HomeಅಂಕಣಗಳುSIRಜೆನ್ ಝಿ ಮತದಾರರ ನೋಂದಣಿ ಸ್ಥಗಿತದ ಹಿಂದೆ ಮೋದಿ-ಸಿಇಸಿ ಸಂಚು: ಕಾಂಗ್ರೆಸ್ ಆರೋಪ

ಜೆನ್ ಝಿ ಮತದಾರರ ನೋಂದಣಿ ಸ್ಥಗಿತದ ಹಿಂದೆ ಮೋದಿ-ಸಿಇಸಿ ಸಂಚು: ಕಾಂಗ್ರೆಸ್ ಆರೋಪ

- Advertisement -
- Advertisement -

18 ವರ್ಷ ತುಂಬಿದ ಯುವಜನರನ್ನು (Gen Z) ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ‘ವಿಶೇಷ ಸಂಕ್ಷಿಪ್ತ ಪರಿಷ್ಕರಣೆ’ (SSR) ಪ್ರಕ್ರಿಯೆಯು 2024 ರಿಂದ ತಡೆಹಿಡಿಯಲ್ಪಟ್ಟಿರುವುದು ಹಾಗೂ ಈ ವಿಷಯವಾಗಿ ಕೇಂದ್ರ ಚುನಾವಣಾ ಆಯೋಗದಲ್ಲಿ (ECI) ಆಂತರಿಕ ಬಿಕ್ಕಟ್ಟು ಉದ್ಭವಿಸಿರುವುದು ವರದಿಯಾದ ಬೆನ್ನಲ್ಲೇ ಹೊಸ ರಾಜಕೀಯ ಸಮರ ಶುರುವಾಗಿದೆ. “ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಯುವಜನತೆಗೆ ಹೆದರುತ್ತಿದ್ದಾರೆ, ಹೀಗಾಗಿ ಅವರನ್ನು ಮತದಾರರ ಪಟ್ಟಿಯಿಂದ ದೂರವಿಡಲು ಸಂಚು ರೂಪಿಸಲಾಗಿದೆ,” ಎಂದು ಕಾಂಗ್ರೆಸ್ ಪಕ್ಷ ಆರೋಪ ಮಾಡಿದೆ.

‘ಎಕನಾಮಿಕ್ ಟೈಮ್ಸ್’ (ET) ವರದಿಯ ಪ್ರಕಾರ, 18 ವರ್ಷ ತಲುಪುವ ಹೊಸ ಅರ್ಹ ಮತದಾರರನ್ನು ಸೇರ್ಪಡೆಗೊಳಿಸುವ ‘ಎಸ್‌ಎಸ್‌ಆರ್’ (SSR) ಪ್ರಕ್ರಿಯೆಯು 2024 ರ ನಂತರ ದೇಶದಲ್ಲಿ ಎಲ್ಲಿಯೂ ನಡೆದಿಲ್ಲ. ಸಾಮಾನ್ಯವಾಗಿ ಮೇ ಅಂತ್ಯದ ವೇಳೆಗೆ ಪ್ರಕಟಗೊಳ್ಳಬೇಕಿದ್ದ 2026-27 ರ ಅವಧಿಗೆ ಸಂಬಂಧಿಸಿದ ಎಸ್‌ಎಸ್‌ಆರ್ ಆಂದೋಲನವನ್ನು ಈ ವರ್ಷವೂ ಪ್ರಕಟಿಸಿಲ್ಲ.

ಆಯೋಗದೊಳಗಿನ ಆಂತರಿಕ ಭಿನ್ನಾಭಿಪ್ರಾಯ ಕಾರಣ?

ಈ ಪ್ರಕ್ರಿಯೆ ಸ್ಥಗಿತಗೊಳ್ಳಲು ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಮತ್ತು ಇಬ್ಬರು ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಹಾಗೂ ವಿವೇಕ್ ಜೋಶಿ ನಡುವೆ ಸಹಮತ ಇಲ್ಲದಿರುವುದೇ ಮುಖ್ಯ ಕಾರಣ ಎಂದು ವರದಿ ತಿಳಿಸಿದೆ. ಕಳೆದ 10 ತಿಂಗಳಲ್ಲಿ ಆಯೋಗ ತೆಗೆದುಕೊಂಡ ಹಲವು ನಿರ್ಧಾರಗಳಿಗೆ ಇಬ್ಬರು ಚುನಾವಣಾ ಆಯುಕ್ತರು ಬರೋಬ್ಬರಿ 14 ಬಾರಿ ಅಧಿಕೃತವಾಗಿಯೇ ಆಕ್ಷೇಪ ವ್ಯಕ್ತಪಡಿಸಿದ್ದರು ಎಂಬ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ತನಿಖಾ ವರದಿಯ ಬೆನ್ನಲ್ಲೇ ಈ ಹೊಸ ಸ್ಫೋಟಕ ಮಾಹಿತಿ ಹೊರಬಿದ್ದಿದೆ.

ಏನಿದು ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (SSR)? ‘

ಎಸ್‌ಐಆರ್’ (SIR) ಪ್ರಕ್ರಿಯೆಯು ಸಮಗ್ರ ಹಾಗೂ ಕಠಿಣ ಪರಿಶೀಲನೆಯಾಗಿದ್ದರೆ, ‘ಎಸ್‌ಎಸ್‌ಆರ್’ ಎಂಬುದು ಮತದಾರರ ಪಟ್ಟಿಯನ್ನು ನವೀಕರಿಸಲು ಮತ್ತು ಹೊಸದಾಗಿ 18 ವರ್ಷ ತುಂಬಿದ ಯುವಕರನ್ನು ಸೇರಿಸಲು ಪ್ರತಿವರ್ಷ ಕೈಗೊಳ್ಳುವ ವಾಡಿಕೆಯ ಪ್ರಕ್ರಿಯೆಯಾಗಿದೆ.

ಈ ಪ್ರಕ್ರಿಯೆಯು ಯುವಜನತೆಗೆ ವರ್ಷದಲ್ಲಿ ನಾಲ್ಕು ದಿನಾಂಕಗಳಲ್ಲಿ (ಜನವರಿ 1, ಏಪ್ರಿಲ್ 1, ಜುಲೈ 1 ಮತ್ತು ಅಕ್ಟೋಬರ್ 1) ಅರ್ಜಿ ಸಲ್ಲಿಸಲು ಅವಕಾಶ ನೀಡುತ್ತದೆ. ಇದರಿಂದ 18 ವರ್ಷ ತಲುಪುವ ಯುವಕರು ಮತದಾರರ ಪಟ್ಟಿಗೆ ಸೇರಲು ಮುಂದಿನ ಜನವರಿವರೆಗೆ ಕಾಯಬೇಕಾದ ಅಗತ್ಯವಿರುವುದಿಲ್ಲ. ‘ಜನಪ್ರತಿನಿಧಿ ಕಾಯ್ದೆ 1950’ರ ಸೆಕ್ಷನ್ 21 ರ ಅಡಿಯಲ್ಲಿ ಪ್ರತಿವರ್ಷ ಎಸ್‌ಎಸ್‌ಆರ್ ನಡೆಸುವುದು ಕಡ್ಡಾಯವಾಗಿದೆ. ಆದರೆ, 2024ರ ನಂತರ ಈ ಪ್ರಕ್ರಿಯೆ ಸ್ಥಗಿತಗೊಂಡಿದ್ದು, 2025ರಲ್ಲಿ ಬಿಹಾರದಲ್ಲಿ ಜಾರಿಯಾದ ‘SIR’ ಪ್ರಕ್ರಿಯೆಯನ್ನು ನಂತರ ಇತರ ರಾಜ್ಯಗಳಿಗೂ ವಿಸ್ತರಿಸಲಾಗಿತ್ತು.

ವರದಿಯ ಪ್ರಕಾರ, ಪ್ರಸ್ತುತ ಎಸ್‌ಐಆರ್ ಪ್ರಕ್ರಿಯೆ ಚಾಲ್ತಿಯಲ್ಲಿರುವಾಗ ಎಸ್‌ಎಸ್‌ಆರ್ ಅಗತ್ಯವಿದೆಯೇ ಎಂಬ ಬಗ್ಗೆ ಗ್ಯಾನೇಶ್ ಕುಮಾರ್ ಕಾನೂನು ಸಲಹೆಯನ್ನೂ ಪಡೆದಿದ್ದಾರೆ ಎನ್ನಲಾಗಿದೆ. ಆದರೆ, ಪ್ರತಿಯೊಂದು ವರ್ಷ 18 ವರ್ಷ ತುಂಬುವ ಯುವಕರನ್ನು ಪಟ್ಟಿಗೆ ಸೇರಿಸಲು ಎಸ್‌ಎಸ್‌ಆರ್ ಮರುಆರಂಭಿಸುವುದು ಅತ್ಯಗತ್ಯ ಮತ್ತು ಎಸ್‌ಐಆರ್ ನೆಪದಲ್ಲಿ ಎಸ್‌ಎಸ್‌ಆರ್ ನಿಲ್ಲಿಸಬಾರದು ಎಂದು ಆಯುಕ್ತರಾದ ಸಂಧು ಮತ್ತು ಜೋಶಿ ಪ್ರಬಲವಾಗಿ ಪ್ರತಿಪಾದಿಸಿದ್ದಾರೆ.

‘ಮೋದಿ ಸರ್ಕಾರಕ್ಕೆ ಯುವಕರ ಭಯ’: ಕಾಂಗ್ರೆಸ್ ವಾಗ್ದಾಳಿ

ವರದಿಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ಮೋದಿ ವಿರುದ್ಧ ಯುವಜನತೆ ನಿಂತಿರುವುದರಿಂದ ಸರ್ಕಾರಕ್ಕೆ ಭಯ ಶುರುವಾಗಿದೆ. ಈ ಆತಂಕದಲ್ಲಿ ಮೋದಿ ಅವರು ಜ್ಞಾನೇಶ್ ಕುಮಾರ್ ಜೊತೆಗೂಡಿ ಯುವಕರನ್ನು ಮತದಾರರ ಪಟ್ಟಿಯಿಂದ ಹೊರಗಿಡಲು ಸಂಚು ರೂಪಿಸಿದ್ದಾರೆ,” ಎಂದು ಆರೋಪಿಸಿದೆ.

ಮುಂದಿನ ವರ್ಷ ವಿಧಾನಸಭೆ ಚುನಾವಣೆ ಎದುರಿಸಲಿರುವ ಉತ್ತರ ಪ್ರದೇಶ ಮತ್ತು ಗೋವಾವನ್ನು ಉದಾಹರಿಸಿರುವ ಕಾಂಗ್ರೆಸ್, “ಚುನಾವಣೆ ಹತ್ತಿರವಿದ್ದರೂ ಅಲ್ಲಿ ಎಸ್‌ಎಸ್‌ಆರ್ ನಡೆಸಲಾಗಿಲ್ಲ. ಪರಿಣಾಮವಾಗಿ 18 ವರ್ಷ ತುಂಬಿದ ಹೊಸ ಯುವ ಮತದಾರರು ಪಟ್ಟಿಗೆ ಸೇರ್ಪಡೆಯಾಗಲು ಸಾಧ್ಯವಾಗಿಲ್ಲ. ಬಿಹಾರದಲ್ಲೂ ಎಸ್‌ಐಆರ್ ಮುಗಿದಿದ್ದರೂ ಎಸ್‌ಎಸ್‌ಆರ್ ಆರಂಭವಾಗಿಲ್ಲ. ಯುವಜನತೆ ನಿಮ್ಮ ಅಪರಾಧಗಳನ್ನು ಗಮನಿಸುತ್ತಿದ್ದು, ಸೂಕ್ತ ಪಾಠ ಕಲಿಸಲಿದ್ದಾರೆ,” ಎಂದು ಎಚ್ಚರಿಸಿದೆ.

ರಾಜ್ಯಸಭಾ ಸಂಸದ ಜೈರಾಮ್ ರಮೇಶ್ ಮಾತನಾಡಿ, “ಜೆನ್ ಝಿ ಯುವಕರು ಬೀದಿಗಿಳಿದು ತಮ್ಮನ್ನು ತೀವ್ರವಾಗಿ ಪ್ರಶ್ನಿಸುತ್ತಿರುವುದನ್ನು ಕಂಡು ಹೆದರಿರುವ ಪ್ರಧಾನಿ, ಗ್ಯಾನೇಶ್ ಕುಮಾರ್ ಅವರನ್ನು ಬಳಸಿ ಯುವಕರನ್ನು ಪಟ್ಟಿಯಿಂದ ಹೊರಗಿಡುತ್ತಿದ್ದಾರೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಸಂಸತ್ತಿನ ಮೂಲಕ ಮತದಾನದ ವಯಸ್ಸನ್ನು 21 ರಿಂದ 18 ಕ್ಕೆ ಇಳಿಸಿ ಯುವಜನರಿಗೆ ಶಕ್ತಿ ನೀಡಿದ್ದರು. ಆದರೆ, ಇಂದಿನ ಪ್ರಧಾನಿ ಮೋದಿ ಯುವಕರ ಆಶೋತ್ತರಗಳನ್ನು ಹೊಸಕಿ ಹಾಕಿ, ಹಿಂಬಾಗಿಲ ಮೂಲಕ ಅವರ ಮತದಾನದ ಹಕ್ಕನ್ನೇ ಕಸಿಯಲು ಯತ್ನಿಸುತ್ತಿದ್ದಾರೆ,” ಎಂದು ತೀವ್ರವಾಗಿ ಟೀಕಿಸಿದ್ದಾರೆ.

ಈ ನಡುವೆ ಎಕನಾಮಿಕ್ ಟೈಮ್ಸ್ ವರದಿಗೆ ಚುನಾವಣಾ ಆಯೋಗ ಇನ್ನೂ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲವಾದರೂ, ಆಂತರಿಕ ಅಭಿಪ್ರಾಯ ಭೇದಗಳು ಸಹಜ ಪ್ರಕ್ರಿಯೆ ಮತ್ತು ಕಳೆದ 10 ತಿಂಗಳುಗಳಲ್ಲಿ ಕೈಗೊಂಡ ನಿರ್ಧಾರಗಳು ಸರ್ವಸಮ್ಮತಿಯಿಂದ ಕೂಡಿದ್ದವು ಎಂದು ಈ ಹಿಂದೆ ಪ್ರಕಟಣೆ ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೆನ್ಶನ್ ಹೋಗಲ್ಲ, SIR ಹೋಗುತ್ತೆ, ಹೆದರಬೇಡಿ’: ತುಮಕೂರಿನಲ್ಲಿ ಸಂತ್ರಸ್ತ ಮಹಿಳೆಗೆ ಪ್ರಕಾಶ್ ರಾಜ್ ಭರವಸೆ

ತುಮಕೂರು: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದ ನೋಟಿಸ್‌ಗಳಿಂದ ಆತಂಕಕ್ಕೊಳಗಾಗಿರುವ ತುಮಕೂರಿನ ಎನ್‌ಆರ್ ಕಾಲೊನಿಯ ನಿವಾಸಿಗಳ ಮನೆಗಳಿಗೆ ನಟ ಹಾಗೂ ಹೋರಾಟಗಾರ ಪ್ರಕಾಶ್ ರಾಜ್ ಭೇಟಿ ನೀಡಿ, ಅವರ ಸಮಸ್ಯೆಗಳನ್ನು...

SIR ಅಕ್ರಮ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ಕ್ರಮಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ PIL

ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಾಂವಿಧಾನಿಕ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರ ವಿರುದ್ಧ ಶಿಸ್ತು ಹಾಗೂ...

ತುಮಕೂರಿನ ಎನ್.ಆರ್. ಕಾಲೋನಿ ಕೋತಿ ತೋಪಿನಲ್ಲಿ ಎಸ್ಐಆರ್ ಪರಿಶೋಧನೆ: ಸಂತ್ರಸ್ತರ ಅಹವಾಲು ಆಲಿಸಿದ ಪ್ರಕಾಶ್ ರಾಜ್: ಸೆ.26ಕ್ಕೆ ಬೆಂಗಳೂರಿನಲ್ಲಿ ಪ್ರತಿಭಟನೆ

ತುಮಕೂರು: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಎದುರಾಗಿರುವ ಸಮಸ್ಯೆಗಳನ್ನು ನೇರವಾಗಿ ಪರಿಶೀಲಿಸುವ ಉದ್ದೇಶದಿಂದ ನಟ ಹಾಗೂ ಹೋರಾಟಗಾರ ಪ್ರಕಾಶ್ ರಾಜ್ ಅವರು ತುಮಕೂರು ನಗರದ ಎನ್‌ಆರ್‌ ಕಾಲೊನಿ...

SIR ವಿವಾದ ಮತ್ತು ಆಂತರಿಕ ಬಿಕ್ಕಟ್ಟು: ಮೀರತ್, ವಾರಾಣಸಿ ಪ್ರವಾಸ ದಿಢೀರ್ ರದ್ದುಗೊಳಿಸಿದ ಗ್ಯಾನೇಶ್‌ ಕುಮಾರ್! Gen-Z ಆಕ್ರೋಶಕ್ಕೆ ಬೆದರಿತೇ ಆಯೋಗ?

ದೇಶಾದ್ಯಂತ ವ್ಯಾಪಕ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿರುವ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (SIR) ವಿವಾದ, ಸ್ಥಗಿತಗೊಂಡಿರುವ ವಾರ್ಷಿಕ ಮತದಾರರ ಪಟ್ಟಿ ಪರಿಷ್ಕರಣೆ (SSR) ಹಾಗೂ ಚುನಾವಣಾ ಆಯೋಗದ ಉನ್ನತ ಹಂತದ ಶೀತಲ...

ವಿಜಯವಾಡ ಕಸ್ಟಡಿಯಲ್ಲಿ ಸಾಯಿ ಕೃಷ್ಣ ಸಾವು: ಶವ ದಹನ, ಸಾಕ್ಷ್ಯ ನಾಶ ಖಚಿತ ಪಡಿಸಿದ ಎಸ್ಐಟಿ; ಸುಪ್ರೀಂ ಕೋರ್ಟ್ ನೇರ ಮೇಲ್ವಿಚಾರಣೆ 

ವಿಜಯವಾಡ: ಆಂಧ್ರಪ್ರದೇಶದ ವಿಜಯವಾಡದಲ್ಲಿ 25 ವರ್ಷದ ಗದೆ ಸಾಯಿ ಕೃಷ್ಣ ಅವರ ನಾಪತ್ತೆ ಹಾಗೂ ಶಂಕಿತ ಕಸ್ಟಡಿ ಸಾವಿನ ಪ್ರಕರಣ ಇದೀಗ ಸುಪ್ರೀಂ ಕೋರ್ಟ್‌ನ ನೇರ ಮೇಲ್ವಿಚಾರಣೆಗೆ ಒಳಪಟ್ಟಿದೆ. ಕೃಷ್ಣಲಂಕಾ ಪೊಲೀಸರು ವಶಕ್ಕೆ...

ಜ್ಞಾನೇಶ್ ಕುಮಾರ್‌ನನ್ನು ವಜಾಗೊಳಿಸಿ-SIR ರದ್ದುಗೊಳಿಸುವಂತೆ ಒತ್ತಾಯಿಸಿ ಸೆ.26 ಪ್ರತಿಭಟನೆಗೆ ಎಡ ಪಕ್ಷಗಳು ಹಾಗೂ SIR ವಿರೋಧಿ ಒಕ್ಕೂಟ ಕರೆ

ಕೇಂದ್ರ ಚುನಾವಣಾ ಆಯೋಗವು ಎಸಗಿರುವ ಅಕ್ರಮಗಳ ಪಾಪದ ಕೊಡ ತುಂಬಿದ್ದು, ಆಯೋಗದ ಆಂತರಿಕ ಭಿನ್ನಾಭಿಪ್ರಾಯಗಳು ಜಗಜ್ಜಾಹೀರಾಗಿವೆ ಎಂದು ‘SIR ವಿರೋಧಿ ಜನಪರ ಸಂಘಟನೆಗಳ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟ’ ಆಕ್ರೋಶ ವ್ಯಕ್ತಪಡಿಸಿದೆ. ಮುಖ್ಯ...

SIR ಜಾರಿಯಿಂದ ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಮೇಲೆ ಸಂಶಯ ಮೂಡಿದೆ: ಅಶೋಕ್ ಲವಾಸ ಕಳವಳ

ಚುನಾವಣಾ ಪ್ರಕ್ರಿಯೆಯ ಶುದ್ಧೀಕರಣದ ನೆಪದಲ್ಲಿ ನೈಜ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಅಥವಾ ಬೇಟೆಯಾಡುವ ಪ್ರವೃತ್ತಿಯನ್ನು ತಕ್ಷಣವೇ ಕೈಬಿಡಬೇಕು, SIR ಪ್ರಕ್ರಿಯೆಯಿಂದ ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಮತ್ತು ವರ್ಚಸ್ಸಿಗೆ ಭಾರೀ ಧಕ್ಕೆಯಾಗುತ್ತಿದೆ ಎಂದಿರುವ ಮಾಜಿ...

“ಟರ್ನ್ ಅಪ್ರೂವರ್ ಆಗಿ”: ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯ; ಮತ ಕಳ್ಳತನ ಆರೋಪದಲ್ಲಿ ಮೋದಿ, ಶಾ ತನಿಖೆ ನಡೆಯಬೇಕಿದೆ: ರಾಹುಲ್ ಗಾಂಧಿ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಚುನಾವಣಾ ವ್ಯವಸ್ಥೆಯಲ್ಲಿ ನಡೆದಿರುವುದಾಗಿ ಆರೋಪಿಸಲಾಗುತ್ತಿರುವ ಅಕ್ರಮಗಳ ಕುರಿತು “ಅನುಮೋದಕರಾಗಿ” (ಅಪ್ರೂವರ್) ಬದಲಾಗಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ...

SIR : ಭಾಲ್ಕಿ, ಬೆಳಗಾವಿ ಉತ್ತರ-ದಕ್ಷಿಣ ವಿಧಾನಸಭಾ ಕ್ಷೇತ್ರಗಳಲ್ಲಿ ಸಾವಿರಾರು ಅರ್ಹ ಮತಗಳ ಡಿಲೀಟ್‌ಗೆ ಯತ್ನ; ಅನ್ಯರು ಫಾರಂ-7 ಸಲ್ಲಿಸಿರುವುದು ಬಯಲು!

ಭಾರತೀಯ ಚುನಾವಣಾ ಆಯೋಗದಲ್ಲಿ (ಇಸಿಐ) ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ಸರ್ವಾಧಿಕಾರಿ ಧೋರಣೆ ಬಟಾಬಯಲಾಗಿ ದೇಶದಾದ್ಯಂತ ಭಾರೀ ಚರ್ಚೆಯಾಗುತ್ತಿರುವ ನಡುವೆಯೇ, ಕರ್ನಾಟಕದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌)...

‘ದಿಮಾಗಿ ನಕ್ಸಲರು ಚುನಾವಣಾ ಆಯುಕ್ತರನ್ನು ಗುರಿಯಾಗಿಸಿಕೊಂಡಿದ್ದಾರೆ..’; ಗ್ಯಾನೇಶ್‌ ಕುಮಾರ್ ಬೆಂಬಲಕ್ಕೆ ನಿಂತ ಅಸ್ಸಾಂ ಸಿಎಂ

ಮುಖ್ಯ ಚುನಾವಣಾ ಆಯುಕ್ತರು ಇತರ ಚುನಾವಣಾ ಆಯುಕ್ತರನ್ನು ಸಂಪರ್ಕಿಸದೆ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ಮುಖ್ಯ ಚುನಾವಣಾ ಆಯುಕ್ತರನ್ನು (ಸಿಇಸಿ) ಗುರಿಯಾಗಿಸಿಕೊಂಡು ನಡೆಸಲಾಗುತ್ತಿರುವ ದಾಳಿಯು ಇದು ರಾಜಕೀಯ ಪ್ರಚಾರ ಹಾಗೂ ವಿರೋಧ ಪಕ್ಷಗಳ...