Homeಮುಖಪುಟರೈತ ಹೋರಾಟಕ್ಕೆ ಕಾಂಗ್ರೆಸ್, ವಿದೇಶಿ ಏಜೆಂಟ್‌ಗಳು ಸ್ಪಾನ್ಸರ್ಸ್‌ ಮಾಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

ರೈತ ಹೋರಾಟಕ್ಕೆ ಕಾಂಗ್ರೆಸ್, ವಿದೇಶಿ ಏಜೆಂಟ್‌ಗಳು ಸ್ಪಾನ್ಸರ್ಸ್‌ ಮಾಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

ಸಿಎಂ ಹೇಳಿಕೆಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ರೈತ ಮುಖಂಡರು ಕಿಡಿಕಾರಿದ್ದಾರೆ.

- Advertisement -
- Advertisement -

ದೆಹಲಿಯ ಗಡಿಗಳಲ್ಲಿ ಮತ್ತು ದೇಶದ ಇತರೆಡೆ ನಡೆಯುತ್ತಿರುವ ರೈತ ಹೋರಾಟವನ್ನು ಕಾಂಗ್ರೆಸ್ ಅಥವಾ ವಿದೇಶಿ ಏಜೆಂಟ್‌ಗಳು ಪ್ರಾಯೋಜಿಸುತ್ತಿದ್ದಾರೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್, ಫಾರಿನ್ ಏಜೆಂಟರ್, ಎಂಎಸ್‌ಪಿ ಏಜೆಂಟರ್ ರೈತ ಹೋರಾಟಕ್ಕೆ ಸ್ಪಾನ್ಸರ್ ಮಾಡುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

ಮುಖ್ಯಮಂತ್ರಿ ಹೇಳಿಕೆಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಮಾತನಾಡಿ “ಮುಖ್ಯಮಂತ್ರಿಗಳ ಹೇಳಿಕೆಯನ್ನು ಖಂಡಿಸುತ್ತೇನೆ. ಇದು ರೈತ ಹೋರಾಟಕ್ಕೆ ಮಾಡಿದ ಅವಮಾನ. ಈ ರೀತಿ ಹೇಳಿಕೆ ಕೊಡುವುದನ್ನು ಬಿಟ್ಟು ಅವರ ಬಳಿ ಆಧಾರವಿದ್ದರೆ ಸ್ಪಾನ್ಸರ್ ಮಾಡುವರನ್ನು ಬಂಧಿಸಲಿ” ಎಂದು ಸವಾಲು ಹಾಕಿದ್ದಾರೆ.

ಮತ್ತೊಬ್ಬ ಕಾಂಗ್ರೆಸ್ ಮುಖಂಡ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮಾತನಾಡಿ “ಮುಖ್ಯಮಂತ್ರಿಗಳು ರೈತರ ಚಳವಳಿಯನ್ನು ಪ್ರಾಯೋಜಿತ ಎಂದು ಕರೆದು ಸಮರ್ಥನೆ ಮಾಡಿಕೊಂಡಿದ್ದಾರೆ. ಈ ಕುರಿತು ರೈತರು ಮತ್ತು ಹೊರಗಿನ ಜನರು ತೀರ್ಮಾನಿಸುತ್ತಾರೆ” ಎಂದು ವಿಷಾಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಕಬ್ಬು ಬೆಳೆಗಾರರ ಸಂಘದ ರಾಜ್ಯಧ್ಯಕ್ಷರು ಮತ್ತು ರೈತ ಹೋರಾಟಗಾರರಾದ ಕುರುಬೂರು ಶಾಂತಕುಮಾರ್‌ರವರು “ಸೆಪ್ಟಂಬರ್ 8 ರಂದು ಬಿಜೆಪಿ-ಆರ್‌ಎಸ್‌ಎಸ್‌ ಅಂಗಸಂಸ್ಥೆಯಾದ ಭಾರತೀಯ ಕಿಸಾನ್ ಸಭಾದವರು ದೇಶಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕೃಷಿ ಕಾನೂನು ರದ್ದಗೊಳಿಸಬೇಕೆಂದು ಹೋರಾಟ ಮಾಡಿದ್ದಾರೆ. ಅವರು ದೇಶದ್ರೋಹಿಗಳೇ? ಅವರಿಗೂ ಕಾಂಗ್ರೆಸ್ ಫಂಡ್ ಮಾಡುತ್ತಿದೆಯೇ? ಈ ಕುರಿತು ಮುಖ್ಯಮಂತ್ರಿಗಳು ಉತ್ತರಿಸಬೇಕು” ಎಂದು ಆಗ್ರಹಿಸಿದರು.

ಮುಂದುವರಿದು ಇಂತಹ ರೈತರ ಜೊತೆ ಕೇಂದ್ರ ಸರ್ಕಾರ ಏಕೆ 12 ಬಾರಿ ಮಾತುಕತೆ ನಡೆಸಿತು? ಏಕೆ ಕೃಷಿ ಕಾಯ್ದೆಗಳನ್ನು ಒಂದೂವರೆ ವರ್ಷ ತಡೆಹಿಡಿಯುತ್ತೇವೆ ಎಂದು ಹೇಳಿತು ಎಂದು ಪ್ರಶ್ನಿಸಿದ ಅವರು, ಬಿಜೆಪಿ ಪಕ್ಷದಿಂದ ಮುಖ್ಯಮಂತ್ರಿಯಾದವರು ಮನಸ್ಸಿಗೆ ಬಂದಂತೆ ಹೇಳಿಕೆ ಕೊಡುವುದನ್ನು ನಿಲ್ಲಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೆಹಲಿಯಲ್ಲಿ ತಮ್ಮ ಹಕ್ಕಿಗಾಗಿ ರೈತರು ನಡೆಸುತ್ತಿರುವ ಹೋರಾಟವನ್ನು ‘ಪ್ರಾಯೋಜಿತ ಹೋರಾಟ’ ಎಂಬ ಮುಖ್ಯಮಂತ್ರಿ ಬೊಮ್ಮಾಯಿಯವರ ಹೇಳಿಕೆ ಆಘಾತಕಾರಿ. ಅವರು ಕೂಡಲೇ ರೈತರ ಕ್ಷಮೆ ಕೋರಬೇಕು. ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಚ್ಚರಿಸಿದ್ದಾರೆ.


ಇದನ್ನೂ ಓದಿ: ವಿಧಾನಸಭೆ ಅಧಿವೇಶನದ ಲೈವ್‌ ನಾನುಗೌರಿ.ಕಾಂ ಫೇಸ್‌ಬುಕ್‌‌ನಲ್ಲಿ ನೋಡಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಂಡ್ಯ | ಹೆಣ್ಣು ಭ್ರೂಣ ಹತ್ಯೆ ಪ್ರಕರಣ : ಮತ್ತೆ ಮೂವರ ಬಂಧನ

0
ಮಂಡ್ಯ ಜಿಲ್ಲೆಯ ಪಾಂಡವಪುರ, ಬೆಳ್ಳೂರು, ಮೇಲುಕೋಟೆ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಭ್ರೂಣ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ರಾಮಕೃಷ್ಣ ಅಲಿಯಾಸ್...