Homeಮುಖಪುಟಗುಜರಾತ್ ಶಾಸಕರ ರಕ್ಷಣೆ ಕೋರಿ ಚುನಾವಣಾ ಆಯೋಗಕ್ಕೆ ‌ಅರ್ಜಿ ಸಲ್ಲಿಸಿದ ಕಾಂಗ್ರೆಸ್

ಗುಜರಾತ್ ಶಾಸಕರ ರಕ್ಷಣೆ ಕೋರಿ ಚುನಾವಣಾ ಆಯೋಗಕ್ಕೆ ‌ಅರ್ಜಿ ಸಲ್ಲಿಸಿದ ಕಾಂಗ್ರೆಸ್

- Advertisement -
- Advertisement -

ಕಾಂಗ್ರೆಸ್‌ ಪಕ್ಷವು ಗುಜರಾತಿನ ಕಾಂಗ್ರೆಸ್ ಶಾಸಕರಿಗೆ ರಕ್ಷಣೆ ಕೋರಿ ಭಾರತೀಯ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿದೆ. ಚುನಾವಣಾ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡದಂತೆ ಗುಜರಾತ್ ಪೊಲೀಸರಿಗೆ ನಿರ್ದೇಶನ ಕೋರಿದೆ.

ಆಡಳಿತರೂಡ ಬಿಜೆಪಿ ಜೂನ್ 19  ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಮುನ್ನ ಪಕ್ಷದ ಬಲವನ್ನು ಕಡಿಮೆ ಮಾಡಲು ಹೊರಟಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಕಾಂಗ್ರೆಸ್ ವಕ್ತಾರ ಅಭಿಷೇಕ್ ಮನು ಸಿಂಗ್ವಿ “ಬಿಜೆಪಿ ಹಲವಾರು ರಾಜ್ಯಗಳ ವಿಧಾನಸಭೆಯಲ್ಲಿ ನಡೆಸಿದಂತೆ ಪ್ರತಿಪಕ್ಷಗಳ ಶಾಸಕರನ್ನು ರಾಜೀನಾಮೆ ನೀಡುವಂತೆ ಒತ್ತಾಯಿಸಿ, ಜನರ ಆದೇಶವನ್ನು ಉಲ್ಲಂಘಿಸುವ ತಂತ್ರವನ್ನು ಮಾಡಲು ಹೊರಟಿದ್ದಾರೆ” ಎಂದಿದ್ದಾರೆ.

ಇತ್ತೀಚೆಗೆ ಕರ್ನಾಟಕ ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿ ತನ್ನ ಸರ್ಕಾರಗಳನ್ನು ಸ್ಥಾಪಿಸಲು ಈ ತಂತ್ರವನ್ನು ಅನುಸರಿಸಿಂತೆ, ರಾಜ್ಯಸಭಾ ಚುನಾವಣೆಯಲ್ಲೂ ಇದೇ ತಂತ್ರವನ್ನು ಬಳಸಿದೆ ಎಂದು ಸಿಂಗ್ವಿ ಆರೋಪಿಸಿದ್ದಾರೆ.

ಕ್ರಿಮಿನಲ್ ಹಿನ್ನೆಲೆ ಇಲ್ಲದ ಗುಜರಾತ್‌ನ ಕಾಂಗ್ರೆಸ್ ಶಾಸಕ ಪಂಜಾಭಾಯ್ ವನ್ಶ್ ಅವರನ್ನು ಈ ವಾರ ಮೂರು ಬಾರಿ ಪೊಲೀಸರು ತಮ್ಮ ಕ್ಷೇತ್ರದಲ್ಲಿ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ವಿಚಾರಣೆಗಾಗಿ ಕರೆಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಹೀಗಾಗಿ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿದ ಕಾಂಗ್ರೆಸ್ “ಆಡಳಿತ ಪಕ್ಷವು ಪೊಲೀಸರನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಹಾಗೂ ಹಿರಿಯ ಶಾಸಕರಿಗೆ ಅನಗತ್ಯವಾಗಿ ಕಿರುಕುಳ ನೀಡುತ್ತಿದೆ ಎಂದು ದೂರಿದೆ. ಇದಲ್ಲದೆ, ಹೇಗಾದರೂ ಕಾನೂನು ಬಾಹಿರವಾಗಿ ಪೊಲೀಸರ ನೆರವಿನೊಂದಿಗೆ ಜೂನ್ 19 ರಂದು ಶಾಸಕರು ಮತದಾನದ ಸ್ಥಳವನ್ನು ತಲುಪುವುದನ್ನು ತಡೆಯುವ ಸಾಧ್ಯತೆಯಿದೆ ಎಂದು ಆರೋಪಿಸಿದೆ.

“ಚುನಾವಣೆಯಲ್ಲಿ ಗೆಲುವು ಸಾಧಿಸಲು ಬಿಜೆಪಿ ಹಳೆಯ ಕ್ರಿಮಿನಲ್ ಪ್ರಕರಣಗಳನ್ನು ಮತ್ತೇ ತೆರೆದು ಶಾಸಕರ ವಿರುದ್ದ ಸುಳ್ಳು ಹಾಗೂ ಕ್ಷುಲ್ಲಕ ಪ್ರಕರಣಗಳನ್ನು ದಾಖಲಿಸಲು ಉದ್ದೇಶಿಸಿದೆ” ಎಂದು ಅರ್ಜಿಯಲ್ಲಿ ಹೇಳಿದೆ.

ಗುಜರಾತ್‌ನ ಐವರು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದರಿಂದ, ಕಾಂಗ್ರೆಸ್ ತನ್ನ ಎಲ್ಲ ಶಾಸಕರನ್ನು ಜೈಪುರಕ್ಕೆ ಕರೆದೊಯ್ದಿತ್ತು, ಆದರೆ ಲಾಕ್‌ಡೌನ್ ಘೋಷಿಸಿದ್ದರಿಂದ ಚುನಾವಣೆ ಮುಂದೂಡಲ್ಪಟ್ಟು, ಎಲ್ಲರೂ ಮರಳುವಂತಾಗಿದೆ.


ಓದಿ: ಏಕತಾ ಪ್ರತಿಮೆಯ ಹೆಸರಲ್ಲಿ ಬುಡಕಟ್ಟು ಜನರ ಭೂಮಿ ಕಿತ್ತುಕೊಳ್ಳುತ್ತಿರುವ ಗುಜರಾತ್ ಸರ್ಕಾರ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...