Homeಮುಖಪುಟ‘ಗೋವಾದಲ್ಲಿ ಕಾಂಗ್ರೆಸ್ ಛೋಡೋ ಯಾತ್ರೆ!’: ಪಕ್ಷದ 11 ಶಾಸಕರಲ್ಲಿ 8 ಮಂದಿ ಬಿಜೆಪಿ ಸೇರ್ಪಡೆ

‘ಗೋವಾದಲ್ಲಿ ಕಾಂಗ್ರೆಸ್ ಛೋಡೋ ಯಾತ್ರೆ!’: ಪಕ್ಷದ 11 ಶಾಸಕರಲ್ಲಿ 8 ಮಂದಿ ಬಿಜೆಪಿ ಸೇರ್ಪಡೆ

- Advertisement -
- Advertisement -

ರಾಹುಲ್ ಗಾಂಧಿ ಅವರು ಪ್ರಾರಂಭಿಸಿರುವ 150 ದಿನಗಳ ಭಾರತ್‌ ಜೋಡೋ ಯಾತ್ರೆಯ ಮಧ್ಯೆಯೆ ಗೋವಾದ 8 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿರುವ ಘಟನೆ ಬುಧವಾರ ನಡೆದಿದೆ. ಪ್ರಧಾನಿ ಮೋದಿ ಮತ್ತು ಸಿಎಂ ಪ್ರಮೋದ್ ಸಾವಂತ್ ಅವರ ಕೈ ಬಲಪಡಿಸಲು ಪಕ್ಷದ ಶಾಸಕರು ಬಿಜೆಪಿ ಸೇರಿದ್ದಾರೆ ಎಂದು ಶಾಸಕ ಮೈಕೆಲ್ ಲೋಬೋ ಹೇಳಿದ್ದಾರೆ.

ಮಾಜಿ ಸಿಎಂ ದಿಗಂಬರ್ ಕಾಮತ್, ವಿರೋಧ ಪಕ್ಷದ ನಾಯಕ ಮೈಕೆಲ್ ಲೋಬೋ ಸೇರಿದಂತೆ ಎಂಟು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದು, ಇದರಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್‌ ಶಾಸಕರ ಸಂಖ್ಯೆ ಮೂರಕ್ಕೆ ಇಳಿದಿದೆ. ಈ ಹಿಂದೆ ಅಲ್ಲಿ ಪಕ್ಷಕ್ಕೆ 11 ಶಾಸಕರು ಇದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪ್ರಧಾನಿ ಮೋದಿ ಮತ್ತು ಸಿಎಂ ಪ್ರಮೋದ್ ಸಾವಂತ್ ಅವರ ಕೈ ಬಲಪಡಿಸಲು ನಾವು ಬಿಜೆಪಿ ಸೇರಿದ್ದೇವೆ… ಕಾಂಗ್ರೆಸ್ ಬಿಟ್ಟು, ಬಿಜೆಪಿ ಒಗ್ಗೂಡಿಸಿ (ಕಾಂಗ್ರೆಸ್ ಛೋಡೋ, ಬಿಜೆಪಿ ಕೋ ಜೋಡೋ)” ಎಂದು ಕಾಂಗ್ರೆಸ್ ಮಾಜಿ ಶಾಸಕ ಮೈಕಲ್ ಲೋಬೋ ಹೇಳಿದ್ದಾರೆ.

ಇದನ್ನೂ ಓದಿ: ನಾನು ಗಾಂಧಿ ಕುಟುಂಬದ ವಿರುದ್ಧ ಮಾತನಾಡಿದ್ದಕ್ಕೆ ನನ್ನ ಮಗಳು ಟಾರ್ಗೆಟ್: ಗೋವಾ ಬಾರ್ ವಿವಾದದ ಬಗ್ಗೆ ಸ್ಮೃತಿ ಇರಾನಿ

ಗೋವಾ ಕಾಂಗ್ರೆಸ್ ಶಾಸಕರು ರಾಜ್ಯದ ಆಡಳಿತರೂಢ ಪಕ್ಷಕ್ಕೆ ಸೇರ್ಪಡೆಗೊಂಡ ನಂತರ, ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲಾ ಅವರು, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ಚಿತ್ರದೊಂದಿಗೆ “ಗೋ ಗೋವಾ ಗಾನ್” ಎಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿಗೆ ಸೇರಿದ ಶಾಸಕರಲ್ಲಿ ದಿಗಂಬರ್ ಕಾಮತ್, ಮೈಕೆಲ್ ಲೋಬೋ, ದೇಲಿಲಾ ಲೋಬೋ, ರಾಜೇಶ್ ಫಾಲ್ದೇಸಾಯಿ, ಕೇದಾರ್ ನಾಯಕ್, ಸಂಕಲ್ಪ್ ಅಮೋನ್ಕರ್, ಅಲೆಕ್ಸೋ ಸಿಕ್ವೇರಾ ಮತ್ತು ರುಡಾಲ್ಫ್ ಫೆರ್ನಾಂಡಿಸ್ ಸೇರಿದ್ದಾರೆ. ಈ ಎಲ್ಲಾ ಶಾಸಕರು ಸಿಎಂ ಪ್ರಮೋದ್ ಸಾವಂತ್ ಅವರನ್ನು ಭೇಟಿಯಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ: ಗೋವಾ ಕಾಂಗ್ರೆಸ್ ಶಾಸಕರ ಪಕ್ಷಾಂತರಕ್ಕೆ ತಾತ್ಕಾಲಿಕ ತಡೆ: ಬಿಜೆಪಿ ಸೇರಲು ತಲಾ 20 ಕೋಟಿ ರೂ ಆಮಿಷದ ಆರೋಪ

“ಇಂದು ಬಿಜೆಪಿಗೆ ಸೇರ್ಪಡೆಗೊಂಡ 8 ಶಾಸಕರನ್ನು ನಾನು ಸ್ವಾಗತಿಸುತ್ತೇನೆ. ಕಾಂಗ್ರೆಸ್ ‘ಭಾರತ್ ಜೋಡೋ ಯಾತ್ರೆ’ ಆರಂಭಿಸಿದೆ. ಆದರೆ ನನ್ನ ಪ್ರಕಾರ ‘ಕಾಂಗ್ರೆಸ್ ಛೋಡೋ ಯಾತ್ರೆ’ ಗೋವಾದಲ್ಲಿ ಪ್ರಾರಂಭವಾಗಿದೆ. ದೇಶಾದ್ಯಂತ ಜನರು ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಾರೆ” ಎಂದು ಗೋವಾ ಸಿಎಂ ಪ್ರಮೋದ್ ಸಾವಂತ್ ಹೇಳಿದ್ದಾರೆ.

ಈ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ಎಎಪಿ ನಾಯಕ ರಾಘವ್ ಚಡ್ಡಾ, “ದೆಹಲಿ ಮತ್ತು ಪಂಜಾಬ್‌ನಲ್ಲಿ ಆಪರೇಷನ್ ಕಮಲ ವಿಫಲವಾಗಿದೆ, ಗೋವಾದಲ್ಲಿ ಯಶಸ್ವಿಯಾಗಿದೆ” ಎಂದು ಹೇಳಿದ್ದಾರೆ.

ಎಂಟು ಕಾಂಗ್ರೆಸ್ ಶಾಸಕರು ಆಡಳಿತ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಶೇಟ್ ತನವಡೆ ಹೇಳಿದ ಬೆನ್ನಲ್ಲೇ ಗೋವಾ ಕಾಂಗ್ರೆಸ್ ಶಾಸಕಾಂಗ ಪಕ್ಷವು ಭಾರತೀಯ ಜನತಾ ಪಕ್ಷಕ್ಕೆ ವಿಲೀನಗೊಳ್ಳುವ ನಿರ್ಣಯವನ್ನು ಅಂಗೀಕರಿಸಿದೆ.

ಇದನ್ನೂ ಓದಿ: ಗೋವಾದಲ್ಲಿ ಬಿಜೆಪಿಯ ಗೆಲುವಿನ ಓಟ ಮುಂದುವರಿಯುತ್ತಿರುವುದು ಹೇಗೆ?

ಏಳು ಶಾಸಕರ ಸಮ್ಮುಖದಲ್ಲಿ ಪ್ರತಿಪಕ್ಷದ ನಾಯಕ ಮೈಕೆಲ್ ಲೋಬೊ ನಿರ್ಣಯ ಮಂಡಿಸಿದ್ದು, ಈ ನಿರ್ಣಯವನ್ನು ಮಾಜಿ ಮುಖ್ಯಮಂತ್ರಿ ಮತ್ತು ಶಾಸಕ ದಿಗಂಬರ್ ಕಾಮತ್ ಅನುಮೋದಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿವೆ.

40 ಸದಸ್ಯರ ಗೋವಾ ವಿಧಾನಸಭೆಯಲ್ಲಿ ಕಾಂಗ್ರೆಸ್ 11 ಶಾಸಕರನ್ನು ಹೊಂದಿತ್ತು ಮತ್ತು ಬಿಜೆಪಿ 20 ಶಾಸಕರನ್ನು ಹೊಂದಿತ್ತು. 2019ರ ಜುಲೈ ತಿಂಗಳಲ್ಲಿ ಕೂಡಾ ಇದೇ ರೀತಿಯಲ್ಲಿ 10 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರಿದ್ದರು.

ಗೋವಾದ ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್ ಮತ್ತು ಮೈಕೆಲ್ ಲೋಬೊ ಅವರು ಪಕ್ಷದಲ್ಲಿ ಮೂರನೇ ಎರಡರಷ್ಟು ವಿಭಜನೆಗೆ ಪ್ರಯತ್ನಿಸಿದ್ದಾರೆ ಎಂದು ಜುಲೈನಲ್ಲಿ ಕಾಂಗ್ರೆಸ್ ಆರೋಪಿಸಿತ್ತು. ಬಿಜೆಪಿ ಸೇರಿರುವ ಪಕ್ಷದ ಶಾಸಕರ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪಕ್ಷದ ಗೋವಾ ಉಸ್ತುವಾರಿ ದಿನೇಶ್ ಗುಂಡೂರಾವ್, “ಬಿಜೆಪಿ ಪಕ್ಷದ ಶಾಸಕರಿಗೆ 25 ಕೋಟಿ ರೂ. ಗಳನ್ನು ನೀಡಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಖ್ಯಾತ ಇತಿಹಾಸ ತಜ್ಞ, ಮಂಗಳೂರು & ಗೋವಾ ವಿ.ವಿ ಉಪ ಕುಲಪತಿ ಪ್ರೊ.ಬಿ.ಷೇಕ್ ಅಲಿ (98) ನಿಧನ

ಪಕ್ಷದಲ್ಲಿ ಪಕ್ಷಾಂತರಕ್ಕೆ ಸಂಚು ರೂಪಿಸಿದ್ದಕ್ಕಾಗಿ ಗೋವಾ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮೈಕೆಲ್ ಲೋಬೋ ಅವರನ್ನು ಕಾಂಗ್ರೆಸ್ ಪದಚ್ಯುತಗೊಳಿಸಿದೆ. ಪಕ್ಷದಲ್ಲಿ ಒಡಕು ಮೂಡಿಸಲು ಯತ್ನಿಸಿದ ಶಾಸಕರಾದ ಮೈಕೆಲ್ ಲೋಬೋ ಮತ್ತು ದಿಗಂಬರ್ ಕಾಮತ್ ಅವರನ್ನು ಅನರ್ಹಗೊಳಿಸುವಂತೆ ಕೋರಿ ಗೋವಾ ವಿಧಾನಸಭಾ ಸ್ಪೀಕರ್ ರಮೇಶ್ ತಾವಡ್ಕರ್ ಅವರಿಗೆ ಮನವಿ ಸಲ್ಲಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...