ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಶ್ರೀರಾಮ ಸೇನೆ ಸಂಘಟನೆಯ ಪ್ರಮೋದ್ ಮುತಾಲಿಕ್ ಅವರನ್ನು ಹಾಗೂ ಅವರ ಕಾರ್ಯಕರ್ತರನ್ನು ಗಡಿ ಪಾರು ಮಾಡಬೇಕು ಎಂದು ಆಗ್ರಹಿಸಿ ಮುಸ್ಲಿಮ್ ಸಂಘಟನೆಗಳ ನಾಯಕರು ಹಾಗೂ ಉಂಗ್ರೆಸ್ ಕಾರ್ಯಕರ್ತರು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ್ ಅವರಿಗೆ ದೂರು ಸಲ್ಲಿಕೆ ಮಾಡಿದ್ದಾರೆ.
ಪ್ರಚೋದನಕಾರಿ ಹೇಳಿಕೆ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಕೆಲಸವನ್ನು ಮುತಾಲಿಕ್ ಮಾಡಿದ್ದಾರೆ. ಈ ಹಿನ್ನೆಲೆ ಮುತಾಲಿಕ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಿಗೆ ಮುಸ್ಲಿಂ ಮುಖಂಡರು ಮನವಿ ಸಲ್ಲಿಸಿದ್ದಾರೆ.
ಗುರುವಾರ ಹುಬ್ಬಳ್ಳಿ ಈದ್ಗಾ ಮೈದಾನದ ಗಣೇಶ ವಿಸರ್ಜನೆಗೆ ಮೈದಾನಕ್ಕೆ ಭೇಟಿ ನೀಡಿದ್ದ ಪ್ರಮೋದ್ ಮುತಾಲಿಕ್, ಪ್ರಚೋದನಾಕಾರಿ ಹೇಳಿಕೆ ನೀಡಿದ್ದರು. ಈ ಸಂಬಂಧ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ ಮಹಾನಗರ ಪಾಲಿಕ 8 ವಲಯದ ಸಹಾಯ ಆಯುಕ್ತ ಚಂದ್ರಶೇಖರಗೌಡ ನೀಡಿದ ದೂರಿನ ಆನ್ವಯ ಕಲಂ 1530), 295(ಎ) ಐಪಿಸಿ ಆಡಿ ಮುತಾಲಿಕೆ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಪ್ರಮೋದ್ ಮುತಾಲಿಕ್ ವಿರುದ್ಧ ದೂರು ನೀಡಿದ ಬಳಿಕ ಮುಸ್ಲಿಂ ಸಮುದಾಯದ ನಾಯಕ ಅಸ್ಪಾಕ್ ಕುಮಾಟಕರ್ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಕೂಡಲೇ ಮುತಾಲಿಕ್ ಮತ್ತು ಅವರ ಸಂಗಡಿಗರ ಮೇಲೆ ಕ್ರಮ ಆಗಬೇಕು ಎಂದು ಆಗ್ರಹಿಸಿದರು.
ಈ ಬಗ್ಗೆ ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತ ರೇಣುಕಾ ಸುಕುಮಾರ್ ಪ್ರತಿಕ್ರಿಯಿಸಿ, ”ಪ್ರಚೋದನಕಾರಿ ಹೇಳಿಕೆ ನೀಡಿದ ಅರೋಪದಡಿ ಪ್ರಮೋದ್ ಮುತಾಲಿಕ್ ವಿರುದ್ಧ ನಿನ್ನೆಯೇ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿತ್ತು. ಆ ಬಳಿಗೆ ಅಂಜುಮನ್ ಸಂಸ್ಥೆಯಿಂದಲೂ ಸಹ ದೂರು ಸಲ್ಲಿಕೆಯಾಗಿದೆ ಮುತಾಲಿಕ್ ಅವರನ್ನ ಗಡಿಪಾರು ಮಾಡುವಂತೆ ಒತ್ತಾಯ ಹೇಳಿ ಬಂದಿದ್ದು ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.
ಘಟನೆ ವಿವರ
ನಿನ್ನೆ ಈದ್ಗಾ ಮಸೀದಿಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಭೇಟಿ ನೀಡಿದ್ದ ಮುತಾಲಿಕ್, ಈ ವೇಳೆ ಮಸೀದಿಯಲ್ಲಿ ಗಣೇಶನನ್ನ ಪ್ರತಿಷ್ಠಾಪನೆ ಮಾಡುವ ತಾಕತ್ತು ಹಿಂದೂ ಸಮಾಜಕ್ಕಿದೆ. ಅಂಜುಮನ್ ಸಂಸ್ಥೆಯವರ ದುರದ್ದೇಶ ಏನೆಂದು ಈಗ ಎಲ್ಲರಿಗೂ ಗೊತ್ತಾಗಿದೆ. ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿರೋಧಿಸುವವರು ದೇಶದ್ರೋಹಿಗಳು. ನಿಮ್ಮ ನಮಾಜ್‌ಗೂ ನಾವು ಅಡ್ಡಿಪಡಿಸಬೇಕಾಗುತ್ತದೆ. ರಾಣಿ ಚೆನ್ನಮ್ಮ ಮೈದಾನದಲ್ಲಿ ನಮಾಜ್‌ಗೆ ಅವಕಾಶ ಕೊಡದಂತೆ ಕೋರ್ಟ್‌ಗೆ ಹೋಗುತ್ತೇವೆ. ಇದು ಪಾಕಿಸ್ತಾನವಲ್ಲ, ನಿಮ್ಮಪ್ಪನ ಆಸ್ತಿಯಲ್ಲ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದರು.
ಇದನ್ನೂ ಓದಿ: ಹುಬ್ಬಳ್ಳಿ: ಪ್ರಚೋದನಾಕಾರಿ ಹೇಳಿಕೆ; ಮುತಾಲಿಕ್ ವಿರುದ್ಧ ಪ್ರಕರಣ ದಾಖಲು


