Homeಮುಖಪುಟಪ್ರಾಮಾಣಿಕ ರಾಜಕೀಯಕ್ಕೆ ಸಿಕ್ಕ ಜಯ: ಗುಜರಾತ್ ಜನರಿಗೆ ಧನ್ಯವಾದ ಅರ್ಪಿಸಿದ ಕೇಜ್ರಿವಾಲ್

ಪ್ರಾಮಾಣಿಕ ರಾಜಕೀಯಕ್ಕೆ ಸಿಕ್ಕ ಜಯ: ಗುಜರಾತ್ ಜನರಿಗೆ ಧನ್ಯವಾದ ಅರ್ಪಿಸಿದ ಕೇಜ್ರಿವಾಲ್

ಮೊದಲ ಬಾರಿಯೇ 27 ಸ್ಥಾನಗಳಲ್ಲಿ ಜಯಿಸುವ ಮೂಲಕ ಆಪ್ ಸೂರತ್‌ ಮಹಾನಗರ ಪಾಲಿಕೆಯ ವಿರೋಧ ಪಕ್ಷವಾಗಿ ಹೊರಹೊಮ್ಮಿದೆ.

- Advertisement -
- Advertisement -

ಸೂರತ್ ಸ್ಥಳೀಯ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷದ ಗಮನಾರ್ಹ ಸಾಧನೆಯು ಗುಜರಾತ್‌ನಲ್ಲಿನ ಹೊಸ ರಾಜಕೀಯ ಆರಂಭದ ಸೂಚನೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ಇದು ಪ್ರಾಮಾಣಿಕತೆಗೆ ಸಿಕ್ಕ ಜಯವಾಗಿದ್ದು, ಆಯ್ಕೆಯಾಗಿರುವ ಪ್ರತಿಯೊಬ್ಬ ಆಪ್ ಅಭ್ಯರ್ಥಿಯು ಪ್ರಾಮಾಣಿಕತೆಯಿಂದ ತಮ್ಮ ಜವಾಬ್ದಾರಿ ನಿರ್ವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಸೂರತ್ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಆಪ್ 27 ಸ್ಥಾನಗಳಲ್ಲಿ ಜಯಗಳಿಸಿದೆ. ಗುಜರಾತ್‌ನ ಒಟ್ಟು 576 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 483 ಸ್ಥಾನಗಳಿಸಿ ಮಹತ್ವದ ಸಾಧನೆಗೈದಿದೆ. ಕಾಂಗ್ರೆಸ್ ಕೇವಲ 55 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡು ಮುಖಭಂಗ ಅನುಭವಿಸಿದೆ. ಆದರೆ ಮೊದಲ ಬಾರಿಯೇ 27 ಸ್ಥಾನಗಳಲ್ಲಿ ಜಯಿಸುವ ಮೂಲಕ ಆಪ್ ಭರ್ಜರಿ ಆರಂಭ ಮಾಡಿದೆ. ಸೂರತ್‌ ಮಹಾನಗರ ಪಾಲಿಕೆಯ ಅಧಿಕೃತ ವಿರೋಧ ಪಕ್ಷವಾಗಿ ಹೊರಹೊಮ್ಮಿದೆ.

ಪಕ್ಷದ ವಿಜಯದ ಕುರಿತು ವಿಡಿಯೋ ಸಂದೇಶ ನೀಡಿರುವ ಅರವಿಂದ್ ಕೇಜ್ರಿವಾಲ್ “ಹೊಸ ರಾಜಕೀಯವನ್ನು ಪ್ರಾರಂಭಿಸಿದ ಗುಜರಾತ್ ಜನರಿಗೆ ಅಭಿನಂದನೆಗಳು. ಆಮ್ ಆದ್ಮಿ ಪಕ್ಷದ ಗುಜರಾತ್ ಘಟಕದ ಎಲ್ಲ ಕಾರ್ಯಕರ್ತರ ಶ್ರಮಕ್ಕೆ ನಮಸ್ಕಾರ ಮತ್ತು ಎಲ್ಲರಿಗೂ ಅಭಿನಂದನೆಗಳು. ಭವಿಷ್ಯದಲ್ಲಿ ಉತ್ತಮ ರಾಜಕೀಯವನ್ನು ಸ್ವಾಗತಿಸಲು ಈಗ ಇಡೀ ಗುಜರಾತ್ ಸಿದ್ಧವಾಗಿದೆ ಎಂದು ಸೂರತ್‌ನ ಮತದಾರರು ವ್ಯಕ್ತಪಡಿಸಿದ್ದಾರೆ” ಎಂದು ತಿಳಿಸಿದ್ದಾರೆ.

“125 ವರ್ಷ ಇತಿಹಾಸವಿರುವ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿ ಜನತೆ ಆಪ್ ಕೈ ಹಿಡಿದಿದ್ದಾರೆ. ಆಪ್‌ನಿಂದ ಆಯ್ಕೆಯಾದ ಪ್ರತಿಯೊಬ್ಬ ಅಭ್ಯರ್ಥಿಯು ಪ್ರಾಮಾಣಿಕತೆಯಿಂದ ತಮ್ಮ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಗುಜರಾತ್‌ನ ಜನರಿಗೆ ಅಭಿನಂದನೆ ತಿಳಿಸಲು ಫೆಬ್ರವರಿ 26 ರಂದು ಸೂರತ್‌ಗೆ ಭೇಟಿ ನೀಡಲಿದ್ದೇನೆ” ಎಂದು ತಿಳಿಸಿದ್ದಾರೆ.

ಆಪ್‌ನ ಜಯವು ಗುಜರಾತ್‌ನಲ್ಲಿ ಹೊಸ ರಾಜಕೀಯದ ಸೂಚನೆಯಾಗಿದೆ. ಪ್ರಾಮಾಣಿಕ ರಾಜಕಾರಣ, ಉತ್ತಮ ಶಾಲೆಗಳಿಗಾಗಿ ರಾಜಕಾರಣ, ಕಡಿಮೆ ದರದಲ್ಲಿ 24 ಗಂಟೆಗಳ ವಿದ್ಯುತ್ ನೀಡುವುದು ನಮ್ಮ ಆದ್ಯತೆ. ಜನರ ಸಹಭಾಗಿತ್ವದೊಂದಿಗೆ ಗುಜರಾತ್‌ ಅನ್ನು ಅಭಿವೃದ್ದಿಪಡಿಸುತ್ತೇವೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಪಮೇಲಾ-ಡ್ರಗ್ಸ್ ಪ್ರಕರಣ : ಬಂಗಾಳ ಬಿಜೆಪಿ ನಾಯಕ ರಾಕೇಶ್ ಅರೆಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...