Homeಮುಖಪುಟರಾಜಿ ಮಾಡಿಕೊಂಡ ಕಾರಣಕ್ಕೆ ಲೈಂಗಿಕ ಕಿರುಕುಳ ಪ್ರಕರಣ ರದ್ದಾಗದು : ಸುಪ್ರೀಂ ಕೋರ್ಟ್

ರಾಜಿ ಮಾಡಿಕೊಂಡ ಕಾರಣಕ್ಕೆ ಲೈಂಗಿಕ ಕಿರುಕುಳ ಪ್ರಕರಣ ರದ್ದಾಗದು : ಸುಪ್ರೀಂ ಕೋರ್ಟ್

- Advertisement -
- Advertisement -

ದೂರುದಾರರು ಮತ್ತು ಆರೋಪಿ ರಾಜಿ ಮಾಡಿಕೊಂಡ ಕಾರಣಕ್ಕೆ ಲೈಂಗಿಕ ಕಿರುಕುಳ ಪ್ರಕರಣವನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು (ನ.7) ತೀರ್ಪು ನೀಡಿದೆ.

ಅಪ್ರಾಪ್ತ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಶಿಕ್ಷಕನ ವಿರುದ್ದ ದಾಖಲಾಗಿದ್ದ ಎಫ್‌ಐಆರ್ ರದ್ದುಪಡಿಸಿದ್ದ ರಾಜಸ್ಥಾನ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಬದಿಗೊತ್ತಿದ್ದು, ಆರೋಪಿ ಶಿಕ್ಷಕನ ವಿರುದ್ದ ಕ್ರಮಕ್ಕೆ ಸೂಚಿಸಿದೆ.

ರಾಜಸ್ಥಾನದ ಗಂಗಾಪುರ ನಗರದ ದಲಿತ ಬಾಲಕಿಯೊಬ್ಬಳು 2022ರಲ್ಲಿ ಸರ್ಕಾರಿ ಶಾಲೆಯ ಶಿಕ್ಷಕ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ದೂರು ದಾಖಲಿಸಿದ್ದಳು. ಪೊಲೀಸರು ಪೋಕ್ಸೋ ಮತ್ತು ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಾಲಕಿಯ ಹೇಳಿಕೆ ಪಡೆದಿದ್ದರು.

ಈ ನಡುವೆ ಆರೋಪಿ ಶಿಕ್ಷಕ ವಿಮಲ್ ಕುಮಾರ್ ಗುಪ್ತಾ, ಸ್ಟಾಂಪ್ ಪೇಪರ್‌ನಲ್ಲಿ ಬಾಲಕಿಯ ಕುಟುಂಬದಿಂದ ಹೇಳಿಕೆ ಪಡೆದಿದ್ದ. ಆ ಹೇಳಿಕೆಯಲ್ಲಿ ತಪ್ಪು ತಿಳುವಳಿಕೆಯಿಂದ ನಾನು ಪೊಲೀಸ್ ದೂರು ದಾಖಲಿಸಿದ್ದೆ. ಇನ್ನು ಮುಂದೆ ಶಿಕ್ಷಕನ ವಿರುದ್ಧ ಯಾವುದೇ ಕ್ರಮವನ್ನು ಬಯಸುವುದಿಲ್ಲ ಎಂದು ಬಾಲಕಿ ಹೇಳಿದ್ದಳು. ಅದನ್ನು ಸ್ವೀಕರಿಸಿದ ಪೊಲೀಸರು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಆದರೆ, ಕೆಳ ನ್ಯಾಯಾಲಯ ಈ ಹೇಳಿಕೆಯನ್ನು ತಿರಸ್ಕರಿಸಿತ್ತು. ನಂತರ ಆರೋಪಿ ಹೈಕೋರ್ಟ್ ಮೆಟ್ಟಿಲೇರಿದ್ದ. ಹೈಕೋರ್ಟ್ ಬಾಲಕಿಯ ಹೇಳಿಕೆಯನ್ನು ಪರಿಗಣಿಸಿ ಆರೋಪಿ ಶಿಕ್ಷಕನ ವಿರುದ್ದದ ಎಫ್‌ಐಆರ್ ರದ್ದುಪಡಿಸಿತ್ತು.

ಇದನ್ನು ಪ್ರಶ್ನಿಸಿ ಸಾಮಾಜಿಕ ಹೋರಾಟಗಾರ ರಾಮ್‌ಜಿ ಲಾಲ್ ಬೈರ್ವಾ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಬೈರ್ವಾ ಅವರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಿ.ಟಿ ರವಿಕುಮಾರ್ ಮತ್ತು ಪಿ.ವಿ.ಸಂಜಯ್ ಕುಮಾರ್ ಅವರಿದ್ದ ಪೀಠ, ಹೈಕೋರ್ಟ್ ತೀರ್ಪನ್ನು ತಳ್ಳಿಹಾಕಿದೆ. ಆರೋಪಿ ಶಿಕ್ಷಕ ವಿರುದ್ದ ಕ್ರಮಕ್ಕೆ ಸೂಚಿಸಿದೆ.

ಇದನ್ನೂ ಓದಿ : PMLA ಅಡಿಯಲ್ಲಿ ಸರ್ಕಾರಿ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಪೂರ್ವಾನುಮತಿ ಅಗತ್ಯ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...