Homeರಾಜಕೀಯಕಾಂಗ್ರೆಸ್ ಚಿಂತನ್‌ ಶಿಬಿರ: ಒಂದು ಕುಟುಂಕ್ಕೆ ಒಂದು ಟಿಕೆಟ್‌, ನಾಯಕತ್ವಕ್ಕೆ ವಯಸ್ಸಿನ ಮಿತಿ, ನಿವೃತ್ತಿ ಬಗ್ಗೆ...

ಕಾಂಗ್ರೆಸ್ ಚಿಂತನ್‌ ಶಿಬಿರ: ಒಂದು ಕುಟುಂಕ್ಕೆ ಒಂದು ಟಿಕೆಟ್‌, ನಾಯಕತ್ವಕ್ಕೆ ವಯಸ್ಸಿನ ಮಿತಿ, ನಿವೃತ್ತಿ ಬಗ್ಗೆ ಚರ್ಚೆ ಸಾಧ್ಯತೆ

- Advertisement -
- Advertisement -

ಪಕ್ಷಕ್ಕೆ ಹೊಸ ಮುಖಗಳನ್ನು ನಾಯಕತ್ವದ ಮಟ್ಟಕ್ಕೆ ತರುವ ಆಮೂಲಾಗ್ರ ಚಿಂತನೆಯನ್ನು ಕಾಂಗ್ರೆಸ್ ಉನ್ನತ ನಾಯಕರು ಪರಿಗಣಿಸುತ್ತಿರುವುದಾಗಿ ವರದಿಯಾಗಿದೆ. ಒಂದು ಕುಟುಂಬಕ್ಕೆ ಒಂದು ಟಿಕೆಟ್‌‌, ರಾಜ್ಯಸಭಾ ಸದಸ್ಯರ ಅವಧಿಗೆ ಮಿತಿ ಹೇರುವುದು, ಜೊತೆಗೆ ಸಂಘಟನೆಯ ಎಲ್ಲಾ ಹಂತಗಳಲ್ಲಿ ಸ್ಥಾನಮಾನಗಳನ್ನು ಅಲಂಕರಿಸಲು ಮತ್ತು ಚುನಾವಣೆಯಲ್ಲಿ ಸ್ಪರ್ಧಿಸಲು ನಾಯಕರಿಗೆ ವಯಸ್ಸಿನ ಮಿತಿಯನ್ನು ವಿಧಿಸಲು ಪಕ್ಷವು ಗಂಭೀರವಾಗಿ ಚಿಂತನೆ ನಡೆಸುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಉದಯಪುರದಲ್ಲಿ ಶುಕ್ರವಾರ ಪ್ರಾರಂಭವಾಗುವ ‘‘ಕಾಂಗ್ರೆಸ್ ಚಿಂತನ್ ಶಿಬಿರ್‌”ನಲ್ಲಿ ಈ ಬಗ್ಗೆ ಪಕ್ಷವು “ಗಂಭೀರವಾಗಿ ಯೋಚಿಸುತ್ತಿದೆ” ಎಂದು ಪಕ್ಷದ ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌‌ಪ್ರೆಸ್‌ ಹೇಳಿದ್ದು, ಆದರೆ ಈ ಪ್ರಸ್ತಾಪಗಳು ಯಾವ ರೂಪವನ್ನು ಪಡೆಯುತ್ತದೆ ಎಂದು ಇನ್ನೂ ಸ್ಪಷ್ಟವಾಗಿಲ್ಲ ಎಂದು ವರದಿ ಮಾಡಿದೆ. ಕಾಂಗ್ರೆಸ್‌ನ ಈ ಚಿಂತನೆಯು ಪಕ್ಷಕ್ಕೆ “ಯುವತ್ವವನ್ನು” ನೀಡುವ ಪ್ರಯತ್ನದ ಭಾಗವಾಗಿದೆ ಎಂದು ಅದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈ ದಿಕ್ಕಿನಲ್ಲಿ ಖಂಡಿತವಾಗಿಯೂ ಚಿಂತನೆ ಇದೆ ಎಂದು ನಾನು ನಿಮಗೆ ಹೇಳಬಲ್ಲೆ… ಈ ಬಗ್ಗೆ ನಾವು ಗಂಭೀರವಾಗಿ ಯೋಚಿಸುತ್ತಿದ್ದೇವೆ, ಆದರೆ ಅದು ಹೇಗೆ ಚರ್ಚೆಯಾಗುತ್ತದೆ ಎಂದು ನಾನು ಈಗ ಹೇಳಲಾರೆ” ಎಂದು ಕಾಂಗ್ರೆಸ್‌ ನಾಯಕರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ನಿಮ್ಮಂಥವರಿಂದ ಕಾಂಗ್ರೆಸ್ ದುಸ್ಥಿತಿಗಿಳಿದಿದೆ: ಪಿ.ಚಿದಂಬರಂ ವಿರುದ್ಧ ಕಾಂಗ್ರೆಸ್‌ ವಕೀಲರ ಆಕ್ರೋಶ

ಪಕ್ಷದ ಚುನಾವಣಾ ಪುನರುಜ್ಜೀವನಕ್ಕೆ ಉದ್ದೇಶಪೂರ್ವಕವಾಗಿ ಮತ್ತು ಮಾರ್ಗಸೂಚಿಯನ್ನು ಕಂಡುಕೊಳ್ಳಲು ನಡೆಯುತ್ತಿರುವ ಚಿಂತನ ಶಿಬಿರದಲ್ಲಿ ಈ ವಿಚಾರಗಳು ಚರ್ಚೆಗೆ ಬರುತ್ತವೆಯೇ ಎಂಬುದನ್ನು ಕಾದು ನೋಡಬೇಕಾಗಿದೆ. ಸುಮಾರು 430 ಕಾಂಗ್ರೆಸ್ ನಾಯಕರು ಶಿಬಿರದಲ್ಲಿ ಒಟ್ಟುಗೂಡಲಿದ್ದಾರೆ ಎಂದು ವರದಿಯಾಗಿದ್ದು, 2014 ರಲ್ಲಿ ಪಕ್ಷದ ಚುನಾವಣಾ ಹಿನ್ನಡೆ ಪ್ರಾರಂಭವಾದ ನಂತರ ಕಾಂಗ್ರೆಸ್‌ ಸೇರುತ್ತಿರುವ ಮೊದಲ ಚಿಂತನಾ ಅಧಿವೇಶನವಾಗಿದೆ.

ಶಿಬಿರದಲ್ಲಿ ಎರಡು ಪ್ರಸ್ತಾವನೆಗಳ ಕುರಿತು ಅಂತಿಮ ರೂಪುರೇಷೆ ಹೊರಬೀಳಬೇಕಿದೆ ಎಂದು ಮೂಲಗಳು ತಿಳಿಸಿವೆ. ವಯಸ್ಸಿನ ಮಿತಿ ಏನಾಗಿರಬೇಕು: 70 ಅಥವಾ 75? ಮತ್ತು ರಾಜ್ಯಸಭೆಯ ಅವಧಿಯನ್ನು 2 ಅಥವಾ 3 ಕ್ಕೆ ಸೀಮಿತಗೊಳಿಸಬೇಕೇ? ಮುಂತಾದ ವಿಷಯದ ಕುರಿತು ಅಧಿವೇಶನದಲ್ಲಿ ಚರ್ಚೆ ನಡೆಯಲಿದೆ.

“ಸಾಂಸ್ಥಿಕ ಪುನರುಜ್ಜೀವನ ನಡೆದಾಗ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಅಥವಾ ಕೇಂದ್ರ ಚುನಾವಣಾ ಸಮಿತಿಯಲ್ಲಿ ನಿರ್ದಿಷ್ಟ ಶೇಕಡಾವಾರು ಯುವ ನಾಯಕರಿಗೆ ಸ್ಥಾನ ಸಿಗುವಂತೆ ನೋಡಿಕೊಳ್ಳಲಾಗುತ್ತದೆ. ಇದು ಪಿಸಿಸಿ (ರಾಜ್ಯ ಘಟಕಗಳು) ಮತ್ತು ಜಿಲ್ಲಾ ಸಮಿತಿಗಳಿಗೂ ಅನ್ವಯಿಸುತ್ತದೆ” ಎಂದು ಕಾಂಗ್ರೆಸ್‌ ನಾಯಕರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ಕಮಲ್ ನಾಥ್ ರಾಜೀನಾಮೆ

70 ಮತ್ತು 75 ವರ್ಷ ಮೇಲ್ಪಟ್ಟ ನಾಯಕರು ಪಕ್ಷದಲ್ಲಿ ಹಲವು ಹಂತಗಳಲ್ಲಿ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಅವರು ಕೆಳಗಿಳಿಯುವಂತೆ ಕೇಳುವ ಸಾಧ್ಯತೆ ಇಲ್ಲ ಎಂದು ಪಕ್ಷದ ಮೂಲಗಳು ತಿಳಿಸಿದ್ದು, ಇದು “ಕ್ರಮೇಣ ಹಂತ-ಹಂತ ಆಗಬಹುದು” ಎಂದು ತಿಳಿಸಿದೆ.

ಸೋನಿಯಾ ಗಾಂಧಿ ಅವರಿಗೆ ವಯಸ್ಸು 75. 2024ರ ಲೋಕಸಭೆ ಚುನಾವಣೆವರೆಗೂ ಅವರನ್ನು ಮುಂದುವರಿಸಬೇಕು ಎಂದು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಒತ್ತಾಯಿಸದ ಹೊರತು ಅವರು ಆಗಸ್ಟ್-ಸೆಪ್ಟೆಂಬರ್‌ನಲ್ಲಿ ಹೊಸ ಅಧ್ಯಕ್ಷರ ಆಯ್ಕೆಗೆ ದಾರಿ ಮಾಡಿಕೊಡುವ ಸೂಚನೆಗಳಿವೆ.

ಉದಯಪುರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಸಂವಹನ ವಿಭಾಗದ ಮುಖ್ಯಸ್ಥ ರಣದೀಪ್ ಸುರ್ಜೇವಾಲಾ, “ಕಾಂಗ್ರೆಸ್ ಜನ (ಜನರು) ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಬೇಕೆಂದು ಬಯಸುತ್ತಾರೆ” ಎಂದು ಪುನರುಚ್ಚರಿಸಿದ್ದು, ಆದರೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ಸಾಂಸ್ಥಿಕ ಚುನಾವಣಾ ಪ್ರಕ್ರಿಯೆಯು ನಡೆಯುತ್ತಿದೆ ಮತ್ತು ಇದು ಆಗಸ್ಟ್‌ನಲ್ಲಿ ಪೂರ್ಣಗೊಳ್ಳಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಬಿಜೆಪಿಯಲ್ಲಿ ಕೆಲವು ಒಳ್ಳೆಯ ವಿಷಯಗಳಿವೆ…’: ಕಾಂಗ್ರೆಸ್‌ಗೆ ಎಚ್ಚರಿಕೆ ರವಾನಿಸಿದ ಹಾರ್ದಿಕ್‌ ಪಟೇಲ್!

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಯಸ್ಸು 79. ಎಐಸಿಸಿ ಪ್ರಧಾನ ಕಾರ್ಯದರ್ಶಿ ಉಮ್ಮನ್ ಚಾಂಡಿ ಅವರ ವಯಸ್ಸು 78, ಸಿಡಬ್ಲ್ಯುಸಿ ಸದಸ್ಯರಾದ ಮನಮೋಹನ್ ಸಿಂಗ್ ಮತ್ತು ಎ.ಕೆ. ಆಂಟನಿ 80 ಮತ್ತು ಅಂಬಿಕಾ ಸೋನಿ, ಹರೀಶ್ ರಾವತ್, ಪಿ. ಚಿದಂಬರಂ, ಗುಲಾಂ ನಬಿ ಆಜಾದ್ 70 ವರ್ಷಕ್ಕಿಂತ ಮೇಲ್ಪಟ್ಟವರು. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ 71 ವರ್ಷ.

ಕಾಂಗ್ರೆಸ್‌ನ ರಾಜ್ಯ ನಾಯಕರುಗಳಲ್ಲಿ, ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಅವರ ವಯಸ್ಸು 75. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಮರಳಿದರೆ, ಅವರು ಮುಖ್ಯಮಂತ್ರಿ ಹುದ್ದೆಗೆ ಮುಂಚೂಣಿಯಲ್ಲಿರುವ ಸಾಧ್ಯತೆಯಿದೆ. ಹರಿಯಾಣದಲ್ಲಿ ಭೂಪಿಂದರ್ ಸಿಂಗ್ ಹೂಡಾ ಪ್ರಕರಣವೂ ಇದೇ ಆಗಿದೆ. ಹಾಗಾದರೆ ಇವರುಗಳ ವಿಷಯದಲ್ಲಿ ಪಕ್ಷವೂ ವಿನಾಯಿತಿ ನೀಡಲಿವೆಯೇ? ಎಂಬ ಅಂಶಗಳ ಬಗ್ಗೆ ಇನ್ನೂ ಸ್ಪಷ್ಟತೆ ಹೊರಬರಬೇಕಿದೆ ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆ ಚಿಂತನ್ ಶಿಬಿರ್‌ದ ಅರ್ಧದಷ್ಟು ಪ್ರತಿನಿಧಿಗಳು 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕತ್ವ ಖಚಿತಪಡಿಸಿದೆ.

ಇದನ್ನೂ ಓದಿ: ತನ್ನ ಹಳ್ಳಿಗೆ ಉತ್ತಮ ರಸ್ತೆ ಕೇಳಿದ ಯುವಕನ ಮೇಲೆ ಹಲ್ಲೆ ನಡೆಸಿದ ಪಾವಗಡ ಕಾಂಗ್ರೆಸ್‌ ಶಾಸಕ ವೆಂಕಟರಮಣಪ್ಪ

ಸಂಘಟನೆಯಲ್ಲಿ ಹುದ್ದೆಗಳನ್ನು ಅಲಂಕರಿಸಲು ಮತ್ತು ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಈಗಾಗಲೇ 75 ವರ್ಷ ವಯಸ್ಸಿನ ಮಿತಿಯನ್ನು ನಿಗದಿಪಡಿಸಿದೆ. ಸಿಪಿಎಂ ಪಾಲಿಟ್‌ಬ್ಯೂರೊ ಮತ್ತು ಕೇಂದ್ರ ಸಮಿತಿ ಸೇರಿದಂತೆ ಎಲ್ಲಾ ತಮ್ಮ ಎಲ್ಲಾ ಸಂಸ್ಥೆಗಳಲ್ಲಿ ಸದಸ್ಯರಿಗೆ 75 ರ ನಿವೃತ್ತಿ ವಯಸ್ಸನ್ನು ಜಾರಿಗೆ ತಂದಿದೆ. ಜೊತೆಗೆ ಸದಸ್ಯರೊಬ್ಬರು ಮೂರನೇ ಬಾರಿಗೆ ರಾಜ್ಯಸಭೆಗೆ ಆಯ್ಕೆಯಾಗುವುದನ್ನು ತಡೆಯುವ ನಿಯಮವನ್ನು ಜಾರಿಗೊಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...