Homeಮುಖಪುಟತಪ್ಪೊಪ್ಪಿಕೊಂಡು ಕಾಯ್ದೆ ಹಿಂಪಡೆಯಿರಿ: ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶರಿಂದ ಪ್ರಧಾನಿಗೆ ಪತ್ರ

ತಪ್ಪೊಪ್ಪಿಕೊಂಡು ಕಾಯ್ದೆ ಹಿಂಪಡೆಯಿರಿ: ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶರಿಂದ ಪ್ರಧಾನಿಗೆ ಪತ್ರ

ಇದನ್ನು ಮಾಡದಿದ್ದರೆ, ಪ್ರತಿಭಟನಾ ನಿರತ ರೈತರು ತಮ್ಮ ಟ್ರಾಕ್ಟರುಗಳೊಂದಿಗೆ ಗಣರಾಜ್ಯೋತ್ಸವದಂದು ದೆಹಲಿಗೆ ಪ್ರವೇಶಿಸುವ ಯೋಜನೆ ಮತ್ತು ಅಲ್ಲಿ ಪೋಲಿಸರು ತೆಗೆದುಕೊಳ್ಳುವ ಕ್ರಮವು ಮತ್ತೊಂದು ಜಲಿಯನ್ ವಾಲಾ ಬಾಗ್ ಅನ್ನು ಸೃಷ್ಟಿಸಬಹುದು - ಮಾರ್ಕಂಡೇಯ ಕಟ್ಜು

- Advertisement -
- Advertisement -

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಮಾರ್ಕಂಡೇಯ ಕಟ್ಜು ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಕೃಷಿ ಕಾನೂನುಗಳ ಬಗ್ಗೆ ಪತ್ರ ಬರೆದಿದ್ದು, “ಮಾಡಿರುವ ತಪ್ಪನ್ನು ಒಪ್ಪಿಕೊಂಡು ಕಾಯ್ದೆಗಳನ್ನು ಹಿಂಪಡೆಯಿರಿ” ಎಂದು ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರವು ಸುಗ್ರೀವಾಜ್ಞೆಯ ಮೂಲಕ ಮೂರು ಕೃಷಿ ಕಾನೂನುಗಳನ್ನು ಜಾರಿಗೆ ತಂದಿದ್ದು, ಇದನ್ನು ವಿರೋಧಿಸಿ ರೈತರು ಸೇರಿದಂತೆ ಚಿಂತಕರು, ಹೋರಾಟಗಾರರು, ಅಧಿಕಾರಿಗಳು, ವಿರೋಧ ಪಕ್ಷಗಳು, ಕೆಲವು ಬಿಜೆಪಿ ನಾಯಕರೂ ಕೂಡ ಈ ಕಾನೂನಗಳನ್ನು ಹಿಂಪಡೆಯುವಂತೆ ಒತ್ತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಸುಮಾರು 2 ತಿಂಗಳಿನಿಂದ ಪ್ರತಿಭಟನೆ ಮಾಡುತ್ತಿದ್ದಾರೆ.

ಈ ಕುರಿತು ಪ್ರಧಾನಿಗೆ ಪತ್ರ ಬರೆದಿರುವ ಮಾಜಿ ನ್ಯಾಯಾಧೀಶ, “ಸರ್ಕಾರವು ಈ 3 ಕಾನೂನುಗಳನ್ನು ತಕ್ಷಣ ರದ್ದುಪಡಿಸುವ ಸುಗ್ರೀವಾಜ್ಞೆಯನ್ನು ಹೊರಡಿಸಬೇಕು. ಇದನ್ನು ಮಾಡಿದರೆ ನಿಮ್ಮನ್ನು ಎಲ್ಲರೂ ಪ್ರಶಂಸಿಸುತ್ತಾರೆ. ಮತ್ತೆ ಕಾನೂನುನನ್ನು ಯಾಕೆ ಮಾಡಿದಿರಿ ಎಂದು ಕೇಳಿದರೆ, ನಾವು ತಪ್ಪು ಮಾಡಿದ್ದೇವೆ ಎಂದು ನೀವು ಹೇಳಿ. ಈಗ ತಪ್ಪನ್ನ ಅರಿತುಕೊಂಡಿರುವುದಾಗಿಯೂ ಹೇಳಿ. ಇದನ್ನು ಒಪ್ಪಿಕೊಳ್ಳುವುದರಿಂದ ನಿಮ್ಮ ಜನಪ್ರಿಯತೆ ಹೆಚ್ಚಾಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೆಎಫ್‌ಸಿ ಎಂದರೆ ಏನು ಗೊತ್ತಾ…? ನಮ್ಮ ರೈತರು ಹೇಳುತ್ತಾರೆ ಕೇಳಿ..!

“ಇದನ್ನು ಮಾಡದಿದ್ದರೆ, ಪ್ರತಿಭಟನಾ ನಿರತ ಲಕ್ಷಾಂತರ ರೈತರು ತಮ್ಮ ಟ್ರ್ಯಾಕ್ಟರ್‌ಗಳೊಂದಿಗೆ ಗಣರಾಜ್ಯೋತ್ಸವದಂದು ದೆಹಲಿಗೆ ಪ್ರವೇಶಿಸುವ ಯೋಜನೆ ಮತ್ತು ಅಲ್ಲಿ ಪೋಲಿಸರು ತೆಗೆದುಕೊಳ್ಳುವ ಕ್ರಮವು ಮತ್ತೊಂದು ಜಲಿಯನ್ ವಾಲಾ ಬಾಗ್ ಅನ್ನು ಸೃಷ್ಟಿಸಬಹುದು. ಅಥವಾ ಸೇಂಟ್ ಪೀಟರ್ಸ್‌ಬರ್ಗ್‌ನ ‘ಬ್ಲಡಿ ಸಂಡೆ’‌ (ಜನವರಿ 1905) ಅಥವಾ ಪ್ಯಾರಿಸ್‌ನ 13 ವೆಂಡೆಮೈರ್‌ಗೆ (ಅಕ್ಟೋಬರ್ 1795) ಹೋಲುವಂತಹ ಹತ್ಯಾಕಾಂಡಗಳಿಗೆ ಕಾರಣವಾಗಬಹುದು. ಯಾಕೆಂದರೆ ಸರ್ಕಾರ ಈ ಟ್ರ್ಯಾಕ್ಟರ್‌ ರ್ಯಾಲಿಗೆ ಸ್ಪಷ್ಟ ಅನುಮತಿ ನೀಡಿಲ್ಲ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

1905 ರ ಜನವರಿ 22 ರಂದು (ಬ್ಲಡಿ ಸಂಡೆ) ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ ನಿರಾಯುಧ ಪ್ರತಿಭಟನಾಕಾರರ ಮೇಲೆ ತ್ಸಾರ್ ಪಡೆಗಳು ನಡೆಸಿದ ಗುಂಡಿನ ದಾಳಿಯನ್ನು ಸೂಚಿಸುತ್ತದೆ. ಇಲ್ಲಿ ಸುಮಾರು 100 ರಿಂದ 4,000 ಜನ ಸಾವನ್ನಪ್ಪಿದ್ದರು.

13 ವೆಂಡೆಮೈರ್‌ (ಫ್ರೆಂಚ್ ರಿಪಬ್ಲಿಕನ್ ಕ್ಯಾಲೆಂಡರ್‌ನಲ್ಲಿ ಮೊದಲ ತಿಂಗಳು) ಅಥವಾ ಅಕ್ಟೋಬರ್ 5, 1795 ರಲ್ಲಿ, ನೆಪೋಲಿಯನ್ ಬೊನಪಾರ್ಟೆಯ ನೇತೃತ್ವದ ಕ್ರಾಂತಿಕಾರಿ ಪಡೆಗಳು, ಅಂದಿನ ರಾಜಮನೆತನದ ದಂಗೆಯನ್ನು ಹತ್ತಿಕ್ಕಿತು. ಈ ಹತ್ಯಾಕಾಂಡದಲ್ಲಿ ಸುಮಾರು 1,400 ರಾಜಮನೆತನದವರು ಕೊಲ್ಲಲ್ಪಟ್ಟಿದ್ದಾರೆಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ದೆಹಲಿ ಗಡಿಯಲ್ಲಿ ಹೋರಾಟದ ಹೊಸ ಭಾಷ್ಯ ಬರೆಯುತ್ತಿರುವ ದೇಶದ ರೈತರು: ಡಾ. ಪುರುಷೋತ್ತಮ ಬಿಳಿಮಲೆ

“ಈಗ ಜಾತಿ ಮತ್ತು ಧರ್ಮಗಳನ್ನು ಮೀರಿ ಒಂದಾಗಿರುವ ರೈತರನ್ನು ಎದುರು ಹಾಕಿಕೊಳ್ಳುವುದರಿಂದ ಮೋದಿಗೆ ರಾಜಕೀಯವಾಗಿ ನಷ್ಟವಾಗಬಹುದು. ಮತ್ತು ಅವರ ವಿರುದ್ಧ ಹಿಂಸಾಚಾರಕ್ಕಿಳಿಯುವುದರಿಂದ ರಾಜ್ಯಗಳಲ್ಲಿ ಗಲಭೆಗಳಾಗಬಹುದು, ಜೊತೆಗೆ ಕೃಷಿ ಕುಟುಂಬಗಳಿಂದ ಬಂದಿರುವ ಸಶಸ್ತ್ರ ಪಡೆಗಳ ಮೇಲೆ ಇದು ದೊಡ್ಡ ಪರಿಣಾಮ ಬೀರಬಹುದು” ಎಂದು ಎಚ್ಚರಿಸಿದ್ದಾರೆ.

ಹಾಗಾಗಿ “ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಳ್ಳುವಂತಹ ರೈತರ ಸಂಘಟನೆಗಳು, ಸರ್ಕಾರಿ ಪ್ರತಿನಿಧಿಗಳು ಮತ್ತು ಕೃಷಿ ತಜ್ಞರ ಸದಸ್ಯರ ಪ್ರತಿನಿಧಿಗಳಿರುವ ಉನ್ನತ ಮಟ್ಟದ ರೈತ ಆಯೋಗವೊಂದನ್ನು ನೇಮಿಸಬೇಕು. ಈ ರೈತ ಆಯೋಗವು ಹಲವಾರು ಸಭೆಗಳನ್ನು ನಡೆಸಬೇಕು. ಇದನ್ನು ಕೆಲವು ತಿಂಗಳುಗಳವರೆಗೆ ವಿಸ್ತರಿಸಬೇಕು. ನಂತರ ಹೊರಹೊಮ್ಮುವ ಒಮ್ಮತವನ್ನು ಎಲ್ಲರೂ ಒಪ್ಪುತ್ತಾರೆ, ಆಗ ಇದನ್ನು ಸಮಗ್ರ ಕಾನೂನಾಗಿ ಜಾರಿಗೊಳಿಸಬೇಕು” ಎಂದು ಸಲಹೆ ನೀಡಿದ್ದಾರೆ.


ಇದನ್ನೂ ಓದಿ: ರೈತಹೋರಾಟ: ರೈತರ ಮೀಸೆ, ದಾಡಿ ಚೆಂದಗೊಳಿಸಲು ಕುಂಡಲ್‌ ಸೇವೆಗೆ ಮುಂದಾದ ಗುರ್‌ಜಾನ್‌ ಸಿಂಗ್..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...