Homeಕರ್ನಾಟಕಚುನಾವಣಾ ಬಾಂಡ್‌, ಐಟಿ, ಇಡಿ ದುರುಪಯೋಗ ಆರೋಪ: ನಿರ್ಮಲಾ ಸೀತಾರಾಮನ್‌ ವಿರುದ್ಧ ದೂರು ದಾಖಲು

ಚುನಾವಣಾ ಬಾಂಡ್‌, ಐಟಿ, ಇಡಿ ದುರುಪಯೋಗ ಆರೋಪ: ನಿರ್ಮಲಾ ಸೀತಾರಾಮನ್‌ ವಿರುದ್ಧ ದೂರು ದಾಖಲು

- Advertisement -
- Advertisement -

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ವಿರುದ್ಧ ಬೆಂಗಳೂರಿನ ತಿಲಕನಗರ ಪೊಲೀಸ್‌ ಠಾಣೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು ಕ್ರಿಮಿನಲ್‌ ದೂರು ದಾಖಲಿಸಿದ್ದಾರೆ.

ಐಟಿ, ಇಡಿ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಉದ್ಯಮಿಗಳನ್ನು ಬೆದರಿಸಿ ಚುನಾವಣಾ ಬಾಂಡ್‌ ಹೆಸರಿನಲ್ಲಿ ಹಣ ವಸೂಲಿ ಮಾಡಿದ್ದಾರೆ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಪರಿಷತ್‌, ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ, ಡಾ ಅಂಬೇಡ್ಕರ್‌ ದಂಡು, ಫ್ಯೂಚರ್‌ ಇಂಡಿಯಾ ಆರ್ಗನೈಸೇಷನ್‌ ಜಂಟಿಯಾಗಿ ದೂರು ನೀಡಿವೆ.

“ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಮೂಲಕವೇ ಈ ಪಿತೂರಿ ನಡೆದಿದೆ. ಒಟ್ಟು 477 ಇಂತಹ ಪ್ರಕರಣಗಳು ಬೆಳಕಿಗೆ ಬಂದಿವೆ. ಅದರಲ್ಲಿ 20 ಪ್ರಕರಣಗಳಲ್ಲಿ ಐಟಿ, ಇಡಿ ದಾಳಿಯಾದ ನಂತರ ಚುನಾವಣಾ ಬಾಂಡ್‌ ಖರೀದಿಸಲಾಗಿದೆ. ಆ ಹಣ ಬಿಜೆಪಿಯ ಖಾತೆಗೆ ಸಂದಾಯವಾಗಿದೆ. ಇದು ಐಪಿಸಿ ಸೆಕ್ಷನ್ 384/ 120ಬಿ ಅಡಿ ಕ್ರಿಮಿನಲ್‌ ಅಪರಾಧವಾಗಿದೆ” ಎಂದು ಜನಾಧಿಕಾರ ಸಂಘರ್ಷ ಪರಿಷತ್‌ನ ಆದರ್ಶ್‌ ಐಯ್ಯರ್‌ ಹೇಳಿರುವುದಾಗಿ ಈದಿನ.ಕಾಂ ವರದಿ ಮಾಡಿದೆ.

ನಾನುಗೌರಿ.ಕಾಂಗೆ ಮಾಹಿತಿ ನೀಡಿರುವ ಆದರ್ಶ್ ಅಯ್ಯರ್, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಜಾರಿ ನಿರ್ದೇಶನಾಲಯ (ಇಡಿ), ಜೆಪಿ ನಡ್ಡಾ ಸೇರಿದಂತೆ ಬಿಜೆಪಿ ರಾಷ್ಟ್ರೀಯ ಸಮಿತಿಯ ಕಾರ್ಯಕಾರಿಣಿ ಸದಸ್ಯರು, ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಹಾಲಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿದಂತೆ ಕರ್ನಾಟಕ ಬಿಜೆಪಿಯ ರಾಜ್ಯ ಘಟಕದ ಸದಸ್ಯರ ವಿರುದ್ದ ದೂರು ದಾಖಲಿಸಿರುವುದಾಗಿ ತಿಳಿಸಿದ್ದಾರೆ.

ವರದಿಗಳ ಪ್ರಕಾರ, “ಇದೊಂದು ಹೈ ಪ್ರೊಫೈಲ್‌ ಪ್ರಕರಣ ಎಂದ ತಿಲಕನಗರ ಪೊಲೀಸರು ದೂರು ಪಡೆಯಲು ಹಿಂದೇಟು ಹಾಕಿದ್ದಾರೆ. ನಂತರ ದೂರು ಸ್ವೀಕರಿಸಿದ್ದಾರೆ. ಚುನಾವಣೆಯ ಸಮಯ ಆಗಿರುವ ಕಾರಣ ಎಆರ್‌ಒ (Assistant Review Officer)ಗೆ ವರ್ಗಾಯಿಸುತ್ತೇವೆ ಎಂದಿದ್ದಾರೆ.

“ಸೋಮವಾರ ನಾವು ಡಿಸಿಪಿಯವರಿಗೆ ಮತ್ತೊಂದು ದೂರು ಕೊಡುತ್ತೇವೆ. ಎಫ್‌ಐಆರ್‌ ದಾಖಲಿಸದಿದ್ದರೆ ಕೋರ್ಟ್‌ ಮೊರೆ ಹೋಗುತ್ತೇವೆ” ಎಂದು ಆದರ್ಶ್‌ ಅಯ್ಯರ್‌ ತಿಳಿಸಿದ್ದಾರೆ.

ಇದನ್ನೂ ಓದಿ : ಶಿವಮೊಗ್ಗದಲ್ಲಿ ರಾಘವೇಂದ್ರ ಸೋಲ್ತಾರೆ: ಕೆ.ಎಸ್ ಈಶ್ವರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ ‘ವಂದೇ ಮಾತರಂ’ ಕುರಿತು ಚರ್ಚೆ ಏಕೆ? ಪ್ರಿಯಾಂಕಾ ಗಾಂಧಿ

ಸೋಮವಾರ ಲೋಕಸಭೆಯಲ್ಲಿ 'ವಂದೇ ಮಾತರಂನ 150 ವರ್ಷಗಳು' ಕುರಿತ ಚರ್ಚೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಭಾರತಕ್ಕೆ ಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ, ಚರ್ಚಿಸಲು ಹೆಚ್ಚು ಮುಖ್ಯವಾದ ವಿಷಯಗಳಿರುವಾಗ, ಈ...

ರಾಜ್ಯ ಬಾರ್ ಕೌನ್ಸಿಲ್‌ಗಳಲ್ಲಿ ಶೇ.30 ಮಹಿಳಾ ಮೀಸಲಾತಿಗೆ ಸುಪ್ರೀಂ ಕೋರ್ಟ್ ಆದೇಶ

ಮಹತ್ವದ ಆದೇಶವೊಂದರಲ್ಲಿ, ಚುನಾವಣೆಗಳು ಇನ್ನೂ ಘೋಷಣೆಯಾಗದ ರಾಜ್ಯ ಬಾರ್ ಕೌನ್ಸಿಲ್‌ಗಳಲ್ಲಿ ಶೇಕಡ 30ರಷ್ಟು ಸ್ಥಾನಗಳನ್ನು ಮಹಿಳಾ ವಕೀಲರಿಗೆ ಮೀಸಲಿಡಲು ಸೋಮವಾರ (ಡಿಸೆಂಬರ್ 8) ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಪ್ರಸಕ್ತ ವರ್ಷಕ್ಕೆ, ಶೇಕಡ 20ರಷ್ಟು ಮಹಿಳಾ...

ಮಹಾರಾಷ್ಟ್ರ| ಶಿವಾಜಿಯ ಪಾದ ಮುಟ್ಟಿ ಕ್ಷಮೆಯಾಚಿಸುವಂತೆ ಒತ್ತಾಯ; ಮುಸ್ಲಿಂ ವಿದ್ಯಾರ್ಥಿಗಳಿಗೆ ಹಿಂದುತ್ವ ಗುಂಪಿನಿಂದ ಕಿರುಕುಳ

ವಿದ್ಯಾರ್ಥಿಗಳು, ಆಡಳಿತ ಮಂಡಳಿ ಅನುಮತಿಯೊಂದಿಗೆ ಕ್ಯಾಂಪಸ್‌ನಲ್ಲಿ ಶುಕ್ರವಾರದ ಪ್ರಾರ್ಥನೆ ಮಾಡಿದ್ದಾರೆ ಎಂದು ತಿಳಿದ ನಂತರ ಅವರಿಗೆ ಕಿರುಕುಳ ನೀಡಿರುವ ಬಲಪಂಥೀಯ ಕಾರ್ಯಕರ್ತರ ಗುಂಪು, ಮುಸ್ಲಿಂ ವಿದ್ಯಾರ್ಥಿಗಳ ಗುಂಪನ್ನು ಕ್ಷಮೆಯಾಚಿಸಲು ಹಾಗೂ ಛತ್ರಪತಿ ಶಿವಾಜಿ...

ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ, ಮಾರಾಟ ; 570 ಜನರ ಬಂಧನ : ಸಚಿವ ಕೆ.ಎಚ್‌ ಮುನಿಯಪ್ಪ

ಅನ್ನಭಾಗ್ಯ ಪಡಿತರ ಅಕ್ಕಿಯ ಅಕ್ರಮ ಸಂಗ್ರಹ ಮತ್ತು ಮಾರಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ 461 ಎಫ್‌ಐಆರ್‌ಗಳನ್ನು ದಾಖಲಿಸಿ, 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್‌ ಮುನಿಯಪ್ಪ...

ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಸಮ್ಮುಖದಲ್ಲಿ 10 ನಕ್ಸಲರು ಶರಣಾಗತಿ: ಮುಖ್ಯವಾಹಿನಿಗೆ ಬಂದವರಿಗೆ ಸಂವಿಧಾನ ಪ್ರತಿ ನೀಡಿದ ಸಿಎಂ

ಡಿಸೆಂಬರ್ 7 ರಂದು, ನಾಲ್ವರು ಮಹಿಳೆಯರು ಸೇರಿದಂತೆ ಹತ್ತು ಮಂದಿ ನಕ್ಸಲರು ಬಾಲಘಾಟ್ ಜಿಲ್ಲೆಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರ ನೇತೃತ್ವದಲ್ಲಿ ಮುಖ್ಯವಾಹಿನಿಗೆ ಬಂದರು. ಶರಣಾಗತಿಯಾದ ನಕ್ಸಲರ ಬಳಿ ಇದ್ದ,...

‘ಸಿಎಂ ಹುದ್ದೆಗೆ 500 ಕೋಟಿ’ : ಚರ್ಚೆಗೆ ಕಾರಣವಾದ ನವಜೋತ್ ಕೌರ್ ಹೇಳಿಕೆ; ಕಾಂಗ್ರೆಸ್‌ ಮೇಲೆ ಮುಗಿಬಿದ್ದ ಎಎಪಿ, ಬಿಜೆಪಿ

"ಐನೂರು ಕೋಟಿ ರೂಪಾಯಿಯ ಸೂಟ್ ಕೇಸ್ ಕೊಡುವವರು ಸಿಎಂ ಆಗುತ್ತಾರೆ" ಎಂಬ ಪಕ್ಷದ ನಾಯಕ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಅವರ ಹೇಳಿಕೆ ಕುರಿತು ಸ್ಪಷ್ಟನೆ ನೀಡುವಂತೆ ಪಂಜಾಬ್‌ನ...

ಡಿಕೆಶಿ ಅವಕಾಶ ಕೇಳಿದ್ರು, ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಸಮ್ಮತಿಸಿಲ್ಲ: ಯತೀಂದ್ರ ಸಿದ್ದರಾಮಯ್ಯ

ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂಬ ವಿಶ್ವಾಸ ವೈಯಕ್ತಿಕವಾಗಿ ನನಗಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಡಿಕೆಶಿ ಅವಕಾಶ ಕೇಳಿದ್ದರು. ಆದರೆ, ನಾಯಕತ್ವ ಬದಲಾವಣೆ ಪರಿಸ್ಥಿತಿ ಇಲ್ಲ ಎಂದು ಹೈಕಮಾಂಡ್...

ಇಂಡಿಗೋ ಬಿಕ್ಕಟ್ಟು : ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

ಇಂಡಿಗೋ ವಿಮಾನ ಬಿಕ್ಕಟ್ಟಿಗೆ ಸಂಬಂಧಿಸಿದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ (ಡಿಸೆಂಬರ್ 8) ನಿರಾಕರಿಸಿದೆ. ಈ ವಿಷಯದ ಬಗ್ಗೆ ಭಾರತ ಸರ್ಕಾರ ಈಗಾಗಲೇ ಗಮನ ಹರಿಸಿ ಕ್ರಮ ಕೈಗೊಂಡಿದೆ....

ಮಂಡ್ಯದಲ್ಲಿ ಭೀಕರ ಅಪಘಾತ: ಸೇತುವೆಯಿಂದ ಕೆಳಗೆ ಬಿದ್ದ ಕಾರು: ಒಂದೇ ಕುಟುಂಬದ ಮೂವರು ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಸೇತುವೆಗೆ ಡಿಕ್ಕಿ ಹೊಡೆದು, ಬಳಿಕ ಹಳ್ಳಕ್ಕೆ ಬಿದ್ದಿದ್ದು, ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ನಾಗಮಂಗಲ ತಾಲ್ಲೂಕಿನ ತಿಟ್ಟನಹೊಸಹಳ್ಳಿ ಮತ್ತು ಎ.ನಾಗತಿಹಳ್ಳಿ...

ಮುಖ್ಯಮಂತ್ರಿ ಸಿದ್ದರಾಮಯ್ಯ ಆಯ್ಕೆ ಅಸಿಂಧು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದಿಂದ 2023ರಲ್ಲಿ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಈ ಸಂಬಂಧ ಪ್ರತಿಕ್ರಿಯಿಸುವಂತೆ ಸಿದ್ದರಾಮಯ್ಯ ಅವರಿಗೆ ಸೂಚಿಸಿ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ...