Homeಮುಖಪುಟಕಾಂಗ್ರೆಸ್ ಗೆ ಆತ್ಮಾವಲೋಕನ ಮಾಡಿಕೊಳ್ಳುವ ಅವಶ್ಯಕತೆಯಿದೆ: ಜ್ಯೋತಿರಾದಿತ್ಯ ಸಿಂಧ್ಯಾ

ಕಾಂಗ್ರೆಸ್ ಗೆ ಆತ್ಮಾವಲೋಕನ ಮಾಡಿಕೊಳ್ಳುವ ಅವಶ್ಯಕತೆಯಿದೆ: ಜ್ಯೋತಿರಾದಿತ್ಯ ಸಿಂಧ್ಯಾ

- Advertisement -
- Advertisement -

ಕಾಂಗ್ರೆಸ್ ನಲ್ಲಿ ಆಂತರಿಕ ಭಿನ್ನಾಭಿಪ್ರಾಯ ಹಾಗೂ ಗೊಂದಲ, ಬಿಕ್ಕಟ್ಟು ಹೆಚ್ಚುತ್ತಲೇ ಇವೆ. “ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತ ಬಳಿಕ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿ ಹೊರನಡೆದಿದ್ದುದ್ದೆ ದೊಡ್ಡ ಸಮಸ್ಯೆ” ಎಂದು ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅವರ ಹೇಳಿಕೆ ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇದು ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇಲ್ಲ ಎಂಬುದನ್ನು ತೋರಿಸುತ್ತಿದೆ.

ಸಲ್ಮಾನ್ ಖುರ್ಷಿದ್ ಹೇಳಿಕೆ ನಂತರ ಈಗ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧ್ಯಾ, ಕಾಂಗ್ರೆಸ್ ಗೆ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯತೆಯಿದೆ ಎಂದಿದ್ದಾರೆ. ಪಕ್ಷದಲ್ಲಿ ನಾಯಕತ್ವದ ಕೊರತೆಯಿದೆ ಎಂಬ ಪ್ರಶ್ನೆಗೆ ಸಿಂಧ್ಯಾ ಪ್ರತಿಕ್ರಿಯಿಸಿಲ್ಲ. ಸಲ್ಮಾನ್ ಖುರ್ಷಿದ್ ಅವರ ಹೇಳಿಕೆಗೂ ಪ್ರತಿಕ್ರಿಯಿಸಲು ಅವರು ನಿರಾಕರಿಸಿದ್ದಾರೆ. ಪಕ್ಷದ ಸ್ಥಿತಿಗತಿಯ ಸುಧಾರಣೆ ಆಗಬೇಕಿದೆ, ವಿವಿಧ ಪ್ರದೇಶಗಳಲ್ಲಿ ಪಕ್ಷವನ್ನು ಬಲಪಡಿಸುವ ಅಗತ್ಯತೆಯಿದೆ ಎಂದು ಹೇಳಿದ್ದಾರೆ.

ಇನ್ನು ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥರಾಗಿರುವ ಜ್ಯೋತಿರಾದಿತ್ಯ ಸಿಂಧ್ಯಾ, ಜಮ್ಮುಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿದ ಕೇಂದ್ರದ ನಿರ್ಧಾರವನ್ನು ಬೆಂಬಲಿಸಿದ್ದರು. ಆಗ ಸಿಂಧ್ಯಾ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂಬ ವದಂತಿ ಹಬ್ಬಿತ್ತು. ಈ ಮಧ್ಯೆ ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ರಾಹುಲ್ ಗಾಂಧಿ ವಿದೇಶ ಪ್ರವಾಸಕ್ಕೆ ತೆರಳಿದ್ದು ಮತ್ತೆ ಚರ್ಚೆಗೊಳಗಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮೊದಲು ಜಾತಿಗಣತಿ ಮಾಡುತ್ತೇವೆ: ರಾಹುಲ್‌ ಗಾಂಧಿ

0
ಜಾತಿ ಗಣತಿ ನನ್ನ ಜೀವನದ ಪ್ರಮುಖ ಗುರಿಯಾಗಿದೆ. ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದರೆ ಮೊದಲು ಜಾತಿಗಣತಿಯನ್ನು ಮಾಡುತ್ತೇವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಸಂಪತ್ತು ಮರುಹಂಚಿಕೆ ವಿವಾದದ ಬಗ್ಗೆ ಪ್ರಧಾನಿ ನರೇಂದ್ರ...