Homeಕರ್ನಾಟಕಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ...

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

- Advertisement -
- Advertisement -

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಕೇರಳ ಮೂಲದ ರಾವ್ ಅವರು ಕಾನ್ಫಿಡೆಂಟ್ ಗ್ರೂಪ್ ಎಂಬ ಪ್ರಮುಖ ರಿಯಲ್ ಎಸ್ಟೇಟ್ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಂಪನಿಯ ಸಂಸ್ಥಾಪಕರಾಗಿದ್ದರು.

ಇಂದು ಸಂಜೆ ಬೆಂಗಳೂರಿನ ಆನೇಪಾಳ್ಯದಲ್ಲಿರೋ ತಮ್ಮ ಕಚೇರಿಯಲ್ಲಿ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಸ್ಥಳಕ್ಕೆ ಅಶೋಕನಗರ ಠಾಣೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ತಮ್ಮ ಕುಟುಂಬದ ಮೇಲೆ ಪದೇ ಪದೆ ಆದಾಯ ತೆರಿಗೆ ಇಲಾಖೆ ನಡೆಸುತ್ತಿದ್ದ ದಾಳಿಗೆ ಹೆದರಿ ಸಿಜೆ ರಾಯ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. 

ಇಂದು ಸಹ ಐಟಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಪಿಸ್ತೂಲ್​​ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

2005ರಲ್ಲಿ ಆರಂಭವಾದ ಈ ಸಂಸ್ಥೆ, 65ಕ್ಕೂ ಹೆಚ್ಚು ಐಷಾರಾಮಿ ಯೋಜನೆಗಳನ್ನು ಪೂರ್ಣಗೊಳಿಸಿದೆ. ವಸತಿ ಅಪಾರ್ಟ್ಮೆಂಟ್, ವಿಲ್ಲಾಗಳು, ವಾಣಿಜ್ಯ ಸಂಕೀರ್ಣಗಳು, ಶಿಕ್ಷಣ, ಆತಿಥ್ಯ ಮತ್ತು ಮನರಂಜನಾ ಕ್ಷೇತ್ರಗಳಲ್ಲಿ ಕಾನ್ಫಿಡೆಂಟ್ ಗ್ರೂಪ್ ಕಾರ್ಯನಿರ್ವಹಿಸುತ್ತಿದೆ.

ಸಿಜೆ ರಾಯ್ ಅವರು ಸ್ವಿಟ್ಜರ್ಲೆಂಡ್‌ನ SBS ಬಿಸಿನೆಸ್ ಸ್ಕೂಲ್‌ನಿಂದ ಬಿಸಿನೆಸ್ ಅಡ್ಮಿನಿಸ್ಟ್ರೇಷನ್‌ನಲ್ಲಿ ಡಾಕ್ಟರೇಟ್ ಪಡೆದಿದ್ದರು. ಕಾನ್ಫಿಡೆಂಟ್ ಗ್ರೂಪ್ ಎಂಬ ಸಂಸ್ಥೆ ಸ್ಥಾಪಿಸಿ, ಕೇರಳ ಮತ್ತು ಬೆಂಗಳೂರಿನಲ್ಲಿ ಪ್ರಮುಖ ಐಷಾರಾಮಿ ಯೋಜನೆಗಳನ್ನು ಪೂರ್ಣಗೊಳಿಸಿದ್ದು, ದುಬೈ ಮಾರುಕಟ್ಟೆಗೂ ವಿಸ್ತರಿಸಿದ್ದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...