Homeಕರ್ನಾಟಕತರಳಬಾಳು ಜಗದ್ಗುರು ಮತ್ತು ಇತರರಿಂದ ಜೀವಭಯ ಆರೋಪ: ಮಹಿಳೆಯಿಂದ ದೂರು

ತರಳಬಾಳು ಜಗದ್ಗುರು ಮತ್ತು ಇತರರಿಂದ ಜೀವಭಯ ಆರೋಪ: ಮಹಿಳೆಯಿಂದ ದೂರು

ನಮ್ಮ ಕುಟುಂಬಕ್ಕೆ ಏನಾದರೂ ತೊಂದರೆಯಾದರೆ, ಅಥವಾ ಸಾವು ಸಂಭವಿಸಿದರೆ ಶಿವಮೂರ್ತಿ ಶಿವಚಾರ್ಯ ಮಹಾಸ್ವಾಮಿ ಮತ್ತು ಅವರ ನೌಕರರೆ ಕಾರಣ ಎಂದು ದೂರಿನಲ್ಲಿ ಹೇಳಲಾಗಿದೆ.

- Advertisement -
- Advertisement -

ನನಗೆ ಮತ್ತು ನನ್ನ ಕುಟುಂಬದವರಿಗೆ ತರಳಬಾಳು ಜಗದ್ಗುರು 1108 ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿ ಮತ್ತು ತರಳಬಾಳು ಬೆಂಗಳೂರು ಕೇಂದ್ರದ ಕಾರ್ಯದರ್ಶಿ ವಿಶ್ವನಾಥ ಮತ್ತು ಅವರ ನೌಕರರಾದ ಮರುಳಸಿದ್ದಪ್ಪ ಎಂಬುವವರಿಂದ ಜೀವ ಬೆದರಿಕೆ ಇದೆ ಎಂದು ಬೆಂಗಳೂರಿನ ಶಿಲ್ಪ ಎಂಬ ಮಹಿಳೆಯೊಬ್ಬರು ಆರೋಪಿಸಿದ್ದು, ರಕ್ಷಣ ನೀಡಬೇಕೆಂದು ಬೆಂಗಳೂರಿನ ಆರ್‌ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

“ನನ್ನ ಪತಿ ಸಿದ್ದೇಶ್ ಎಸ್ ಎಂಬುವವರು 16 ವರ್ಷಗಳ ಕಾಲ ತರಳಬಾಳು ಕೇಂದ್ರ ಬೆಂಗಳೂರು ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಆದರೆ 2013 ರಲ್ಲಿ ವಿನಾಕಾರಣ ಜಗದ್ಗುರುಗಳು ನನ್ನ ಪತಿಯ ಮೇಲೆ ತಮ್ಮ ನೌಕರರಿಂದ ಹಲ್ಲೆ ನಡೆಸಿದ್ದರು. ಅದನ್ನು ಪ್ರಶ್ನಿಸಿದ ನನ್ನ ಅತ್ತೆ-ಮಾವನನ್ನು ಬೆದರಿಸಿ ಕೊಲೆ ಬೆದರಿಕೆ ಹಾಕಿದ್ದರು. ಈಗ ಮತ್ತೆ 2022ರ ಜನವರಿ ತಿಂಗಳಿನಲ್ಲಿ ಜಗದ್ಗುರುಗಳ ನೌಕರರು ನಮ್ಮ ಮನೆಯನ್ನು ಅತಿಕ್ರಮಣ ಮಾಡಿದ್ದಾರೆ. ನಮ್ಮ ರಕ್ಷಣೆಗೆ ಇದ್ದ ಸಿಸಿಟಿವಿಗಳನ್ನು ಧ್ವಂಸಗೊಳಿಸಿದ್ದಾರೆ. ನಮ್ಮ ಮನೆಯ ಗೇಟು, ಬಾಗಿಲುಗಳನ್ನು ಒಡೆದುಹಾಕಿ ಬೆಲೆ ಬಾಳುವ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ” ಎಂದು ಶಿಲ್ಪ ದೂರಿನಲ್ಲಿ ತಿಳಿಸಿದ್ದಾರೆ.

ಸದ್ಯಕ್ಕೆ ವಿಶ್ವನಾಥ, ಮರುಳಸಿದ್ದಪ್ಪ ಮತ್ತು ಅವರ ಸಹಚರರು ನಮ್ಮ ಮನೆಯನ್ನು ಅತಿಕ್ರಮಣ ಮಾಡಿ ವಾಸಿಸುತ್ತಿದ್ದಾರೆ. ಕರ್ನಾಟಕ ಸರ್ಕಾರ ಮತ್ತು ಜಗದ್ಗುರಗಳ ಬೆಂಬಲ ಆರೋಪಿಗಳಿಗೆ ಇರುವುದರಿಂದ ನಾವು ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಹಿಂದೆ ನಮ್ಮ ಸ್ವಂತ ಊರಾದ ವಿಜಯನಗರ ಜಿಲ್ಲೆಯ ತೊಲಹಳ್ಳಿಯಿಂದಲೂ ನಮ್ಮನ್ನು ಒಕ್ಕಲೆಬ್ಬಿಸಿದ್ದರು. ಈಗ ಇಲ್ಲಿಯು ನೆಮ್ಮದಿಯಿಂದ ಬದುಕಲು ಬಿಡುತ್ತಿಲ್ಲ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಗುಬ್ಬಿ: ಇಬ್ಬರು ದಲಿತ ಯುವಕರ ಭೀಕರ ಹತ್ಯೆ; ಖೈರ್ಲಾಂಜಿ ಮಾದರಿ ಪ್ರಕರಣ?

ಏಪ್ರಿಲ್ 20 ರಂದು ಮರುಳಸಿದ್ದಪ್ಪ, ಸುರೇಶ್ ಮತ್ತು ವಾಹನ ಚಾಲಕರಾದ ನಾಗೇಶ್ ಎಂಬುವವರು ಜೊತೆಗೂಡಿ ಕುಡಿದು ಬಂದು ನಮ್ಮ ಮನೆಯಲ್ಲಿ ಜಗಳ ಮಾಡಿರುತ್ತಾರೆ. ನನಗೆ ಮತ್ತು ನನ್ನ ಗಂಡನ ಮೇಲೆ ದೈಹಿಕ ಹಲ್ಲೆ ಮಾಡಿದ್ದಾರೆ. ದೂರು ನೀಡಲು ಹೋದ ನನ್ನ ಪತಿ ಸಿದ್ದೇಶ್‌ರವರನ್ನು ಪೊಲೀಸರು ಕೆಲ ಹೊತ್ತು ಠಾಣೆಯಲ್ಲಿಯೇ ಇಟ್ಟುಕೊಂಡಿದ್ದರು. ಆ ನಂತರ ವಾಪಸ್ ಕಳಿಸಿದ ಪರಿಣಾಮ 21ನೇ ತಾರೀಖು ದೂರು ನೀಡಿದ್ದೇವೆ. ಈಗಲಾದರೂ ನಮಗೆ ನ್ಯಾಯ ಕೊಡಿಸಿ ಮತ್ತು ರಕ್ಷಣೆ ಕೊಡಿಸಿ. ಇಲ್ಲ ಇದರಿಂದ ನಮ್ಮ ಮತ್ತು ನಮ್ಮ ಕುಟುಂಬಕ್ಕೆ ಏನಾದರೂ ತೊಂದರೆಯಾದರೆ, ಅಥವಾ ಸಾವು ಸಂಭವಿಸಿದರೆ ಶಿವಮೂರ್ತಿ ಶಿಚಾಚಾರ್ಯ ಮಹಾಸ್ವಾಮಿ ಮತ್ತು ತರಳಬಾಳು ಬೆಂಗಳೂರು ಕೇಂದ್ರದ ಕಾರ್ಯದರ್ಶಿ ವಿಶ್ವನಾಥ, ನೌಕರರಾದ ಮರುಳಸಿದ್ದಪ್ಪ, ಅವರ ಹೆಂಡತಿ, ಸುರೇಶ, ನಾಗೇಶ, ವೀರಯ್ಯ, ಪುನೀತರವರೆ ಕಾರಣ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ದೂರಿನ ಪ್ರತಿಯನ್ನು ಮುಖ್ಯಮಂತ್ರಿಗಳು, ಗೃಹಮಂತ್ರಿಗಳು, ಪೊಲೀಸ್ ಮಹಾ ನಿರ್ದೇಶಕರು, ಪೊಲೀಸ್ ಕಮಿಷನರ್, ಡಿಸಿಪಿ, ಎಸಿಪಿ, ಮಹಿಳಾ ಆಯೋಗ, ಮಕ್ಕಳ ಇಲಾಖೆಗೂ ಕೂಡ ಸಲ್ಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಠದ ಅನ್ನ ತಿಂದು ಮಠಕ್ಕೆ ಕಳಂಕವ ತಂದು ಇದೀಗ ಜೀವ ಬೆದರಿಕೆಯ ನಾಟಕವಾಡುವಿದು, ಸಮಾಜದಲ್ಲಿ ಗಣ್ಯರ ತೇಜೋವಧೆಗೆ ಯತ್ನಿಸುವವರನ್ನು ಎಂದಿಗೂ ನಂಬಬಾರದು

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...