Homeಕರ್ನಾಟಕಸಂಯೋಜನೆ ಹೆಸರಿನಲ್ಲಿ 4,200 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಬೀಗ - ಎಐಡಿಎಸ್ಓ ಪ್ರತಿಭಟನೆ

ಸಂಯೋಜನೆ ಹೆಸರಿನಲ್ಲಿ 4,200 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಬೀಗ – ಎಐಡಿಎಸ್ಓ ಪ್ರತಿಭಟನೆ

- Advertisement -
- Advertisement -

ಸಂಯೋಜನೆ ಹೆಸರಿನಲ್ಲಿ ಕಾಂಗ್ರೆಸ್‌ ಸರ್ಕಾರ 4,200 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದನ್ನು ಖಂಡಿಸಿ ಸೋಮವಾರ ವಿದ್ಯಾರ್ಥಿ ಸಂಘಟನೆ ಎಐಡಿಎಸ್ಓ ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದೆ. ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಮುಚ್ಚುವುದು, ‘ನೆಗಡಿ ಬಂದರೆ ಮೂಗು ಕತ್ತರಿಸಿದಂತೆ’ ಎಂದು ಎಐಡಿಎಸ್ಓ ಹೇಳಿದ್ದು, ಸರ್ಕಾರವು ತನ್ನ ಈ ಅವೈಜ್ಞಾನಿಕ ಮತ್ತು ಅಪ್ರಜಾತಾಂತ್ರಿಕ ಜನವಿರೋಧಿ ನಿರ್ಧಾರವನ್ನು ಕೈಬಿಡಬೇಕು ಎಂದು ಆಗ್ರಹಿಸಿದೆ.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್ಓ ರಾಜ್ಯ ಖಚಾಂಜಿ ಸುಭಾಷ್ ಬೆಟ್ಟದ ಕೊಪ್ಪ, “ಇತ್ತೀಚೆಗಷ್ಟೆ ರಾಜ್ಯ ಸರ್ಕಾರವು ‘ ಹಬ್ ಅಂಡ್ ಸ್ಪೋಕ್’ ಅಡಿಯಲ್ಲಿ ಕಡಿಮೆ ಹಾಜರಾತಿ ಇರುವ ಸರ್ಕಾರಿ ಶಾಲೆಗಳನ್ನು ಇತರ ಶಾಲೆಗಳೊಂದಿಗೆ ಸಂಯೋಜಿಸುವ ನಿರ್ಧಾರವನ್ನು ಪ್ರಕಟಿಸಿದೆ. ಈ ನಿಟ್ಟಿನಲ್ಲಿ ಶಿಕ್ಷಣ ಸುಧಾರಣಾ ಸಮಿತಿಯನ್ನು ಸಹ ರಚಿಸಲಾಗಿದೆ. ಪತ್ರಿಕೆಗಳಲ್ಲಿ ವರದಿಯಾಗಿರುವಂತೆ ರಾಜ್ಯದಲ್ಲಿ 4 ಸಾವಿರಕ್ಕೂ ಅಧಿಕ ಶಾಲೆಗಳು 10 ಮಕ್ಕಳಿಗಿಂತ ಕಡಿಮೆ ದಾಖಲಾತಿಯನ್ನು ಹೊಂದಿವೆ” ಎಂದು ಹೇಳಿದ್ದಾರೆ. ಸಂಯೋಜನೆ ಹೆಸರಿನಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಎಲ್ಲಾ ಶಾಲೆಗಳ ಭವಿಷ್ಯದ ಕುರಿತು ಪಾಲಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕ ತಲೆದೊರಿದೆ. ಸರ್ಕಾರವು ರಾಜ್ಯದ ಬಡಜನರ ಮಕ್ಕಳ ಶಿಕ್ಷಣದ ಆಶಾಕಿರಣವಾಗಿರುವ ಸರ್ಕಾರಿ ಶಾಲೆಗಳನ್ನು ಬಲಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಎಐಡಿಎಸ್ಓ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಕಲ್ಯಾಣ್ ಅವರು ಮಾತನಾಡಿ, “ಕರ್ನಾಟಕ ರಾಜ್ಯದಲ್ಲಿ 6,000 ಕ್ಕಿಂತ ಹೆಚ್ಚು ಏಕೋಪಾಧ್ಯಾಯ ಶಾಲೆಗಳಿವೆ. 50,000 ಕ್ಕಿಂತ ಹೆಚ್ಚು ಶಿಕ್ಷಕರನ್ನು ನೇಮಕ ಮಾಡಿಕೊಂಡಿಲ್ಲ. ಶಾಲೆಗಳಲ್ಲಿ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕ್ರಮಗಳನ್ನು ಕೈಗೊಳ್ಳದೆ, ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಮುಚ್ಚುವುದು, ‘ನೆಗಡಿ ಬಂದರೆ ಮೂಗು ಕತ್ತರಿಸಿದಂತೆ'” ಎಂದು ಹೇಳಿದ್ದಾರೆ.

ಸರ್ಕಾರವು ತನ್ನ ಈ ಅವೈಜ್ಞಾನಿಕ ಮತ್ತು ಅಪ್ರಜಾತಾಂತ್ರಿಕ ಜನವಿರೋಧಿ ನಿರ್ಧಾರವನ್ನು ಕೈಬಿಡಬೇಕು ಎಂದು ಅವರು ಆಗ್ರಹಿಸಿದ್ದಾರೆ. “ಆದ್ಯತೆಯ ಮೇರೆಗೆ ಸರ್ಕಾರವು ಶಿಕ್ಷಣಕ್ಕೆ ಬಜೆಟ್ ನಲ್ಲಿ ಅನುದಾನ ನಿಗದಿಪಡಿಸಬೇಕು. ಸರ್ಕಾರಿ ಶಾಲೆಗಳನ್ನು ಸಂಯೋಜನೆಗೊಳಿಸುವ ಬದಲು ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಅವಶ್ಯಕ ಸೌಲಭ್ಯ ನೀಡಿ ರಕ್ಷಿಸಬೇಕು” ಎಂದು ಅವರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಮುಂದಿನ ದಿನಗಳಲ್ಲಿ ಶಾಲೆಗಳ ಮುಚ್ಚುವಿಕೆಯ ವಿರುದ್ಧ ಬಲಿಷ್ಠ ಹೋರಾಟಗಳನ್ನು ಸಂಘಟಿಸುತ್ತೇವೆ. ಶಾಲೆಗಳಲ್ಲಿ ಹೋರಾಟದ ಸಮಿತಿಗಳನ್ನು ರಚಿಸಿ, ಪೋಷಕರ ಸಭೆಗಳನ್ನು ಸಂಘಟಿಸುತ್ತಿದ್ದೇವೆ. ಈ ಹೋರಾಟದಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.

ಶಾಲೆಗಳ ಸಂಯೋಜನೆಯನ್ನು ಕೈಬಿಟ್ಟು ಸಮರ್ಪಕ ಮೂಲಭೂತ ಸೌಲಭ್ಯ ನೀಡಿ ಸರ್ಕಾರಿ ಶಾಲೆಗಳನ್ನು ಬಲಪಡಿಸಿ ಎಂದು ಅವರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಇದನ್ನೂಓದಿ:  ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿಗೆ ಮಿತಿಮೀರಿ ವರ್ತಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸಿ: ಕೃಷ್ಣ ಬೈರೇಗೌಡ

ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿಗೆ ಮಿತಿಮೀರಿ ವರ್ತಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸಿ: ಕೃಷ್ಣ ಬೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...