Homeಕರ್ನಾಟಕ'ನೂರು 'ಮನ್ ಕಿ ಬಾತ್' ಮುಗಿಸಿದ್ದಕ್ಕೆ ಅಭಿನಂದನೆಗಳು, ಈಗಲಾದರೂ 'ಜನ್ ಕಿ ಬಾತ್' ಕೇಳುತ್ತಿರಾ?': ಮೋದಿಗೆ...

‘ನೂರು ‘ಮನ್ ಕಿ ಬಾತ್’ ಮುಗಿಸಿದ್ದಕ್ಕೆ ಅಭಿನಂದನೆಗಳು, ಈಗಲಾದರೂ ‘ಜನ್ ಕಿ ಬಾತ್’ ಕೇಳುತ್ತಿರಾ?’: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್‌ ಕೀ ಬಾತ್‌‘ ರೆಡಿಯೊ ಕಾರ್ಯಕ್ರಮ ಇಂದು (ರವಿವಾರ) ನೂರು ಸಂಚಿಕೆ ಪೂರ್ಣಗೊಳಿಸಿದೆ. ಈ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಮೋದಿ ಅವರಿಗೆ ಅಭಿನಂದನೆ ತಿಳಿಸಿ, ಈಗಲಾದರೂ ”ಜನ್‌ ಕಿ ಬಾತ್” ಕೇಳುತ್ತಿರಾ? ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಜನಸಾಮಾನ್ಯರ ಎದುರಿಸುತ್ತಿರುವ ಸಂಕಷ್ಟಗಳ ಕುರಿತು ಪ್ರಶ್ನೆ ಮಾಡಿದ್ದಾರೆ.

”ಮಾನ್ಯ ನರೇಂದ್ರ ಮೋದಿ ಅವರೇ ನೀವು ನೂರು ‘‘ಮನ್ ಕಿ ಬಾತ್” ಕಾರ್ಯಕ್ರಮವನ್ನು ಮುಗಿಸಿದ್ದಕ್ಕೆ ಅಭಿನಂದನೆಗಳು. ಈಗಲಾದರೂ ‘‘ಜನ್ ಕಿ ಬಾತ್” ಕೇಳುತ್ತಿರಾ?”

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್ ಗೆ 125 ಡಾಲರ್ ಇದ್ದಾಗ ದೇಶದಲ್ಲಿ ಪೆಟ್ರೋಲ್ ಬೆಲೆ ರೂ. 57 ಇತ್ತು, ಈಗ ಕಚ್ಚಾ ತೈಲದ ಬೆಲೆ ಬ್ಯಾರಲ್ ಗೆ 54.77 ಡಾಲರ್ ಇರುವಾಗ ಪೆಟ್ರೋಲ್ ಬೆಲೆ ರೂ. 102 ರೂಪಾಯಿ ಆಗಿರುವುದು ಯಾಕೆ?

ನಾ ಖಾವುಂಗಾ ನಾ ಖಾನೆ ದೂಂಗಾ ಎಂದು ನೀವು ಹೇಳಿದರೂ, ನಿಮ್ಮ ಪಕ್ಷದ ಸಚಿವರೇ ಕಮಿಷನ್ ಹಣ ತಿಂದು ಜೈಲಿಗೆ ಹೋಗುತ್ತಿರುವುದೇಕೆ?

ರಾಜ್ಯದ ಸಚಿವರು ಸರ್ಕಾರಿ ಗುತ್ತಿಗೆಗಳಲ್ಲಿ 40% ಕಮಿಷನ್ ಕೇಳುತ್ತಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ನಿಮಗೆ ಪತ್ರ ಬರೆದಿದ್ದರೂ ಅದಕ್ಕೆ ಉತ್ತರಿಸುವ ಧೈರ್ಯ ತೋರಿಲ್ಲ ಯಾಕೆ?

ರಾಷ್ಟ್ರೀಕೃತ ಬ್ಯಾಂಕುಗಳು ಸೇರಿದಂತೆ ಒಂದು ಲಕ್ಷದ ವರೆಗಿನ ರೈತರ ಸಾಲವನ್ನು ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟದಲ್ಲಿಯೇ ಮನ್ನಾ ಮಾಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದರೂ ಮನ್ನಾ ಮಾಡದೆ ಇರುವುದು ಯಾಕೆ?

ಇದನ್ನೂ ಓದಿ: ಮೋದಿ 100ನೇ ‘ಮನ್ ಕಿ ಬಾತ್‌’ಗೆ ಸಂಸದೆ ಮೊಯಿತ್ರಾಯಿಂದ ಎರಡು ಪ್ರಶ್ನೆ

ರೈತರ ಸಾಲ ಮನ್ನಾ ಮಾಡಲು ನಿರಾಕರಿಸುತ್ತಿರುವ ನಿಮ್ಮ ಸರ್ಕಾರ ಉದ್ಯಮಿಗಳ ಸಾಲ ಮನ್ನಾ ಮಾಡುತ್ತಿರುವುದೇಕೆ?

ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ತೆರಿಗೆ ಮತ್ತು ಸುಂಕಗಳ ರೂಪದಲ್ಲಿ 4 ಲಕ್ಷದ 75 ಸಾವಿರ ಕೋಟಿ ರೂಪಾಯಿ ನೀಡಿದರೂ ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆ ರೂಪದಲ್ಲಿ ರೂ.50,257 ಕೋಟಿ ಮಾತ್ರ ಕರ್ನಾಟಕ ರಾಜ್ಯಕ್ಕೆ ನೀಡುತ್ತಿರುವುದು ಯಾಕೆ?

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಸಿಗಬೇಕಾಗಿರುವ ತೆರಿಗೆ ಹಂಚಿಕೆಯ ಪಾಲು ಶೇಕಡಾ 4.72ರಿಂದ ಶೇಕಡಾ 3.64ಕ್ಕೆ ಇಳಿದದ್ದು ಯಾಕೆ?

ಕೇಂದ್ರ ಹಣಕಾಸು ಆಯೋಗ ಕರ್ನಾಟಕಕ್ಕೆ ಪರಿಹಾರ ರೂಪದಲ್ಲಿ ರೂ.5,495 ಕೋಟಿ ವಿಶೇಷ ಅನುದಾನ ನೀಡಬೇಕೆಂದು ಶಿಫಾರಸು ಮಾಡಿದ್ದರೂ ಕೇಂದ್ರ ಹಣಕಾಸು ಸಚಿವರು ನಿರಾಕರಿಸಿದ್ದು ಯಾಕೆ? 2013ರಲ್ಲಿ ಕೇಂದ್ರ ಅನುದಾನಿತ ಯೋಜನೆಗಳಲ್ಲಿ ಶೇಕಡಾ 25ರಷ್ಟು ಮಾತ್ರ ಇದ್ದ ರಾಜ್ಯದ ಪಾಲು 2021-22ರಲ್ಲಿ ಶೇಕಡಾ 55ಕ್ಕೆ ಹೆಚ್ಚಿದ್ದು ಯಾಕೆ?

ಮಳೆ ಹಾನಿಗಾಗಿ ರಾಜ್ಯ ಸರ್ಕಾರ ರೂ.35,000 ಕೋಟಿ ಪರಿಹಾರ ಕೇಳಿದ್ದರೂ ಡಬಲ್ ಎಂಜಿನ್ ಸರ್ಕಾರ ಕೇವಲ ರೂ.1,895 ಕೋಟಿ ನೀಡಿದ್ದು ಯಾಕೆ?

ರೈತರ ಬೆಳೆಗಳ ಬೆಲೆ ಕುಸಿತ ತಡೆಯಲು ಬೆಂಬಲ ಬೆಲೆಯ ಮೂಲಕ ಮಾರುಕಟ್ಟೆ ಮಧ್ಯಪ್ರವೇಶಕ್ಕೆ ನೀಡಲಾಗುತ್ತಿದ್ದ ಅನುದಾನವನ್ನು ರೂ.1,500 ಕೋಟಿ ಗಳಿಂದ ಒಂದು ಲಕ್ಷ ರೂಪಾಯಿಗಳಿಗೆ ಇಳಿಸಿದ್ದು ಯಾಕೆ?

ಪಿಎಸ್ ಐ ನೇಮಕದಲ್ಲಿ ಅಂದಾಜು ರೂ.300 ಕೋಟಿಗೂ ಮೀರಿ ಲಂಚದ ಅವ್ಯವಹಾರ ನಡೆದು ಉದ್ಯೋಗದ ಅವಕಾಶ ಕಳೆದುಕೊಂಡಿರುವ ಸುಮಾರು 54 ಸಾವಿರ ಯುವಜನರ ಮನದ ಮಾತಿಗೆ ನೀವು ಪ್ರತಿಕ್ರಿಯಿಸದೆ ಮೌನವಾಗಿರುವುದು ಯಾಕೆ?

ಪ್ರಧಾನಿ ಅವರೇ ನೀವು ರೋಡ್ ಶೋ ನಡೆಸಿರುವ ಬೆಂಗಳೂರು ರಸ್ತೆಗಳಲ್ಲಿರುವ 25,000 ಗುಂಡಿಗಳನ್ನು ಮುಚ್ಚಲು ರೂ.7200 ಕೋಟಿ, ಅಂದರೆ ಒಂದು ಗುಂಡಿಗೆ ತಲಾ ರೂ.9.20 ಲಕ್ಷ ಖರ್ಚು ಮಾಡಿದರೂ ಗುಂಡಿಗಳು ಉಳಿದುಕೊಂಡಿರುವುದು ಯಾಕೆ?

ಗ್ರಾಮೀಣ ಭಾಗಗಳಲ್ಲಿ ಉದ್ಯೋಗ ಸಂಜೀವಿನಿಯಾಗಿರುವ ಯುಪಿಎ ಸರ್ಕಾರದ ಹೆಮ್ಮೆಯ ಕಾರ್ಯಕ್ರಮವಾಗಿರುವ ನರೇಗಾ ಯೋಜನೆಗೆ ಈ ಸಾಲಿನ ಬಜೆಟ್ ನಲ್ಲಿ ಶೇಕಡಾ 21.66ರಷ್ಟು ಅಂದರೆ ರೂ.60,000 ಕೋಟಿಯಷ್ಟು ಅನುದಾನವನ್ನು ಡಬಲ್ ಎಂಜಿನ್ ಸರ್ಕಾರ ಕಡಿತಗೊಳಿಸಿದ್ದು ಯಾಕೆ?

ನಮ್ಮ ಸರ್ಕಾರದ ಐದು ವರ್ಷಗಳ ಆಡಳಿತದಲ್ಲಿ ಮಾಡಿದ್ದ ಒಟ್ಟು ಸಾಲ ರೂ.1,16,512 ಕೋಟಿ, ಕಳೆದ ನಾಲ್ಕು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಒಟ್ಟು ಸಾಲ ರೂ.3,22,000 ಕೋಟಿ. ಡಬಲ್ ಎಂಜಿನ್ ಸರ್ಕಾರ ಕರ್ನಾಟಕ ರಾಜ್ಯವನ್ನು ಸಾಲಗಾರ ರಾಜ್ಯ ಮಾಡಿದ್ದು ಯಾಕೆ? ಎಂದು #ಕರ್ನಾಟಕದ_ಜನ್‌ಕಿಬಾತ್ ಎಂದು ಹ್ಯಾಶ್‌ಟ್ಯಾಗ್ ಬಳಸಿ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....