Homeಮುಖಪುಟಹೆಡ್ ಬುಷ್ ಚಿತ್ರತಂಡದ ವಿರುದ್ಧ ದೂರು: ಡಾಲಿ ಧನಂಜಯ್ ಪರ ನಿಂತ ಸಿನಿಮಾ ಪ್ರೇಮಿಗಳು

ಹೆಡ್ ಬುಷ್ ಚಿತ್ರತಂಡದ ವಿರುದ್ಧ ದೂರು: ಡಾಲಿ ಧನಂಜಯ್ ಪರ ನಿಂತ ಸಿನಿಮಾ ಪ್ರೇಮಿಗಳು

- Advertisement -
- Advertisement -

ಉದಯೋನ್ಮುಖ ನಟ ಡಾಲಿ ಧನಂಜಯ್ ನಿರ್ಮಿಸಿ ಅಭಿನಯಿಸಿರುವ ಹೆಡ್ ಬುಷ್ ಚಿತ್ರದ ಕುರಿತು ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿವೆ. ಬಾಕ್ಸ್ ಆಫೀಸ್‌ನಲ್ಲಿಯೂ ಕೂಡ ಚಿತ್ರ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ ಎಂಬ ವರದಿಗಳಿವೆ. ಈ ಬೆನ್ನಲ್ಲೆ ಚಿತ್ರದಲ್ಲಿ ವೀರಗಾಸೆ ಕಲಾವಿದರ ಕಲಾವಿದರ ಮೇಲೆ ಹಲ್ಲೆ ನಡೆಸುವುದನ್ನು ತೋರಿಸಲಾಗಿದೆ ಮತ್ತು ಐತಿಹಾಸಿಕ ಕರಗಕ್ಕೆ ಅಪಮಾನ ಮಾಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ದೂರು ನೀಡಿದ್ದಾರೆ.

ಚಿತ್ರದುರ್ಗದ ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ವೀರಭದ್ರಸ್ವಾಮಿಗೆ ಅಪಮಾನ ಮಾಡಲಾಗಿದೆ ಎಂದು ಹೆಡ್ ಬುಷ್ ಚಿತ್ರ ತಂಡದ ವಿರುದ್ಧ ದೂರು ಸಲ್ಲಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಡಾಲಿ ಧನಂಜಯ್, ಕರಗ ಮತ್ತು ವೀರಗಾಸೆ ಎರಡಕ್ಕೂ ಚಿತ್ರದಲ್ಲಿ ಅಪಮಾನ ಮಾಡಲಾಗಿದೆ ಎಂಬ ಆರೋಪವನ್ನು ತಳ್ಳಿಹಾಕಿದ್ದಾರೆ. “ನಾನು ಸ್ವತಃ ವೀರಭದ್ರಸ್ವಾಮಿಯ ಭಕ್ತನಾಗಿದ್ದೇನೆ. ನಮ್ಮ ಚಿತ್ರದಲ್ಲಿ ವೀರಗಾಸೆಗೆ ಎಲ್ಲಿಯೂ ಅವಮಾನ ಮಾಡಿಲ್ಲ. ಅಸಲಿ ವೀರಗಾಸೆ ಕಲಾವಿದರಿಗೂ, ಕಲಾವಿದರ ವೇಷ ತೊಟ್ಟು ಜಯರಾಜ್ ಮೇಲೆ ದಾಳಿ ಮಾಡುವ ದುಷ್ಕರ್ಮಿಗಳಿಗೂ ಸ್ಪಷ್ಟ ವ್ಯತ್ಯಾಸಗಳನ್ನು ಚಿತ್ರದಲ್ಲಿ ತೋರಿಸಿದ್ದೇವೆ. ಕರಗವನ್ನು ಕೂಡ ತುಂಬಾ ಭಕ್ತಿಯಿಂದ ಚಿತ್ರಿಸುವ ಪ್ರಯತ್ನ ಮಾಡಿದ್ದೇವೆ. ನಮ್ಮ ಬೆಂಗಳೂರು ಕರಗವನ್ನು ವಿಜೃಂಭಣೆಯಿಂದ ತೋರಿಸುವ ಸಲುವಾಗಿ ಸಾಕಷ್ಟು ಶ್ರಮ ವಹಿಸಿದ್ದೇವೆ. ಬೇಕಂತಲೇ ನನ್ನನ್ನು ಗುರಿಯಾಗಿಸಿ ಈ ದಾಳಿಗಳು ನಡೆಯುತ್ತಿವೆ” ಎಂದು ಹೇಳಿದ್ದಾರೆ.

ಚಿತ್ರದ ವಿರುದ್ಧ ಅಪಸ್ವರ ಕೇಳಿಬಂದ ಕೂಡಲೇ ಹಲವಾರು ಸಿನಿಮಾ ನಿರ್ದೇಶಕರು, ತಂತ್ರಜ್ಞರು ಚಿತ್ರತಂಡದ ಪರ ನಿಂತಿದ್ದಾರೆ. IStanWithDhananjay ಹ್ಯಾಷ್‌ಟ್ಯಾಗ್ ಬಳಸಿ ಧನಂಜಯ್‌ರವರಿಗೆ ಬೆಂಬಲ ಘೋಷಿಸಿದ್ದಾರೆ.

ಯಶ್ , ರಿಷಭ್ ಶೆಟ್ಟಿ ಅವರಂತೆ ಡಾಲಿ ಧನಂಜಯ್ ಕೂಡಾ ಇಡೀ ಸಿನಿಮಾ ಉದ್ಯಮಕ್ಕೆ ತಿರುವು ಕೊಡಬಲ್ಲ ತುಡಿತ ಮತ್ತು ಸಾಮರ್ಥ್ಯವಿರುವ ಕ್ರಿಯಾಶೀಲ, ಸೃಜನಶೀಲ ಯುವ ನಟ. ಈಗಾಗಲೇ ಉದ್ಯಮಕ್ಕೆ ಕಾಲಿಡುವ ಹೊಸ ಪ್ರತಿಭೆಗಳಿಗೆ ತಮ್ಮ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣಕ್ಕೆ ಅವಕಾಶ ನೀಡುವ ಹೆಜ್ಜೆಯಿಟ್ಟಿದ್ದಾರೆ. ಇದೀಗ ಪ್ರದರ್ಶನ ಗೊಳ್ಳುತ್ತಿರುವ ಅವರ ಹೆಡ್ ಬುಷ್ ಚಿತ್ರವು ಉತ್ತಮವಾಗಿದ್ದು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಒಂದು ಕಲೆ. ನಿರ್ದೇಶಕನ ಸೃಜನಶೀಲ ಅಭಿವ್ಯಕ್ತಿಯ ಮಾಧ್ಯಮ‌. ಬಣ, ಪಂಥಗಳ ಆಧಾರದ ದ್ವೇಷದಲ್ಲಿ ಭಾವನೆಗೆ ಧಕ್ಕೆ ಎಂಬ ಹುಸಿ ಆರೋಪದಡಿ ಸಿನಿಮಾವನ್ನು ವಿರೋಧಿಸುವುದು ತಪ್ಪು. ಜನರಲ್ ಆಗಿ‌, ಗೈಡ್ ಲೈನ್ಸ್ ಅನುಸಾರ ಅಸಮ್ಮತ ವಿಚಾರಗಳನ್ನು ಸಿನಿಮಾದಲ್ಲಿ ಸೇರಿಸದಂತೆ ತಡೆಯಲು ಸರ್ಕಾರವೇ ನೇಮಿಸಿರುವ ಸೆನ್ಸಾರ್ ಮಂಡಳಿ ಇದೆ” ಎಂದು ಗೀತರಚನೆಕಾರ ಕವಿರಾಜ್ ಅಭಿಪ್ರಾಯಪಟ್ಟಿದ್ದಾರೆ.

ವೀರಗಾಸೆ ಕುಣಿತದವರ ಮಾರುವೇಷದಲ್ಲಿ ಬಂದವರನ್ನು ಥಳಿಸುವ ದೃಶ್ಯಗಳ ಕುರಿತು ಧನಂಜಯ್ ಅವರ ವಿವರಣೆಯು ಸಮಂಜಸವಾಗಿದೆ. ಧನಂಜಯ್ ಕನ್ನಡ ಚಿತ್ರರಂಗದ ಆಸ್ತಿ. ಧನಂಜಯ್ ಸೂಕ್ಷ್ಮ ಸಂವೇದನೆಯುಳ್ಳ ವಿಚಾರಶೀಲ, ಕಲಾ ಪ್ರೇಮಿ. ಅವರಿಂದ ಯಾವ ಕಲೆಗೂ ಅಪಚಾರ ಆಗಿಲ್ಲ ,ಆಗುವುದಿಲ್ಲ ಎಂಬ ನಂಬಿಕೆ ನಮಗಿದೆ. ಅವರ ಸೃಜನಶೀಲ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಾನು ಸದಾ ಬೆಂಬಲಿಸುತ್ತೇನೆ ಎಂದು ಅವು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ನೆಲದ ಬಗ್ಗೆ ಅಪಾರವಾದ ಕಾಳಜಿ, ಮನುಷ್ಯತ್ವ, ಮಾನವೀಯ ಕಾಳಜಿ ಇರುವ ಧನಂಜಯ್‌ ರವರಂತಹ ನಟರು ಕನ್ನಡ ಚಿತ್ರರಂಗಕ್ಕೆ ಹೆಚ್ಚೇ ಅವಶ್ಯಕವಾಗಿದ್ದಾರೆ. ಅವರೊಂದಿಗೆ ಕನ್ನಡ ಚಿತ್ರರಂಗ ನಿಲ್ಲಬೇಕು.
#Amwithdhananjay ಎಂದು ಖ್ಯಾತ ನಿರ್ದೇಶಕ ಮಂಸೋರೆ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ‘ಹೆಡ್‌ ಬುಷ್‌’: ಜಯರಾಜ್‌ ದಾದಾಗಿರಿಯ ದಿನಗಳ ದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...