Homeಕರ್ನಾಟಕವಿಧಾನಪರಿಷತ್ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣಗೆ ಗೆಲುವು

ವಿಧಾನಪರಿಷತ್ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣಗೆ ಗೆಲುವು

- Advertisement -
- Advertisement -

ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಎ.ಪಿ. ರಂಗನಾಥ್ ಅವರಿಗೆ ಸೋಲಾಗಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 19,152 ಮತದಾರರಿದ್ದು, ಈ ಉಪ ಚುನಾವಣೆಯಲ್ಲಿ 16,544 ಮಂದಿ ತಮ್ಮ ಹಕ್ಕನ್ನು ಚಲಾಯಿಸಿದ್ದರು. ಈ ಪೈಕಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ 8,260 ಮತಗಳನ್ನು ಗಳಿಸಿದರೆ, ಬಿಜೆಪಿ-ಜೆಡಿಎಸ್‌ ಮೈತ್ರಿಯ ಅಭ್ಯರ್ಥಿ ಎ.ಪಿ. ರಂಗನಾಥ್ 6,753 ಮತಗಳನ್ನು ಪಡೆದಿದ್ದಾರೆ. ಪುಟ್ಟಣ್ಣ1,507 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.

ಪುಟ್ಟಣ್ಣ ಗೆಲುವು ದಾಖಲಿಸುತ್ತಿದ್ದಂತೆ ಅವರ ಬೆಂಬಲಿಗರು ಸರ್ಕಾರಿ ಆರ್ಟ್ಸ್ ಕಾಲೇಜ್ ಮುಂಭಾಗ ಡೋಲು ಬಡಿದು ಕುಣಿದು ಸಂಭ್ರಮಿಸಿದ್ದಾರೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯು ಫೆ. 17ರಂದು ನಡೆದಿತ್ತು. ಒಟ್ಟಾರೆ ಸುಮಾರು ಶೇ. 86.38ರಷ್ಟು ಮತದಾನವಾಗಿತ್ತು. ಬೆಂಗಳೂರು ನಗರ ಬಿಬಿಎಂಪಿ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಮತದಾನ ನಡೆದಿತ್ತು.

ಈ ಹಿಂದೆ ಪುಟ್ಟಣ್ಣ ಅವರು ಬಿಜೆಪಿಯಿಂದ ವಿಧಾನಪರಿಷತ್ ಸದಸ್ಯರಾಗಿದ್ದರು. ಆದರೆ, ವಿಧಾನಸಭಾ ಚುನಾವಣೆಯ ಸಂದರ್ಭ ಕಾಂಗ್ರೆಸ್‌ ಸೇರ್ಪಡೆಗೊಂಡು ರಾಜಾಜಿನಗರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು. ಇದೀಗ ಮತ್ತೆ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದಾರೆ. ಪುಟ್ಟಣ್ಣ ಅವರ ವಿಧಾನ ಪರಿಷತ್‍ನ ಸದಸ್ಯತ್ವದ ಅವಧಿ 2026ರ ನವೆಂಬರ್ 11ರವರೆಗೆ ಇರಲಿದೆ.

ಇದನ್ನೂ ಓದಿ : ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಸೋನಿಯಾ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...