Homeಮುಖಪುಟಬೂಕರ್ ಪ್ರಶಸ್ತಿ ಪಡೆದ ಕಾದಂಬರಿ ವಿರುದ್ಧ ದೂರು; ಆಗ್ರಾದಲ್ಲಿ ಲೇಖಕಿಗೆ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮ ರದ್ದು!

ಬೂಕರ್ ಪ್ರಶಸ್ತಿ ಪಡೆದ ಕಾದಂಬರಿ ವಿರುದ್ಧ ದೂರು; ಆಗ್ರಾದಲ್ಲಿ ಲೇಖಕಿಗೆ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮ ರದ್ದು!

- Advertisement -
- Advertisement -

ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಗೀತಾಂಜಲಿ ಶ್ರೀ ಅವರನ್ನು ಗೌರವಿಸಲು ಆಗ್ರಾದಲ್ಲಿ ಶನಿವಾರ ನಡೆಯಬೇಕಿದ್ದ ಕಾರ್ಯಕ್ರಮವನ್ನು ಅವರ ಬಹುಮಾನ ವಿಜೇತ ಕಾದಂಬರಿ ‘ರೆತ್‌ ಸಮಾಧಿ’ ವಿರುದ್ಧ ದೂರು ದಾಖಲಿಸಿದ ಕಾರಣ ರದ್ದುಗೊಳಿಸಲಾಗಿದೆ ಎಂದು ಸಂಘಟಕರು ತಿಳಿಸಿರುವುದಾಗಿ ‘ಸ್ಕ್ರಾಲ್‌.ಇನ್‌’ ವರದಿ ಮಾಡಿದೆ.

ಉತ್ತರ ಪ್ರದೇಶದ ಹತ್ರಾಸ್ ನಿವಾಸಿ ಸಂದೀಪ್ ಕುಮಾರ್ ಪಾಠಕ್ ಎಂಬವರು ನಗರದಲ್ಲಿ ದೂರು ದಾಖಲಿಸಿದ್ದು, ಪುಸ್ತಕದಲ್ಲಿ ಹಿಂದೂ ದೇವತೆಗಳಾದ ಶಿವ ಮತ್ತು ಪಾರ್ವತಿಯ ಬಗ್ಗೆ ಆಕ್ಷೇಪಾರ್ಹ ಅಭಿಪ್ರಾಯಗಳಿವೆ ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಕುರಿತು ಎಫ್‌ಐಆರ್‌ ದಾಖಲಾಗಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಜ್ಯ ಪೊಲೀಸ್ ಮುಖ್ಯಸ್ಥರನ್ನು ಅವರು ಟ್ವೀಟ್‌ ಮೂಲಕ ಒತ್ತಾಯಿಸಿರುವುದಾಗಿ ಕಾರ್ಯಕ್ರಮ ಸಂಘಟಕರು ಶನಿವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಫ್‌ಐಆರ್ ದಾಖಲಿಸುವ ಬಗ್ಗೆ ನಿರ್ಧರಿಸುವ ಮೊದಲು ಪುಸ್ತಕವನ್ನು ಓದುತ್ತೇವೆ ಎಂದು ಪೊಲೀಸರು ಪ್ರತಿಕ್ರಿಯೆ ನೀಡಿದ್ದಾರೆ.

ವಿಷಯ ಬೆಳಕಿಗೆ ಬರುತ್ತಿದ್ದಂತೆ ಪ್ರತಿಕ್ರಿಯೆ ನೀಡಿರುವ ಗೀತಾಂಜಲಿ ಶ್ರೀ, “ನನಗೆ ನೋವಾಗಿದ್ದು, ಸದ್ಯಕ್ಕೆ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಿಗೆ ಹಾಜರಾಗಲು ಇಚ್ಛಿಸುವುದಿಲ್ಲ” ಎಂದು ಸಂಘಟಕರಿಗೆ ತಿಳಿಸಿದ್ದಾರೆ.

ಹತ್ರಾಸ್‌ನಲ್ಲಿ ದಾಖಲಾಗಿರುವ ದೂರಿನ ಕುರಿತು ಸ್ಥಳೀಯ ಮಾಧ್ಯಮಗಳು ಬುಧವಾರ ವರದಿ ಮಾಡಿದ ನಂತರ, ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ನಡೆದ ಸನ್ಮಾನ ಕಾರ್ಯಕ್ರಮಕ್ಕೆ ಕೆಲವು ಸಮಾಜ ವಿರೋಧಿಗಳು ಅಡ್ಡಿಪಡಿಸಲು ಪ್ರಯತ್ನಿಸಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.

“ನನ್ನ ಕಾದಂಬರಿಯನ್ನು ಬಲವಂತವಾಗಿ ರಾಜಕೀಯ ವಿವಾದಕ್ಕೆ ಎಳೆಯಲಾಗುತ್ತಿದೆ. ಕಾದಂಬರಿಯಲ್ಲಿ ಮಾಡಲಾದ ಉಲ್ಲೇಖಗಳು ಭಾರತೀಯ ಪುರಾಣಗಳ ಅವಿಭಾಜ್ಯ ಅಂಗವಾಗಿವೆ. ಈ ವಿವರಣೆಗಳ ಬಗ್ಗೆ ಆಕ್ಷೇಪವಿರುವವರು ಹಿಂದೂ ಪುರಾಣ ಗ್ರಂಥಗಳನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬೇಕು” ಎಂದು ಗೀತಾಂಜಲಿ ಪ್ರತಿಕ್ರಿಯೆ ನೀಡಿದ್ದಾರೆ.

ಗೀತಾಂಜಲಿಯವರ ‘ರೆತ್‌ ಸಮಾಧಿ’ ಕೃತಿಯನ್ನು ಡೈಸಿ ರಾಕ್‌ವೆಲ್ ಅವರು ‘ಟಾಂಬ್ ಆಫ್ ಸ್ಯಾಂಡ್’ ಎಂದು ಇಂಗ್ಲಿಷ್‌ಗೆ ಅನುವಾದಿಸಿದ್ದಾರೆ. ಇದು ಮೇ ತಿಂಗಳಲ್ಲಿ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ 2022 ಅನ್ನು ಗೆದ್ದಿದೆ. ಅನುವಾದಗೊಂಡು ಬೂಕರ್‌ ಪ್ರಶಸ್ತಿಯನ್ನು ಗೆದ್ದ ಮೊದಲ ಹಿಂದಿ ಕಾದಂಬರಿ, ಭಾರತ ಮತ್ತು ದಕ್ಷಿಣ ಏಷ್ಯಾದಿಂದ ಆಯ್ಕೆಯಾದ ಮೊದಲ ಕಾದಂಬರಿ ಎಂಬ ಹೆಗ್ಗಳಿಕೆಗೂ ಈ ಕೃತಿ ಪಾತ್ರವಾಗಿದೆ.

ಸಾಂಸ್ಕೃತಿಕ ಸಂಸ್ಥೆಗಳಾದ ರಂಗಲೀಲಾ ಮತ್ತು ಆಗ್ರಾ ಥಿಯೇಟರ್ ಕ್ಲಬ್ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಿದ್ದವು. ಆಗ್ರಾದ ಕ್ಲಾರ್ಕ್ಸ್ ಶಿರಾಜ್ ಹೋಟೆಲ್‌ನಲ್ಲಿ ಶನಿವಾರ ಸಂಜೆ ಕಾರ್ಯಕ್ರಮ ನಡೆಯಬೇಕಿತ್ತು.

ಇದನ್ನೂ ಓದಿರಿ: ಡಬ್‌‌ ಸಿನಿಮಾ ‘ಡೊಳ್ಳು’ ಸಿಂಕ್‌ಸೌಂಡ್‌ ವಿಭಾಗದಲ್ಲಿ ಆಯ್ಕೆ: ‘ರಾಷ್ಟ್ರಪ್ರಶಸ್ತಿ ಲಾಬಿ’ ರಾಜಕಾರಣದ ಕಥೆ ಇದು!

ಬಹುದೊಡ್ಡ ಗೌರವಕ್ಕೆ ಪಾತ್ರರಾಗಿರುವ ಗೀತಾಂಜಲಿಯವರನ್ನು ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಆದರ್ಶಯುತವಾಗಿ ಗೌರವಿಸಬೇಕಿತ್ತು ಎಂದು ರಂಗಲೀಲಾ ವಕ್ತಾರ ರಾಮಭಾರತ್ ಉಪಾಧ್ಯಾಯ ಅವರು ಸ್ಕ್ರಾಲ್‌ ಜಾಲತಾಣಕ್ಕೆ ಪ್ರತಿಕ್ರಿಯಿಸಿದ್ದಾರೆ.

“ಉತ್ತರ ಪ್ರದೇಶ ಗೀತಾಂಜಲಿಯವರ ಜನ್ಮಸ್ಥಳ. ಸರ್ಕಾರ, ಮುಖ್ಯಮಂತ್ರಿಯವರು ಗೀತಾಂಜಲಿಯವರನ್ನು ಸನ್ಮಾನಿಸಬೇಕಿತ್ತು. ಬದಲಿಗೆ ನಾವು ಈ ಕಾರ್ಯಕ್ರಮವನ್ನು ರದ್ದುಗೊಳಿಸಬೇಕಾಗಿದೆ. ಇದು ನಾಚಿಕೆಗೇಡಿನ ವಿಷಯ” ಎಂದು ವಿಷಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...