Homeಕರ್ನಾಟಕಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಆರೋಪ | ಸಿದ್ದರಾಮಯ್ಯ ವಿರುದ್ಧ ದೂರು ದಾಖಲು

ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಆರೋಪ | ಸಿದ್ದರಾಮಯ್ಯ ವಿರುದ್ಧ ದೂರು ದಾಖಲು

- Advertisement -
- Advertisement -

ಧಾರವಾಡದಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಆರ್‌ಟಿಐ ಕಾರ್ಯಕರ್ತರೊಬ್ಬರು ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಗುರುವಾರ ಕ್ಯಾಂಪ್ ಪೊಲೀಸ್ ಠಾಣೆಗೆ ಸಲ್ಲಿಸಿರುವ ದೂರಿನಲ್ಲಿ, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಜನರ ಧ್ವನಿಯಾಗಬೇಕು ಮತ್ತು ಅಧಿಕಾರಿಗಳು ತಮ್ಮ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಪ್ರೇರೇಪಿಸಬೇಕಿತ್ತು ಎಂದು ಹೇಳಿದ್ದಾರೆ. ಪೊಲೀಸರ ಮೇಲೆ ಹಲ್ಲೆಗೆ

ಕೇಂದ್ರ ಸರ್ಕಾರದ ಅಡಿಯಲ್ಲಿ ಏರುತ್ತಿರುವ ಬೆಲೆ ಏರಿಕೆಯನ್ನು ವಿರೋಧಿಸಿ ಏಪ್ರಿಲ್ 28, 2025 ರಂದು ಧಾರವಾಡದ ಸಿಪಿಇಡಿ ಮೈದಾನದಲ್ಲಿ ಕಾಂಗ್ರೆಸ್ ಪಕ್ಷ ನಡೆಸಿದ್ದ ಪ್ರತಿಭಟನೆಯ ವೇಳೆ ಘಟನೆ ಸಂಭವಿಸಿತ್ತು. ಈ ವೇಳೆ ಸಿದ್ದರಾಮಯ್ಯ ಅವರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ನಾರಾಯಣ್ ಬಾರಾಮಣಿ ಅವರ ಮೇಲೆ ಕೋಪಗೊಂಡು ಹಲ್ಲೆಗೆ ಮುಂದಾಗಿದ್ದಾರೆ ಎಂದು ಆರೋಪಿಸಿ ಮಾಹಿತಿ ಹಕ್ಕು (ಆರ್‌ಟಿಐ) ಕಾರ್ಯಕರ್ತ ಭೀಮಪ್ಪ ಗಡಾದ ದೂರು ದಾಖಲಿಸಿದ್ದಾರೆ.

ಭೀಮಪ್ಪ ತನ್ನ ದೂರಿನಲ್ಲಿ, ಸಿದ್ದರಾಮಯ್ಯ ಅವರು ಕೀಳು ಮಟ್ಟದ ಭಾಷೆಯನ್ನು ಬಳಸುತ್ತಿದ್ದು, ಸಮವಸ್ತ್ರ ಧರಿಸಿದ ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆಗೆ ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಸಿಎಂ ಅವರ ಈ ನಡವಳಿಕೆಯನ್ನು ಅಸಂವಿಧಾನಿಕ ಎಂದು ಕರೆದಿರು ದೂರುದಾರ, “ಈ ಘಟನೆಯು ಸರ್ಕಾರಿ ಅಧಿಕಾರಿಗಳಲ್ಲಿ ಭಯವನ್ನು ಹುಟ್ಟುಹಾಕಿದೆ” ಎಂದು ಹೇಳಿದ್ದಾರೆ.

ಭಾರತೀಯ ನ್ಯಾಯ ಸಂಹಿತದ ಸೆಕ್ಷನ್ 132 ಅನ್ನು ಉಲ್ಲೇಖಿಸಿ, ಸಾರ್ವಜನಿಕ ಸೇವಕರು ತಮ್ಮ ಕರ್ತವ್ಯವನ್ನು ನಿರ್ವಹಿಸದಂತೆ ತಡೆಯಲು ಅವರ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲಪ್ರಯೋಗ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಭೀಮಪ್ಪ ಹೇಳಿದ್ದಾರೆ. ಭಾರತೀಯ ನ್ಯಾಯ ಸಂಹಿತದ ಸೆಕ್ಷನ್ 132 ಎರಡು ವರ್ಷಗಳವರೆಗೆ ಜೈಲು ಶಿಕ್ಷೆ, ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶ ನೀಡುತ್ತದೆ.

ದೂರಿನಲ್ಲಿ ಘಟನೆಗೆ ಸಂಬಂಧಿಸಿದ ವೀಡಿಯೊ ದೃಶ್ಯಾವಳಿಗಳು ಮತ್ತು ಮಾಧ್ಯಮ ವರದಿಗಳನ್ನು ಸೇರಿಸಲಾಗಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಭೀಮಪ್ಪ ಅವರು ಒತ್ತಾಯಿಸಿದ್ದಾರೆ.

ಅಷ್ಟೆ ಅಲ್ಲದೆ, ಮುಖ್ಯಮಂತ್ರಿಯವರ ಕ್ರಮಗಳ ಬಗ್ಗೆ ತನಿಖೆ ನಡೆಸುವಂತೆ ಆಯೋಗವನ್ನು ಒತ್ತಾಯಿಸಿ ದೆಹಲಿಯಲ್ಲಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ (NHRC) ಪ್ರತ್ಯೇಕ ದೂರು ಸಲ್ಲಿಸಿರುವುದಾಗಿ ಅವರು ಉಲ್ಲೇಖಿಸಿದ್ದಾರೆ. ಪೊಲೀಸರ ಮೇಲೆ ಹಲ್ಲೆಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಎಫ್‌ಐಆರ್‌ ಗಳ ಮಾಹಿತಿಗೆ ಸೂಚನೆ: ಕೆಲ ಪ್ರಕರಣಗಳ ಸಂಕ್ಷಿಪ್ತ ಮಾಹಿತಿ

ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಎಫ್‌ಐಆರ್‌ ಗಳ ಮಾಹಿತಿಗೆ ಸೂಚನೆ: ಕೆಲ ಪ್ರಕರಣಗಳ ಸಂಕ್ಷಿಪ್ತ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...