Homeಮುಖಪುಟಆಂಧ್ರದಲ್ಲಿ ಪರಿಸ್ಥಿತಿ ಗಂಭೀರ: ಮಹಾಮಳೆಗೆ 17 ಮಂದಿ ಮರಣ, ನೂರು ಮಂದಿ ನಾಪತ್ತೆ

ಆಂಧ್ರದಲ್ಲಿ ಪರಿಸ್ಥಿತಿ ಗಂಭೀರ: ಮಹಾಮಳೆಗೆ 17 ಮಂದಿ ಮರಣ, ನೂರು ಮಂದಿ ನಾಪತ್ತೆ

- Advertisement -
- Advertisement -

ಮಹಾಮಳೆಯಿಂದಾಗಿ ಆಂಧ್ರ ಪ್ರದೇಶ ರಾಜ್ಯ ತತ್ತರಿಸಿದೆ. 17 ಮಂದಿ ಸಾವನ್ನಪ್ಪಿದ್ದು, 100 ಮಂದಿ ನಾಪತ್ತೆಯಾಗಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪರಿಸ್ಥಿತಿ ನಿಭಾಯಿಸಲು ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ಪರಿಹಾರ ತಂಡಗಳನ್ನು ನಿಯೋಜಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ನೂರಾರು ಭಕ್ತಾದಿಗಳು ಪ್ರವಾಹದಲ್ಲಿ ಸಿಲುಕಿರುವುದನ್ನು ಧಾರ್ಮಿಕ ಕೇಂದ್ರವಾದ ತಿರುಪತಿಯ ದೃಶ್ಯಾವಳಿಗಳು ತೋರುತ್ತಿವೆ.

ಅನಂತಪುರ ಜಿಲ್ಲೆಯ ಕದಿರಿ ಪಟ್ಟಣದಲ್ಲಿ ತಡರಾತ್ರಿ ಸುರಿದ ಭಾರೀ ಮಳೆಗೆ 3 ಅಂತಸ್ತಿನ ಹಳೆಯ ಕಟ್ಟಡ ಕುಸಿದು ಮೂವರು ಮಕ್ಕಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕಟ್ಟಡದ ಅವಶೇಷಗಳೊಳಗೆ ಇನ್ನೂ 4 ಮಂದಿ ಸಿಲುಕಿದ್ದಾರೆ ಎಂದು ಸರ್ಕಲ್ ಇನ್ಸ್‌ಪೆಕ್ಟರ್ ಸತ್ಯಬಾಬು ತಿಳಿಸಿದ್ದಾರೆ.

ಘಾಟಿ ರಸ್ತೆ ಹಾಗೂ ದೇವಸ್ತಾನವಿರುವ ತಿರುಮಲ ಬೆಟ್ಟದ ಪಾದಾಚಾರಿ ಮಾರ್ಗಗಳನ್ನು ಮುಚ್ಚಲಾಗಿದೆ. ತಿರುಪತಿ ಹೊರವಲಯದ ಸ್ವರ್ಣಮುಖಿ ನದಿ ಭೋರ್ಗರೆಯುತ್ತಿದ್ದು, ಜಲಾಶಯಗಳು ತುಂಬಿ ಹರಿಯುತ್ತಿವೆ. ಪ್ರವಾಹದಲ್ಲಿ ಸಾಕಷ್ಟು ಮಂದಿ ಸಿಲುಕಿರುವ ಬಗ್ಗೆ ವರದಿಯಾಗಿದೆ.

ಮೂರು ರಾಜ್ಯ ಸಾರಿಗೆ ಬಸ್‌ಗಳು ಜಖಂಗೊಂಡಿದ್ದು, 12 ಮಂದಿಯನ್ನು ರಕ್ಷಿಸಲು ಸಾಧ್ಯವಾಗಿಲ್ಲ. ಪರಿಸ್ಥಿತಿ ನಿಭಾಯಿಸಲು ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ಪರಿಹಾರ ತಂಡಗಳನ್ನು ನಿಯೋಜಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

ಪ್ರವಾಹದಿಂದಾಗಿ ಹಲವೆಡೆ ರಸ್ತೆಗಳು ಹಾಳಾಗಿದ್ದು, ರೈಲು, ರಸ್ತೆ ಮತ್ತು ವಿಮಾನ ಸಂಚಾರಕ್ಕೆ ತೊಂದರೆಯಾಗಿದೆ. ರಾಯಲಸೀಮಾ ಪ್ರದೇಶವು ಹೆಚ್ಚು ಹಾನಿಗೊಳಗಾಗಿದೆ. ರಾಜ್ಯದ ಚಿತ್ತೂರು, ಕಡಪ, ಕರ್ನೂಲು ಮತ್ತು ಅನಂತಪುರ ಜಿಲ್ಲೆಗಳು ಹಾನಿಗೀಡಾಗಿವೆ.

ನವೆಂಬರ್ 25ರವರೆಗೆ ಕಡಪ ವಿಮಾನ ನಿಲ್ದಾಣ ಬಂದ್ ಆಗಿದ್ದು, ತಮಿಳುನಾಡು, ಕರ್ನಾಟಕ ಮತ್ತು ಕೇರಳದಲ್ಲೂ ಮಳೆಯ ಅಬ್ಬರ ಹೆಚ್ಚಾಗಿದೆ. ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಪಂಬಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚುತ್ತಿರುವ ಕಾರಣ ಪಂಬಾ ಮತ್ತು ಶಬರಿಮಲೆ ಯಾತ್ರೆಯನ್ನು ನಿಷೇಧಿಸಲಾಗಿದೆ.


ಇದನ್ನೂ ಓದಿರಿ: ಮಹಾಮಳೆಗೆ ರಾಜ್ಯದ ಹಲವೆಡೆ ಅವಘಡ: ಶಾಲಾ ರಜೆ ಘೋಷಿಸಿದ ಜಿಲ್ಲೆಗಳಿವು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...