಲು ಇದು ತನ್ನ ಅಂತಿಮ ಪ್ರಯತ್ನ ಎಂದು ಹೇಳಿದ್ದಾರೆ.

“ನಾನು ಬೆಳಗಾವಿಯಿಂದ ಸಂಸದನಾಗಬೇಕೆಂಬ ಆಸೆ ಹೊಂದಿದ್ದೇನೆ. ಹಾಗಾಗಿ ಬಿಜೆಪಿಯಿಂದ ಟಿಕೆಟ್ ಕೋರಿದ್ದೇನೆ” ಎಂದು ಪ್ರಮೋದ್ ಮುತಾಲಿಕ್ ಪಿಟಿಐಗೆ ತಿಳಿಸಿದ್ದಾರೆ.

ಮುತಾಲಿಕ್ ಫೆಬ್ರವರಿಯಲ್ಲಿ ರಾಜ್ಯ ಘಟಕದಿಂದ ಬಿಜೆಪಿ ಟಿಕೆಟ್ ಕೋರಿದ್ದರು. ಈ ನಿಟ್ಟಿನಲ್ಲಿ ಹಿರಿಯ ಬಿಜೆಪಿ ಮತ್ತು ಆರ್‌ಎಸ್‌ಎಸ್ ಮುಖಂಡರನ್ನು ಭೇಟಿ ಮಾಡಿದ್ದರು ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಚುನಾವಣಾ ರಾಜಕೀಯಕ್ಕೆ ಬರಲು ಇದು ನನಗೆ ಕೊನೆಯ ಅವಕಾಶ. ಏಕೆಂದರೆ ನನಗೆ ಈಗ 66 ವರ್ಷ. ನಾನು ಈ ಅವಕಾಶವನ್ನು ಕಳೆದುಕೊಂಡರೆ, ನನ್ನ ಕನಸು ಅಸಾಧ್ಯವಾಗುತ್ತದೆ. ಭವಿಷ್ಯದಲ್ಲಿ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ” ಎಂದು ಅವರು ಹೇಳಿದರು.

ಇದನ್ನೂ ಓದಿ: PFI, SDPI ವಿರುದ್ಧದ 175 ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತೇ?: ಇಲ್ಲಿದೆ ವಿವರ

2014 ರ ಜೂನ್‌ನಲ್ಲಿ ಮುತಾಲಿಕ್ ಅವರನ್ನು ಕರ್ನಾಟಕದ ರಾಜ್ಯ ಘಟಕಕ್ಕೆ ಸೇರಿಸಿದ ನಂತರ ಕೆಲವೇ ಗಂಟೆಗಳಲ್ಲಿ ಬಿಜೆಪಿಯಿಂದ ತೆಗೆದುಹಾಕಲಾಗಿತ್ತು.

ಶ್ರೀರಾಮ ಸೇನೆ ಕಾರ್ಯಕರ್ತರು 2009 ರಲ್ಲಿ ಮಂಗಳೂರಿನ ಪಬ್‌ನಲ್ಲಿ ಮಹಿಳೆಯರ ಮೇಲೆ ನೈತಿಕ ಪೋಲಿಸ್‌ಗಿರಿಯ ಹಲ್ಲೆ ನಡೆಸಿದ ನಂತರ ಪ್ರಮೋದ್ ಮುತಾಲಿಕ್ ಮುನ್ನೆಲೆಗೆ ಬಂದಿದ್ದರು.

ಕೊರೊನಾ ಕಾರಣದಿಂದ ಕೆಲವು ತಿಂಗಳ ಹಿಂದೆ ಬಿಜೆಪಿ ಸಂಸದ ಮತ್ತು ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ನಿಧನರಾಗಿದ್ದರು. ನಂತರ ಬೆಳಗಾವಿ ಲೋಕಸಭಾ ಕ್ಷೇತ್ರ ಖಾಲಿಯಾಗಿತ್ತು.


ಇದನ್ನೂ ಓದಿ: ಶೃಂಗೇರಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿಗಳಲ್ಲಿ ಬಹುಪಾಲು ಸಂಘಪರಿವಾರದವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...