Homeಮುಖಪುಟಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್‌ಗೆ ಹೆಚ್ಚಿನ ಅನುಕೂಲ; ನುಡಿದಂತೆ ನಡೆದ ಪಕ್ಷ ಗೆಲ್ಲಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್‌ಗೆ ಹೆಚ್ಚಿನ ಅನುಕೂಲ; ನುಡಿದಂತೆ ನಡೆದ ಪಕ್ಷ ಗೆಲ್ಲಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

ನುಡಿದಂತೆ ನಡೆದ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುತ್ತದೆ ಎಂಬ ವಿಶ್ವಾಸವಿದ್ದು, ಈ ಬಾರಿ ರಾಜ್ಯದ 20 ಲೋಕಸಭಾ ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ‘ಅಭ್ಯರ್ಥಿ ಆಯ್ಕೆಯಲ್ಲಿ ಯಾವುದೇ ಕಗ್ಗಂಟಿಲ್ಲ, ರಾಜ್ಯದ ಉಳಿದ 4 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಯಾವುದೇ ಕಗ್ಗಂಟಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಈ ಬಾರಿ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ನಾವು ಬಿಜೆಪಿ ಪಕ್ಷದವರ ಹಾಗೆ 28 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂಬ ಸುಳ್ಳು ಹೇಳುವುದಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಮೈಸೂರು, ಚಾಮರಾಜನಗರ ಕ್ಷೇತ್ರವನ್ನೂ ಸೇರಿಸಿದಂತೆ ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದನ್ನು ಕಾಂಗ್ರೆಸ್ ಪ್ರತಿಷ್ಠೆಯಾಗಿ ತೆಗೆದುಕೊಳ್ಳಲಿದೆ’ ಎಂದರು.

ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷದ ನೆರವಿಗೆ ಬರಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ‘ನಮ್ಮ ಸರ್ಕಾರ ನುಡಿದಂತೆ ನಡೆದಿದ್ದು, ಜನರಿಗೆ ನೀಡಿದ ಭರವಸೆಗಳನ್ನು ಅಧಿಕಾರಕ್ಕೆ ಬಂದ ಕೂಡಲೇ ಜಾರಿಗೊಳಿಸಲಾಗಿದೆ. ಗ್ಯಾರಂಟಿಗಳಿಗೆ ಈ ವರ್ಷ ₹36000 ಕೋಟಿ ಹಾಗೂ ಮುಂದಿನ ವರ್ಷ ₹52009 ಕೋಟಿ ವೆಚ್ಚ ಮಾಡಲಿದ್ದೇವೆ. ಬಿಜೆಪಿಯವರಂತೆ ಸುಳ್ಳು ಹೇಳದೇ, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ’ ಎಂದರು.

ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಮಾಡಿರುವ ಸಾಧನೆಗಳ ಆಧಾರದ ಮೇಲೆ ಚುನಾವಣೆಯನ್ನು ಎದುರಿಸಲಿದ್ದು, ಜನತೆ ವಿಧಾನಸಭಾ ಚುನಾವಣೆಯಂತೆ ನಮ್ಮ ಪಕ್ಷದ ಕೈ ಹಿಡಿಯಲಿದ್ದಾರೆ. ನುಡಿದಂತೆ ನಡೆದ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುತ್ತದೆ ಎಂಬ ವಿಶ್ವಾಸವಿದೆ ಎಂದರು.

ಶಕ್ತಿ ಯೋಜನೆ ಹೊರತುಪಡಿಸಿದರೆ ಯಾವುದೇ ಗ್ಯಾರಂಟಿಗಳು ಜನರಿಗೆ ಸಮರ್ಪಕವಾಗಿ ತಲುಪುತ್ತಿಲ್ಲ ಎಂಬ ಬಿಜೆಪಿಯವರ ಆರೋಪಕ್ಕೆ ಪ್ರತಿಕ್ರಿಯೆ ನೀಡುತ್ತಾ, ‘ಬಿಜೆಪಿಯವರು ನುಡಿದಂತೆ ನಡೆಯಲಿಲ್ಲ. 2018 ರಲ್ಲಿ ಬಿಜೆಪಿಯವರು ನೀಡಿದ 600 ಭರವಸೆಗಳಲ್ಲಿ ಶೇ. 10 ರಷ್ಟನ್ನೂ ಈಡೇರಿಸಲಿಲ್ಲ. ಪ್ರಧಾನಿ ಮೋದಿಯವರೂ ಕೂಡ ಜನರ ಖಾತೆಗಳಿಗೆ ₹15 ಲಕ್ಷ , 20 ಕೋಟಿ ಉದ್ಯೋಗವಾಗಲಿ, ರೈತರ ಆದಾಯ ದ್ವಿಗುಣಗೊಳಿಸುವ ಯಾವುದೇ ಭರವಸೆಗಳನ್ನು ಈಡೇರಿಸಲಿಲ್ಲ. ಅಚ್ಛೇ ದಿನ್ ತರುವ ಭರವಸೆಯನ್ನು ಹುಸಿಗೊಳಿಸಿದ ಮೋದಿಯವರನ್ನು ಜನರು ಯಾಕೆ ನಂಬುತ್ತಾರೆ’ ಎಂದು ಸಿಎಂ ಪ್ರಶ್ನಿಸಿದರು.

ಜನಾಭಿಪ್ರಾಯಕ್ಕೆ ಮನ್ನಣೆ

ಕುಟುಂಬ ರಾಜಕಾರಣವನ್ನು ವಿರೋಧಿಸುವ ಮುಖ್ಯಮಂತ್ರಿಗಳೇ ತಮ್ಮ ಸಚಿವರ ಕುಟುಂಬದವರಿಗೆ ಈ ಬಾರಿ ಟಿಕೆಟ್ ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡುತ್ತಾ, ಇದು ಕುಟುಂಬ ರಾಜಕಾರಣವಲ್ಲ. ಜನರು ಯಾವ ಅಭ್ಯರ್ಥಿಗೆ ಬೆಂಬಲ ಸೂಚಿಸಬಹುದೆಂಬ ಚಿಂತನೆಯ ಮೇಲೆ ಅವರನ್ನು ಆಯ್ಕೆ ಮಾಡಲಾಗಿದ್ದು, ಜನರ ಅಭಿಪ್ರಾಯಕ್ಕೆ ಮನ್ನಣೆ ನೀಡಲಾಗಿದೆ ಎಂದರು.

ಇದನ್ನೂ ಓದಿ; ಉತ್ತರ ಪ್ರದೇಶ: ಹೋಳಿ ಹಬ್ಬದಲ್ಲಿ ಮುಸ್ಲಿಂ ಕುಟುಂಬಕ್ಕೆ ಕಿರುಕುಳ ಪ್ರಕರಣ; ಓರ್ವನ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...