Homeಮುಖಪುಟಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ : ಅಮಿತ್ ಶಾ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ : ಅಮಿತ್ ಶಾ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

- Advertisement -
- Advertisement -

ರಾಜ್ಯಸಭೆಯಲ್ಲಿ ಮಾತನಾಡುವ ವೇಳೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್, ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜೀನಾಮೆಗೆ ಆಗ್ರಹಿಸಿದೆ.

ಇಂದು (ಡಿ.18) ಸಂಸತ್ತಿನ ಬಳಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಸಂಸದರು, ಅಮಿತ್ ಶಾ ಅವರು ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಮತ್ತು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಅಮಿತ್ ಶಾ ಅವರ ರಾಜೀನಾಮೆಗೆ ನಾವು ಒತ್ತಾಯಿಸುತ್ತಿದ್ದೇವೆ. ಅವರು ದೇಶದ ಕ್ಷಮೆ ಕೇಳಬೇಕು” ಎಂದು ಹೇಳಿದರು.

ಕಾಂಗ್ರೆಸ್ ಸಂಸದ ನೀರಜ್ ಡಾಂಗಿ ಮಾತನಾಡಿ, “ತನ್ನ ಹೇಳಿಕೆಗೆ ಸಂಬಂಧಿಸಿದಂತೆ ಅಮಿತ್ ಶಾ ಕ್ಷಮೆ ಯಾಚಿಸಬೇಕು” ಎಂದು ಒತ್ತಾಯಿಸಿದರು. ಅಂಬೇಡ್ಕರ್ ಹೆಸರು ಬಳಸುವುದು ಫ್ಯಾಷನ್ ಆಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ಈ ಮೂಲಕ ಬಾಬಾ ಸಾಹೇಬರು ಮತ್ತು ದೇಶದ ದಲಿತರಿಗೆ ಅವಮಾನ ಮಾಡಿದ್ದಾರೆ. ವಂಚಿತ ಮತ್ತು ಶೋಷಿತ ವರ್ಗದವರನ್ನು ಅವಮಾನಿಸಿದ್ದಾರೆ. ಇದೇ ವರ್ಗ ಅವರನ್ನು 240ರಿಂದ 40ಕ್ಕೆ ಇಳಿಸಲಿದೆ. ಅಮಿತ್ ಶಾ ತನ್ನ ಹೇಳಿಕೆ ಮೂಲಕ ಬಿಜೆಪಿ ನಾಯಕರಿಗೆ ಯಾವ ರೀತಿಯ ಚಿಂತನೆ ಇದೆ ಎಂದು ಇಡೀ ದೇಶಕ್ಕೆ ತಿಳಿಸಿದ್ದಾರೆ ಎಂದರು.

“ಅಮಿತ್ ಶಾ ಅವರು ಸಾರ್ವಜನಿಕವಾಗಿ ಮತ್ತು ಸದನದಲ್ಲಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಪಕ್ಷದ ಪರವಾಗಿ ನಾನು ಒತ್ತಾಯಿಸುತ್ತೇನೆ ಎಂದು ಹೇಳಿದರು. ಅಂಬೇಡ್ಕರ್ ಅವರ ಬಗ್ಗೆ ಹೇಳಿಕೆ ನೀಡುವ ಮೂಲಕ ಸಾಂವಿಧಾನಿಕ ಹುದ್ದೆ ಹೊಂದುವ ಅರ್ಹತೆಯನ್ನು ಅಮಿತ್ ಶಾ ಕಳೆದುಕೊಂಡಿದ್ದಾರೆ. ಅವರು ಗೃಹ ಸಚಿವರ ಹುದ್ದೆಗೆ ರಾಜೀನಾಮೆ ನೀಡಲೇಬೇಕು” ಎಂದು ಆಗ್ರಹಿಸಿದರು.

ಸಂವಿಧಾನದ ಮೇಲಿನ ಚರ್ಚೆಯ ವೇಳೆ ರಾಜ್ಯಸಭೆಯಲ್ಲಿ ಅಮಿತ್ ನೀಡಿರುವ ಹೇಳಿಕೆಯು ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರಿಗೆ ಅಂಬೇಡ್ಕರ್ ಮೇಲೆ ‘ಅಸಾಧಾರಣ ದ್ವೇಷ’ ಇದೆ ಎಂಬುವುದನ್ನು ತೋರಿಸಿದೆ. ಅಮಿತ್ ಶಾ ಕ್ಷಮೆಯಾಚಿಸಲೇಬೇಕು ಎಂದು ಕಾಂಗ್ರೆಸ್‌ನ ಇತರ ನಾಯಕರೂ ಹೇಳಿದ್ದಾರೆ.

“ಮನುಸ್ಮೃತಿಯಲ್ಲಿ ನಂಬಿಕೆ ಇರುವವರು ಅಂಬೇಡ್ಕರ್‌ ಅವರ ಜೊತೆ ಭಿನ್ನಾಭಿಪ್ರಾಯ ಹೊಂದಿರುವುದು ನಿಜ” ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ಹಾಗೂ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯಸಭೆಯಲ್ಲಿ ಅಮಿತ್ ಶಾ ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆಯ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್, ” ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೇಲೆ ಭಾರೀ ದ್ವೇಷವಿದೆ ಎಂಬುವುದನ್ನು ಇದು ತೋರಿಸುತ್ತದೆ” ಎಂದಿದ್ದಾರೆ.

“ಬಾಬಾ ಸಾಹೇಬರ ಹೆಸರು ಕೇಳಿದರೆ ಕೆರಳುವಷ್ಟು ದ್ವೇಷ ಬಿಜೆಪಿ ನಾಯಕರಿಗಿದೆ. ಇವರ ಪೂರ್ವಜರು ಬಾಬಾ ಸಾಹೇಬರ ಪ್ರತಿಕೃತಿಯನ್ನು ಸುಟ್ಟು ಹಾಕಿದರು. ಬಾಬಾ ಸಾಹೇಬರು ನೀಡಿದ ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಮಾತಾನಾಡುತ್ತಿದ್ದರು. ಯಾವಾಗ ಜನರು ಇವರಿಗೆ ತಕ್ಕ ಪಾಠ ಕಲಿಸಿದರೋ, ಈಗ ಬಾಬಾ ಸಾಹೇಬರ ಹೆಸರು ಹೇಳುವವರ ವಿರುದ್ದ ದ್ವೇಷ ಕಾರುತ್ತಿದ್ದಾರೆ. ಇದು ನಾಚಿಕೆಗೇಡು, ಅಮಿತ್ ಶಾ ದೇಶದ ಕ್ಷಮೆ ಯಾಚಿಸಬೇಕು” ಎಂದು ಜೈರಾಮ್ ರಮೇಶ್ ಒತ್ತಾಯಿಸಿದ್ದಾರೆ.

ಭಾರತದ ಸಂವಿಧಾನದ 75 ವರ್ಷಗಳ ಅದ್ಭುತ ಪಯಣದ ಕುರಿತ ಎರಡು ದಿನಗಳ ಚರ್ಚೆಯನ್ನು ಮುಕ್ತಾಯಗೊಳಿಸಿ ಮಂಗಳವಾರ (ಡಿ.17) ಸಂಸತ್ತಿನಲ್ಲಿ ಮಾತನಾಡಿದ ಅಮಿತ್‌ ಶಾ, “ಕಾಂಗ್ರೆಸ್ ತುಷ್ಠೀಕರಣ ರಾಜಕಾರಣವನ್ನು ಮುಂದುವರೆಸಿಕೊಂಡು ಬಂದಿದೆ. ಈಗ ಮುಸ್ಲಿಮರಿಗೆ ಮೀಸಲಾತಿ ಒದಗಿಸಲು ಮೀಸಲಾತಿ ಮಿತಿ ಶೇ.50 ಅನ್ನು ತೆಗೆಯಲು ಬಯಸಿದೆ” ಎಂದಿದ್ದಾರೆ.

ಕಾಂಗ್ರೆಸ್ ಮುಸ್ಲಿಂ ವೈಯಕ್ತಿಕ ಕಾನೂನನ್ನು ಬೆಂಬಲಿಸುತ್ತದೆಯೇ? ಎಂದು ಪ್ರಶ್ನಿಸಿದ ಅಮಿತ್ ಶಾ, ಪಕ್ಷವು ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಯಾವತ್ತೂ ಕೆಲಸ ಮಾಡಿಲ್ಲ ಎಂದು ಆರೋಪಿಸಿದ್ದಾರೆ.

ಬಿಜೆಪಿ ಈಗಾಗಲೇ ಉತ್ತರಾಖಂಡದಲ್ಲಿ ಸಮಾನ ನಾಗರಿಕ ಸಂಹಿತೆ (ಏಕರೂಪ ನಾಗರಿಕ ಸಂಹಿತೆ) ಜಾರಿಗೆ ತಂದಿದ್ದು, ಎಲ್ಲಾ ರಾಜ್ಯಗಳಲ್ಲಿ ಅದನ್ನು ಜಾರಿಗೊಳಿಸಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಇದೇ ವೇಳೆ, “ಅಂಬೇಡ್ಕರ್, ಅಂಬೇಡ್ಕರ್ ಎಂದು ಹೇಳುವುದು ಈಗ ಫ್ಯಾಷನ್ ಆಗಿಬಿಟ್ಟಿದೆ, ಇಷ್ಟು ಬಾರಿ ದೇವರ ಹೆಸರು ಹೇಳಿದ್ದರೆ ಏಳು ಜನ್ಮದವರೆಗೂ ಸ್ವರ್ಗ ಸಿಗುತಿತ್ತು” ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ಇದು ಕಾಂಗ್ರೆಸ್‌ ಸೇರಿದಂತೆ ಪ್ರತಿಪಕ್ಷಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ : ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...