Homeಕರ್ನಾಟಕವಿದ್ಯುತ್ ಕಳ್ಳತನ ಒಪ್ಪಿಕೊಂಡ ಕುಮಾರಸ್ವಾಮಿಗೆ ಅಭಿನಂದನೆ: ಡಿಕೆ ಶಿವಕುಮಾರ್

ವಿದ್ಯುತ್ ಕಳ್ಳತನ ಒಪ್ಪಿಕೊಂಡ ಕುಮಾರಸ್ವಾಮಿಗೆ ಅಭಿನಂದನೆ: ಡಿಕೆ ಶಿವಕುಮಾರ್

- Advertisement -
- Advertisement -

ಅಚಾತುರ್ಯವೋ, ಕಳ್ಳತನವೋ ಒಟ್ಟಿನಲ್ಲಿ ವಿದ್ಯುತ್ ಕಳ್ಳತನದ ಬಗ್ಗೆ ಕುಮಾರಸ್ವಾಮಿ ಅವರು ಒಪ್ಪಿಕೊಂಡು, ದಂಡ ಕಟ್ಟುತ್ತೇನೆ ಎಂದು ಹೇಳಿರುವುದು ಅಭಿನಂದನೀಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಕುಮಾರಸ್ವಾಮಿ ಅವರು ಮನೆಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಮಾಡಿಕೊಂಡಿದ್ದಾರೆ ಎಂಬ ಬಗ್ಗೆ ಮಾಧ್ಯಮಗಳ ವರದಿ ಹಾಗೂ ಕಾಂಗ್ರೆಸ್ ಪಕ್ಷದ ‘ಎಕ್ಸ್’ ಖಾತೆಯಲ್ಲಿ ಮಾಡಿರುವ ಆರೋಪ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ವಿಧಾನಸೌಧ ಹಾಗೂ ಕೆಪಿಸಿಸಿ ಕಚೇರಿ ಬಳಿ ಅವರು ಪ್ರತಿಕ್ರಿಯಿಸಿದ ಅವರು, ”ಕುಮಾರಸ್ವಾಮಿ ಮನೆಗೆ ವಿದ್ಯುತ್ ಕಳವು ವಿಚಾರವನ್ನು ಮಾಧ್ಯಮಗಳಲ್ಲಿ ಗಮನಿಸಿದೆ. ಅವರ ನೆರೆಹೊರೆಯವರೇ ಅಕ್ರಮ ವಿದ್ಯುತ್ ಸಂಪರ್ಕದ ವಿಡಿಯೋ ಮಾಡಿ ಮಾಧ್ಯಮಗಳಿಗೆ ನೀಡಿದ್ದಾರೆ. ಆನಂತರ ನಮ್ಮ ಪಕ್ಷದ ಸಾಮಾಜಿಕ ಜಾಲತಾಣ ಘಟಕ ಏನು ಕೆಲಸ ಮಾಡಬೇಕೊ ಅದನ್ನು ಮಾಡಿದೆ. ಅವರ ಪಕ್ಷದ ಸೋಶಿಯಲ್ ಮೀಡಿಯಾದಲ್ಲಿ ಬೇಕಾದಷ್ಟು ಬರೆದಂತೆ, ನಮ್ಮ ಪಕ್ಷದವರು ಏನು ಕೆಲಸ ಮಾಡಬೇಕೋ ಅದನ್ನು ಮಾಡಿದ್ದಾರೆ. ಅವರು ಮಾಡೋದನ್ನು ನೋಡಿಕೊಂಡು ಸುಮ್ಮನೆ ಕುಳಿತುಕೊಳ್ಳಲು ಆಗುತ್ತದೆಯೇ?” ಎಂದು ಮರುಪ್ರಶ್ನಿಸಿದರು.

ಕುಮಾರಸ್ವಾಮಿ ಅವರು ಈ ರೀತಿಯ ಕೆಲಸ ಮಾಡಿರುವುದು ತಪ್ಪಲ್ಲವೇ ಎಂದು ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ”ವಿದ್ಯುತ್ ಕಳ್ಳತನ ಮಾಡಬಾರದು, ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ನಮ್ಮಂತವವರೇ ಹೀಗೆ ಕಳವು ಮಾಡಿದರೆ ತಪ್ಪಲ್ಲವೇ? ಸಂಬಂಧಿಸಿದ ಇಲಾಖೆಯವರು ಏನು ಕ್ರಮ ತೆಗೆದುಕೊಳ್ಳುತ್ತಾರೋ ನೋಡೋಣ. ಈ ವಿಚಾರವಾಗಿ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ, ನಮಗೆ ಅದರ ಅವಶ್ಯಕತೆಯೂ ಇಲ್ಲ ಮತ್ತು ಸಮಯವೂ ಇಲ್ಲ. ಬೆಸ್ಕಾಂನವರು ಕ್ರಮ ತೆಗೆದುಕೊಳ್ಳುತ್ತಾರೆ” ಎಂದರು.

ಇದನ್ನೂ ಓದಿ: ಮಾಜಿ ಸಿಎಂಗೆ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ: HDK ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್: ಎನ್‌ಡಿಎ ಮೈತ್ರಿ ಪಕ್ಷದ ನಾಯಕ ರಾಜೀನಾಮೆ

0
ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬಿಜೆಪಿಯ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಅವರ ಪುತ್ರನಿಗೆ ಟಿಕೆಟ್ ನೀಡಿದ ಬೆನ್ನಲ್ಲಿ ಅಸಮಾಧಾನವನ್ನು ವ್ಯಕ್ತಪಡಿಸಿ ಎನ್‌ಡಿಎ ಮೈತ್ರಿ ಪಕ್ಷ ಆರ್‌ಎಲ್‌ಡಿಯ ರಾಷ್ಟ್ರೀಯ ವಕ್ತಾರ ರೋಹಿತ್...