ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ಸಂಸದರ ನಿಯೋಗ ಗುರುವಾರ ಪೊಲೀಸ್ ದೂರು ದಾಖಲಿಸಿದೆ. ಬಿಜೆಪಿ ನಿಯೋಗ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ ಬಳಿಕ, ಕಾಂಗ್ರೆಸ್ ಪ್ರತಿದೂರು ನೀಡಿದೆ.
ದಿಗ್ವಿಜಯ ಸಿಂಗ್, ಮುಕುಲ್ ವಾಸ್ನಿಕ್, ರಾಜೀವ್ ಶುಕ್ಲಾ ಮತ್ತು ಪ್ರಮೋದ್ ತಿವಾರಿ ಸೇರಿದಂತೆ ಕಾಂಗ್ರೆಸ್ ಸಂಸದರ ನಿಯೋಗ ಖುದ್ದಾಗಿ ಠಾಣೆಗೆ ಭೇಟಿ ನೀಡಿ ದೂರು ದಾಖಲಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಬಿಜೆಪಿ ನಾಯಕರ ನಿಯೋಗವು ದೆಹಲಿಯ ಡಿಸಿಪಿ ದೇವೇಶ್ ಕುಮಾರ್ ಮಹ್ಲಾ ಅವರ ಕಚೇರಿಯೊಳಗೆ ಇನ್ನೂ ಇತ್ತು, ಕಾಂಗ್ರೆಸ್ ನಾಯಕರು ತಮ್ಮ ದೂರಿನೊಂದಿಗೆ ಬಂದು ಎಸಿಪಿ ಕೊಠಡಿಯೊಳಗೆ ಕಾಯುತ್ತಿದ್ದರು.
ಪೊಲೀಸರು ದೂರನ್ನು ಸ್ವೀಕರಿಸಿದ್ದು, ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಎಂಭತ್ನಾಲ್ಕು ವರ್ಷದ ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ತಳ್ಳಿ ಅನುಚಿತವಾಗಿ ವರ್ತಿಸಿದ್ದಾರೆ. ಈ ಕೃತ್ಯದ ವಿರುದ್ಧ ದೂರು ನೀಡಲು ನಾವು ಇಲ್ಲಿಗೆ ಬಂದಿದ್ದೇವೆ” ಎಂದು ತಿವಾರಿ ಠಾಣೆಯಲ್ಲಿ ಮಾಧ್ಯಮಗಳಿಗೆ ತಿಳಿಸಿದರು.
ಇದಕ್ಕೂ ಮುನ್ನ ಸಂಸತ್ತಿನ ಆವರಣದಲ್ಲಿ ಪ್ರತಿಪಕ್ಷಗಳು ಮತ್ತು ಎನ್‌ಡಿಎ ಸಂಸದರ ನಡುವೆ ಮುಖಾಮುಖಿಯಾಗಿದ್ದು, ಬಿ ಆರ್ ಅಂಬೇಡ್ಕರ್ ಅವರನ್ನು ಅವಮಾನಿಸಿದ ಆರೋಪದ ಮೇಲೆ ನಡೆದ ನೂಕಾಟ-ತಳ್ಳಾಟದಲ್ಲಿ ಮಾಜಿ ಸಚಿವ ಪ್ರತಾಪ್ ಚಂದ್ರ ಸಾರಂಗಿ ಗಾಯಗೊಂಡಿದ್ದಾರೆ.
ರಾಹುಲ್ ಗಾಂಧಿ ಹಿರಿಯ ಸದಸ್ಯರನ್ನು ತಳ್ಳಿದ್ದಾರೆ ಎಂದು ಬಿಜೆಪಿ ಆರೋಪಿಸಿದ್ದು, ಕಾಂಗ್ರೆಸ್ ನಾಯಕ ನಿರಾಕರಿಸಿದ್ದಾರೆ. ಬಿಜೆಪಿ ಸಂಸದರು ತಮ್ಮ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ತಳ್ಳಿದರು ಮತ್ತು ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕನನ್ನು ದೈಹಿಕವಾಗಿ ಹಿಂಸಿಸಿದರು ಎಂದು ಕಾಂಗ್ರೆಸ್ ಹೇಳಿಕೊಂಡಿದೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿರುವ ಕಾಂಗ್ರೆಸ್ ಸಂಸದರು ಘಟನೆಯ ಕುರಿತು ತನಿಖೆಗೆ ಆದೇಶಿಸುವಂತೆ ಕೋರಿದ್ದಾರೆ.


