Homeಮುಖಪುಟಬಿಜೆಪಿ ದೂರಿಗೆ ಕಾಂಗ್ರೆಸ್ ಪ್ರತಿದೂರು; ಖರ್ಗೆ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ ಕಾಂಗ್ರೆಸ್ ನಿಯೋಗ

ಬಿಜೆಪಿ ದೂರಿಗೆ ಕಾಂಗ್ರೆಸ್ ಪ್ರತಿದೂರು; ಖರ್ಗೆ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ ಕಾಂಗ್ರೆಸ್ ನಿಯೋಗ

- Advertisement -
- Advertisement -

ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ಸಂಸದರ ನಿಯೋಗ ಗುರುವಾರ ಪೊಲೀಸ್ ದೂರು ದಾಖಲಿಸಿದೆ. ಬಿಜೆಪಿ ನಿಯೋಗ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ ಬಳಿಕ, ಕಾಂಗ್ರೆಸ್ ಪ್ರತಿದೂರು ನೀಡಿದೆ.

ದಿಗ್ವಿಜಯ ಸಿಂಗ್, ಮುಕುಲ್ ವಾಸ್ನಿಕ್, ರಾಜೀವ್ ಶುಕ್ಲಾ ಮತ್ತು ಪ್ರಮೋದ್ ತಿವಾರಿ ಸೇರಿದಂತೆ ಕಾಂಗ್ರೆಸ್ ಸಂಸದರ ನಿಯೋಗ ಖುದ್ದಾಗಿ ಠಾಣೆಗೆ ಭೇಟಿ ನೀಡಿ ದೂರು ದಾಖಲಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಬಿಜೆಪಿ ನಾಯಕರ ನಿಯೋಗವು ದೆಹಲಿಯ ಡಿಸಿಪಿ ದೇವೇಶ್ ಕುಮಾರ್ ಮಹ್ಲಾ ಅವರ ಕಚೇರಿಯೊಳಗೆ ಇನ್ನೂ ಇತ್ತು, ಕಾಂಗ್ರೆಸ್ ನಾಯಕರು ತಮ್ಮ ದೂರಿನೊಂದಿಗೆ ಬಂದು ಎಸಿಪಿ ಕೊಠಡಿಯೊಳಗೆ ಕಾಯುತ್ತಿದ್ದರು.

ಪೊಲೀಸರು ದೂರನ್ನು ಸ್ವೀಕರಿಸಿದ್ದು, ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಎಂಭತ್ನಾಲ್ಕು ವರ್ಷದ ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ತಳ್ಳಿ ಅನುಚಿತವಾಗಿ ವರ್ತಿಸಿದ್ದಾರೆ. ಈ ಕೃತ್ಯದ ವಿರುದ್ಧ ದೂರು ನೀಡಲು ನಾವು ಇಲ್ಲಿಗೆ ಬಂದಿದ್ದೇವೆ” ಎಂದು ತಿವಾರಿ ಠಾಣೆಯಲ್ಲಿ ಮಾಧ್ಯಮಗಳಿಗೆ ತಿಳಿಸಿದರು.

ಇದಕ್ಕೂ ಮುನ್ನ ಸಂಸತ್ತಿನ ಆವರಣದಲ್ಲಿ ಪ್ರತಿಪಕ್ಷಗಳು ಮತ್ತು ಎನ್‌ಡಿಎ ಸಂಸದರ ನಡುವೆ ಮುಖಾಮುಖಿಯಾಗಿದ್ದು, ಬಿ ಆರ್ ಅಂಬೇಡ್ಕರ್ ಅವರನ್ನು ಅವಮಾನಿಸಿದ ಆರೋಪದ ಮೇಲೆ ನಡೆದ ನೂಕಾಟ-ತಳ್ಳಾಟದಲ್ಲಿ ಮಾಜಿ ಸಚಿವ ಪ್ರತಾಪ್ ಚಂದ್ರ ಸಾರಂಗಿ ಗಾಯಗೊಂಡಿದ್ದಾರೆ.

ರಾಹುಲ್ ಗಾಂಧಿ ಹಿರಿಯ ಸದಸ್ಯರನ್ನು ತಳ್ಳಿದ್ದಾರೆ ಎಂದು ಬಿಜೆಪಿ ಆರೋಪಿಸಿದ್ದು, ಕಾಂಗ್ರೆಸ್ ನಾಯಕ ನಿರಾಕರಿಸಿದ್ದಾರೆ. ಬಿಜೆಪಿ ಸಂಸದರು ತಮ್ಮ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ತಳ್ಳಿದರು ಮತ್ತು ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕನನ್ನು ದೈಹಿಕವಾಗಿ ಹಿಂಸಿಸಿದರು ಎಂದು ಕಾಂಗ್ರೆಸ್ ಹೇಳಿಕೊಂಡಿದೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿರುವ ಕಾಂಗ್ರೆಸ್ ಸಂಸದರು ಘಟನೆಯ ಕುರಿತು ತನಿಖೆಗೆ ಆದೇಶಿಸುವಂತೆ ಕೋರಿದ್ದಾರೆ.

ಇದನ್ನೂ ಓದಿ; ರಾಹುಲ್ ಗಾಂಧಿ ಗೂಂಡಾನಂತೆ ವರ್ತಿಸಿದ್ದಾರೆ ಎಂದ ಬಿಜೆಪಿ; ವಿಪಕ್ಷ ನಾಯಕರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು ಎಂದು ಕಾಂಗ್ರೆಸ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...