Homeಮುಖಪುಟಕಾಂಗ್ರೆಸ್ ಕೌನ್ಸಿಲರ್‌ಗಳಿಗೆ ಗೋಮೂತ್ರ ಕುಡಿಸಿ 'ಶುದ್ಧೀಕರಣ' ಮಾಡಿದ ಬಿಜೆಪಿ ಶಾಸಕ!

ಕಾಂಗ್ರೆಸ್ ಕೌನ್ಸಿಲರ್‌ಗಳಿಗೆ ಗೋಮೂತ್ರ ಕುಡಿಸಿ ‘ಶುದ್ಧೀಕರಣ’ ಮಾಡಿದ ಬಿಜೆಪಿ ಶಾಸಕ!

- Advertisement -
- Advertisement -

ಜೈಪುರ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ತಮ್ಮ ಪಕ್ಷ ಅಧಿಕಾರ ಹಿಡಿಯಲು ಸಹಾಯ ಮಾಡಿದ ಕಾಂಗ್ರೆಸ್ ಪಕ್ಷದಿಂದ ಪಕ್ಷಾಂತರವಾದ ಕೌನ್ಸಿಲರ್‌ಗಳಿಗೆ ಗೋಮೂತ್ರ ಮತ್ತು ಗಂಗಾಜಲ ಕುಡಿಸಿ ‘ಶುದ್ಧೀಕರಣ ಸಮಾರಂಭ’ವನ್ನು ಬಿಜೆಪಿ ಶಾಸಕರೊಬ್ಬರು ನಡೆಸಿದ ಘಟನೆ ನಡೆದಿದೆ. ಜೈಪುರ ಮುನ್ಸಿಪಲ್ ಕಾರ್ಪೊರೇಷನ್ ಹೆರಿಟೇಜ್ (ಜೆಎಂಸಿಎಚ್) ನ ಹೊಸ ಮೇಯರ್ ಆಗಿ ಕುಸುಮ್ ಯಾದವ್ ಅವರು ಅಧಿಕಾರ ವಹಿಸಿದ್ದು, ಈ ವೇಳೆ ಘಟನೆ ನಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಗುರುವಾರದಂದು ಗಂಗಾಜಲ ಮತ್ತು ಗೋಮೂತ್ರವನ್ನು ಒಳಗೊಂಡ ಶುದ್ಧೀಕರಣ ಆಚರಣೆಯ ನಂತರ ಕುಸುಮ್ ಯಾದವ್ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ಬಿಜೆಪಿ ಶಾಸಕ ಬಲ್ಮುಕುಂದ್ ಆಚಾರ್ಯ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನ ನಡೆಸಲಾಗಿತ್ತು.

ವೇದ ಮಂತ್ರಗಳೊಂದಿಗೆ ನಡೆದ ಶುದ್ಧೀಕರಣ ಸಮಾರಂಭವು ಹತೋಜ್ ಧಾಮ್ ದೇವಾಲಯದ ಪೂಜಾರಿ ಕೂಡಾ ಆಗಿರುವ ಬಲ್ಮುಕುಂದ್ ಆಚಾರ್ಯ ಅವರು ಕುಸುಮ್‌ ಯಾದವ್ ಮಾತ್ರವಲ್ಲದೆ ಬಿಜೆಪಿಯನ್ನು ಬೆಂಬಲಿಸಿ ಪಕ್ಷಾಂತರಗೊಂಡ ಕೆಲವು ಕಾಂಗ್ರೆಸ್ ಕೌನ್ಸಿಲರ್‌ಗಳನ್ನು ಕೂಡಾ ಸಾಂಕೇತಿಕವಾಗಿ ಶುದ್ಧೀಕರಿಸಿದ್ದಾರೆ.

‘ಶುದ್ಧೀಕರಣ ಪ್ರಕ್ರಿಯೆ’ಯ ಅಂಗವಾಗಿ ಕೌನ್ಸಿಲರ್‌ಗಳು ಮತ್ತು ಅಧಿಕಾರಿಗಳಿಗೆ ಸಾಂಕೇತಿಕವಾಗಿ ಗಂಗಾಜಲ ಮತ್ತು ಗೋಮೂತ್ರವನ್ನು ‘ಕುಡಿಯುವಂತೆ’ ಮಾಡಲಾಗಿತ್ತು ಎಂದು ವರದಿಯಾಗಿದೆ.

ಇದನ್ನೂಓದಿ: ‘ಧರ್ಮ ಘೋಷಿಸಿ’ | ಜಗನ್‌ಗೆ ಆಂಧ್ರ ಸಿಎಂ ಸವಾಲು; ತಿರುಪತಿ ಭೇಟಿ ರದ್ದು

ಭ್ರಷ್ಟಾಚಾರ ಆರೋಪದ ಕಾರಣದಿಂದ ಪದಚ್ಯುತಗೊಂಡಿದ್ದ ಕಾಂಗ್ರೆಸ್ ಮೇಯರ್ ಮುನೇಶ್ ಗುರ್ಜಾರ್ ಅವರನ್ನು ಪದಚ್ಯುತಗೊಳಿಸಿದ ಬೆನ್ನಲ್ಲೇ ಕುಸುಮ್ ಯಾದವ್ ಅವರನ್ನು ಮೇಯರ್ ಆಗಿ ನೇಮಕ ಮಾಡಲಾಗಿತ್ತು. ಕುಸುಮ್‌ ಯಾದವ್ ಅವರು ಏಳು ಕಾಂಗ್ರೆಸ್ ಕೌನ್ಸಿಲರ್‌ಗಳು ಮತ್ತು ಸ್ವತಂತ್ರ ಸದಸ್ಯರ ಬೆಂಬಲದೊಂದಿಗೆ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದರು. ಕೌನ್ಸಿಲರ್‌ಗಳಿಗೆ ಗೋಮೂತ್ರ

ಆಪಾದಿತ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವವರನ್ನು ಶುದ್ಧೀಕರಿಸಲು ಶುದ್ಧೀಕರಣ ಸಮಾರಂಭ ಅಗತ್ಯ ಎಂದು ಬಿಜೆಪಿ ಶಾಸಕ ಬಲ್ಮುಕುಂದ್ ಆಚಾರ್ಯ ವಿವರಿಸಿದ್ದಾರೆ. “ನಾವು ಪಾಲಿಕೆಯನ್ನು ಗಂಗಾಜಲದಿಂದ ಶುದ್ಧೀಕರಿಸಿದ್ದೇವೆ, ಎಲ್ಲಾ ಕಲ್ಮಶಗಳನ್ನು ತೆಗೆದುಹಾಕಿದ್ದೇವೆ. ಈಗ ಬಿಜೆಪಿಯನ್ನು ಬೆಂಬಲಿಸಿದ ಕಾಂಗ್ರೆಸ್ ಕೌನ್ಸಿಲರ್‌ಗಳನ್ನು ‘ಸನಾತನಿ’ಗಳನ್ನಾಗಿ ಮಾಡಲಾಗಿದೆ” ಎಂದು ಅವರು ಹೇಳಿದ್ದಾರೆ.

ತನ್ನ ಮಹಾ ಶುದ್ಧೀಕರಣ ಸಮಾರಂಭದಿಂದಾಗಿ ಇಡೀ ಜೈಪುರ ಮುನ್ಸಿಪಲ್ ಕಾರ್ಪೊರೇಶನ್ ಅನ್ನು ‘ಭ್ರಷ್ಟಾಚಾರ ಮುಕ್ತ’ ಮಾಡಲಾಗಿದೆ ಎಂದು ಅವರು ಹೇಳಿಕೆಗಳನ್ನು ನೀಡಿದ್ದಾರೆ.

ಕಾಂಗ್ರೆಸ್ ನಾಯಕ ಪ್ರತಾಪ್ ಸಿಂಗ್ ಖಚರಿಯಾವಾಸ್ ಅವರು ಶಾಸಕ ಆಚಾರ್ಯ ಅವರ ಕೃತ್ಯಗಳನ್ನು ತೀವ್ರವಾಗಿ ಖಂಡಿಸಿದ್ದು, ಅವರ ಅಧಿಕಾರವನ್ನು ಪ್ರಶ್ನಿಸಿದ್ದಾರೆ. “ನೀವು ಶಾಸಕರಾಗಿದ್ದೀರಿ, ಆಧ್ಯಾತ್ಮಿಕ ನಾಯಕರಲ್ಲ. ಕಾಂಗ್ರೆಸ್ ಕೌನ್ಸಿಲರ್‌ಗಳು ಈಗ ಶುದ್ಧ ಮತ್ತು ಸನಾತನಿಗಳು ಎಂದು ನೀವು ಹೇಗೆ ಘೋಷಿಸುತ್ತೀರಿ? ಬಲ್ಮುಕುಂದ್ ಆಚಾರ್ಯ ಸನಾತನ ಧರ್ಮದ ಸ್ವಯಂ ಪ್ರೇರಿತ ರಕ್ಷಕರೆ?” ಎಂದು ಕೇಳಿದ್ದಾರೆ.

ವಿಡಿಯೊ ನೋಡಿ: ಅಟ್ರಾಸಿಟಿ ಕಾದಂಬರಿ ಚರ್ಚೆಯಲ್ಲಿ ವಿಕಾಸ್ ಮತ್ತು ಗುರುಪ್ರಸಾದ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...