Homeಮುಖಪುಟನಾಳೆಯ 'ಕರ್ನಾಟಕ ಬಂದ್‌'ಗೆ ಸಂಪೂರ್ಣ ಬೆಂಬಲ ಘೋಷಿಸಿದ ಕಾಂಗ್ರೆಸ್

ನಾಳೆಯ ‘ಕರ್ನಾಟಕ ಬಂದ್‌’ಗೆ ಸಂಪೂರ್ಣ ಬೆಂಬಲ ಘೋಷಿಸಿದ ಕಾಂಗ್ರೆಸ್

"ಕಾಂಗ್ರೆಸ್ ಪಕ್ಷ ರೈತರ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಿದೆ" ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಲು ಹೊರಟಿರುವ ಕೃಷಿ ಮಸೂದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರೈತಸಂಘಟನೆಗಳು ಕರೆ ನೀಡಿರುವ ಸೆಪ್ಟಂಬರ್ 28ರ ಕರ್ನಾಟಕ ಬಂದ್‌ಗೆ ಕರ್ನಾಟಕ ಕಾಂಗ್ರೆಸ್ ಪಕ್ಷವು ಸಂಪೂರ್ಣ ಬೆಂಬಲ ಘೋಷಿಸಿದೆ.

“ಮೋದಿ ಮತ್ತು ಯಡಿಯೂರಪ್ಪ ಸರ್ಕಾರಗಳು ನಮ್ಮ ರೈತರ ಜೀವನ ಮತ್ತು ಜೀವನೋಪಾಯವನ್ನು ಕಸಿದುಕೊಳ್ಳುತ್ತಿವೆ. ಭೂ ಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಯ ತಿದ್ದುಪಡಿಗಳು ನಮ್ಮ ರೈತರನ್ನು ಗುಲಾಮರನ್ನಾಗಿ ಮಾಡುವ ಪಿತೂರಿಯಾಗಿವೆ. ಹಾಗಾಗಿ ನಾಳೆ ರೈತ ಸಂಘಟನೆಗಳು ನಡೆಸುತ್ತಿರುವ ‘ಬಂದ್’ಗೆ ಕರ್ನಾಟಕ ಕಾಂಗ್ರೆಸ್ ಬೆಂಬಲ ನೀಡುತ್ತದೆ” ಎಂದು ಕರ್ನಾಟಕ ರಾಜ್ಯ ಕಾಂಗ್ರೆಸ್‌ನ ನೂತನ ಉಸ್ತುವಾರಿಗಳಾದ ರಣದೀಪ್‌ ಸಿಂಗ್ ಸುರ್ಜೇವಾಲ ತಿಳಿಸಿದ್ದಾರೆ.

ಅಲ್ಲದೇ “ಕಾಂಗ್ರೆಸ್ ಪಕ್ಷ ರೈತರ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಿದೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಹೊತ್ತಿರುವ ರಣದೀಪ್ ಸುರ್ಜೆವಾಲ ಅವರನ್ನು ಸ್ವಾಗತಿಸಿ ಮಾತನಾಡಿದ ಅವರು ‘ರೈತರ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಎಲ್ಲ ರೀತಿಯ ಹೋರಾಟಕ್ಕೆ ಬೆಂಬಲ ನೀಡುತ್ತದೆ’ ಎಂದಿದ್ದಾರೆ.


ಇದನ್ನೂ ಓದಿ: Explainer: ಕೃಷಿ ಮಸೂದೆಗಳಿಂದ ರೈತರಿಗೆ ಲಾಭವಾಗಲಿದೆಯೇ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ...

0
ರಾಜಸ್ಥಾನದ ಬಿಜೆಪಿ ಸರಕಾರ ಅಧಿಕಾರಕ್ಕೇರಿದ ಆರು ತಿಂಗಳಲ್ಲೇ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಮುಖ್ಯಮಂತ್ರಿಯ ಅಧೀನದ ಇಲಾಖೆಯಲ್ಲಿನ ವಸತಿ ಯೋಜನೆಯಲ್ಲಿನ ಲೋಪದೋಷವನ್ನು ಕ್ಯಾಬಿನೆಟ್ ಸಚಿವರೋರ್ವರು ಬಹಿರಂಗಪಡಿಸಿದ್ದು, ಇದರಿಂದ ಸರಕಾರದ ಬೊಕ್ಕಸಕ್ಕೆ 1,146 ಕೋಟಿ ರೂ. ನಷ್ಟವಾಗಿದೆ...