Homeಮುಖಪುಟಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ನಿರ್ವಹಿಸಬಹುದು; ತೆರಿಗೆ ನ್ಯಾಯಮಂಡಳಿಯಿಂದ ಮಧ್ಯಂತರ ಆದೇಶ

ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ನಿರ್ವಹಿಸಬಹುದು; ತೆರಿಗೆ ನ್ಯಾಯಮಂಡಳಿಯಿಂದ ಮಧ್ಯಂತರ ಆದೇಶ

- Advertisement -
- Advertisement -

‘ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಕಾಂಗ್ರೆಸ್ ಖಜಾಂಚಿ ಅಜಯ್ ಮಾಕೆನ್ ಶುಕ್ರವಾರ ಹೇಳಿದ ಕೆಲವೇ ಗಂಟೆಗಳ ನಂತರ, ಪಕ್ಷದ ಬ್ಯಾಂಕ್ ಖಾತೆಗಳನ್ನು ನಿರ್ವಹಿಸಲು ಯಾವುದೇ ನಿರ್ಬಂಧಗಳಿಲ್ಲ ಎಂದು ತೆರಿಗೆ ನ್ಯಾಯಮಂಡಳಿ ಹೇಳಿದೆ.

ಈ ಬೆಳವಣಿಗೆಯನ್ನು ರಾಜ್ಯಸಭಾ ಸಂಸದ ಮತ್ತು ವಕೀಲರಾದ ವಿವೇಕ್ ಟಂಖಾ ಅವರು ದೃಢಪಡಿಸಿದ್ದಾರೆ. ಅವರು ದೆಹಲಿಯ ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ ಪೀಠದ ಮುಂದೆ ಕಾಂಗ್ರೆಸ್ ಪಕ್ಷದ ಪರವಾಗಿ ಹಾಜರಾಗಿದ್ದರು.

ಪೀಠದ ಮುಂದೆ ವಾದ ಮಂಡಿಸಿದ ಅವರು, ಪಕ್ಷದ ಖಾತೆಗಳನ್ನು ಸ್ಥಗಿತಗೊಳಿಸಿರುವುದರಿಂದ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ಮನವರಿಕೆ ಮಾಡಿಕೊಟ್ಟಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ತೆರಿಗೆ ನ್ಯಾಯಮಂಡಳಿ, ಬ್ಯಾಂಕ್ ಖಾತೆಗೆ ಮಾತ್ರ ಬದ್ಧತೆ ಇರುತ್ತದೆ, ಪಕ್ಷದ ಖಾತೆ ಕಾರ್ಯನಿರ್ವಹಣೆಗೆ ಯಾವುದೇ ನಿರ್ಬಂಧವಿಲ್ಲ ಎಂದು ಎಂದು ಟಂಖಾಗೆ ತಿಳಿಸಿದೆ. ‘ಖಾತೆ ಅರ್ಹತೆಗಳ ವಿಚಾರಣೆಯನ್ನು ಬುಧವಾರ ಕೈಗೆತ್ತಿಕೊಳ್ಳಲಾಗುವುದು’ ಎಂದು ಟಂಖಾ ಹೇಳಿದರು.

ಇಂದು ಮುಂಜಾನೆ, ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾಕೆನ್, ಯುವ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಲಾಗಿದೆ. ಇದೀಗ ನಮ್ಮ ಬಳಿ ಖರ್ಚು ಮಾಡಲು, ವಿದ್ಯುತ್ ಬಿಲ್‌ಗಳನ್ನು ಪಾವತಿಸಲು, ನಮ್ಮ ಉದ್ಯೋಗಿಗಳಿಗೆ ಸಂಬಳ ನೀಡಲು ಯಾವುದೇ ಹಣವಿಲ್ಲ. ಎಲ್ಲದರ ಮೇಲೂ ಪರಿಣಾಮ ಬೀರುತ್ತದೆ. ನ್ಯಾಯ ಯಾತ್ರೆ ಮಾತ್ರವಲ್ಲದೆ ಎಲ್ಲ ರಾಜಕೀಯ ಚಟುವಟಿಕೆಗಳ ಮೇಲೆ ಪರಿಣಾಮ ಬೀರುತ್ತದೆ…’ ಎಂದು ಹೇಳಿದರು.

‘ನಾವು ನೀಡುವ ಚೆಕ್ ಅನ್ನು ಬ್ಯಾಂಕ್‌ಗಳು ಸ್ವೀಕರಿಸುತ್ತಿಲ್ಲ ಎಂಬ ಮಾಹಿತಿ ನಿನ್ನೆ ನಮಗೆ ಸಿಕ್ಕಿತು. ಹೆಚ್ಚಿನ ತನಿಖೆ ನಡೆಸಿದಾಗ, ಯೂತ್ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂಬುದು ನಮಗೆ ತಿಳಿದುಬಂದಿದೆ’ ಎಂದು ಹೇಳಿದರು.

‘ಕಾಂಗ್ರೆಸ್ ಪಕ್ಷದ ಖಾತೆಗಳನ್ನೂ ಜಪ್ತಿ ಮಾಡಲಾಗಿದೆ. ಯುವ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಪಕ್ಷದಿಂದ 210 ಕೋಟಿ ರೂ. ವಸೂಲಿಗಾಗಿ ಆದಾಯ ತೆರಿಗೆ ಕೇಳುತ್ತಿದೆ. ನಮ್ಮ ಖಾತೆಗಳಲ್ಲಿ ಕ್ರೌಡ್ ಫಂಡಿಂಗ್ ಹಣವನ್ನು ಸ್ಥಗಿತಗೊಳಿಸಲಾಗಿದೆ. ಚುನಾವಣೆಗೆ ಎರಡು ವಾರಗಳ ಮೊದಲು, ಪ್ರತಿಪಕ್ಷಗಳ ಖಾತೆಗಳನ್ನು ಸ್ಥಗಿತಗೊಳಿಸುವುದು ಪ್ರಜಾಪ್ರಭುತ್ವವನ್ನು ವಿರೋಧಿಯಾಗಿದೆ’ ಎಂದು ಮಾಕೆನ್ ಹೇಳಿದರು.

ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳುಗಳ ಬಾಕಿ ಇರುವಾಗ, ಅನಾಮಧೇಯ ರಾಜಕೀಯ ನಿಧಿಯ ಕೇಂದ್ರದ ಚುನಾವಣಾ ಬಾಂಡ್‌ಗಳ ಯೋಜನೆಯನ್ನು  ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ. ಮಾರ್ಚ್ 13ರೊಳಗೆ ಬಾಂಡ್‌ನ ದಾನಿಗಳು, ಮೊತ್ತ ಮತ್ತು ಸ್ವೀಕರಿಸುವವರ ವಿವರಗಳನ್ನು ಬಹಿರಂಗಪಡಿಸುವಂತೆ ನ್ಯಾಯಾಲಯ ಆದೇಶಿಸಿದೆ.

ಇದನ್ನೂ ಓದಿ; ಪಕ್ಷದ ಬ್ಯಾಂಕ್‌ ಖಾತೆಗಳನ್ನು ಮುಟ್ಟುಗೋಲು ಹಾಕಲಾಗಿದೆ: ಕಾಂಗ್ರೆಸ್‌ ಆರೋಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...