Homeಕರ್ನಾಟಕ“ನಾವೂ ಬದುಕಬೇಕು”: ಜನಾಗ್ರಹ ಆಂದೋಲನಕ್ಕೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಬೆಂಬಲ

“ನಾವೂ ಬದುಕಬೇಕು”: ಜನಾಗ್ರಹ ಆಂದೋಲನಕ್ಕೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಬೆಂಬಲ

- Advertisement -
- Advertisement -

ಜನರ ಜೀವ ಮತ್ತು ಜೀವನೋಪಾಯ ಉಳಿಸಲು ಸರ್ಕಾರ ಕೈಗೊಳ್ಳಬೇಕಾದ ಪಂಚ ತುರ್ತು ಕ್ರಮಗಳ ಬಗ್ಗೆ ತಿಂಗಳಿನಿಂದ ಹೋರಾಟ ಮಾಡುತ್ತಿರುವ ಜನಾಗ್ರಹ ಆಂದೋಲನವು ಸೋಮವಾರ [ಮೇ 24 ರಂದು] ರಾಜ್ಯವ್ಯಾಪಿ ಜನಾಗ್ರಹಕ್ಕೆ ಕರೆ ನೀಡಿದೆ. ಈ ಆಂದೋಲನಕ್ಕೆ ಪ್ರಮುಖ ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲ ವ್ಯಕ್ತಪಡಿಸಿವೆ.

ಉಚಿತ ಚಿಕಿತ್ಸೆ, ಸರ್ವರಿಗೂ ವ್ಯಾಕ್ಸಿನ್, ಬಿಪಿಎಲ್ ಜನರಿಗೆ ಸಮಗ್ರ ದಿನಸಿ – ಮಾಸಿಕ 5000 ನೆರವು ಧನ, ಅನಾಥವಾದ ಕುಟುಂಬಗಳಿಗೆ 5 ಲಕ್ಷ ಪರಿಹಾರ ಮತ್ತು ಕೃಷಿ ಬೀಜ, ಗೊಬ್ಬರಕ್ಕೆ ವಿಶೇಷ ಸಬ್ಸಿಡಿ ಈ ಐದು ಪಂಚ ಕ್ರಮಗಳನ್ನು ಜಾರಿಗೆ ತರಬೇಕೆಂದು ಜನಾಗ್ರಹ ಆಂದೋಲನ ಆಗ್ರಹಿಸಿದೆ. ಜನಪರ ಸಂಘಟನೆಗಳು ಹಾಗೂ ಪಕ್ಷಗಳು ಕರೆ ನೀಡಿವೆ.

ಜನರ ಜೀವ ಉಳಿಸುವ ಕ್ರಮಗಳಿಗಾಗಿ ಹಾಗೂ ಸಂಕಷ್ಟದಲ್ಲಿರುವ ಜನರ ಜೀವನೋಪಾಯಕ್ಕೆ ಆಸರೆಯಾಗಬಲ್ಲ ಪ್ಯಾಕೇಜಿಗಾಗಿ ತಮ್ಮ ತಮ್ಮ ಮನೆ ಮುಂದೆಯೇ ತಟ್ಟೆ ಲೋಟ ಬಡಿದು, ಖಾಲಿ ಚೀಲ ಪ್ರದರ್ಶಿಸುವ ಮೂಲಕ ಸರ್ಕಾರದ ಕಣ್ತೆರೆಸಲು ಮುಂದಾಗಿದೆ.

ಇದನ್ನೂ ಓದಿ: “ನಾವೂ ಬದುಕಬೇಕು”: ನಾಳೆ ರಾಜ್ಯಾದ್ಯಂತ ಜನಾಗ್ರಹ ಆಂದೋಲನ

ಜನಾಗ್ರಹ ಆಂದೋಲನದ ಪೋಸ್ಟರ್‌ಗಳನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವಿರೋಧ ಪಕ್ಷಗಳು ಈ ಆಂದೋಲನಕ್ಕೆ ಬೆಂಬಲ ನೀಡಿವೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, “ಕಾಂಗ್ರೆಸ್ ಪಕ್ಷವು ಈ ಜನಾಗ್ರಹ ಆಂದೋಲನವನ್ನು ಹಾಗೂ ಅದರ ಹಕ್ಕೊತ್ತಾಯಗಳನ್ನು ಬೆಂಬಲಿಸುತ್ತದೆ” ಎಂದಿದ್ದಾರೆ.

’ಸರ್ಕಾರ ತೆಗೆದುಕೊಳ್ಳಲೇಬೇಕಾದ ಕ್ರಮಗಳಿಗಾಗಿ 24 ರಂದು ಜನಾಗ್ರಹ ಆಂದೋಲನ ನಡಿಯುತ್ತಿದೆ.
ಉಚಿತ ಚಿಕಿತ್ಸೆ – ಸರ್ವರಿಗೂ ವ್ಯಾಕ್ಸಿನ್ – ಬಡವರಿಗೆ ಸಮಗ್ರ ದಿನಸಿ – ಕೆಲಸ ಇಲ್ಲದವರಿಗೆ ಆರ್ಥಿಕ ನೆರವು – ಅನಾಥರಿಗೆ ಪರಿಹಾರ. ಕಾಂಗ್ರೆಸ್ ಈ ಹಕ್ಕೊತ್ತಾಯಗಳನ್ನು ಬೆಂಬಲಿಸುತ್ತದೆ ಹಾಗೂ 24 ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಲಿದೆ” ಎಂದು ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಒಡಿಶಾದ ಬುಡಕಟ್ಟು ಸಮುದಾಯಗಳಲ್ಲಿ ಹೆಚ್ಚಿದ ಸೋಂಕು: ಕೊರೊನಾ ಕೇಂದ್ರಗಳನ್ನು ಆರಂಭಿಸಲು ಒತ್ತಾಯ

ರಾಜ್ಯದ ಪ್ರಾದೇಶಿಕ ಪಕ್ಷ ಜಾತ್ಯಾತೀತ ಜನತಾದಳ ಕೂಡ ಈ ಆಂದೋಲನಕ್ಕೆ ಬೆಂಬಲ ನೀಡಿದೆ. ಜೆಡಿಎಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್ “ಈ ಆಂದೋಲನ ಮುಂದಿಟ್ಟಿರುವ ಹಕ್ಕೊತ್ತಾಯಗಳು ಬಹಳ ಸಮಂಜಸವಾಗಿವೆ. ಸರ್ಕಾರ ಇವನ್ನು ಪರಿಗಣಿಸಲೇಬೇಕು ಎಂದು ಜನತಾ ದಳ ಪಕ್ಷದ ಪರವಾಗಿ ನಾನು ಒತ್ತಾಯಿಸುತ್ತೇನೆ. ಜೆಡಿಎಸ್ 24 ರ ಪ್ರತಿಭಟನೆಯನ್ನು ಬೆಂಬಲಿಸಿ ಭಾಗವಹಿಸಲಿದೆ” ಎಂದು ಹೇಳಿಕೆ ನೀಡಿದ್ದಾರೆ‌‌.

ಸರ್ಕಾರದ ವಿರುದ್ಧ ಜ‌ನರ ಆಕ್ರೋಶ ಹೆಚ್ಚಾಗುತ್ತಿದೆ. ಜನರ ಈ ಆಗ್ರಹಕ್ಕೆ ಸರ್ಕಾರ ಸ್ಪಂದಿಸುವುದೇ ಎಂಬುದನ್ನು ಕಾದು ನೋಡಬೇಕಿದೆ‌ ಎಂದು ಜನಾಗ್ರಹ ಆಂದೋಲನದ ಪರವಾಗಿ ಕೆ.ಎಲ್. ಅಶೋಕ್ ಮತ್ತು ಮಾಮಾವಳ್ಳಿ ಶಂಕರ್ ಆಶಯ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಬಾಯಿಮಾತಿನಲ್ಲಿ ಕೊರೊನಾ ವಾರಿಯರ್ಸ್ ಎನ್ನದೆ, ದುಡಿದವರಿಗೆ ಗೌರವಧನ ನೀಡಿ- ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...