Homeಮುಖಪುಟಪಕ್ಷದ ಬ್ಯಾಂಕ್‌ ಖಾತೆಗಳನ್ನು ಮುಟ್ಟುಗೋಲು ಹಾಕಲಾಗಿದೆ: ಕಾಂಗ್ರೆಸ್‌ ಆರೋಪ

ಪಕ್ಷದ ಬ್ಯಾಂಕ್‌ ಖಾತೆಗಳನ್ನು ಮುಟ್ಟುಗೋಲು ಹಾಕಲಾಗಿದೆ: ಕಾಂಗ್ರೆಸ್‌ ಆರೋಪ

- Advertisement -
- Advertisement -

ಕಾಂಗ್ರೆಸ್ ಪಕ್ಷವು ತನ್ನ ನಾಲ್ಕು ಪ್ರಮುಖ ಬ್ಯಾಂಕ್ ಖಾತೆಗಳನ್ನು ಆದಾಯ ತೆರಿಗೆ ಇಲಾಖೆಯು “ಕ್ಷುಲ್ಲಕ ಕಾರಣಕ್ಕೆ” ಸ್ಥಗಿತಗೊಳಿಸಿದೆ ಎಂದು ಶುಕ್ರವಾರ ಆರೋಪಿಸಿದೆ.

ಪಕ್ಷದ ಯುವ ಘಟಕದ ಬ್ಯಾಂಕ್ ಖಾತೆಯನ್ನೂ ಸ್ಥಗಿತಗೊಳಿಸಲಾಗಿದೆ. 2018-19 ಚುನಾವಣಾ ವರ್ಷಕ್ಕೆ ಪಕ್ಷದಿಂದ ಆದಾಯ ತೆರಿಗೆ ಇಲಾಖೆಯು ರೂ. 210 ಕೋಟಿ ತೆರಿಗೆ ಬೇಡಿಕೆ ಇರಿಸಿದೆ. ಇದು ರಾಜಕೀಯ ಪ್ರೇರಿತ ಕ್ರಮವಾಗಿದೆ ಮತ್ತು ಪಕ್ಷದ ಚುನಾವಣಾ ತಯಾರಿಗೆ ಅಡ್ಡಿಯುಂಟು ಮಾಡುವ ಯತ್ನ ಎಂದು ಕಾಂಗ್ರೆಸ್‌ ವಕ್ತಾರ ಅಜಯ್‌ ಮಾಕನ್‌ ಹೇಳಿದ್ದಾರೆ.

ಪಕ್ಷವು ಕೆಲ ದಿನಗಳ ಹಿಂದೆ ಸ್ವಲ್ಪ ತಡವಾಗಿ ಆದಾಯ ತೆರಿಗೆ ರಿಟರ್ನ್ ಸಲ್ಲಿಸಿದೆ. ಅದನ್ನೇ ನೆಪವಾಗಿಟ್ಟುಕೊಂಡು ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ. ಈ ಬೆಳವಣಿಗೆ ನೋಡಿದರೆ, ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿಲ್ಲ, ಏಕ-ಪಕ್ಷ ಆಡಳಿತದಂತಿದೆ. ಮುಖ್ಯ ವಿಪಕ್ಷವನ್ನು ದುರ್ಬಲಗೊಳಿಸಲಾಗುತ್ತಿದೆ. ನಾವು ನ್ಯಾಯಾಂಗ, ಮಾಧ್ಯಮ ಮತ್ತು ಜನರಿಂದ ನ್ಯಾಯಕ್ಕಾಗಿ ಕೋರುತ್ತಿದ್ದೇವೆ ಎಂದಿದ್ದಾರೆ.

ಯುವ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಪಕ್ಷದಿಂದ ₹210 ಕೋಟಿ ನೀಡುವಂತೆ ಆದಾಯ ತೆರಿಗೆ ಇಲಾಖೆ ಸೂಚಿಸಿದೆ. ನಮ್ಮ ಖಾತೆಗಳಲ್ಲಿನ ಕ್ರೌಡ್‌ಫಂಡಿಂಗ್ ಹಣವನ್ನು ಸ್ಥಗಿತಗೊಳಿಸಲಾಗಿದೆ. ಚುನಾವಣೆಗೆ ಕೇವಲ 2 ವಾರಗಳ ಮೊದಲು ಪ್ರತಿಪಕ್ಷಗಳ ಖಾತೆಗಳನ್ನು ಸ್ಥಗಿತಗೊಳಿಸಿದರೆ ಅದು ಪ್ರಜಾಪ್ರಭುತ್ವವನ್ನು ಸ್ಥಗಿತಗೊಳಿಸಿದಂತೆ ಎಂದು ಮಾಕನ್ ಹೇಳಿದ್ದಾರೆ.

ಸದ್ಯ ನಮ್ಮ ಬಳಿ ಖರ್ಚು ಮಾಡಲು, ವಿದ್ಯುತ್ ಬಿಲ್ ಪಾವತಿಸಲು, ನಮ್ಮ ಉದ್ಯೋಗಿಗಳಿಗೆ ಸಂಬಳ ನೀಡಲು ಯಾವುದೇ ಹಣವಿಲ್ಲ. ಭಾರತ್ ಜೋಡೋ ನ್ಯಾಯ ಯಾತ್ರೆ ಸೇರಿದಂತೆ ಎಲ್ಲಾ ರಾಜಕೀಯ ಚಟುವಟಿಕೆಗಳ ಮೇಲೆ ಇದು ಪರಿಣಾಮ ಬೀರಿದೆ. ಬ್ಯಾಂಕ್‌ ಖಾತೆಗಳ ಮುಟ್ಟುಗೋಲು ನಿನ್ನೆಯಷ್ಟೇ ತಿಳಿದು ಬಂತು. ಒಟ್ಟು ನಾಲ್ಕು ಖಾತೆಗಳು ಬಾಧಿತವಾಗಿವೆ ಎಂದು ಪಕ್ಷದ ವಕೀಲರಾದ ವಿವೇಕ್‌ ತಂಖ ತಿಳಿಸಿದ್ದಾರೆ ಎಂದಿದ್ದಾರೆ.

ಆದಾಯ ತೆರಿಗೆ ಇಲಾಖೆಯ ಕ್ರಮದ ವಿರುದ್ಧ ಪಕ್ಷ ಕಾನೂನು ಮೊರೆ ಹೋಗಿದೆ. ಈ ವಿಚಾರ ಆದಾಯ ತೆರಿಗೆ ಅಪೀಲು ಟ್ರಿಬ್ಯುನಲ್‌ ಮುಂದಿದೆ ಎಂದು ಅವರು ಮಾಕನ್ ಹೇಳಿದ್ದಾರೆ. ವಿಚಾರಣೆ ಬಾಕಿಯಿದ್ದರಿಂದ ಈ ವಿಚಾರವನ್ನು ಈ ಹಿಂದೆ ಬಹಿರಂಗಪಡಿಸಿರಲಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರಾಜ್ಯ ಬಜೆಟ್: ಸುಳ್ಳು ಸುದ್ದಿ ತಡೆಗೆ ಸತ್ಯ ಶೋಧನಾ ತಂಡ ರಚನೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಉತ್ತರ ಪ್ರದೇಶ: ದಲಿತ ಬಾಲಕಿಯ ಸಜೀವ ದಹನ

0
ಬಯಲು ಶೌಚಾಲಯಕ್ಕೆ ತೆರಳಿದ್ದ 13 ವರ್ಷದ ದಲಿತ ಬಾಲಕಿಯನ್ನು ಸುಟ್ಟು ಹಾಕಿರುವ ಆಘಾತಕಾರಿ ಘಟನೆ ಬಿಜೆಪಿ ಆಡಳಿತದ ಉತ್ತರಪ್ರದೇಶದ ಹರಯಾ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದಿದೆ. ಬಲರಾಂಪುರ್ ಗ್ರಾಮದಲ್ಲಿ ಬಹಿರ್ದೆಸೆಗೆ ತೆರಳಿದ್ದ 13...