Homeಕರ್ನಾಟಕಸಂಪುಟದಿಂದ ಈಶ್ವರಪ್ಪ ವಜಾಕ್ಕೆ ಕಾಂಗ್ರೆಸ್‌ ಆಗ್ರಹ: ಸದನದಲ್ಲಿ ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ

ಸಂಪುಟದಿಂದ ಈಶ್ವರಪ್ಪ ವಜಾಕ್ಕೆ ಕಾಂಗ್ರೆಸ್‌ ಆಗ್ರಹ: ಸದನದಲ್ಲಿ ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ

- Advertisement -
- Advertisement -

ಕೆ.ಎಸ್‌.ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಕಾಂಗ್ರೆಸ್ ಪಕ್ಷ ಒತ್ತಾಯಿಸುತ್ತಿದ್ದಂತೆಯೇ ಬುಧವಾರ ವಿಧಾನಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ಚಕಮಕಿ ನಡೆಯಿತು.

ಕೆಂಪು ಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಈಶ್ವರಪ್ಪ ಅವರು ಇತ್ತೀಚೆಗೆ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷವು ಈಶ್ವರಪ್ಪ ವಿರುದ್ಧ ಮುಂದೂಡಿಕೆ ನಿರ್ಣಯವನ್ನು ಕೋರುವುದರೊಂದಿಗೆ ಚರ್ಚೆ ಪ್ರಾರಂಭವಾಯಿತು.

ಕೆಂಪು ಕೋಟೆಯಲ್ಲಿ ರಾಷ್ಟ್ರಧ್ವಜ ಹಾರಿಸಲಾಗುವುದು, ತ್ರಿವರ್ಣ ಧ್ವಜದ ಬದಲು ಕೇಸರಿ ಧ್ವಜ ಹಾಕಲಾಗುವುದು ಎಂದು ಈಶ್ವರಪ್ಪ ಹೇಳಿರುವುದು ದೇಶದ್ರೋಹಕ್ಕೆ ಸಮ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈಶ್ವರಪ್ಪ ಹೇಳಿಕೆ ನೀಡಿ ಆರು ದಿನಗಳಾಗಿವೆ. ಮುಖ್ಯಮಂತ್ರಿಗಳು ಸ್ವಯಂ ಪ್ರೇರಿತ ಕ್ರಮ ಕೈಗೊಂಡು ಈಶ್ವರಪ್ಪ ಅವರನ್ನು ಈಗಲೇ ವಜಾ ಮಾಡಬೇಕಿತ್ತು ಎಂದು ಅಭಿಪ್ರಾಯಪಟ್ಟರು.

“ಸಚಿವರ ಹೇಳಿಕೆಯು 1971ರ ರಾಷ್ಟ್ರೀಯ ಗೌರವ ಅವಮಾನ ತಡೆ ಕಾಯಿದೆ ಹಾಗೂ ಭಾರತೀಯ ದಂಡ ಸಂಹಿತೆಯ ಉಲ್ಲಂಘನೆಯಾಗಿದ್ದು, ಇದನ್ನು ದೇಶದ್ರೋಹವೆಂದು ಗುರುತಿಸಿ ಜೈಲು ಶಿಕ್ಷೆ ವಿಧಿಸಬೇಕು. ಕೂಡಲೇ ಈಶ್ವರಪ್ಪ ಅವರನ್ನು ವಜಾಗೊಳಿಸಿ ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದರು.

ಆಡಳಿತ ಪಕ್ಷದ ಸದಸ್ಯರು ಸಚಿವರನ್ನು ಸಮರ್ಥಿಸಿಕೊಂಡಿದ್ದರಿಂದ ಗದ್ದಲ ಉಂಟಾಯಿತು. ಈಶ್ವರಪ್ಪ ಅವರು ಕೆಂಪುಕೋಟೆಯಲ್ಲಿ ಕೇಸರಿ ಧ್ವಜಾರೋಹಣ ಮಾಡುವುದಾಗಿ ಹೇಳೀರುವುದು ಮಾಧ್ಯಮ ಸಂವಾದದ ಭಾಗವಾಗಿದೆ. ಈ ಹೇಳಿಕೆಯನ್ನು ಹೇಳಿಕೆ ಎಂದು ಅರ್ಥೈಸಲು ಸಾಧ್ಯವಿಲ್ಲ ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆಸಿ ಮಾಧುಸ್ವಾಮಿ ಸಮರ್ಥಿಸಿದರು.

“ಮಾತನಾಡುತ್ತಾ ಕೊನೆಯಲ್ಲಿ ದೇಶವು ತ್ರಿವರ್ಣ ಧ್ವಜವನ್ನು ತನ್ನ ರಾಷ್ಟ್ರಧ್ವಜವಾಗಿ ಸ್ವೀಕರಿಸಿದೆ ಮತ್ತು ಪ್ರತಿಯೊಬ್ಬರೂ ಅದನ್ನು ಗೌರವಿಸಬೇಕು ಎಂದು ಹೇಳಿದರು. ಆದ್ದರಿಂದ, ದೇಶದ್ರೋಹದ ಪ್ರಶ್ನೆಯೇ ಇಲ್ಲ” ಎಂದು ಅವರು ತಿಳಿಸಿದರು.

ಇದೇ ವೇಳೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಮುಂದೂಡಿಕೆ ಮಂಡನೆಗೆ ಅವಕಾಶ ನೀಡಬೇಕೇ ಅಥವಾ ಬೇಡವೇ ಎಂಬುದನ್ನು ನಿರ್ಧರಿಸುವ ಮುನ್ನ ಈಶ್ವರಪ್ಪ ಅವರ ಸಮರ್ಥನೆಯನ್ನು ಆಲಿಸುವುದಾಗಿ ಹೇಳಿದರು.

ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿ, ಸರ್ಕಾರ ಮೊದಲು ಅಧಿಕೃತ ಪ್ರತಿಕ್ರಿಯೆ ನೀಡಬೇಕೆಂದು ಒತ್ತಾಯಿಸಿದರು. ಶಿವಕುಮಾರ್ ವಿರುದ್ಧ ಈಶ್ವರಪ್ಪ ವೈಯಕ್ತಿಕ ಟೀಕೆ ಮಾಡಿದರು. ಇದರಿಂದ ಕೆರಳಿದ ಶಿವಕುಮಾರ್ ಸದನದ ಬಾವಿಯತ್ತ ಧಾವಿಸಿ ಈಶ್ವರಪ್ಪ ವಿರುದ್ಧ ಹರಿಹಾಯ್ದರು.

ಕಾಂಗ್ರೆಸ್‌ ನಾಯಕರು ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸಿದರು. ಇದನ್ನು ಸ್ಪೀಕರ್‌‌ ವಿಶ್ವೇಶ್ವರ ಹೆಗಡೆ ಕಾಗೇರಿ ಖಂಡಿಸಿದರು. ಸ್ಪೀಕರ್ ಸದನವನ್ನು ಮುಂದೂಡಿದರೂ, ಸದನದಿಂದ ಹೊರಡುವ ಮೊದಲು ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಈ ವಿಷಯದ ಬಗ್ಗೆ ಮಾತಿನ ಚಕಮಕಿ ನಡೆಸಿದರು. ಈ ಮಧ್ಯೆ ಮಾರ್ಷಲ್‌ಗಳೂ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಲು ಯತ್ನಿಸಿದರು.

ಇದನ್ನೂ ಓದಿರಿ: ಮಕ್ಕಳ ಹಕ್ಕುಗಳು ಉಲ್ಲಂಘನೆಯಾದರೆ ಕರೆ ಮಾಡಿ: ಆಯೋಗದ ಸದಸ್ಯ ಪರಶುರಾಮ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...