Homeಮುಖಪುಟ"ಬಿಜೆಪಿ ಗೂಂಡಾಗಳಿಂದ ಭಾರತ್ ಜೋಡೋ ನ್ಯಾಯ್‌ ಯಾತ್ರೆ ಮೇಲೆ ದಾಳಿ": ಕಾಂಗ್ರೆಸ್ ಆರೋಪ

“ಬಿಜೆಪಿ ಗೂಂಡಾಗಳಿಂದ ಭಾರತ್ ಜೋಡೋ ನ್ಯಾಯ್‌ ಯಾತ್ರೆ ಮೇಲೆ ದಾಳಿ”: ಕಾಂಗ್ರೆಸ್ ಆರೋಪ

- Advertisement -
- Advertisement -

ರಾಹುಲ್ ಗಾಂಧಿ ಮುನ್ನಡೆಸುತ್ತಿರುವ ಭಾರತ್ ಜೊಡೋ ನ್ಯಾಯ್ ಯಾತ್ರೆಯ ಮೇಲೆ ಅಸ್ಸಾಂನಲ್ಲಿ ಬಿಜೆಪಿ ಗೂಂಡಾಗಳು ದಾಳಿ ನಡೆಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಸಂವಿಧಾನ ನೀಡಿರುವ ಎಲ್ಲಾ ಹಕ್ಕು ಮತ್ತು ನ್ಯಾಯವನ್ನು ತುಳಿದು ಕೆಡವಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಕಿಡಿಕಾರಿದೆ.

ನಮ್ಮ ಕಾರ್ಯಕರ್ತರು ಮತ್ತು ಮುಖಂಡರನ್ನು ಬೆದರಿಸುವ ಇಂತಹ ತಂತ್ರಗಳಿಗೆ ಪಕ್ಷವು ಹೆದರುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಅಸ್ಸಾಂನ ಲಖಿಂಪುರದಲ್ಲಿ ಬಿಜೆಪಿ ಗೂಂಡಾಗಳು ಭಾರತ್ ಜೋಡೋ ನ್ಯಾಯ್ ಯಾತ್ರೆಯ ವಾಹನಗಳ ಮೇಲೆ ನಡೆಸಿರುವ ನಾಚಿಕೆಗೇಡಿನ ದಾಳಿ ಮತ್ತು ಕಾಂಗ್ರೆಸ್ ಪಕ್ಷದ ಬ್ಯಾನರ್ ಮತ್ತು ಪೋಸ್ಟರ್‌ಗಳನ್ನು ಹರಿದು ಹಾಕಿರುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದು ಖರ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಕಳೆದ 10 ವರ್ಷಗಳಲ್ಲಿ, ಬಿಜೆಪಿಯು ಭಾರತದ ಜನರಿಗೆ ಸಂವಿಧಾನವು ಖಾತರಿಪಡಿಸಿದ ಪ್ರತಿಯೊಂದು ಹಕ್ಕು ಮತ್ತು ನ್ಯಾಯವನ್ನು ತುಳಿಯಲು ಮತ್ತು ಕೆಡವಲು ಪ್ರಯತ್ನಿಸಿದೆ. ಬಿಜೆಪಿ ಜನರ ಧ್ವನಿಯನ್ನು ಅಡಗಿಸಲು ಬಯಸಿದೆ. ಆ ಮೂಲಕ ಪ್ರಜಾಪ್ರಭುತ್ವವನ್ನು ಹೈಜಾಕ್ ಮಾಡಲು ಮುಂದಾಗಿದೆ ಎಂದು ಖರ್ಗೆ ಹೇಳಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಕಾಂಗ್ರೆಸ್ ಯಾತ್ರೆಯ ಮೇಲೆ ಬಿಜೆಪಿ ದಾಳಿ ಮಾಡಿದೆ ಎನ್ನಲಾದ ವಿಡಿಯೋವನ್ನು ಹಂಚಿಕೊಂಡಿದ್ದು, “ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ‘ಅತಿ ಭ್ರಷ್ಟ’ ಸಿಎಂ ಹಿಮಂತ ಎಷ್ಟು ಹೆದರುತ್ತಾರೆ ಎಂಬುದಕ್ಕೆ ಹೆಚ್ಚಿನ ಪುರಾವೆ ಬೇಕೇ? ಅವರ ಗೂಂಡಾಗಳು ನಮ್ಮ ಕಾಂಗ್ರೆಸ್ ಪೋಸ್ಟರ್‌ಗಳು ಮತ್ತು ವಾಹನಗಳನ್ನು ಧ್ವಂಸಗೊಳಿಸಿರುವುದನ್ನು ನೋಡಿ!” ಎಂದು ಬರೆದುಕೊಂಡಿದ್ದಾರೆ.

“ಯಾತ್ರೆ ಮಾಡುತ್ತಿರುವ ದೊಡ್ಡ ಪ್ರಭಾವದಿಂದಾಗಿ ಅವರು ತುಂಬಾ ಗಲಿಬಿಲಿಗೊಂಡಿದ್ದಾರೆ, ಹಾಗಾಗಿ ಅವರು ಯಾವ ಮಟ್ಟಕ್ಕೆ ಬೇಕಾದರೂ ಇಳಿಯುತ್ತಾರೆ” ಎಂದು ವೇಣುಗೋಪಾಲ್ ತನ್ನ ಹೇಳಿದ್ದಾರೆ.

ಅಸ್ಸಾಂನ ಲಖಿಂಪುರ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಭಾರತ್ ಜೋಡೋ ನ್ಯಾಯ್‌ ಯಾತ್ರೆಯಲ್ಲಿ ಪಾಲ್ಗೊಂಡಿರುವ ಯುವ ಕಾಂಗ್ರೆಸ್‌ನ ವಾಹನಗಳನ್ನು ಜಖಂಗೊಳಿಸಿ, ಪೋಸ್ಟರ್, ಬ್ಯಾನರ್‌ಗಳನ್ನು ಹರಿದು ಹಾಕಿರುವ ಆರೋಪ ಕೇಳಿ ಬಂದಿದೆ. ಬಿಜೆಪಿ ಯುವಮೋರ್ಚಾ ಈ ಕೃತ್ಯವೆಸಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ರಾಹುಲ್ ಗಾಂಧಿ ನೇತೃತ್ವದ ಯಾತ್ರೆಯು ಅಸ್ಸಾಂನಲ್ಲಿ ಇಂದಿಗೆ ಮೂರನೇ ದಿನ ಪೂರೈಸಿದೆ. ಮುಂದೆ ಅರುಣಾಚಲ ಪ್ರದೇಶವನ್ನು ಪ್ರವೇಶಿಸಲಿದೆ. ಅದಕ್ಕೂ ಮುನ್ನ ಅಸ್ಸಾಂನ ಉತ್ತರ ಲಖಿಂಪುರ ಸೇರಿದಂತೆ ಲಖಿಂಪುರ ಜಿಲ್ಲೆಯ ಹಲವಾರು ಭಾಗಗಳಲ್ಲಿ ಯಾತ್ರೆ ಹಾದು ಹೋಗಲಿದೆ.

ಇದನ್ನೂ ಓದಿ : ಬಾಬ್ರಿ ಮಸೀದಿಯನ್ನು ವ್ಯವಸ್ಥಿತವಾಗಿ ಮುಸ್ಲಿಮರಿಂದ ಕಿತ್ತುಕೊಳ್ಳಲಾಗಿದೆ: ಓವೈಸಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...