Homeಮುಖಪುಟ‘ಒಂದು ದೇಶ, ಒಂದು ಚುನಾವಣೆ' ಸಮಿತಿಯ ಭಾಗವಾಗಲು ನಿರಾಕರಿಸಿದ ಅಧೀರ್ ರಂಜನ್ ಚೌಧರಿ

‘ಒಂದು ದೇಶ, ಒಂದು ಚುನಾವಣೆ’ ಸಮಿತಿಯ ಭಾಗವಾಗಲು ನಿರಾಕರಿಸಿದ ಅಧೀರ್ ರಂಜನ್ ಚೌಧರಿ

- Advertisement -
- Advertisement -

ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ‘ಒಂದು ದೇಶ, ಒಂದು ಚುನಾವಣೆ’ ಕಲ್ಪನೆ ಕುರಿತು ಅಧ್ಯಯನ ನಡೆಸಲು ರಚಿಸಿದ 8 ಸದಸ್ಯರ ಸಮಿತಿಯ ಭಾಗವಾಗಲು ನಿರಾಕರಿಸಿದ್ದಾರೆ.

ಈ ಕುರಿತು ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಚೌಧರಿ , ಸಮಿತಿಯಿಂದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗಿಡಲಾಗಿದೆ. ಬದಲಿಗೆ ಮಾಜಿ ಕಾಂಗ್ರೆಸ್ ನಾಯಕ  ಗುಲಾಂ ನಬಿ ಆಜಾದ್ ಅವರನ್ನು ಸೇರಿಸಲಾಗಿದೆ. ಇದರಿಂದ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಗೆ ಉದ್ದೇಶಪೂರ್ವಕವಾಗಿ ಅವಮಾನ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸಮಿತಿಯಲ್ಲಿ 15ನೇ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್‌ಕೆ ಸಿಂಗ್, ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಸುಭಾಷ್ ಸಿ ಕಶ್ಯಪ್, ಹಿರಿಯ ವಕೀಲ ಹರೀಶ್ ಸಾಳ್ವೆ ಮತ್ತು ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿಯವರಿದ್ದಾರೆ.

ಗೆಜೆಟ್ ನೋಟಿಫಿಕೇಶನ್ ಪ್ರಕಾರ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳು ಮಾತ್ರವಲ್ಲದೆ ಪುರಸಭೆ ಮತ್ತು ಪಂಚಾಯತ್‌ಗಳಿಗೂ ಏಕಕಾಲಕ್ಕೆ ಚುನಾವಣೆ ನಡೆಸುವ ಕುರಿತು  ಸಮಿತಿ ಪರಿಶೀಲಿಸಲಿದೆ.

ಸಾರ್ವತ್ರಿಕ ಚುನಾವಣೆಗೆ ಇನ್ನು ಕೆಲ  ತಿಂಗಳುಗಳಷ್ಟೇ ಬಾಕಿ ಇರುವಾಗ ಪ್ರಾಯೋಗಿಕವಾಗಿ ಕಾರ್ಯಸಾಧ್ಯವಲ್ಲದ ಮತ್ತು ಕಾರ್ಯಗತಗೊಳಿಸಲು ಸಾಧ್ಯವಿಲ್ಲದ ಕಲ್ಪನೆಯನ್ನು ರಾಷ್ಟ್ರದ ಮೇಲೆ ಹೇರುವ ಹಠಾತ್ ಪ್ರಯತ್ನವು ಸರ್ಕಾರದ ಗುಪ್ತ ಉದ್ದೇಶಗಳ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡುತ್ತದೆ ಎಂದು ಕಾಂಗ್ರೆಸ್ ನಾಯಕ ಪತ್ರದಲ್ಲಿ ತಿಳಿಸಿದ್ದಾರೆ.

ಇದಲ್ಲದೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರನ್ನು ಸಮಿತಿಯಿಂದ  ಹೊರಗಿಡಲಾಗಿದೆ. ಈ ಮೂಲಕ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಗೆ ಉದ್ದೇಶಪೂರ್ವಕವಾಗಿ ಅವಮಾನ ಮಾಡಲಾಗಿದೆ. ಇದರಿಂದಾಗಿ ನಿಮ್ಮ ಆಹ್ವಾನವನ್ನು ತಿರಸ್ಕರಿಸುವುದನ್ನು ಬಿಟ್ಟು ನನಗೆ ಬೇರೆ ದಾರಿಯಿಲ್ಲ ಎಂದು ಚೌಧರಿ ಅಮಿತ್ ಶಾಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

9 ಸದಸ್ಯರ ಸಮಿತಿಯು ಸರ್ಕಾರದ ಗೆಜೆಟ್ ಅಧಿಸೂಚನೆಯ ಪ್ರಕಾರ ಸಂವಿಧಾನದ ತಿದ್ದುಪಡಿಗಳಿಗೆ ರಾಜ್ಯಗಳ ಅನುಮೋದನೆ ಅಗತ್ಯವಿದೆಯೇ ಎಂದು ಪರಿಶೀಲಿಸಲಿದೆ.

ಸಮಿತಿಯು, ಅವಿಶ್ವಾಸ ನಿರ್ಣಯ, ಪಕ್ಷಾಂತರದಂತಹ ಯಾವುದೇ ಇತರ ಸನ್ನಿವೇಶಗಳಲ್ಲಿ ಏಕಕಾಲದ ಚುನಾವಣೆಗಳಿಗೆ ಸಂಬಂಧಿಸಿದ ಸಂಭಾವ್ಯ ಪರಿಹಾರಗಳನ್ನು ವಿಶ್ಲೇಷಿಸಲಿದೆ ಎನ್ನಲಾಗಿದೆ.

ಇದನ್ನು ಓದಿ: ನ್ಯಾಯಾಂಗದಲ್ಲಿನ ಭ್ರಷ್ಟಾಚಾರದ ಕುರಿತು ಹೇಳಿಕೆ: ಗೆಹ್ಲೋಟ್‌ಗೆ ರಾಜಸ್ಥಾನ ಹೈಕೋರ್ಟ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...