Homeಮುಖಪುಟಲೋಕಸಭೆ | ನಾಯ್ಡು, ಪವಾರ್‌ರನ್ನು ಸ್ವಚ್ಛಗೊಳಿಸಿದ 'ವಾಶಿಂಗ್ ಮೆಷಿನ್' ಕುರಿತು ಚರ್ಚೆಗೆ ನಿಲುವಳಿ ಸೂಚನೆ

ಲೋಕಸಭೆ | ನಾಯ್ಡು, ಪವಾರ್‌ರನ್ನು ಸ್ವಚ್ಛಗೊಳಿಸಿದ ‘ವಾಶಿಂಗ್ ಮೆಷಿನ್’ ಕುರಿತು ಚರ್ಚೆಗೆ ನಿಲುವಳಿ ಸೂಚನೆ

- Advertisement -
- Advertisement -

ಕಾಂಗ್ರೆಸ್ ಸಂಸದ ಮಾಣಿಕಂ ಟ್ಯಾಗೋರ್ ಅವರು ಸೋಮವಾರ (ಡಿ.9) ಲೋಕಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿದ್ದು, ಎನ್‌ಡಿಎ ಮಿತ್ರ ಪಕ್ಷಗಳ ನಾಯಕರಾದ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್‌ಗೆ ಇಡಿ, ಸಿಬಿಐ ಕ್ಲೀನ್ ಚಿಟ್ ನೀಡಿರುವ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ.

ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಯಂತಹ ಕೇಂದ್ರೀಯ ಸಂಸ್ಥೆಗಳ ಕಾರ್ಯನಿರ್ವಹಣೆಯ ಕುರಿತು ಚರ್ಚೆಗೆ ಟ್ಯಾಗೋರ್ ಆಗ್ರಹಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಟ್ಯಾಗೋರ್, “ಚಂದ್ರಬಾಬು ನಾಯ್ಡು ಮತ್ತು ಅಜಿತ್ ಪವಾರ್ ಅವರನ್ನು ಸ್ವಚ್ಛಗೊಳಿಸಿದ ಮೋದಿಯವರ ಎರಡು ‘ವಾಶಿಂಗ್ ಮೆಷಿನ್‌’ಗಳ ಕುರಿತು ನಾನು ನಿಲುವಳಿ ಸೂಚನೆ ಮಂಡಿಸಿದ್ದೇನೆ. ನಾವು ಇಡಿ, ಸಿಬಿಐಗಳ ಕಾರ್ಯ ನಿರ್ವಹಣೆಯ ಬಗ್ಗೆ ಚರ್ಚಿಸಲು ಬಯಸಿದ್ದೇವೆ” ಎಂದಿದ್ದಾರೆ.

ನಾಯ್ಡು ಮತ್ತು ಪವಾರ್‌ಗೆ ಕ್ಲೀನ್ ಚಿಟ್ ನೀಡುವಾಗ ‘ಸೂಕ್ತ ಪ್ರಕ್ರಿಯೆ’ ಅನುಸರಿಸಲಾಗಿದೆಯೇ? ಎಂದು ಕಾಂಗ್ರೆಸ್ ನಾಯಕ ಪ್ರಶ್ನಿಸಿದ್ದು, ಈ ಎರಡೂ ಸಂಸ್ಥೆಗಳ ವಿಶ್ವಾಸಾರ್ಹತೆ ‘ಅಪಾಯದಲ್ಲಿದೆ’ ಎಂದು ಹೇಳಿದ್ದಾರೆ.

ಮಾಣಿಕಂ ಟ್ಯಾಗೋರ್ ಅವರ ನಿಲುವಳಿ ಸೂಚನೆ ಹೀಗಿದೆ : “ಗೌರವಾನ್ವಿತ (ಲೋಕಸಭಾ) ಸ್ಪೀಕರ್ ಸರ್ (ಓಂ ಬಿರ್ಲಾ), ಹೈ ಪ್ರೊಫೈಲ್ ಪ್ರಕರಣಗಳಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಕ್ಲೀನ್ ಚಿಟ್ ನೀಡಿದ್ದಕ್ಕಾಗಿ ನಾನು ಕಳವಳ ವ್ಯಕ್ತಪಡಿಸುತ್ತೇನೆ. 1000 ಕೋಟಿ ರೂಪಾಯಿಯ ಐಟಿ ಬೇನಾಮಿ ಆಸ್ತಿ ಪ್ರಕರಣ ಮತ್ತು 371 ಕೋಟಿ ರೂ. ಮೌಲ್ಯದ ಕೌಶಲ ಅಭಿವೃದ್ಧಿ ಹಗರಣದಲ್ಲಿ ಕ್ಲೀನ್ ಚಿಟ್‌ ನೀಡಿರುವುದು ನಮ್ಮ ತನಿಖಾ ಸಂಸ್ಥೆಗಳ ನ್ಯಾಯಸಮ್ಮತತೆಯ ಬಗ್ಗೆ ಅನುಮಾನಗಳನ್ನು ಹುಟ್ಟು ಹಾಕುತ್ತದೆ.”

ಬಿಜೆಪಿ ಮೈತ್ರಿ ಪಕ್ಷವಾದ ಎನ್‌ಸಿಪಿಯ ನಾಯಕ ಅಜಿತ್ ಪವಾರ್ ಅವರು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಒಂದೇ ದಿನದಲ್ಲಿ, ಬೇನಾಮಿ ಆಸ್ತಿ ವಹಿವಾಟು ತಡೆ ಮೇಲ್ಮನವಿ ನ್ಯಾಯಮಂಡಳಿಯು ಅಜಿತ್ ಪವಾರ್ ಮತ್ತು ಅವರ ಕುಟುಂಬದ ವಿರುದ್ಧದ ಬೇನಾಮಿ ಆಸ್ತಿ ಮಾಲೀಕತ್ವದ ಆರೋಪವನ್ನು ವಜಾಗೊಳಿಸಿದೆ.

ನ್ಯಾಯಾಲಯದ ತೀರ್ಪಿನ ನಂತರ, ಆದಾಯ ತೆರಿಗೆ ಇಲಾಖೆಯು 2021 ರ ಬೇನಾಮಿ ವಹಿವಾಟು ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ 1,000 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಅಜಿತ್ ಕುಮಾರ್ ಅವರಿಗೆ ವಾಪಸ್ ನೀಡಿದೆ.

ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದ ಪಕ್ಷ ಟಿಡಿಪಿಯ ಮುಖ್ಯಸ್ಥ ಹಾಗೂ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ವಿರುದ್ದದ ಕೌಶಲ್ಯಾಭಿವೃದ್ಧಿ ನಿಗಮದ 371 ಕೋಟಿ ರೂಪಾಯಿ ಹಗರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಕ್ಲೀನ್ ಚಿಟ್ ನೀಡಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದಿನ ಜಗನ್‌ಮೋಹನ್‌ ರೆಡ್ಡಿ ಸರ್ಕಾರ ರಚಿಸಿದ್ದ ಸಿಐಡಿ ತನಿಖೆ ಆಧರಿಸಿ ಚಂದ್ರಬಾಬು ನಾಯ್ಡು ಅವರನ್ನು 2023ರಲ್ಲಿ ಬಂಧಿಸಲಾಗಿತ್ತು. 53 ದಿನಗಳ ಕಾಲ ಜೈಲಿನಲ್ಲಿದ್ದ ಅವರು ಅಕ್ಟೋಬರ್ 31, 2023ರಂದು ರಂದು ಜಾಮೀನು ಪಡೆದು ಹೊರ ಬಂದಿದ್ದರು.

ಇದನ್ನೂ ಓದಿ : ರಾಜ್ಯಸಭಾ ಸ್ಪೀಕರ್ ಧಂಖರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ವಿಪಕ್ಷಗಳ ತಯಾರಿ – ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...