Homeಮುಖಪುಟ’ಸುಳ್ಳುಗಳು, ಪಕ್ಷಾಂತರ ಮತ್ತು ಅಣಕ’: ಫಡ್ನವಿಸ್‌ ರಾಜಿನಾಮೆ ನಂತರ ಕಾಂಗ್ರೆಸ್‌ನಿಂದ 8 ಪ್ರಶ್ನೆಗಳು

’ಸುಳ್ಳುಗಳು, ಪಕ್ಷಾಂತರ ಮತ್ತು ಅಣಕ’: ಫಡ್ನವಿಸ್‌ ರಾಜಿನಾಮೆ ನಂತರ ಕಾಂಗ್ರೆಸ್‌ನಿಂದ 8 ಪ್ರಶ್ನೆಗಳು

- Advertisement -
- Advertisement -

ಬಿಜೆಪಿಯ ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ಪೀಕರಿಸಿದ ಮೂರು ದಿನಗಳಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಂತರ ಕಾಂಗ್ರೆಸ್ ಅವರು ಕ್ಷಮೆಯಾಚಿಸಬೇಕೆಂದು ಪಟ್ಟು ಹಿಡಿದಿದ್ದು ಬಿಜೆಪಿಗೆ ಎಂಟು ಪ್ರಶ್ನೆಗಳನ್ನು ಹಾಕಿದೆ.

ದೇವೇಂದ್ರ ಫಡ್ನವೀಸ್ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವುದಾಗಿ ಘೋಷಿಸಿದ ಕೆಲವೇ ನಿಮಿಷಗಳಲ್ಲಿ ಕಾಂಗ್ರೆಸ್‌ ಪಕ್ಷದ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಆ ಪ್ರಶ್ನೆಗಳನ್ನು ಟ್ವೀಟ್ ಮಾಡಿದ್ದಾರೆ.

ಬಿಜೆಪಿಯ ಚಾಣುಕ್ಯ ನೀತಿ ಎಂದರೆ ಪ್ರಜಾಪ್ರಭುತ್ವದ ಅಪಹರಣ ಎಂಬುದು ಈಗ ಸ್ಪಷ್ಟವಾಗಿದೆ. ದೇವೇಂದ್ರ ಫಡ್ನವೀಸ್ ಮತ್ತು ಅಜಿತ್ ಪವಾರ್ ಮಹಾರಾಷ್ಟ್ರದ ಜನರಲ್ಲಿ ಕ್ಷಮೆಯಾಚಿಸಬೇಕು. ಅವರ ಸರ್ಕಾರವು ಸುಳ್ಳು ಮತ್ತು ಪಕ್ಷಾಂತರವನ್ನು ಆಧರಿಸಿದೆ ಎಂದು ಸುರ್ಜೆವಾಲಾ ಸರಣಿ ಟ್ವೀಟ್‌ಗಳಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್‌ ರಾಜಿನಾಮೆ…

“ಈಗ ಆಗಿರುವ ಅನಾಹುತಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಅವರು ಹೊಣೆಯಾಗಿದ್ದು ನಮ್ಮ ಪ್ರಶ್ನೆಗಳಿಗೆ ಉತ್ತರಿಸಬೇಕೆಂದು ಪಟ್ಟು ಹಿಡಿದಿದ್ದರೆ. ಆ ಪ್ರಶ್ನೆಗಳು ಕೆಳಗಿನಂತಿವೆ.

1. ಮಹಾರಾಷ್ಟ್ರದಲ್ಲಿ ನೀವು ಪ್ರಜಾಪ್ರಭುತ್ವದ ಅಣಕವನ್ನು ಏಕೆ ಮಾಡಿದಿರಿ?

2. ನೀವು ರಾಜ್ಯಪಾಲರನ್ನು ಕೈಗೊಂಬೆಯಾಗಿ ಏಕೆ ಬಳಸಿಕೊಂಡಿರಿ?

3. ರಾಷ್ಟ್ರಪತಿಗಳ ಘನತೆಗೆ ನೀವು ನೋವುಂಟು ಮಾಡಿದ್ದು ಏಕೆ?

4. ನೀವು ದೇಶದ ಕ್ಯಾಬಿನೆಟ್ ಅನ್ನು ಪಾರ್ಶ್ವವಾಯುವಿಗೆ ತಳ್ಳಿದ್ದಾದರೂ ಏಕೆ?

5. ಪಕ್ಷಾಂತರ, ಖರೀದಿ ಮತ್ತು ಮಾರಾಟದ ಮೇಲೆ ನಿಮ್ಮ ಬೆತ್ತಲೆ ಉತ್ಸಾಹ ಏಕೆ?

6. ಅಲ್ಪಸಂಖ್ಯಾತ ಬಲದ ಸರ್ಕಾರವಿದ್ದರೂ ಬಹುಮತದ ಸರ್ಕಾರದಂತೆ ನಾಟಕವಾಡಿದ್ದು ಏಕೆ?

7. ಭ್ರಷ್ಟಾಚಾರದ ಪ್ರಕರಣಗಳನ್ನು ನೀವು ಏಕೆ ಹಿಂತೆಗೆದುಕೊಂಡಿರಿ?

8. ನೀವು ಸಂವಿಧಾನವನ್ನು ಏಕೆ ಕಿತ್ತುಹಾಕುತ್ತಿದ್ದೀರಿ? ”

ಕಾಂಗ್ರೆಸ್ ಹಿರಿಯ ಮುಖಂಡರಾದ ಕೆ.ಸಿ.ವೇಣುಗೋಪಾಲ್ ಕೂಡ ಬಿಜೆಪಿ ಮೇಲೆ ದಾಳಿ ನಡೆಸಿದ್ದಾರೆ.

“ಇದು ಸಾಂವಿಧಾನಿಕ ಪ್ರಜಾಪ್ರಭುತ್ವದ ವಿಜಯ. ಕುದುರೆ ವ್ಯಾಪಾರದ ಮೂಲಕ ಸರ್ಕಾರ ಮಾಡಬಹುದೆಂದು ಅವರು ಯೋಚಿಸಿದ್ದರು. ಇದು ದೇವೇಂದ್ರ ಫಡ್ನವೀಸ್ ಅವರ ವೈಫಲ್ಯ ಮಾತ್ರವಲ್ಲದೆ ದೆಹಲಿಯಲ್ಲಿ ಕುಳಿತಿರುವ ಅವರ ಯಜಮಾನರ ಮುಖಕ್ಕೆ ಕಪಾಳಮೋಕ್ಷವಾಗಿದೆ ”ಎಂದು ಕೆ.ಸಿ ವೇಣುಗೋಪಾಲ್ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...