Homeಕರ್ನಾಟಕ5ನೇ ಗ್ಯಾರಂಟಿ ಪ್ರಕಟಿಸಿದ ಕಾಂಗ್ರೆಸ್; ಅಧಿಕಾರಕ್ಕೆ ಬಂದರೆ ಎಲ್ಲ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ

5ನೇ ಗ್ಯಾರಂಟಿ ಪ್ರಕಟಿಸಿದ ಕಾಂಗ್ರೆಸ್; ಅಧಿಕಾರಕ್ಕೆ ಬಂದರೆ ಎಲ್ಲ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ

- Advertisement -
- Advertisement -

ರಾಜ್ಯ ಕಾಂಗ್ರೆಸ್ ಪಕ್ಷವು ತನ್ನ ಐದನೇ ಗ್ಯಾರಂಟಿಯನ್ನು ಘೋಷಣೆ ಮಾಡಿದ್ದು, ಈ ಚುನಾವಣೆಯಲ್ಲಿ ಮಹಿಳಾ ಮತದಾರರನ್ನು ಸೆಳೆಯಲು ಯತ್ನಿಸಿದೆ. ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು ಕಾಂಗ್ರೆಸ್ ಘೋಷಿಸಿತ್ತು.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಎಲ್ಲ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಸಂಪೂರ್ಣ ಉಚಿತ ಪ್ರಯಾಣ ಮಾಡಲು ಯೋಜನೆ ಜಾರಿಗೆ ಜಾರಿಗೊಳಿಸಲಾಗುವುದು ಎಂದಿದೆ. ಆ ಮೂಲಕ ರಾಜ್ಯದಲ್ಲಿರುವ 2,63,98,483 ಮಹಿಳಾ ಮತದಾರರನ್ನು ತನ್ನತ್ತ ಸೆಳೆದುಕೊಳ್ಳಲು ಯೋಜನೆ ರೂಪಿಸಿದೆ.

ಇದು ಮಹಿಳೆಯರಿಗಾಗಿಯೇ ಘೋಷಿಸಿರುವ ಕಾಂಗ್ರೆಸ್‌ನ ಎರಡನೇ ದೊಡ್ಡ ಯೋಜನೆಯಾಗಿದೆ. ಈ ಮೊದಲು ಕಾಂಗ್ರೆಸ್ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ಗೃಹ ಲಕ್ಷ್ಮಿ ಯೋಜನೆಯನ್ನು ಘೋಷಿಸಿತ್ತು.

ಇಂದು (ಏ 27) ಮಂಗಳೂರಿನಲ್ಲಿ ಐದನೇ ಗ್ಯಾರಂಟಿ ಯೋಜನೆ ಘೋಷಿಸಿದ ರಾಹುಲ್ ಗಾಂಧಿ, “ನಮ್ಮ ಮನೆ ಮಹಿಳೆಯರ ಹುಂಡಿ ಡಬ್ಬಿಗಳಿಂದ ರಾಜ್ಯದ 40% ಸರ್ಕಾರ ಹಣ ಕದ್ದಿದೆ. ಇದನ್ನು ನಾವು ಮರಳಿ ಈ ಯೋಜನೆ ರೂಪದಲ್ಲಿ ಕೊಡಿಸುತ್ತಿದ್ದೇವೆ. ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಮೊದಲ ಕ್ಯಾಬಿನೆಟ್‌ನಲ್ಲೇ ಇದನ್ನು ಘೋಷಿಸುತ್ತೇವೆ” ಎಂದು ಹೇಳಿದ್ದಾರೆ.

ಇದೇ ವೇಳೆ ಪ್ರಧಾನಿ ಮೋದಿಯವರಿಗೆ ಸವಾಲೆಸೆದ ರಾಹುಲ್ ಗಾಂಧಿ, “ಮೋದಿಜಿ, ನಾವು ನಾಲ್ಕು ಭರವಸೆ ಈಡೇರಿಸುತ್ತೇವೆ. ನೀವು ದೇಶದಲ್ಲಿ ಇದನ್ನು ಈಡೇರಿಸುತ್ತೀರಾ” ಎಂದು ಪ್ರಶ್ನಿಸಿದ್ದಾರೆ.

ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3,000 ರೂಪಾಯಿ ನಿರುದ್ಯೋಗ ಭತ್ಯೆ (ಯುವನಿಧಿ), ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್, ಪ್ರತಿ ಕುಟುಂಬದ ಓರ್ವ ಮಹಿಳೆಗೆ ಮಾಸಿಕ 2000 ರೂ. (ಗೃಹಲಕ್ಷ್ಮಿ) ಮತ್ತು ಪ್ರತಿ ತಿಂಗಳು ಒಬ್ಬ ವ್ಯಕ್ತಿಗೆ ತಲಾ 10 ಕೆ.ಜಿ. ಅಕ್ಕಿ (ಅನ್ನಭಾಗ್ಯ ಮುಂದುವರಿಕೆ) ಎಂಬ ಘೋಷಣೆಗಳನ್ನು ಕಾಂಗ್ರೆಸ್ ಮಾಡಿತ್ತು. ಐದನೇ ಯೋಜನೆಯನ್ನು ಈಗ ಪ್ರಕಟಿಸಿದೆ.

ಇದನ್ನೂ ಓದಿರಿ: 10 ಕೆ.ಜಿ. ಅಕ್ಕಿ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್: ಬಿಜೆಪಿಯ ನಿದ್ದೆಗೆಡಿಸಿದೆಯೇ ‘ಅನ್ನಭಾಗ್ಯ?’

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...