Homeಮುಖಪುಟಅದಾನಿಗಾಗಿ ಗಡಿ ಭದ್ರತಾ ನಿಯಮಗಳ ಸಡಿಲಿಕೆ ಆರೋಪ : ಪ್ರಧಾನಿ ಸ್ಪಷ್ಟನೆ ನೀಡುವಂತೆ ಆಗ್ರಹಿಸಿದ ಕಾಂಗ್ರೆಸ್

ಅದಾನಿಗಾಗಿ ಗಡಿ ಭದ್ರತಾ ನಿಯಮಗಳ ಸಡಿಲಿಕೆ ಆರೋಪ : ಪ್ರಧಾನಿ ಸ್ಪಷ್ಟನೆ ನೀಡುವಂತೆ ಆಗ್ರಹಿಸಿದ ಕಾಂಗ್ರೆಸ್

- Advertisement -
- Advertisement -

ಸೌರ ವಿದ್ಯುತ್ ಸ್ಥಾವರ ಮತ್ತು ನವೀಕರಿಸಬಹುದಾದ ಇಂಧನ ಪಾರ್ಕ್ (Renewable energy park ) ಸ್ಥಾಪಿಸಲು ಅದಾನಿ ಸಮೂಹಕ್ಕೆ ಸಹಾಯವಾಗುವಂತೆ ಭಾರತ-ಪಾಕಿಸ್ತಾನ ಗಡಿ ಭದ್ರತಾ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಕೆ ಮಾಡಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಈ ಕುರಿತು ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ದಿ ಗಾರ್ಡಿಯನ್ ಪ್ರಕಟಿಸಿರುವ ವರದಿಯನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿರುವ ಕಾಂಗ್ರೆಸ್, ಸ್ಪಷ್ಟನೆ ನೀಡುವಂತೆ ಬುಧವಾರ (ಫೆ.12) ಆಗ್ರಹಿಸಿದೆ.

ಕೇಂದ್ರ ಸರ್ಕಾರದ ನಡೆಯು ರಾಷ್ಟ್ರೀಯ ಭದ್ರತೆಗೆ ಅಪಾಯವನ್ನುಂಟುಮಾಡಿದೆ. ನಮ್ಮ ರಾಷ್ಟ್ರೀಯ ಭದ್ರತೆಯ ವಿಚಾರದಲ್ಲಿ ಏಕೆ ರಾಜಿ ಮಾಡಿಕೊಳ್ಳಲಾಗಿದೆ ಎಂಬುವುದರ ಬಗ್ಗೆ ಪ್ರಧಾನಿ ಮತ್ತು ರಕ್ಷಣಾ ಸಚಿವರು ಉತ್ತರ ನೀಡಬೇಕು ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.

ದಿ ಗಾರ್ಡಿಯನ್ ವರದಿ ಮತ್ತು ಕಾಂಗ್ರೆಸ್ ನಾಯಕರ ಪ್ರಶ್ನೆ, ಟೀಕೆಗಳ ಕುರಿತು ಸರ್ಕಾರವಾಗಲಿ, ಅದಾನಿ ಸಮೂಹವಾಗಲಿ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಭದ್ರತಾ ನಿಯಮಗಳು ಬದಲಾಗಿವೆ

ದಿ ಗಾರ್ಡಿಯನ್‘ ಪ್ರಕಟಿಸಿದ ತನಿಖಾ ವರದಿಯ ಪ್ರಕಾರ, ಅದಾನಿ ಸಮೂಹ ಪಾಕಿಸ್ತಾನದ ಗಡಿಯಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಕಚ್‌ನ ಖಾವ್ಡಾ ಪ್ರದೇಶದಲ್ಲಿ ಸೌರ ವಿದ್ಯುತ್ ಸ್ಥಾವರ ಮತ್ತು ವಿಶ್ವದ ಅತಿದೊಡ್ಡ ನವೀಕರಿಸಬಹುದಾದ ಇಂಧನ ಪಾರ್ಕ್ ನಿರ್ಮಿಸುತ್ತಿದೆ.

ಈ ಹಿಂದಿನ ಗಡಿ ಭದ್ರತಾ ನಿಯಮಗಳ ಪ್ರಕಾರ ಈ ಪ್ರದೇಶದಲ್ಲಿ ಯಾವುದೇ ನಿರ್ಮಾಣ ಕಾರ್ಯಕ್ಕೆ ಅವಕಾಶ ಇರಲಿಲ್ಲ. ಆದರೆ ಗುಜರಾತ್ ಸರ್ಕಾರ ಏಪ್ರಿಲ್ 2023ರಲ್ಲಿ ಪ್ರಧಾನ ಮಂತ್ರಿ ಕಚೇರಿಗೆ (ಪಿಎಂಒ) ಪತ್ರವೊಂದನ್ನು ಬರೆದು, ಗಡಿ ಸಮೀಪದ ಜಾಗದಲ್ಲಿ ಮೂಲಸೌಕರ್ಯ ಯೋಜನೆಗಳನ್ನು ನಿರ್ಮಿಸಲು ಅನುಮತಿ ಕೋರಿತ್ತು.

ಈ ವಿಷಯದ ಬಗ್ಗೆ ಚರ್ಚಿಸಲು ಏಪ್ರಿಲ್ 21, 2023ರಂದು ದೆಹಲಿಯಲ್ಲಿ ಗೌಪ್ಯ ಸಭೆ ಕರೆಯಲಾಗಿತ್ತು. ಆ ಸಮಯದಲ್ಲಿ, ಗುಜರಾತ್ ಸರ್ಕಾರ ಗುತ್ತಿಗೆಗೆ ನೀಡಿದ್ದ ಭೂಮಿಯನ್ನು ಭಾರತೀಯ ಸೌರಶಕ್ತಿ ನಿಗಮ (SECI) ತನ್ನ ವಶಕ್ಕೆ ಪಡೆದುಕೊಂಡಿತ್ತು.

ಮೇ 8, 2023ರ ಹೊತ್ತಿಗೆ, ಮೂಲಸೌಕರ್ಯ ಯೋಜನೆಗಳಿಗೆ ಅವಕಾಶ ನೀಡಲು ಕೇಂದ್ರವು ನಿಯಮಗಳನ್ನು ಬದಲಾಯಿಸಿದೆ. ಆಗಸ್ಟ್ ವೇಳೆಗೆ, ಅದಾನಿ ಗ್ರೂಪ್ ಕಚ್‌ ಬಳಿಯ ರನ್‌ ಪ್ರದೇಶದ ಭೂಮಿಯಯನ್ನು ತನ್ನ ವಶಕ್ಕೆ ಪಡೆದಿದೆ ವರದಿ ಹೇಳಿದೆ.

ಅಪಾಯದಲ್ಲಿ ಗಡಿ ಭದ್ರತೆ

ಆಡಳಿತಾರೂಢ ಭಾರತೀಯ ಜನತಾ ಪಕ್ಷದ (ಬಿಜೆಪಿ) ಹುಸಿ ರಾಷ್ಟ್ರೀಯತಾವಾದಿ ಮುಖ ಮತ್ತೊಮ್ಮೆ ಬಯಲಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.

“ನರೇಂದ್ರ ಮೋದಿಯವರೇ ಖಾಸಗಿ ಕೋಟ್ಯಾಧಿಪತಿಗಳಿಗೆ ಲಾಭ ಮಾಡಿಕೊಡುವ ಸಲುವಾಗಿ ನೀವು ನಮ್ಮ ಗಡಿಗಳಲ್ಲಿ ರಾಷ್ಟ್ರೀಯ ಭದ್ರತೆಯನ್ನು ಅಪಾಯಕ್ಕೆ ಸಿಲುಕಿಸಿದ್ದೀರಿ. ಗಡಿ ಭದ್ರತಾ ನಿಯಮಗಳನ್ನು ಸಡಿಲಿಸುವ ಮೂಲಕ ಪಾಕಿಸ್ತಾನದ ಅಂತಾರಾಷ್ಟ್ರೀಯ ಗಡಿಯ ಬಳಿ ಕೇವಲ 1 ಕಿ.ಮೀ ದೂರದಲ್ಲಿರುವ ಅಮೂಲ್ಯವಾದ ಆಯಕಟ್ಟಿನ ಭೂಮಿಯನ್ನು ನಿಮ್ಮ ‘ಆತ್ಮೀಯ ಸ್ನೇಹಿತ’ನಿಗೆ ಉಡುಗೊರೆಯಾಗಿ ನೀಡಿದ್ದೀರಿ ಎಂಬುವುದು ನಿಜವೇ?” ಎಂದು ಮಲ್ಲಿಕಾರ್ಜುನ ಖರ್ಗೆ ಎಕ್ಸ್‌ ಪೋಸ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

“ನಿಮ್ಮ ಸರ್ಕಾರ ಭಾರತ-ಪಾಕಿಸ್ತಾನ ಗಡಿಯಲ್ಲಿ ಮಾತ್ರವಲ್ಲದೆ ಬಾಂಗ್ಲಾದೇಶ, ಚೀನಾ, ಮ್ಯಾನ್ಮಾರ್ ಮತ್ತು ನೇಪಾಳಕ್ಕೆ ಹೊಂದಿಕೊಂಡಿರುವ ಭೂಮಿಯಲ್ಲಿಯೂ ನಿಯಮಗಳನ್ನು ಸಡಿಲಗೊಳಿಸಿದೆ. ಇದರಿಂದಾಗಿ ನಮ್ಮ ಕಾರ್ಯತಂತ್ರ ಮತ್ತು ಗಡಿ ಭದ್ರತೆಗೆ ಅಪಾಯವಿದೆ ಎಂಬುವುದು ನಿಜವಲ್ಲವೇ?” ಎಂದು ಖರ್ಗೆ ಕೇಳಿದ್ದಾರೆ.

“ನಮ್ಮ ಸಶಸ್ತ್ರ ಪಡೆಗಳ ರಕ್ಷಣಾ ಜವಾಬ್ದಾರಿಗಳನ್ನು ಹೆಚ್ಚಿಸುವ ಮತ್ತು ಅವುಗಳ ಕಾರ್ಯತಂತ್ರದ ಅನುಕೂಲಗಳನ್ನು ಕಡಿಮೆ ಮಾಡುವ ಮೂಲಕ ಭಾರತ-ಪಾಕಿಸ್ತಾನ ಗಡಿಯ ಸುಲಭವಾದ ರೀತಿಯಲ್ಲಿ ಬೃಹತ್ ಖಾಸಗಿ ಯೋಜನೆಗೆ ನೀವು ಅನುಮತಿ ನೀಡಿದ್ದು ಏಕೆ?” ಎಂದಿದ್ದಾರೆ.

ಪ್ರಧಾನಿ ಉತ್ತರಿಸಬೇಕು

ಗಡಿ ನಿಯಮಗಳಲ್ಲಿನ ಬದಲಾವಣೆಯ ಅಗತ್ಯವನ್ನು ವಿವರಿಸುವಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಪ್ರಧಾನಿ ಮತ್ತು ರಕ್ಷಣಾ ಸಚಿವರಿಗೆ ಆಗ್ರಹಿಸಿದ್ದಾರೆ.

“ನಮ್ಮ ಇಂಧನ ವ್ಯವಸ್ಥೆಯನ್ನು ನಮ್ಮ ವಿರೋಧಿಗಳ ವಿರುದ್ಧ ಕುಳಿತುಕೊಳ್ಳುವ ಬಾತುಕೋಳಿಯನ್ನಾಗಿ ಮಾಡಲು ನಾವು ಪ್ರಯತ್ನಿಸುತ್ತಿದ್ದೇವೆಯೇ? ನಮ್ಮ ರಾಷ್ಟ್ರವನ್ನು ರಕ್ಷಿಸಲು ದಶಕಗಳ ಕಾಲ ಶ್ರಮಿಸಿದ  ಮಿಲಿಟರಿ ತಜ್ಞರು ಕೇವಲ ಕೈಗೊಂಬೆಗಳೇ? ಅವರನ್ನು ಬದಿಗೆ ತಳ್ಳಬಹುದಾ? ಮೋದಿ ಸರ್ಕಾರದ ಸ್ವಜನಪಕ್ಷಪಾತ ನಮ್ಮ ರಾಷ್ಟ್ರೀಯ ಭದ್ರತೆಗೆ ಬೆದರಿಕೆಯಾಗಿದೆ. ಭಾರತದ ಅತಿದೊಡ್ಡ ಸೌರ ಯೋಜನೆಯನ್ನು ಪಾಕಿಸ್ತಾನ ಗಡಿಯಿಂದ ಕೇವಲ 1 ಕಿ.ಮೀ ದೂರದಲ್ಲಿ ನಿರ್ಮಿಸಲು ಅವಕಾಶ ನೀಡಿರುವುದು ಅತ್ಯಂತ ಅಪಾಯಕಾರಿ ನಡೆ ಮತ್ತು ಎಲ್ಲಾ ಸ್ಥಾಪಿತ ಮಿಲಿಟರಿ ಮಾನದಂಡಗಳಿಗೆ ವಿರುದ್ಧವಾಗಿದೆ” ಎಂದು ವೇಣುಗೋಪಾಲ್ ಎಕ್ಸ್‌ ಪೋಸ್ಟ್‌ನಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

“ದೇಶದ ಎಲ್ಲಾ ಸಂಪನ್ಮೂಲಗಳನ್ನು ಪ್ರಧಾನ ಮಂತ್ರಿಯವರ ‘ಸ್ನೇಹಿತ’ನಿಗೆ ಹಸ್ತಾಂತರಿಸುವ ಪ್ರಕ್ರಿಯೆ ಗಡಿ ಭದ್ರತಾ ನಿಯಮಗಳನ್ನು ಕೂಡ ಬದಲಾಯಿಸುವ ಹಂತಕ್ಕೆ ತಲುಪಿದೆಯೇ?” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಹಿಂದಿಯಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಉಚಿತ ಕೊಡುಗೆ ಯೋಜನೆಯಿಂದ ಜನರು ಕೆಲಸ ಮಾಡಲು ಸಿದ್ಧರಿಲ್ಲ – ಸುಪ್ರೀಂಕೋರ್ಟ್ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಂಗ್ಲಾದೇಶಿ’ಎಂಬ ಹಣೆಪಟ್ಟಿ, 87 ದಿನಗಳ ಬಂಧನ, ಬಳಿಕ ಜಾಮೀನು : ಇದು ಬಂಗಾಳಿ ಮುಸ್ಲಿಮನ ಕರುಣಾಜನಕ ಕಥೆ

ಜಲೀಲ್ ಅಖ್ತರ್ ಅವರು ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯ ಬಾಗ್ರೋಯಿ ಗ್ರಾಮದಲ್ಲಿ 70 ವರ್ಷಗಳ ಕಾಲ ಅತ್ಯಂತ ಶಾಂತಿಯುತ ಮತ್ತು ನಿರಾಳವಾದ ಜೀವನವನ್ನು ನಡೆಸುತ್ತಿದ್ದರು. ಭೂ ರಹಿತ ಗ್ರಾಮಸ್ಥರಾಗಿದ್ದ ಅವರು, ದಿನಗೂಲಿ...

ಕೆಲಸ ಮಾಡಿಕೊಟ್ಟ ಅಧಿಕಾರಿಗಳಿಗೆ ಗೌರವಯುತವಾಗಿ ಕೊಡುವುದು ಧರ್ಮ: ಸಚಿವ ಶಿವಲಿಂಗೇಗೌಡ ವಿವಾದದ ಹೇಳಿಕೆ ಲೋಕಾಯುಕ್ತ ಮತ್ತು ರಾಜ್ಯಪಾಲರಿಗೆ ದೂರು

ಜನಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಸಚಿವ ಕೆ.ಎಂ. ಶಿವಲಿಂಗೇಗೌಡ ನೀಡಿದ್ದಾರೆನ್ನಲಾದ ಹೇಳಿಕೆಯೊಂದು ಭಾರಿ ವಿವಾದಕ್ಕೆ ಕಾರಣವಾಗಿದ್ದು, ಸಚಿವರ ವಿರುದ್ಧ ಹಾಸನ ಜಿಲ್ಲಾ ಲೋಕಾಯುಕ್ತ ಕಚೇರಿಗೆ ವಕೀಲರು ದೂರು ಸಲ್ಲಿಸಿದ್ದಾರೆ. ವಕೀಲ ಎಂ.ಡಿ. ಗೋಪಾಲಗೌಡ ನೇತೃತ್ವದ...

‘ನಿಮಗೆ ಮೀಸಲಾತಿ ಏಕೆ ಬೇಕು..?’; ಪ್ರಯಾಗ್‌ರಾಜ್ ಎನ್‌ಎಲ್‌ಯು ಪ್ರಾಧ್ಯಾಪಕರಿಂದ ದಲಿತ ವಿದ್ಯಾರ್ಥಿಗೆ ಜಾತಿ ತಾರತಮ್ಯ

ಪ್ರಯಾಗ್‌ರಾಜ್‌ನ ಡಾ. ರಾಜೇಂದ್ರ ಪ್ರಸಾದ್ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ (ಎನ್‌ಎಲ್‌ಯು) ಕಾನೂನು ವಿಭಾಗದ ಮುಖ್ಯಸ್ಥರ ವಿರುದ್ಧ ದಲಿತ ವಿದ್ಯಾರ್ಥಿಯೊಬ್ಬರು ಮಾಡಿದ ಜಾತಿ ಆಧಾರಿತ ತಾರತಮ್ಯ ಮತ್ತು ಅವಮಾನದ ಆರೋಪಗಳ ಬಗ್ಗೆ ತನಿಖೆ ನಡೆಸಲು...

KPSC ಅಕ್ರಮ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ತನಿಖೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಅತ್ಯಂತ ಮಹತ್ವದ ಆದೇಶ ಹೊರಡಿಸಿದೆ. ಈ ಬಹುಕೋಟಿ ನೇಮಕಾತಿ...

ಲಕ್ನೋದಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ಹಲ್ಲೆ, ಮಾಂಸದ ಅಂಗಡಿಗಳ ವಿರುದ್ಧ ಪ್ರತಿಭಟನೆ: ತೀವ್ರಗೊಂಡ ಬಜರಂಗದಳದ ‘ಆಹಾರ ಭಯೋತ್ಪಾದನೆ’

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಮಾಂಸ ಸಾಗಿಸುತ್ತಿದ್ದ ಬಿರಿಯಾನಿ ಅಂಗಡಿ ಮಾಲೀಕರೊಬ್ಬರ ಮೇಲೆ ಮೂವರು ಯುವಕರು ಹಲ್ಲೆ ನಡೆಸಿ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....

ಟಿಎಂಸಿ ಹೆಸರು – ಚಿಹ್ನೆ ‘ಫ್ರೀಜ್‌’ ಪ್ರಶ್ನಿಸಿ ಮಮತಾ ಬ್ಯಾನರ್ಜಿ ಅರ್ಜಿ; ತುರ್ತು ವಿಚಾರಣೆಗೆ ಒಪ್ಪಿಗೆ ಸುಪ್ರೀಂ ಕೋರ್ಟ್‌

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಎರಡು ಬಣಗಳ ನಡುವಿನ ವಿವಾದದ ನಡುವೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಫ್ರೀಜ್ ಮಾಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ...

ಸೌಜನ್ಯ ಪ್ರಕರಣ: ಸುಪ್ರೀಂ ಆದೇಶದ ಪ್ರತಿ ಸಿಕ್ಕ ತಕ್ಷಣ SIT ರಚನೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮರುತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಕೈ ಸೇರಿದ ತಕ್ಷಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ...

ದೆಹಲಿ| ಸಾಮೂಹಿಕ ಮತಾಂತರ ಆರೋಪ; ಕ್ರಿಶ್ಚಿಯನ್ನರ ವಾರಾಂತ್ಯದ ಪ್ರಾರ್ಥನೆಗೆ ಅಡ್ಡಿಪಡಿಸಿದ ಹಿಂದುತ್ವ ಗುಂಪು

ದೆಹಲಿಯ ಜನಕಪುರಿಯಲ್ಲಿರುವ ಹಯಾತ್ ಸೆಂಟ್ರಿಕ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ (ಸೆಪ್ಟೆಂಬರ್ 20 ರಂದು) ಕ್ರಿಶ್ಚಿಯನ್ನರ ಭಾನುವಾರದ ವಾಡಿಕೆಯ ಪ್ರಾರ್ಥನಾ ಸಭೆಗೆ ನುಗ್ಗಿದ ಹಿಂದುತ್ವ ಗುಂಪು ಪ್ರಾರ್ಥನೆಗೆ ಅಡ್ಡಪಿಡಿಸಿದೆ. ಹಿಂದೂಗಳ ಸಾಮೂಹಿಕ ಮತಾಂತರ ನಡೆಯುತ್ತಿದೆ...

ಕಸ್ತೂರಿ ರಂಗನ್ ವರದಿ ತಿರಸ್ಕಾರ, ಮಲೆನಾಡಿನ ಜನರ ಬದುಕಿಗೆ ಶಾಶ್ವತ ಪರಿಹಾರ : ಡಾ. ಜಿ. ಪರಮೇಶ್ವರ್

ಪಶ್ಚಿಮ ಘಟ್ಟದ ಜೀವ ವೈವಿಧ್ಯ ಮತ್ತು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಗಳನ್ನು ಪದೇ ಪದೇ ಹೊರಡಿಸುತ್ತಿರುವುದು ಮಲೆನಾಡಿನ ಜನರ ನೆಮ್ಮದಿ ಕೆಡಿಸಿದೆ. ರಾಜ್ಯ ಸರ್ಕಾರವು...

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...